Divorce Case: ವಿಚ್ಛೇದನದ ಬಳಿಕ ಮಾಜಿ ಪತಿಯಿಂದ ದುಬಾರಿ ಜೀವನಾಂಶ ಕೇಳಿದವಳಿಗೆ ಚಾಟಿ ಬೀಸಿದ ಹೈಕೋರ್ಟ್‌! - Vistara News

ಬೆಂಗಳೂರು

Divorce Case: ವಿಚ್ಛೇದನದ ಬಳಿಕ ಮಾಜಿ ಪತಿಯಿಂದ ದುಬಾರಿ ಜೀವನಾಂಶ ಕೇಳಿದವಳಿಗೆ ಚಾಟಿ ಬೀಸಿದ ಹೈಕೋರ್ಟ್‌!

Divorce Case: ವಿಚ್ಛೇದನದ ಬಳಿಕ ಮಾಜಿ ಪತಿಯಿಂದ ದುಬಾರಿ ಜೀವನಾಂಶ ಕೇಳಿದ ಮಹಿಳೆಗೆ ಹೈಕೋರ್ಟ್‌ ಚಾಟಿ ಬೀಸಿದೆ. ಐಷಾರಾಮಿ ಜೀವನಕ್ಕಾಗಿ ಖರ್ಚು ಮಾಡಲು ಭಯಸಿದರೆ ಆಕೆಯೇ ದುಡಿದು ಖರ್ಚು ಮಾಡಿಲಿ ಎಂದು ಹೈಕೋರ್ಟ್‌ ಕಿಡಿಕಾರಿದೆ.

VISTARANEWS.COM


on

Divorce Case Wife asks for expensive alimony from ex-husband after divorce
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಚ್ಛೇದನದ (Divorce Case) ಬಳಿಕ ಮಾಜಿ ಪತಿಯಿಂದ ಮಹಿಳೆಯೊಬ್ಬರು ದುಬಾರಿ ಜೀವನಾಂಶ ಕೇಳಿದ್ದಾರೆ. ವಿಚ್ಛೇದನ ನೀಡಿದ ಪತಿಯಿಂದ ತಿಂಗಳಿಗೆ 6,16,000 ರೂ. ಜೀವನಾಂಶ ನೀಡುವಂತೆ ಮನವಿ ಮಾಡಿದ್ದಾರೆ. ಲಕ್ಷ ಲಕ್ಷ ಜೀವನಾಂಶಕ್ಕೆ ಡಿಮ್ಯಾಂಡ್ ಮಾಡಿದ ಪತ್ನಿಯ ನಡೆಗೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಐಷಾರಾಮಿ ಜೀವನಕ್ಕಾಗಿ ಖರ್ಚು ಮಾಡಲು ಭಯಸಿದರೆ ಆಕೆಯೇ ದುಡಿದು ಖರ್ಚು ಮಾಡಿಲಿ ಎಂದು ಹೈಕೋರ್ಟ್‌ ಕಿಡಿಕಾರಿದೆ. ಕೌಟುಂಬಿಕ ನ್ಯಾಯಾಲಯ ನಿಗದಿಪಡಿಸಿರುವ ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿ ಪತ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.

ಕೌಟುಂಬಿಕ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ವಿಚ್ಛೇದಿತ ಮಹಿಳೆ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿತ್ತು. ಅರ್ಜಿ ವಿಚಾರಣೆ ವೇಳೆ ವಕೀಲ ಆಕರ್ಷ್ ಕನಾಡೆ ಮಹಿಳೆಯ ಪರ ವಾದ ಮಾಡಿದ್ದರು. ಕೌಟುಂಬಿಕ‌ ನ್ಯಾಯಾಲಯ ಪ್ರತಿ ತಿಂಗಳು 50 ಸಾವಿರ ಜೀವನಾಂಶ ನಿಗದಿ ಮಾಡಿದೆ. ಆದರೆ ಮಹಿಳೆಯ ತಿಂಗಳ ಖರ್ಚು 6ಲಕ್ಷ ರೂ. ಗೂ ಮೀರಿದೆ. ಹೀಗಾಗಿ ಕನಿಷ್ಠ 5 ಲಕ್ಷ ರೂ. ಮಾಸಿಕ ಜೀವನಾಂಶ ಪಾವತಿಸಲು ಆದೇಶಿಸಿಬೇಕೆಂದು ವಾದ ಮಂಡಿಸಿದ್ದರು.

