Site icon Vistara News

‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

DK Shivakumar

Do Not Discuss On CM, DCM Post: Says Karnataka DCM DK Shivakumar

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷದ ಪೂರೈಕೆ ಹಿನ್ನೆಲೆಯಲ್ಲಿ ಕೆಪಿಸಿಸಿ ಘಟಕದಿಂದ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರು ತಮ್ಮ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಿದ್ದಾರೆ. ನಾನು ಸದ್ಯ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಆದರೆ, ಈ ಸ್ಥಾನದಲ್ಲಿ ಇನ್ನೆಷ್ಟು ದಿನ ಇರುತ್ತೇನೆ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ. ಇದೀಗ ಕಾಂಗ್ರೆಸ್‌ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದರ ಹಿಂದೆ ಏನಾದರೂ ಉದ್ದೇಶ ಇದೆಯಾ? ಅವರು ಹೀಗೆ ಹೇಳಿದ್ದು ಯಾಕೆ ಎಂದೆಲ್ಲ ಚರ್ಚೆಗಳು ನಡೆಯುತ್ತಿವೆ.

ಅಷ್ಟಕ್ಕೂ ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್‌ ಹೇಳಿದ್ದೇನೆಂದರೆ, “ನಾನು ಸದ್ಯ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಇನ್ನೂ ಎಷ್ಟು ದಿನ ಈ ಸ್ಥಾನದಲ್ಲಿ ಇರುತ್ತೇನೋ, ಇಲ್ಲವೋ ಅನ್ನುವುದು ಗೊತ್ತಿಲ್ಲ. ನಮ್ಮ ಪಕ್ಷದ ನಾಯಕತ್ವ ಬುನಾದಿ ಗಟ್ಟಿ ಮಾಡಬೇಕು. ಬೂತ್ ಮಟ್ಟದಲ್ಲಿ ಗಟ್ಟಿ ಮಾಡಬೇಕು” ಎಂದು ಕಿವಿಮಾತು ಹೇಳಿದ್ದಾರೆ.

ನಾನು ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ. ನಾಲ್ಕು ವರ್ಷಗಳಲ್ಲಿ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ, ಅದು ಮುಖ್ಯ ಎಂಬ ಮಾತನ್ನೂ ಇದೇ ವೇಳೆ ಹೇಳಿದ್ದಾರೆ. ಅಂದರೆ, ಅವರಿಲ್ಲಿ ಪಕ್ಷ ಸಂಘಟನೆ ಬಗ್ಗೆ ಮಾತುಗಳನ್ನು ಆಡಿದ್ದಾರೆ. ತಾವು ಪಕ್ಷಕ್ಕಾಗಿ ಗಟ್ಟಿಯಾಗಿ ನಿಂತಿದ್ದರಿಂದ ಪಕ್ಷವು ಅಧಿಕಾರಕ್ಕೆ ಬಂದಿದೆ. ಅದೇ ರೀತಿಯಾಗಿ ಪಕ್ಷದ ನಾಯಕತ್ವವನ್ನು, ಉನ್ನತ ಹುದ್ದೆಯನ್ನು ಕೇಳುವವರು ಕೆಲಸ ಮಾಡಿ ತೋರಿಸಬೇಕು ಎಂಬ ನೇರ ಸಂದೇಶವನ್ನು ಡಿ.ಕೆ. ಶಿವಕುಮಾರ್‌ ರವಾನೆ ಮಾಡಿದ್ದಾರೆ.

ಹೊಸ ನಾಯಕತ್ವ ಬೆಳೆಸುವ ಎಚ್ಚರಿಕೆ!

ನಾಲ್ಕು ವೋಟ್ ಹಾಕಿಸದೇ ಬಂದು ಇಲ್ಲಿ ಸ್ಥಾನಮಾನ ಕೇಳುತ್ತೀರಾ? ಮೊದಲು ನಿಮ್ಮ ಬೂತ್‌ನಲ್ಲಿ ಸಂಘಟನೆ ಮಾಡಿ. ಬೂತ್ ಲೀಡ್ ಕೊಡಿಸಿ ಬಂದು ನಾಯಕತ್ವ ಕೇಳಿ. ಇಲ್ಲದೆ ಹೋದರೆ ನಾಯಕತ್ವ ಕೊಡಲ್ಲ ಎಂದು ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್‌ ಚಾಟಿ ಬೀಸಿದ್ದಾರೆ.

