DK Shivakumar : ಕುಮಾರಸ್ವಾಮಿಯಿಂದ ಕಾಂಗ್ರೆಸ್‌ ಶಾಸಕರಿಗೆ ಆಫರ್‌, ಧಮಕಿ? - Vistara News

ಬೆಂಗಳೂರು

DK Shivakumar : ಕುಮಾರಸ್ವಾಮಿಯಿಂದ ಕಾಂಗ್ರೆಸ್‌ ಶಾಸಕರಿಗೆ ಆಫರ್‌, ಧಮಕಿ?

DK Shivakumar : ರಾಜ್ಯಸಭಾ ಚುನಾವಣೆಯಲ್ಲಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್‌ ನಾಯಕ ಕುಮಾರ ಸ್ವಾಮಿ ಅವರು ಕಾಂಗ್ರೆಸ್‌ ಶಾಸಕರಿಗೆ ಆಮಿಷ ಮತ್ತು ಧಮಕಿ ಹಾಕುತ್ತಿದ್ದಾರೆ ಎಂದು ಡಿ.ಕೆ ಶಿವಕುಮಾರ್‌ ಆರೋಪಿಸಿದ್ದಾರೆ.

VISTARANEWS.COM


on

DK Shivakumar and ST Somashekhar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ರಾಜ್ಯಸಭಾ ಚುನಾವಣೆಯಲ್ಲಿ (Rajyasabha Elections) ಜೆಡಿಎಸ್‌ ಐದನೇ ಅಭ್ಯರ್ಥಿಯಾಗಿ ಉದ್ಯಮಿ ಕುಪೇಂದ್ರ ರೆಡ್ಡಿ (Businessman Kupendra Reddy) ಅವರನ್ನು ಕಣಕ್ಕಿಳಿಸಿದೆ. ಅವರು ಗೆಲ್ಲಬೇಕು ಎಂದರೆ ಸುಮಾರು ಆರೇಳು ಹೆಚ್ಚುವರಿ ಮತಗಳ‌ ಅಗತ್ಯವಿದೆ. ಇದನ್ನು ಪಡೆಯಲು ಕಾಂಗ್ರೆಸ್‌ ಶಾಸಕರಿಗೆ ಗಾಳ ಹಾಕುತ್ತಿದ್ದಾರೆ ಎಂದು ಅವರು ಡಿ.ಕೆ. ಆರೋಪದ ತಿರುಳು.

ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ.” ಎಂದರು.

ವಿರೋಧ ಪಕ್ಷಗಳು ಅಡ್ಡಮತದಾನದ ಪ್ರಯತ್ನ ಮಾಡುತ್ತಿದ್ದಾರಾ ಎಂದು ಕೇಳಿದಾಗ, “ಸುಮ್ಮನೇ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಾರಾ? ಒಂದು ಪ್ರಯತ್ನ ಮಾಡೋಣ ಎಂದು ಹಾಕಿದ್ದಾರೆ. ಮತದಾನದ ದಿನ ಎಲ್ಲವೂ ಗೊತ್ತಾಗಲಿದೆ” ಎಂದರು.

ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತೀರಾ ಎಂದು ಕೇಳಿದಾಗ, “ನಮಗೆ ಅದರ ಅಗತ್ಯವಿಲ್ಲ. ಜನ ನಮಗೆ 136 ಸೀಟುಗಳನ್ನು ನೀಡಿದ್ದಾರೆ. 2 ಕ್ಷೇತ್ರದ ಪಕ್ಷೇತರರು ನಮ್ಮ ಜತೆಗಿದ್ದಾರೆ. ನಮ್ಮ ಜತೆ ಇರುವ ಬೇರೆಯವರ ಬಗ್ಗೆ ಈಗ ಮಾತನಾಡುವುದಿಲ್ಲ. ಮತದಾನದ ನಂತರ ಮಾತನಾಡುತ್ತೇವೆ” ಎಂದು ತಿಳಿಸಿದರು.

ಇದನ್ನೂ ಓದಿ : DK Shivakumar: ಮರೆಯಾಗಿರುವ ನಮ್ಮ ಮಣ್ಣಿನ ಬ್ಯಾಂಕುಗಳು ಕರ್ಣಾಟಕ ಬ್ಯಾಂಕ್‌ನಲ್ಲಿ ವಿಲೀನವಾಗಬೇಕು: ಡಿಕೆಶಿ

DK Shivakumar ಳ ಎಸ್ಟಿ ಸೋಮಶೇಖರ್, ಗೋಪಾಲಯ್ಯ ಜತೆ ವೈಯಕ್ತಿಕ ಬಾಂಧವ್ಯ

ಬಿಜೆಪಿ ಶಾಸಕರಾದ ಎಸ್‌.ಟಿ. ಸೋಮಶೇಖರ್ ಅವರ ಜತೆ ವಿಮಾನದಲ್ಲಿ ಮಂಗಳೂರಿಗೆ ಪ್ರಯಾಣ ಮಾಡಿದ್ದು ಮತ್ತು ಗೋಪಾಲಯ್ಯ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಸೋಮಶೇಖರ್ ಹಾಗೂ ಗೋಪಾಲಯ್ಯ ಅವರ ಜತೆ ವೈಯಕ್ತಿಕ ಸ್ನೇಹ, ಸಂಬಂಧಗಳಿವೆ” ಎಂದು ತಿಳಿಸಿದರು.