ಇದನ್ನೂ ಓದಿ: Dharwad university : ಗಗನಯಾನಕ್ಕೆ ಸಿದ್ಧವಾಗಿವೆ ಧಾರವಾಡ ಕೃಷಿ ವಿವಿಯ ನೊಣಗಳು!

ಮಹಿಳೆಯ ಊಟಕ್ಕೆ ತಿಂಗಳಿಗೆ 40,000, ಬಟ್ಟೆಬರೆಗಾಗಿ ರೂ.50,000 ಹಾಗೂ ಸೌಂದರ್ಯ ವರ್ಧಕ, ಔಷಧಿ, ಇತರೆ ವಸ್ತುಗಳ ಖರೀದಿಗೆ 60,000 ರೂ. ಹೀಗೆ ದೈನಂದಿನ ಖರ್ಚುಗಳು ಸೇರಿಸದಂತೆ ಪ್ರತಿ ತಿಂಗಳು 6 ಲಕ್ಷದ16 ಸಾವಿರ ರೂ. ಜೀವನಾಂಶ ಬೇಕಿದೆ ಎಂದು ಮನವಿ ಮಾಡಿದ್ದರು. ಇದಕ್ಕೆ ಹೈಕೋರ್ಟ್‌ ನಾಯಾಧೀಶೆ ತೀವ್ರ ಬೇಸರ ವ್ಯಕ್ತಪಡಿಸಿದರು.

ವಿಚ್ಛೇದಿತ ಮಹಿಳೆಯ ಪ್ರತಿ ತಿಂಗಳ ಖರ್ಚಿಗೆ 6,16,300 ರೂ. ಬೇಕೆ? ಪತಿ ಎಷ್ಟು ಸಂಪಾದನೆ ಮಾಡುತ್ತಿದ್ದಾರೆ ಎಂಬುದನ್ನು ಆಧರಿಸಿ ಪತ್ನಿಗೆ ಜೀವನಾಂಶ ನೀಡಲಾಗದು? ಆಕೆಯ ಅಗತ್ಯವೇನು? ಪತಿ 10 ಕೋಟಿ ರೂ. ಸಂಪಾದಿಸಬಹುದು ಹಾಗೆಂದ ಮಾತ್ರಕ್ಕೆ ನ್ಯಾಯಾಲಯವು ಆಕೆಗೆ 5 ಕೋಟಿ ರೂ. ಕೊಡಲು ಆದೇಶಿಸಲಾಗುತ್ತದೆಯೇ? ಒಬ್ಬ ಮಹಿಳೆ ತನಗಾಗಿ ತಿಂಗಳಿಗೆ ಇಷ್ಟು ಖರ್ಚು ಮಾಡುತ್ತಾರೆ ಎಂದಾದರೆ ಅವರೇ ಸಂಪಾದಿಸಲಿ” ಎಂದು ಚಾಟಿ ಬೀಸಿದರು.

ಅಷ್ಟೇ ಅಲ್ಲದೆ ಮಹಿಳೆ ತನ್ನ ಮಕ್ಕಳ ಪೋಷಣೆ ಬಗ್ಗೆ ಎಲ್ಲೂ ಪ್ರಸ್ತಾಪಿಸಿಲ್ಲ. ಹೀಗಾಗಿ ವಾಸ್ತವಿಕ ವೆಚ್ಚಗಳನ್ನು ಒಳಗೊಂಡ ಅಫಿಡವಿಟ್‌ ಸಲ್ಲಿಸಲು ಅವಕಾಶ ನೀಡಿ ಸೆಪ್ಟೆಂಬರ್ 9ಕ್ಕೆ ಹೈಕೋರ್ಟ್‌ ವಿಚಾರಣೆ ಮುಂದೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

karnataka Weather Forecast : ಇಂದು ರಾಜಧಾನಿ ಬೆಂಗಳೂರಿನಲ್ಲಿ ಘಳಿಗೆಗೊಂದು ವಾತಾವರಣ ಇರಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ಕರಾವಳಿ ಸುತ್ತಮುತ್ತ ಗುಡುಗು ಸಹಿತ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಮಲೆನಾಡಿನಲ್ಲಿ ಸಾಧಾರಣ ಮಳೆಯಾದರೆ (Rain News) ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕೋಲಾರ-ಬೆಳಗಾವಿಯಲ್ಲಿ ಮಳೆ ಅಬ್ಬರ