ನಾಲ್ಕು ವೋಟ್ ಹಾಕಿಸದೇ ಬಂದು ಇಲ್ಲಿ ಸ್ಥಾನಮಾನ ಕೇಳಿದರೆ ಹೇಗೆ? ಬಿಳಿ‌ ಜುಬ್ಬಾ, ಬಿಳಿ‌ ಕಾರು ತೆಗೆದುಕೊಂಡು ಬಂದು ಸ್ಥಾನಗಳನ್ನು ಕೇಳುವುದಲ್ಲ. ಮೊದಲು ಸಂಘಟನೆ ‌ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ. ನಾವು ಹೊಸ ‌ನಾಯಕತ್ವವನ್ನು ಬೆಳೆಸುತ್ತೇವೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ. ಬೂತ್‌ ಮಟ್ಟದಲ್ಲಿ ಪಕ್ಷ ಬಲಗೊಳ್ಳದಿದ್ದರೆ ದೂರದೃಷ್ಟಿಯಲ್ಲಿ ಪಕ್ಷವು ಉಳಿದುಕೊಳ್ಳುವುದು ಕಷ್ಟ ಎಂಬ ಹಿನ್ನೆಲೆಯಲ್ಲಿ ಮುಖಂಡರಿಗೆ ಬಿಸಿ ಮುಟ್ಟಿಸುವ ಪ್ರಯತ್ನವನ್ನು ಡಿ.ಕೆ. ಶಿವಕುಮಾರ್‌ ಮಾಡಿದ್ದಾರೆನ್ನಲಾಗಿದೆ.

ರಾಜೀವ್‌ ಗಾಂಧಿ ಪ್ರತಿಮೆ ಬದಲಿಸಿದ್ದೇನೆ

ರಾಜೀವ್ ಗಾಂಧಿಯವರ ಪ್ರಾಣ ಎಲ್ಲಿ ಹೋಯಿತೋ ಅಲ್ಲಿ ಕನಕಪುರದ ಕಲ್ಲು ಹಾಕಿದ್ದೇನೆ. ಸೋನಿಯಾ ಗಾಂಧಿ ಸೂಚನೆ ಮೇರೆಗೆ ಹಾಕಿದ್ದೇನೆ. ನನಗೆ ಕನಕಪುರ ಬಂಡೆ ಅಂತಾರಲ್ಲ. ನಮ್ಮೂರ ಬಂಡೆಯ ಕಲ್ಲು ಅಲ್ಲಿ ತೆಗೆದುಕೊಂಡು ಹೋಗಿ ಹಾಕಿದ್ದೇನೆ. ಅಲ್ಲಿ ಹೋದಾಗ ನೋಡಿ. ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಪ್ರತಿಮೆಯನ್ನು ಬದಲಾವಣೆ ಮಾಡಿದ್ದೇವೆ. ನಾನು ಬೆಂಗಳೂರು ಉಸ್ತುವಾರಿ ಸಚಿವನಾದ ಮೇಲೆ ಮೊದಲು ಅನುದಾನ ಬಿಡುಗಡೆ ‌ಮಾಡಿದ್ದು, ಸಹ ಇದಕ್ಕೇ ಆಗಿದೆ. ಅದರಂತೆ ರಾಜೀವ್ ಗಾಂಧಿ ಪ್ರತಿಮೆ ಬದಲಾವಣೆ ಮಾಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟನೆ ಮಾಡಿದರು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಮೊದಲ 5 ಹಂತಗಳ ಮತದಾನ ಮುಗಿದಿದೆ. ಇನ್ನು ಎರಡು ಹಂತಗಳ ಮತದಾನ ಬಾಕಿ ಇದ್ದು, ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಈ ಮಧ್ಯೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿಶ್ಲೇಷಕರ ಅಭಿಪ್ರಾಯದ ಮಧ್ಯೆ ಕಿಶೋರ್‌ ಮಾತು

ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ. ಆದಾಗ್ಯೂ ಅವರು ರಾಜ್ಯವಾರು ಫಲಿತಾಂಶಗಳನ್ನು ಊಹಿಸಲು ನಿರಾಕರಿಸಿದ್ದಾರೆ.

ಮೋದಿ ಬ್ರ್ಯಾಂಡ್‌ ಕುಸಿತ

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

Exit mobile version