ಸೋಮಶೇಖರ್ ಅವರು ಪದೇ ಪದೆ ನಿಮ್ಮ ಜತೆ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಕೇಳಿದಾಗ, “ಗುರುತಿಸಿಕೊಳ್ಳುವುದಲ್ಲ. ಅವರು ಕೇವಲ ಮೂರು ವರ್ಷ ಮಾತ್ರ ಬೇರೆ ಕಡೆ ಹೋಗಿದ್ದಾರೆ. ಆದರೆ 35 ವರ್ಷಗಳಿಂದ ನಾವು ರಾಜಕೀಯವಾಗಿ ಸಂಸಾರ ಮಾಡಿದ್ದೇವೆ” ಎಂದು ತಿಳಿಸಿದರು.

ಕಮಲನಾಥ್ ಸೇರಿದಂತೆ ಯಾರೂ ಬಿಜೆಪಿ ಸೇರಲ್ಲ ಎಂದ ಡಿ.ಕೆ ಶಿವಕುಮಾರ್‌

ಬಿಜೆಪಿ ಬರೀ ಸುಳ್ಳನ್ನು ಪ್ರಚಾರ ಮಾಡಿಕೊಂಡೆ ಇರುತ್ತದೆ. ಕಮಲನಾಥ್ ಅವರು ಬಹಳ ಹಿರಿಯ ನಾಯಕರು. ಅವರು ಈಗಷ್ಟೇ ಚುನಾವಣೆ ಮುಗಿಸಿದ್ದಾರೆ. ಅವರು ಎಲ್ಲೂ ಬಿಜೆಪಿ ಸೇರುವುದಾಗಿ ಹೇಳಿಲ್ಲ. ಆದರೂ ಅವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹರಡುತ್ತಾರೆ. ಬೇರೆಯವರ ಹೆಸರು ಸೇರಿಸುತ್ತಾರೆ. ಕಮಲನಾಥ್ ಅವರು 50 ವರ್ಷಗಳ ರಾಜಕಾರಣದಲ್ಲಿ ಗಾಂಧಿ ಕುಟುಂಬದ ಜತೆ ಒಡನಾಟ ಇಟ್ಟುಕೊಂಡು ಪಕ್ಷ ಕಟ್ಟಿದ್ದಾರೆ. ಇಂತಹವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹೇಳಿ ಅವರ ಜಾತಿ ಕೆಡಿಸಿ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್‌ ಅವರ ನಿರ್ಗಮನ ವದಂತಿಗೆ ಪ್ರತಿಕ್ರಿಯಿಸಿದರು.

ಕಳೆದ 35 ವರ್ಷಗಳಿಂದ ನನಗೆ ಕಮಲನಾಥ್ ಅವರು ಪರಿಚಯವಿದ್ದಾರೆ. ಅವರು ಸಿದ್ಧಾಂತ, ಮೌಲ್ಯಗಳ ವ್ಯಕ್ತಿ. ಅವರು ಸಿದ್ಧಾಂತ ಬಿಟ್ಟು ಈ ವಯಸ್ಸಿನಲ್ಲಿ ಕಾಂಗ್ರೆಸ್ ಯಾಕೆ ತೊರೆಯುತ್ತಾರೆ? ಇನ್ನು ಮನೀಶ್ ತಿವಾರಿ ಅವರೂ ಕೂಡ ಕಾಂಗ್ರೆಸ್ ಪಕ್ಷದ ಪ್ರಮುಖ ಸಂಘಟಕರು. ಇವರೆಲ್ಲರೂ ಕಾಂಗ್ರೆಸ್ ಪಕ್ಷದ ನಾಯಕರು. ಕಮಲನಾಥ್ ಅವರೂ ಸೇರಿದಂತೆ ಯಾರೊಬ್ಬರು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕಾಂಗ್ರೆಸ್ ಪಕ್ಷ ಯಾವುದೇ ಒಬ್ಬ ನಾಯಕ ಮೇಲೆ ಅವಲಂಬಿತವಾಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಕಾರ್ಯಕರ್ತರ ಬುನಾದಿ ಇದೆ. ಗಾಂಧಿ ಕುಟುಂಬ ಇರುವವರೆಗೂ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿರಲಿದೆ. ಕಾಂಗ್ರೆಸ್ ಪಕ್ಷ ಇರುವವರೆಗೂ ದೇಶ ಒಗ್ಗಟ್ಟಾಗಿರಲಿದೆ ಎಂದು ಹೇಳಿದರು ಡಿ.ಕೆ. ಶಿವಕುಮಾರ್‌.

ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ?

“ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಸೆಳೆಯುತ್ತಿರುವುದೇಕೆ? ಬಿಜೆಪಿ ದುರ್ಬಲವಾಗಿರುವುದಕ್ಕೆ ಕಾಂಗ್ರೆಸ್ ನಾಯಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನಮಂತ್ರಿಗಳು ಈ ಚುನಾವಣೆಯಲ್ಲಿ 370 ಕ್ಷೇತ್ರ ಗೆಲ್ಲುವುದಾಗಿ ಹೇಳಿದ್ದಾರೆ. ಬಿಜೆಪಿ ಅಷ್ಟು ಕ್ಷೇತ್ರ ಗೆಲ್ಲುವುದು ನಿಜವೇ ಆದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ? ಯಾರು ಗೆಲ್ಲಬೇಕು ಎಂದು ಜನ ತೀರ್ಮಾನಿಸಲಿದ್ದಾರೆ” ಎಂದರು.