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಾದ ಧಾರವಾಡ, ಬಾಗಲಕೋಟೆ, ಬೀದರ್‌, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಬಿಸಿಲಿನ ಜತೆಗೆ ಮೋಡ ಕವಿದ ವಾತಾವರಣ ಇರಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Murder Case: ಶೀಲ ಶಂಕೆ; ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಭೀಕರ ಹತ್ಯೆ

ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿ, ಆಕೆಗೆ ಭೀಕರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಘಟನೆ (Murder Case) ಬೆಂಗಳೂರಿನ ಕೆಂಗೇರಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ನವ್ಯಾ(25) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಪತಿ ಕಿರಣ್‌ ಕೊಲೆಗೈದ ಆರೋಪಿಯಾಗಿದ್ದಾನೆ.

VISTARANEWS.COM


on

Murder Case
Koo

ಬೆಂಗಳೂರು: ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿ, ಆಕೆಗೆ ಭೀಕರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಘಟನೆ (Murder Case) ಬೆಂಗಳೂರಿನ ಕೆಂಗೇರಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ನವ್ಯಾ (25) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಪತಿ ಕಿರಣ್‌ ಕೊಲೆಗೈದ ಆರೋಪಿಯಾಗಿದ್ದಾನೆ.

ಇದನ್ನೂ ಓದಿ: Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

ಕಿರಣ್ ಮತ್ತು ನವ್ಯಾ ಕಳೆದ ಮೂರು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು. ಇನ್ನು ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು. ಪತ್ನಿಯ ಶೀಲ ಶಂಕಿಸಿ, ಆಕೆಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ನೀಡಿ, ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಕೆಂಗೇರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಲೆಗೈದ ಆರೋಪಿ ಕಿರಣ್‌ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ಬರ್ಬರ ಹತ್ಯೆ; ಹೆಂಡ್ತಿ ಜತೆಗೆ ಅನೈತಿಕ ಸಂಬಂಧವೇ ಕಾರಣ

ಪತ್ನಿಯ ಜತೆ ಅನೈತಿಕ ಸಂಬಂಧದ ಬಗ್ಗೆ ಶಂಕಿಸಿ ಪತಿಯು, ಯುವಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಏರ್‌ಪೋರ್ಟ್ ಟರ್ಮಿನಲ್‌ನಲ್ಲಿ ಜರುಗಿದೆ.

ರಾಮಕೃಷ್ಣ(45) ಮೃತ ದುರ್ದೈವಿ. ರಮೇಶ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಧುಗಿರಿಯ ತಿಮ್ಮನಹಳ್ಳಿ ಮೂಲದ ಆರೋಪಿ ರಮೇಶ್‌ ತನ್ನ ಪತ್ನಿಯ ಜತೆ ರಾಮಕೃಷ್ಣ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ, ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಭೇಟಿ ‌ನೀಡಿ ಪರಿಶೀಲನೆ ನಡೆಸಿದರು. ಆರೋಪಿಯು ಪರಾರಿಯಾಗುವ ವೇಳೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

ಬುದ್ಧಿ ಹೇಳಿದಕ್ಕೆ ಹೆತ್ತ ತಾಯಿಯನ್ನೆ ಕೊಂದ ಪಾಪಿ ಪುತ್ರ!

ಪಾಪಿ ಪುತ್ರನೊಬ್ಬ ಬುದ್ದಿ ಹೇಳಿದ್ದಕ್ಕೆ ಮಲಗಿದಲ್ಲೇ ಹೆತ್ತ ತಾಯಿಯನ್ನು ಕೊಂದಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ಜರುಗಿದೆ. ಶಾರದಮ್ಮ ಅಗಡಿ (85) ಕೊಲೆಯಾದ ತಾಯಿಯಾಗಿದ್ದು, ಸಿದ್ಧಲಿಂಗ ಅಗಡಿ ಕೊಲೆ ಮಾಡಿದ ಪಾಪಿ ಪುತ್ರನಾಗಿದ್ದಾನೆ.