ಹೈಕಮಾಂಡ್ ತೀರ್ಮಾನ ಎಲ್ಲರೂ ಪಾಲಿಸಬೇಕು ಎಂದ ಡಿ.ಕೆ. ಶಿವಕುಮಾರ್‌

ಸಚಿವರು ಲೋಕಸಭೆ ಚುನಾವಣೆಲ್ಲಿ ಸ್ಪರ್ಧಿಸಲು ಮನಸ್ಸಿಲ್ಲ ಎಂದು ಕೇಳಿದಾಗ, “ಲೋಕಸಭೆ ಚುನಾವಣೆಯಲ್ಲಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಪಕ್ಷದ ತೀರ್ಮಾನವನ್ನು ನಾನು ಸೇರಿದಂತೆ ಎಲ್ಲರೂ ಪಾಲಿಸಬೇಕು. ನಾವೆಲ್ಲ ಒಟ್ಟಾಗಿ ಕೆಲಸ ಮಾಡಿ ಹೆಚ್ಚಿನ ಕ್ಷೇತ್ರದಲ್ಲಿ ಪಕ್ಷ ಗೆಲ್ಲುವಂತೆ ಮಾಡಬೇಕು” ಎಂದು ತಿಳಿಸಿದರು.

ಬರ ನಿರ್ವಹಣೆಗೆ ಅಗತ್ಯ ಕ್ರಮ, ಬೆಂಗಳೂರಿನ 110 ಹಳ್ಳಿಗಳಿಗೆ ನೀರು

ಬರದಿಂದಾಗಿ ನೀರಿನ ಕೊರತೆ ವಿಚಾರವಾಗಿ ಕೇಳಿದಾಗ, “ಬರ ಪರಿಸ್ಥಿತಿಯಿಂದಾಗ ನೀರಿನ ಅಭಾವ ಹೆಚ್ಚಿದೆ. 200 ತಾಲೂಕುಗಳಲ್ಲಿ ಅಂತರ್ಜಲ ನೀರಿನ ಮಟ್ಟ ಕುಸಿದಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಸೇರಿದಂತೆ ಕುಡಿಯುವ ನೀರು ಪೂರೈಸಲು ನಮ್ಮ ಸರ್ಕಾರ ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಂಡಿದೆ. ಇನ್ನು ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಬಳಸಲು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ರಾಜ್ಯದ ಇತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳಿಗೆ ಹಣ ನೀಡಲಾಗಿದೆ. ಕೆಲವು ಶಾಸಕರು ಈಗಾಗಲೇ ಇರುವ ಕೊಳವೆ ಬಾವಿಗಳನ್ನು ಇನ್ನು 500 ಅಡಿಗಳಷ್ಟು ಆಳಕ್ಕೆ ಕೊರೆಸಿದರೆ ಹೊಸ ಕೊಳವೆಬಾವಿ ಕೊರೆಯುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ. ಈ ಅವಕಾಶದ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ” ಎಂದು ತಿಳಿಸಿದರು.

ತಮಿಳುನಾಡಿನಲ್ಲಿ ಕಮಲ್ ಹಸನ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರಲು ಮುಂದಾಗಿದ್ದು ಇದರಿಂದ ಮೈತ್ರಿಗೆ ಅನುಕೂಲವಾಗುತ್ತದೆಯೇ ಎಂದು ಕೇಳಿದಾಗ, “ಖಂಡಿತವಾಗಿಯೂ ಅನುಕೂಲವಾಗುತ್ತದೆ. ನಮ್ಮ ಜತೆ ಕೈಜೋಡಿಸುವವರಿಗೆ ನಾವು ಸ್ವಾಗತಿಸುತ್ತೇವೆ” ಎಂದು ತಿಳಿಸಿದರು.

ಮಂಗಳೂರಿನ ಜೆರೋಸಾ ಹೈಸ್ಕೂಲ್‌ ಘಟನೆಗೆ ಸಂಬಂಧಿಸಿ ಅಲ್ಲಿನ ಶಾಸಕರ ವಿರುದ್ಧದ ಎಫ್ಐಆರ್ ಖಂಡಿಸಿ ಬಿಜೆಪಿ, ವಿಹೆಚ್ ಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಜೆಪಿ ಸ್ನೇಹಿತರು ನಮಗೆ ಕೆಲವು ಪಾಠ ಕಲಿಸಿದ್ದು, ನಾವು ಆ ಪಾಠ ಕಲಿತಿದ್ದೇವೆ” ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain : ಭಾನುವಾರದ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಮಳೆಯು ಮನೆಯಲ್ಲೇ ಕೂರುವಂತೆ ಮಾಡಿದೆ. ಬೆಂಗಳೂರು, ಆನೇಕಲ್‌ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು, ವಿಜಯನಗರದಲ್ಲಿ ಸಿಡಿಲು ಬಡಿದು ಎರಡು ಜಾನುವಾರು ಮೃತಪಟ್ಟಿವೆ. ದಾವಣಗೆರೆಯಲ್ಲಿ ಮಳೆಗೆ ಬೆಳೆಯು ಕೊಚ್ಚಿ ಹೋಗಿದೆ.

VISTARANEWS.COM


on

By

Karnataka rain
Koo

ವಿಜಯನಗರ/ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಹಲವೆಡೆ ಗುಡುಗು ಸಹಿತ ಮಳೆ (Karnataka Rain) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯಲ್ಲಿ ಅರ್ಧ ಗಂಟೆಗೂ ಅಧಿಕ ಸಮಯ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ. ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಜಾನುವಾರುಗಳು ಮೃತಪಟ್ಟಿವೆ. ಕೋರಿ ಮಲಿಯಪ್ಪ ಎಂಬ ರೈತರಿಗೆ ಸೇರಿದ ಎತ್ತುಗಳನ್ನು ಹೊಲದಲ್ಲಿ ಮರದಡಿ ಕಟ್ಟಿ ಹಾಕಿದ್ದರು. ಈ ವೇಳೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಅಂದಾಜು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಎತ್ತುಗಳು ಸಾವನ್ನಪ್ಪಿದ್ದರಿಂದ ರೈತ ಕೋರಿ ಮಲಿಯಪ್ಪ ಕಂಗಲಾಗಿದ್ದಾರೆ.