ನಿನ್ನೆ ಪಕ್ಕದ ಮನೆಯವರ ಜತೆ ಸಿದ್ಧಲಿಂಗ ಅಗಡಿ ಜಗಳ ಮಾಡಿಕೊಂಡಿದ್ದ‌.‌ ಈ ವೇಳೆ ನನ್ನ ಮಗನ ತಲೆ ಸರಿಯಿಲ್ಲ ಬಿಟ್ಟು ಬಿಡಿ ಎಂದು ತಾಯಿ ಬೇಡಿಕೊಂಡಿದ್ದರು. ಇನ್ನು ತಾಯಿಯನ್ನು ಕೊಂದು ಸಹೋದರಿಯರಿಗೆ ಫೋನ್ ಮಾಡಿದ ಪಾಪಿ ಪುತ್ರ, ತಾಯಿ ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಪವಿತ್ರಾಗೌಡ ಜಾಮೀನು ಅರ್ಜಿಯ ಭವಿಷ್ಯ ಆ.31ಕ್ಕೆ ನಿರ್ಧಾರ

ಮಾನಸಿಕ ಅಸ್ವಸ್ಥ ಸಹೋದರನ ಮಾತು ನಂಬದ ಅಕ್ಕಂದಿರು, ಬಳಿಕ ಪೊಲೀಸರು ಮಾಹಿತಿ ನೀಡಿದ ಬಳಿಕ ಓಡೋಡಿ ಬಂದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಘಟನೆಯು ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

Continue Reading

ಬೆಂಗಳೂರು

Actor Darshan: ಪವಿತ್ರಾಗೌಡ ಜಾಮೀನು ಅರ್ಜಿಯ ಭವಿಷ್ಯ ಆ.31ಕ್ಕೆ ನಿರ್ಧಾರ

Actor Darshan: ರೇಣುಕಾಸ್ವಾಮಿ‌ ಕೊಲೆ ಪ್ರಕರಣದ ಎ1 ಆರೋಪಿ‌ ಪವಿತ್ರಗೌಡ ಸೇರಿದಂತೆ ನಾಲ್ವರು ಆರೋಪಿಗಳು ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಸುಧೀರ್ಘವಾದ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆಗಸ್ಟ್ 31ಕ್ಕೆ ಆದೇಶ ಕಾಯ್ದಿರಿಸಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ‌ ಕೊಲೆ ಪ್ರಕರಣದ ಎ1 ಆರೋಪಿ‌ ಪವಿತ್ರಗೌಡ ಸೇರಿದಂತೆ ನಾಲ್ವರು ಆರೋಪಿಗಳು ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಿತು. (Actor Darshan) ಸುಧೀರ್ಘವಾದ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆಗಸ್ಟ್ 31ಕ್ಕೆ ಆದೇಶ ಕಾಯ್ದಿರಿಸಿದೆ.

ಇದನ್ನೂ ಓದಿ: Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬಂಧನವಾಗಿದ್ದ ಆರೋಪಿಗಳಾದ ಪವಿತ್ರಗೌಡ, ವಿನಯ್, ಕೇಶವಮೂರ್ತಿ ಹಾಗೂ ಅನುಕುಮಾರ್ ಜಾಮೀನು ಕೋರಿ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಹಾಕಿದ್ದರು. ನಿನ್ನೆ ಆರೋಪಿಗಳ ಪರ ವಕೀಲರು ವಾದ ನಡೆಸಿದ್ದು, ಪವಿತ್ರಾಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಿದ್ರು. ಇಂದು ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿದರು.

ಇದನ್ನೂ ಓದಿ: Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

ಸುಮಾರು ಒಂದು ಗಂಟೆಯ ಕಾಲ ವಾದ ಮಂಡಿಸಿದ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಕಿಡ್ನಾಪ್‌ನಿಂದ ಹಿಡಿದು ಕೊಲೆಯ ಆಗಿ ಸಾಕ್ಷ್ಯನಾಶದ ಬಗ್ಗೆ ಇಂಚಿಂಚೂ ಮಾಹಿತಿ ಕೋರ್ಟ್‌ಗೆ ನೀಡಿದ್ದು, ಯಾವುದೇ ಕಾರಣಕ್ಕೂ ಜಾಮೀನು‌‌ ಕೊಡದಂತೆ ಮನವಿ ಮಾಡಿ ವಾದ ಮುಕ್ತಾಯ ಮಾಡಿದರು. ಎರಡೂ ಕಡೆ ವಾದ-ಪ್ರತಿವಾದ ಮುಕ್ತಾಯ ಆಗಿದ್ದು, ಆಗಸ್ಟ್‌ 31 ಕ್ಕೆ ಪವಿತ್ರಗೌಡ ಹಾಗೂ ಅನುಕುಮಾರ್ ಅರ್ಜಿಯ ಆದೇಶ ಕಾಯ್ದಿರಿಸಿದರೆ, ಸೆ.2ಕ್ಕೆ ವಿನಯ್ ಹಾಗೂ ಕೇಶವಮೂರ್ತಿ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿತು.

Continue Reading

ಕ್ರೈಂ

Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

ಬೆಂಗಳೂರು ಜಾಲಹಳ್ಳಿಯ ಏರ್ ಫೋರ್ಸ್ ಈಸ್ಟ್ 7 ನೇ ರೆಸಿಡೆನ್ಶಿಯಲ್ ಕ್ಯಾಂಪ್‌ನಲ್ಲಿರುವ ಆಟದ ಮೈದಾನದಲ್ಲಿ ಬೆಳಗ್ಗೆ 6.30ರ ಸುಮಾರಿಗೆ 75 ವರ್ಷದ ಮಹಿಳೆ ಮೇಲೆ ಸುಮಾರು ಏಳೆಂಟು ಬೀದಿ ನಾಯಿಗಳು ಹಠಾತ್ ದಾಳಿ (Stray Dogs Attack) ನಡೆಸಿದ್ದು, ತಲೆ ಹಿಂಬದಿ, ಮುಖ, ಕೈ, ಕತ್ತಿನ ಭಾಗವನ್ನು ಶ್ವಾನಗಳು ಕಚ್ಚಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

VISTARANEWS.COM


on

By

Stray Dogs Attack
Koo

ಬೆಂಗಳೂರು: ನಿವೃತ್ತ ಶಿಕ್ಷಕಿಯೊಬ್ಬರು ( retired teacher) ಬುಧವಾರ ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ಅವರ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ (Stray Dogs Attack) ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ (bengaluru) ನಡೆದಿದೆ.

ಜಾಲಹಳ್ಳಿಯ ಏರ್ ಫೋರ್ಸ್ ಈಸ್ಟ್ 7 ನೇ ರೆಸಿಡೆನ್ಶಿಯಲ್ ಕ್ಯಾಂಪ್‌ನಲ್ಲಿರುವ ಆಟದ ಮೈದಾನದಲ್ಲಿ ಬೆಳಗ್ಗೆ 6.30ರ ಸುಮಾರಿಗೆ ವಾಯುಸೇನೆ ಸಿಬ್ಬಂದಿಯ ಅತ್ತೆ, 75 ವರ್ಷದ ರಾಜ್ದುಲಾರಿ ಸಿನ್ಹಾ ಅವರ ಮೇಲೆ ಸುಮಾರು ಏಳೆಂಟು ಬೀದಿ ನಾಯಿಗಳು ಹಠಾತ್ ದಾಳಿ ನಡೆಸಿದ್ದು, ತಲೆ ಹಿಂಬದಿ, ಮುಖ, ಕೈ, ಕತ್ತಿನ ಭಾಗವನ್ನು ಶ್ವಾನಗಳು ಕಚ್ಚಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮೃತ ಮಹಿಳೆಯ ಅಳಿಯ ಏರ್ ಫೋರ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಅಳಿಯ ಮತ್ತು ಮಗಳನ್ನು ನೋಡಲು ಮಹಿಳೆ ಬಿಹಾರದಿಂದ ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು.

ಈ ಹಿಂದೆಯೂ ಇದೇ ಕ್ಯಾಂಪಸ್ ನಲ್ಲಿ ನಾಲ್ಕೈದು ಜನರ ಮೇಲೆ ನಾಯಿಗಳು ದಾಳಿ ನಡೆಸಿತ್ತು.

ಈ ಕುರಿತು ಗಂಗಮ್ಮ ಗುಡಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.