ಬೆಂಗಳೂರು, ಆನೇಕಲ್‌ನಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರಿದಿದೆ. ಸಂಜೆಗೆ ಆವರಿಸುತ್ತಿದ್ದ ಮಳೆ ಭಾನುವಾರ ಬೆಳಗಿನಿಂದಲೇ ಅಬ್ಬರಿಸುತ್ತಿದೆ. ಎಂಎಸ್ ಬಿಲ್ಡಿಂಗ್ , ವಿಧಾನಸೌಧ , ಶಿವಾನಂದ ಸರ್ಕಲ್, ಶಿವಾಜಿನಗರ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಮಧ್ಯಾಹ್ನ ಶುರುವಾದ ಮಳೆಯು ಸುಮಾರು 1 ಗಂಟೆಗೂ ಹೆಚ್ಚು ಸಮಯ ಆವರಿಸಿತ್ತು. ಆಗಾಗ ಬರುತ್ತಿದ್ದ ಗುಡುಗು ಜನರನ್ನು ಬೆಚ್ಚಿ ಬೀಳಿಸುತ್ತಿತ್ತು. ಕೆ.ಆರ್ ಸರ್ಕಲ್, ಕಬ್ಬನ್ ಪಾರ್ಕ್ ರಸ್ತೆ, ಲಾಲ್ ಬಾಗ್ ರಸ್ತೆ, ರಾಜಾಜಿನಗರ, ರಾಜಕುಮಾರ್ ರಸ್ತೆಯಲ್ಲಿಯೂ ಮಳೆಯಾಗಿದೆ. ಯಲಹಂಕ, ನ್ಯೂ ಟೌನ್, ದೊಡ್ಡಬಳ್ಳಾಪುರ ಮುಖ್ಯರಸ್ತೆ, ಪುಟ್ಟೇನಹಳ್ಳಿ, ಏರ್‌ಪೋರ್ಟ್‌ ರೋಡ್‌ನಲ್ಲಿ ಮಳೆಯಾಗಿದೆ.

ಇತ್ತ ಆನೇಕಲ್ ಭಾಗದಲ್ಲೂ ಧಾರಾಕಾರ ಮಳೆಯಾಗಿತ್ತು. ಭಾನುವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಆಗಮಿಸಿದ ಮಳೆಯು ಆನೇಕಲ್, ಅತ್ತಿಬೆಲೆ, ಸರ್ಜಾಪುರ ಭಾಗದಲ್ಲಿ ಅಬ್ಬರಿಸಿತ್ತು. ಕಳೆದೊಂದು ವಾರದಿಂದ ನಿರಂತರ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಧಾರವಾಡದಲ್ಲೂ ಮಳೆ

ಪೇಡಾನಗರಿ ಧಾರವಾಡದಲ್ಲೂ ವರುಣನ ಅಬ್ಬರ ಮುಂದುವರಿದಿದೆ. ಮಧ್ಯಾಹ್ನದ ವೇಳೆ ಶುರುವಾದ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ವಿಜಯನಗರದಲ್ಲಿ ಮರಕ್ಕೆ ಬಡಿದ ಸಿಡಿಲು

ವಿಜಯನಗರದಲ್ಲಿ ಗುಡುಗು ಸಿಡಿಲು ಸಮೇತ ಮಳೆಯಾಗುತ್ತಿದ್ದು, ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಹೊಸಪೇಟೆ ತಾಲೂಕಿನ ಕೆರೆ ತಾಂಡಾ ಗ್ರಾಮದಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ, ಕಮಲಾಪುರ, ಹಂಪಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಇತ್ತ ಹೊಸಪೇಟೆ ಹೃದಯ ಭಾಗದಲ್ಲಿ ರಸ್ತೆ ಮೇಲೆ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ನೂರು ಹಾಸಿಗೆ ಆಸ್ಪತ್ರೆ, VNC ಕಾಲೇಜಿಗೆ ಹೋಗುವ ರಸ್ತೆ ಮೇಲೆ ನೀರು ನಿಂತಿತ್ತು. ಕೆಲ ಸಮಯ ವಾಹನಗಳ ಸಂಚಾರ ಅಡಚಣೆ ಉಂಟಾಯಿತು

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ದಾವಣಗೆರೆಯಲ್ಲಿ ನೆಲ ಕಚ್ಚಿದ ಬೆಳೆ

ಶನಿವಾರ ಸುರಿದ ಮಳೆಯಿಂದ ಭತ್ತದ ಬೆಳೆ‌ಯು ನೆಲ ಕಚ್ಚಿದೆ. ದಾವಣಗೆರೆಯ ದೊಡ್ಡಬಾತಿ ಗ್ರಾಮದ ಸುತ್ತಮುತ್ತಲಿನ 20ಕ್ಕೂ ಹೆಚ್ಚು ಎಕರೆ ಭತ್ತದ ಬೆಳೆ ನಾಶವಾಗಿದೆ. ಉಮೇಶ್ ಎಂಬ ಯುವ ರೈತ ಬೆಳೆದಿದ್ದ ಎರಡು ಎಕರೆ ಭತ್ತ ಸಂಪೂರ್ಣ ನಾಶವಾಗಿತ್ತು. ಬರಗಾಲದ ಸಂದರ್ಭದಲ್ಲಿ ಬೋರ್ ವೆಲ್ ನೀರಿನಲ್ಲಿ ಭತ್ತ ಬೆಳೆ ಬೆಳೆದಿದ್ದರು. ಎಕರೆಗೆ 25 ರಿಂದ 30 ಸಾವಿರ ಖರ್ಚು ಮಾಡಿ ಬೆಳೆದಿದ್ದ ಬೆಳೆಯು ರಾತ್ರಿ ಸುರಿದ ಮಳೆಗೆ ಸಂಪೂರ್ಣ ನಾಶವಾಗಿದೆ. ಮಳೆ ಬಾರದೇ ಕಷ್ಟ ಅನುಭವಿಸಿದ ರೈತರಿಗೆ ಈಗ ಮಳೆ ಬಂದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

Yelahanka flyover : ಬೆಂಗಳೂರಿನ ಯಲಹಂಕ ಫ್ಲೈಓವರ್‌ನಲ್ಲಿ ಜೋಡಿಯೊಂದರ ಡೆಡ್ಲಿ ಬೈಕ್ ರೈಡಿಂಗ್ (Bike Riding) ವಿಡಿಯೊ ವೈರಲ್‌ ಆಗಿದೆ. ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡ ಯುವಕ ಫ್ಲೈಓವರ್‌ನಲ್ಲಿ ಜಾಲಿ ರೈಡ್‌ ಮಾಡಿದ್ದಾನೆ. ಇದನ್ನೂ ಇತರೆ ಸವಾರರು ತಮ್ಮ ಮೊಬೈಲ್‌ನಲ್ಲಿ ಸೆರೆಯಿಡಿದ್ದಾರೆ.

VISTARANEWS.COM


on

By

yelahanka flyover
Koo

ಬೆಂಗಳೂರು: ಇತ್ತೀಚೆಗೆ ಜೋಡಿಗಳು ಬೈಕ್​ನಲ್ಲಿ ಹೋಗುತ್ತಲೇ ರೊಮ್ಯಾನ್ಸ್ (Romance in bike riding) ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ಹುಚ್ಚು ಸಾಹಸವೂ, ಪ್ರೇಮದ ಉನ್ಮಾದವೋ ಗೊತ್ತಿಲ್ಲ. ಇದು ಅಪಾಯಕಾರಿ ಎಂದು ಗೊತ್ತಿದ್ದರೂ ಪರಸ್ಪರ ಎದುರುಬದುರು ಕುಳಿತುಕೊಂಡು ಮುದ್ದಾಡಿಕೊಂಡು ಹೋಗುವುದು, ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಡೆಡ್ಲಿ ರೈಡಿಂಗ್‌ ಮಾಡುವುದು ಹೆಚ್ಚುತ್ತಿದೆ. ಸದ್ಯ ಬೆಂಗಳೂರಲ್ಲಿ (Yelahanka flyover) ಜೋಡಿಯೊಂದರ ಬೈಕ್ ರೈಡಿಂಗ್ (Bike Riding ವಿಡಿಯೊ ವೈರಲ್‌ ಆಗಿದೆ.

ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಯುವಕ ಬೈಕ್‌ ರೈಡ್ ಮಾಡಿದ್ದಾನೆ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯ ಯಲಹಂಕ ಫ್ಲೈ‌ಓವರ್‌ನಲ್ಲಿ ಮೇ 17ರ ರಾತ್ರಿ‌ ಈ ಘಟನೆ ನಡೆದಿದೆ. ಯುವ ಜೋಡಿಗಳು ಹೆಲ್ಮೆಟ್ ಧರಿಸದೇ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದ್ದಾರೆ. ಜೋಡಿಗಳ ಜಾಲಿ‌ ರೈಡ್‌ನ ದೃಶ್ಯ ಕಾರಿನಲ್ಲಿ ಹೋಗುತ್ತಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಿಡಿದ್ದಾರೆ.

ಇದನ್ನೂ ಓದಿ: Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

ಇತ್ತ ಸೋಶಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗಿದ್ದು, ಸಾರ್ವಜನಿಕ ಸುರಕ್ಷತೆ ಅಪಾಯಗಳ ಬಗ್ಗೆ ವ್ಯಾಪಕ ಕಳವಳ ಹುಟ್ಟುಹಾಕಿದೆ. ಹೆಲ್ಮೆಟ್ ಧರಿಸದೆ ಇರುವುದು ಜತೆಗೆ ಯುವತಿ ಪೆಟ್ರೋಲ್‌ ಟ್ಯಾಂಕ್ ಮೇಲೆ ಕುಳಿತು ತನ್ನ ಸಂಗಾತಿಯನ್ನು ಅಪ್ಪಿಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಅಜಾಗರೂಕ ಮತ್ತು ಅನುಚಿತ ವರ್ತನೆಗಾಗಿ ದಂಡ ವಿಧಿಸಿ ಎಂದು ನೆಟ್ಟಿಗರು ಕಾಮೆಂಟ್‌ ಹಾಕಿದ್ದಾರೆ. ರಸ್ತೆ ಸುರಕ್ಷತೆಯ ಬಗ್ಗೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯತೆಯ ಬಗ್ಗೆ ಚರ್ಚಿಸಿದ್ದಾರೆ. ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Murder Case : ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

ಛೀ…ಈತನೆಂಥಾ ಕಾಮುಕ! ಸಾರ್ವಜನಿಕ ಸ್ಥಳದಲ್ಲಿ ಈ ಪಾಪಿ ಬಾಲಕಿಗೆ ಮಾಡಿದ್ದೇನು ಗೊತ್ತಾ?