ಘಟನೆಯ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿದ್ದು, ಇದು ಬುಧವಾರ ಬೆಳಗ್ಗೆ ನಡೆದ ಒಂದು ದುರಂತ ದೃಶ್ಯವಾಗಿದೆ.ವಿದ್ಯಾರಣ್ಯಪುರದ ಜಾಲಹಳ್ಳಿಯ ಏರ್‌ಫೋರ್ಸ್ ಆಟದ ಮೈದಾನದಲ್ಲಿ ಹಲವು ಬೀದಿನಾಯಿಗಳು ಮಹಿಳೆಯ ಮೇಲೆ ದಾಳಿ ಮಾಡಿವೆ. ನಾನು ಅಸಹಾಯಕ ಪ್ರತ್ಯಕ್ಷದರ್ಶಿಯಾಗಿದ್ದೆ. ಅವರ ದೊಡ್ಡ ಗೋಡೆಯಿಂದಾಗಿ ನಾನು ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ನಾನು ಕೂಗಿ ಕೆಲವು ಜನರನ್ನು ಕರೆದಿದ್ದೇನೆ ಮತ್ತು ಅವರು ಅವಳನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Murder Case: ಬುದ್ಧಿ ಹೇಳಿದಕ್ಕೆ ಹೆತ್ತ ತಾಯಿಯನ್ನೆ ಕೊಂದ ಪಾಪಿ ಪುತ್ರ!

ಶಾಲಾ ಆವರಣದಲ್ಲಿ ಹಾವು ಕಚ್ಚಿ ಮಗು ಸಾವು

ಶಾಲಾ ಆವರಣದಲ್ಲಿ ಹಾವು ಕಚ್ಚಿ ಮಗು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಘಟನೆಯಿಂದ ಶಾಲಾ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮಸ್ಥರು ಶಾಲಾ ಆವರಣದಲ್ಲಿ ಸೇರಿದ್ದರಿಂದ ಸ್ಥಳಕ್ಕೆ ಆಗಮಿಸಿದ ದೊಡ್ಡಬೆಳವಂಗಲ ಇನ್ಸ್‌ಪೆಕ್ಟರ್ ನವೀನ್ ಕುಮಾರ್ ಎಂ.ಬಿ. ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ಉಂಟಾಯಿತು.

ಇನ್ಸ್ ಪೆಕ್ಟರ್ ಮನವೊಲಿಕೆಗೆ ಬಗ್ಗದ ಗ್ರಾಮಸ್ಥರು ಆಡಳಿತ ಮಂಡಳಿ ಸ್ಥಳಕ್ಕೆ ಆಗಮಿಸುವವರೆಗೂ ಶವಸಂಸ್ಕಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು.

Continue Reading
Advertisement
Hair Combing
ಆರೋಗ್ಯ3 hours ago

Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

dhavala dharini column Hanuman's setubandha to meet Sugriva in ramayana by narayana yaji
ಅಂಕಣ3 hours ago

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

karnataka weather Forecast
ಮಳೆ4 hours ago

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ5 hours ago

Dina Bhavishya: ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಆದ್ರೆ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Murder Case
ಬೆಂಗಳೂರು13 hours ago

Murder Case: ಶೀಲ ಶಂಕೆ; ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಭೀಕರ ಹತ್ಯೆ

Actor Darshan
ಬೆಂಗಳೂರು14 hours ago

Actor Darshan: ಪವಿತ್ರಾಗೌಡ ಜಾಮೀನು ಅರ್ಜಿಯ ಭವಿಷ್ಯ ಆ.31ಕ್ಕೆ ನಿರ್ಧಾರ

Fashion Trend
ಫ್ಯಾಷನ್15 hours ago

Fashion Trend: ಕಟೌಟ್‌ ಪ್ಯಾಂಟ್‌ ಸೂಟ್‌; ಗ್ಲಾಮರಸ್‌ ಯುವತಿಯರ ಲೇಟೆಸ್ಟ್ ಆಯ್ಕೆ!

Stray Dogs Attack
ಕ್ರೈಂ15 hours ago

Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

R Ashok
ಬೆಂಗಳೂರು15 hours ago

R Ashok: ರಾಜ್ಯ ಸರ್ಕಾರದಿಂದ ದ್ವೇಷ ರಾಜಕಾರಣ; ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ ಎಂದ ಆರ್‌. ಅಶೋಕ್‌

karnataka weather Forecast
ಮಳೆ15 hours ago

Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