ನವದೆಹಲಿ: ಕಾಮುಕನೋರ್ವ ಸಾರ್ವಜನಿಕ ಸ್ಥಳದಲ್ಲಿ ಅಪ್ರಾಪ್ತ ಬಾಲಕಿ(Minor Girl)ಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌ (Viral Video) ಆಗಿದ್ದು, ಈ ಹೇಯ ಕೃತ್ಯಕ್ಕೆ ನೆಟ್ಟಿಗರು ಕಿಡಿ ಕಾರಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ತನ್ನ ತಾಯಿಯೊಂದಿಗೆ ನಿಂತಿದ್ದ ಬಾಲಕಿಯ ಹಿಂದೆ ಹೋಗಿ ನಿಲ್ಲುವ ಕಾಮುಕ ತನ್ನ ಕುಚೇಷ್ಠೆ ಶುರು ಮಾಡುತ್ತಾನೆ. ಆಕೆಯ ಹಿಂಬಂದಿಯನ್ನು ಅನುಚಿತವಾಗಿ ಮುಟ್ಟಿ ವಿಕೃತಿ ಮೆರೆಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ದೆಹಲಿಯ ಸಾದರ್‌ ಬಜಾರ್‌ನಲ್ಲಿ ಈ ಘಟನೆ ನಡೆದಿದ್ದು, ಕಾಮುಕನ ಕುಚೇಷ್ಠೆಯನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬ ರೆಕಾರ್ಡ್‌ ಮಾಡಿದ್ದಾನೆ. ವಿಡಿಯೋ ಮಾಡುತ್ತಿರುವುದು ಗೊತ್ತಾಗುತ್ತಿದ್ದಂತೆ ಆ ವ್ಯಕ್ತಿ ಸ್ಥಳದಿಂದ ಎಸ್ಕೇಪ್‌ ಆಗಿದ್ದಾನೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದ್ದು, ಪೊಲೀಸರು ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಇನ್ನು ಪತ್ತೆಯಾಗದ ಕಿಡಿಗೇಡಿ

ಇನ್ನು ಘಟನೆಗೆ ಸಂಬಂಧಿಸಿದಂತೆ ಈ ನೀಚ ಕೃತ್ಯ ಎಸಗಿರುವ ಕಾಮುಕ ಇನ್ನೂ ಪತ್ತೆಯಾಗಿಲ್ಲ. ಪೊಲೀಸ್‌ ದೂರು ಕೂಡ ದಾಖಲಾಗಿಲ್ಲ. ಇನ್ನು ಅಪ್ರಾಪ್ತ ಬಾಲಕಿಗೆ ಈ ನೀಚ ಕೃತ್ಯದ ಬಗ್ಗೆ ಅರಿವಾಗಿಲ್ಲ ಎಂಬಂತೆ ವಿಡಿಯೋದಲ್ಲಿ ಭಾಸವಾಗುತ್ತಿದೆ. ಇನ್ನು ಮತ್ತೊಂದು ವರದಿ ಪ್ರಕಾರ ಪೊಲೀಸರಿಗೆ ಈ ಬಗ್ಗೆ ದೂರು ನೀಡಲಾಗಿದ್ದು, ಕಿಡಿಗೇಟಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಾಗಿ ಪೊಲೀಸರ ತೀವ್ರ ಶೋಧ ನಡೆಸುತ್ತಿದ್ದಾರೆ ಎನ್ನಲಾಗಿದೆ.

ನೆಟ್ಟಿಗರಿಂದ ಆಕ್ರೋಶ:

ಇನ್ನು ಈ ಹೇಯ ಕೃತ್ಯದ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದ್ದಂತೆ ನೆಟ್ಟುಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಿಮಿನಲ್ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈತ ನಿಮ್ಮ ಕಣ್ಣಿಗೆ ಬಿದ್ದರೆ ಪೊಲೀಸರಿಗೆ ಒಪ್ಪಿಸಬೇಡಿ..ನಿಮಗೇನು ಮಾಡಬೇಕು ಅಂತ ಅನಿಸುತ್ತದೆಯೋ ಅದನ್ನೇ ಮಾಡಿ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಇವರೆಲ್ಲ ಅತ್ಯಾಚಾರಿಗಳು..ಇವರು ಅಷ್ಟು ಸುಲಭವಾಗಿ ಕೈಗೆ ಸಿಗುವುದಿಲ್ಲ. ಇವನನ್ನು ತಕ್ಷಣ ಅರೆಸ್ಟ್‌ ಮಾಡಿ, ಕಠಿಣ ಶಿಕ್ಷೆ ವಿಧಿಸಿ ಎಂದು ಬರೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bomb Threat: ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ ಎಂದು ತಮಾಷೆ ಮಾಡಲು ಹೋಗಿ ಜೈಲು ಪಾಲಾದ

Bomb Threat: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿರುವುದಾಗಿ ಹೇಳಿ ಜೋಕ್‌ ಮಾಡಲು ಹೋಗಿ ವ್ಯಕ್ತಿಯೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಏರ್‌ಪೋರ್ಟ್‌ ಬೋರ್ಡಿಂಗ್ ವೇಳೆ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಹೇಳಿ ಹರಿಯಾಣ ಮೂಲದ ರಾಜೇಶ್ ಕುಮಾರ್ ಕೆಲ ಕಾಲ ಆತಂಕ ಸೃಷ್ಟಿಸಿದ್ದ. ಬೆಂಗಳೂರಿನಿಂದ ಪುಣೆಗೆ ವಿಮಾನ ಟಿಕೆಟ್ ಬುಕ್ ಮಾಡಿ ಏರ್‌ಪೋರ್ಟ್‌ಗೆ ಆಗಮಿಸಿದ್ದ ಆತ ಟರ್ಮಿಟನ್ 2 ಬೋರ್ಡಿಂಗ್ ತಪಾಸಣೆ ವೇಳೆ ಹುಚ್ಚಾಟ ಮೆರೆದಿದ್ದ. ತಪಾಸಣೆ ವೇಳೆ ಯಾವುದೇ ಬಾಂಬ್‌ ಪತ್ತೆಯಾಗಿಲ್ಲ. ಸದ್ಯ ರಾಜೇಶ್‌ ಕುಮಾರ್‌ನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Bomb Threat
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹುಸಿ ಬಾಂಬ್‌ ಬೆದರಿಕೆ (Bomb Threat) ಕರೆ ಹೆಚ್ಚಾಗುತ್ತಿದೆ. ವಿಮಾನ ನಿಲ್ದಾಣ, ರೈಲು ನಿಲ್ದಾಣ, ಶಾಲೆ, ಆಸ್ಪತ್ರೆ ಮುಂತಾದೆಡೆ ಬಾಂಬ್‌ ಇಟ್ಟಿರುವುದಾಗಿ ಅನೇಕ ಕರೆಗಳು ಬಂದಿವೆ. ಇದರಿಂದ ಪೊಲೀಸರೂ ಜಾಗೃತರಾಗಿದ್ದು, ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದಾರೆ. ಈ ಮಧ್ಯೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿರುವುದಾಗಿ ಹೇಳಿ ಜೋಕ್‌ ಮಾಡಲು ಹೋಗಿ ವ್ಯಕ್ತಿಯೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಏರ್‌ಪೋರ್ಟ್‌ ಬೋರ್ಡಿಂಗ್ ವೇಳೆ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಹೇಳಿ ಹರಿಯಾಣ ಮೂಲದ ರಾಜೇಶ್ ಕುಮಾರ್ ಕೆಲ ಕಾಲ ಆತಂಕ ಸೃಷ್ಟಿಸಿದ್ದ. ಬೆಂಗಳೂರಿನಿಂದ ಪುಣೆಗೆ ವಿಮಾನ ಟಿಕೆಟ್ ಬುಕ್ ಮಾಡಿ ಏರ್‌ಪೋರ್ಟ್‌ಗೆ ಆಗಮಿಸಿದ್ದ ಆತ ಟರ್ಮಿಟನ್ 2 ಬೋರ್ಡಿಂಗ್ ತಪಾಸಣೆ ವೇಳೆ ಹುಚ್ಚಾಟ ಮೆರೆದಿದ್ದ. ತಪಾಸಣೆ ವೇಳೆ ಯಾವುದೇ ಬಾಂಬ್‌ ಪತ್ತೆಯಾಗಿಲ್ಲ. ಇದೀಗ ಹುಸಿ ಬಾಂಬ್‌ ಬೆದರಿಕೆ ಹಾಕಿ ಆತಂಕದ ವಾತಾವರಣ ಸೃಷ್ಟಿಸಿದ್ದ ರಾಜೇಶ್‌ ಕುಮಾರ್‌ನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರಾಜೇಶ್‌ ಕುಮಾರ್‌ ತನ್ನ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಹೇಳಿಕೊಂಡಿದ್ದ. ಏರ್‌ಪೋರ್ಟ್‌ ಬೋರ್ಡಿಂಗ್ ವೇಳೆ ಸಹಪ್ರಯಾಣಿಕರ ಜತೆಗೂ ಇದನ್ನೇ ಹೇಳಿದ್ದ. ಆತನ ಮಾತು ಕೇಳಿ ದಂಗಾಗಿ ಹೋಗಿದ್ದ ಏರ್‌ಪೋರ್ಟ್‌ ಭದ್ರತಾ ಸಿಬ್ಬಂದಿ ಕೂಡಲೇ ಆತನ ಬಳಿಯಿದ್ದ ಬ್ಯಾಗ್ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದರು.

ಜತೆಗೆ ಬಾಂಬ್ ಸ್ಕ್ವಾಡ್ ಹಾಗೂ ಏರ್‌ಪೋರ್ಟ್‌ ಠಾಣೆ ಪೊಲೀಸರಿಗೂ ಮಾಹಿತಿ ನೀಡಿದ್ದರು. ತಪಾಸಣೆ ವೇಳೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ವಿಚಾರಣೆ ವೇಳೆ ರಾಜೇಶ್‌ ಕುಮಾರ್‌, ʼʼಥ್ರಿಲ್‌ಗಾಗಿ ಈ ರೀತಿ ಹೇಳಿಕೆ ನೀಡಿದ್ದೆ. ತಮಾಷೆ ಮಾಡಿದ್ದೆʼʼ ಎಂದು ರಾಜೇಶ್‌ ಕುಮಾರ್‌ ಬಾಯಿ ಬಿಟ್ಟಿದ್ದಾನೆ. ಇದರಿಂದ ಕೆಲ ಕಾಲ ಮೂಡಿದ್ದ ಆತಂಕದ ವಾತಾವರಣ ತಿಳಿಯಾಗಿ ಎಲ್ಲರೂ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಪೊಲೀಸರು ವಶದಲ್ಲಿರುವ ರಾಜೇಶ್‌ ಕುಮಾರ್‌ನ ವಿಚಾರಣೆ ಮುಂದುವರಿದಿದೆ.

ಏರ್‌ ಇಂಡಿಯಾ ವಿಮಾನದಲ್ಲಿ ಮತ್ತೆ ಅವಘಡ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ(Emergency Landing) ಮಾಡಿದೆ. ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ತುರ್ತು ಭೂ ಸ್ಪರ್ಶ ಮಾಡಲಾಗಿದ್ದು, ಭಾರೀ ಅವಘಡವೊಂದು ತಪ್ಪಿದೆ.

AI 1132 ಏರ್​ ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ತೆರಳಲು ಟೇಕ್​​ ಆಫ್ ಆಗಿತ್ತು. ಆದರೆ ವಿಮಾನದಲ್ಲಿ ಏಕಾಏಕಿ ಬೆಂಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್​​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್​ ಮಾಡಿದರು. ಇದರಿಂದ ಭಾರಿ ಅನಾಹುತ ತಪ್ಪಿದೆ. ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಅದೃಷ್ಟವಶಾತ್‌ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Cyber Crime: ಸೈಬರ್ ಕ್ರೈಂ ಜಾಲ ಪತ್ತೆ; ಬಲೆಗೆ ಬಿದ್ದ ಸಿಮ್ ಕಾರ್ಡ್ ಪೂರೈಸುತ್ತಿದ್ದ ವ್ಯಕ್ತಿ

Continue Reading

ಕ್ರೈಂ

Murder Case : ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

Vijayapura Murder Case : ವಿಜಯಪುರ ಹಾಗೂ ಬೆಂಗಳೂರಿನ ಪ್ರತ್ಯೇಕ ಕಡೆಗಳಲ್ಲಿ ವ್ಯಕ್ತಿಗಳ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ (Murder Case) ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

Murder case
ಸಾಂದರ್ಭಿಕ ಚಿತ್ರ
Koo

ವಿಜಯಪುರ: ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ (Murder Case) ಆಗಿದೆ. ವಿಜಯಪುರ ನಗರದ ಎಪಿಎಂಸಿ ಮೇಕೆ ಹಾಗೂ ಕುರಿ ಮಾರುಕಟ್ಟೆಯ ಬಳಿ (Vijayapura Murder Case) ಘಟನೆ ನಡೆದಿದೆ. ರೋಹಿತ್ ಸುಭಾಶ ಪವಾರ (22) ಕೊಲೆಯಾದವನು.

ವಿಜಯಪುರ ನಗರದ ಕಂಬಾರ ಓಣಿ ನಿವಾಸಿ ರೋಹಿತ್‌ನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ಬಳಿಕ ಮುಳ್ಳುಕಂಟಿಯಲ್ಲಿ ಶವ ಬಿಸಾಡಿದ್ದಾರೆ. ಸ್ಥಳದಲ್ಲಿ ಬಿಯರ್ ಬಾಟಲ್, ಚಿಪ್ಸ್ ಪ್ಯಾಕೇಟ್ ಪತ್ತೆಯಾಗಿದೆ. ಹೀಗಾಗಿ ಕುಡಿದ ಮತ್ತಿನಲ್ಲಿ ಪರಿಚಯಸ್ಥರಿಂದ ಕೊಲೆ ಆಗಿರಬಹುದೆಂದು ಶಂಕಿಸಲಾಗಿದೆ.

ಖಾಲಿದ್ ಇನಾಂದಾರ್ ಎಂಬಾತ ರೋಹಿತ್ ಪೋಷಕರಿಗೆ ನಿನ್ನೆ ಭಾನುವಾರ ತಡರಾತ್ರಿ 2.21ಕ್ಕೆ ಕರೆ ಮಾಡಿ ರೋಹಿತ್ ಕೊಲೆಯಾಗಿದೆ ಎಂದು ಮಾಹಿತಿ ನೀಡಿದ್ದ. ಕರೆ ಅನ್ವಯ ರೋಹಿತ್ ಮನೆಯವರು ಆತನಿಗಾಗಿ ಹುಡುಕಾಡಿದ್ದರು. ಖಾಲೀದ್ ಮನೆಗೆ ಹೋದರೂ ಆತ ಅಲ್ಲಿರಲಿಲ್ಲ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ನಂತರ ರೋಹಿತ್‌ಗಾಗಿ ಹುಡುಕಾಡಿದಾಗ ಆತನ ಶವ ಎಪಿಎಂಸಿ ಆವರಣದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಕೂಡಲೇ ರೋಹಿತ್‌ ಕುಟುಂಬಸ್ಥರು ಎಪಿಎಂಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಜಯಪುರ ಡಿವೈಎಸ್‌ಪಿ ಬಸವರಾಜ ಯಲಿಗಾರ ಹಾಗೂ ಇತರೆ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿ‌ ಘಟನೆ ನಡೆದಿದೆ. ಕೊಲೆಗಾರರಿಗಾಗಿ ಹುಡುಕಾಟ ನಡೆಸಿದ್ದಾರೆ.

ಬೆಂಗಳೂರು ಸಿಟಿ ಮಾರ್ಕೆಟ್‌ನಲ್ಲಿ ಅಪರಿಚಿತ ಶವ ಪತ್ತೆ

ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯ ಕೊಲೆಯಾಗಿದೆ. ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತುಹಾಕಿ ಕೊಲೆ ಮಾಡಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಸಿಟಿ ಮಾರ್ಕೆಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kannada New Movie Sambavami Yuge Yuge 4K Motion Poster
ಸಿನಿಮಾ7 mins ago

Kannada New Movie: `ಸಂಭವಾಮಿ ಯುಗೇಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ

Prajwal Revanna Case
ಕರ್ನಾಟಕ17 mins ago

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Cholera
ಕರ್ನಾಟಕ25 mins ago

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

RCB vs CSK
ಕ್ರೀಡೆ28 mins ago

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

Ninagagi Kannada Serial Ritvvikk Mathad Playing Lead In Divya Uruduga
ಕಿರುತೆರೆ29 mins ago

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

British Journalist
ದೇಶ36 mins ago

British Journalist: “ನವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

Karnataka rain
ಮಳೆ36 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

RCB
ಕ್ರಿಕೆಟ್59 mins ago

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Pavithra Jayaram Trinayani Serial Son Prajwal Reaction
ಸಿನಿಮಾ1 hour ago

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka rain
ಮಳೆ36 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

ಟ್ರೆಂಡಿಂಗ್‌