NAMSCON-2023: ವೈದ್ಯರು ಮಾನವೀಯ ಸೇವೆಯಲ್ಲಿ ತೊಡಗಬೇಕು: ಥಾವರ್ ಚಂದ್ ಗೆಹ್ಲೋಟ್‌ - Vistara News

ಬೆಂಗಳೂರು

NAMSCON-2023: ವೈದ್ಯರು ಮಾನವೀಯ ಸೇವೆಯಲ್ಲಿ ತೊಡಗಬೇಕು: ಥಾವರ್ ಚಂದ್ ಗೆಹ್ಲೋಟ್‌

NAMSCON-2023: ರಾಮಯ್ಯ ಕಾಲೇಜಿನಲ್ಲಿ ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಅಕಾಡೆಮಿ (NAMS) ಸಹಯೋಗದಲ್ಲಿ 63ನೇ ವಾರ್ಷಿಕ ರಾಷ್ಟ್ರೀಯ ಸಮಾವೇಶ ಮತ್ತು ಪದವಿ ಪ್ರದಾನ ಸಮಾರಂಭ ನಡೆಯಿತು.

VISTARANEWS.COM


on

Thaawar Chand Gehlot
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆರೋಗ್ಯ ಸೇವೆ ಎಂಬುದು ಮನುಷ್ಯರು ಮತ್ತು ದೇವರ ಸೇವೆ. ಆದ್ದರಿಂದ ದೇಶದ ಪ್ರಗತಿಗಾಗಿ ವೈದ್ಯರೆಲ್ಲ ಒಂದಾಗಬೇಕಾದ ಅಗತ್ಯ ಇದೆ. ಪ್ರತಿ ರೋಗಿಯ ಯೋಗಕ್ಷೇಮವು ವೈದ್ಯರ ಕೈಯಲ್ಲಿದೆ. ಹೀಗಾಗಿ ವೈದ್ಯರು ಮಾನವೀಯ ಸೇವೆಯಲ್ಲಿ ತನ್ಮಯರಾಗಿ ತೊಡಗಿಸಿಕೊಳ್ಳುವುದು ಅನಿವಾರ್ಯ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ತಿಳಿಸಿದರು.

ನಗರದ ರಾಮಯ್ಯ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ್ದ ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಅಕಾಡೆಮಿಯ 63ನೇ ವಾರ್ಷಿಕ ರಾಷ್ಟ್ರೀಯ ಸಮಾವೇಶ ಮತ್ತು ಪದವಿ ಪ್ರದಾನ ಸಮಾರಂಭ (NAMSCON-2023) ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ಕ್ಷೇತ್ರದಲ್ಲೂ ಬೆಳವಣಿಗೆಗೆ ಸಾಮೂಹಿಕ ಪ್ರಯತ್ನ ಮತ್ತು ಸಹಕಾರ ಮುಖ್ಯ. ಹೆಲ್ತ್ ಕೇರ್ ಪರಿಸರ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುವುದಕ್ಕಾಗಿ ಹಾಗೂ ವೈದ್ಯಕೀಯ ಸೇವೆಗಳನ್ನು ಉನ್ನತ ಮಟ್ಟಕ್ಕೆ ಏರಿಸುವುದಕ್ಕೆ ನಾವೆಲ್ಲರೂ ಸಹಕಾರ ನೀಡೋಣ ಎಂದು ಹೇಳಿದರು.

ಇದನ್ನೂ ಓದಿ | School timing : ಶಾಲಾ ಸಮಯ ಬದಲಾವಣೆ ಇಲ್ಲ; ಶಿಕ್ಷಣ ಇಲಾಖೆ ಸ್ಪಷ್ಟ ನಿರ್ಧಾರ

ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಪ್ರೊ. ಎಸ್.ಪಿ. ಸಿಂಗ್ ಬಗೇಲ್ ಅವರು ಮಾತನಾಡಿ, ನಮ್ಮ ಕ್ಷೇತ್ರದ (ವೈದ್ಯಕೀಯ) ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಅಕಾಡೆಮಿ (NAMS)ನಿಂದ ಗೌರವ ಪಡೆದಂಥ ಡಾ ಒ.ಪಿ. ಖರ್ ಬಂದ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲು ನಾನು ಬಯಸುತ್ತೇನೆ. ಮೂರು ದಿನಗಳ ಸಮ್ಮೇಳನವು ಮೌಲ್ಯಯುತವಾದ ವೈಜ್ಞಾನಿಕ ಜ್ಞಾನದ ಅಮೂಲ್ಯವಾದ ಸಂಗ್ರಹವಾಗಲಿದೆ ಎಂಬ ವಿಶ್ವಾಸ ನನಗಿದೆ ಮತ್ತು ಈ ಜ್ಞಾನವು ಈ ಸಂಸ್ಥೆ ಮತ್ತು ರಾಷ್ಟ್ರದ ಪ್ರಗತಿಗೆ ಫಲ ನೀಡುತ್ತದೆ ಎಂದು ಭಾವಿಸುತ್ತೇನೆ ಎಂದರು.

ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ (ಸ್ವತಂತ್ರ) ಡಾ. ಜಿತೇಂದ್ರ ಶರ್ಮಾ ಮಾತನಾಡಿ, ದೇಶವು ಆಶಾವಾದದಿಂದ ತುಂಬಿರುವಾಗ ನಾವು ಇಲ್ಲಿ ಸೇರುವುದು ಅನಿರೀಕ್ಷಿತ ಕ್ಷಣವಾಗಿದೆ. ಈಗಿನ ಸಂದರ್ಭದಲ್ಲಿ ವಿಶ್ವವು ಭಾರತದ ಪ್ರಾಮುಖ್ಯವನ್ನು ಗುರುತಿಸುತ್ತಿದೆ, ಅದರಲ್ಲೂ ನಿರ್ದಿಷ್ಟವಾಗಿ ವೈದ್ಯಕೀಯ ವಿಜ್ಞಾನ ಸೇರಿದಂತೆ ವಿಜ್ಞಾನ ಕ್ಷೇತ್ರದಲ್ಲಿ ಗುರುತಿಸುತ್ತಿದೆ. ಅದಕ್ಕೆ ಎರಡು ಅತ್ಯುತ್ತಮ ಉದಾಹರಣೆಗಳೆಂದರೆ ಚಂದ್ರಯಾನ ಮತ್ತು ಗಮನಾರ್ಹವಾದ ಲಸಿಕೆ ಯಶೋಗಾಥೆ’ ಎಂದು ಹೇಳಿದರು.

ಎನ್ಎಎಂಎಸ್ ವಾರ್ಷಿಕ ವರದಿಯನ್ನು ಮುಖ್ಯ ಅತಿಥಿಗಳು ಮತ್ತು ಗೌರವ ಅತಿಥಿಗಳು ಸಮಾವೇಶದಲ್ಲಿ ಬಿಡುಗಡೆ ಮಾಡಿದರು. ಗೋಕುಲ ಎಜುಕೇಷನ್ ಫೌಂಡೇಷನ್ ಮುಖ್ಯಸ್ಥರು ಮತ್ತು ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್‌ ಸೈನ್ಸಸ್ (RUAS) ಕುಲಪತಿ ಡಾ.ಎಂ.ಆರ್. ಜಯರಾಮ್, ಪ್ರೊ. ಉಪಕುಲಪತಿ ಡಾ. ಒ.ಪಿ. ಖ‌ರ್‌ ಬಂದ, ರಾಮಯ್ಯ ಮೆಡಿಕಲ್ ಕಾಲೇಜಿನ ಪ್ರಿನ್ಸಿಪಾಲ್, ಡೀನ್ ಡಾ.ಶಾಲಿನಿ ಸಿ ನೂಯಿ, ಎನ್‌ಎಎಂಎಸ್ ಅಧ್ಯಕ್ಷರಾದ ಡಾ ಶಿವ್ ಕೆ. ಸರಿನ್, ಕಾರ್ಯದರ್ಶಿ ಡಾ.ಉಮೇಶ್ ಕಪಿಲ್ ಸೇರಿ ಅನೇಕ ಗಣ್ಯರು ಸಮಾವೇಶದಲ್ಲಿ ಭಾಗವಹಿಸಿದ್ದರು.

ಈ ಸಮಾರಂಭದಲ್ಲಿ RUAS ಪ್ರೊ. ಉಪಕುಲಪತಿ ಡಾ. ಒ.ಪಿ. ಖರ್ ಬಂದ ಅವರನ್ನು ಎನ್‌ಎಎಂಎಸ್ ಗೌರವ ಪ್ರೊಫೆಸರ್ ಎಂದು ಗೌರವಿಸಲಾಯಿತು. ಇದರ ಜತೆಗೆ ನೂರಕ್ಕೂ ಹೆಚ್ಚು ಪ್ರಖ್ಯಾತ ಹಿರಿಯ ಹೆಲ್ತ್ ಕೇರ್ ವೃತ್ತಿಪರರನ್ನು ಫೆಲೋಷಿಪ್ ಮತ್ತು ಎನ್ಎಎಂಎಸ್ ಸದಸ್ಯತ್ವದೊಂದಿಗೆ ಗೌರವಿಸಲಾಯಿತು.

ಇದನ್ನೂ ಓದಿ | Anti Rabies Vaccine: ಪ್ರಾಣಿ ಕಡಿತಕ್ಕೊಳಗಾದವರಿಗೆ ಆ್ಯಂಟಿ ರೇಬಿಸ್ ಲಸಿಕೆ ಉಚಿತ

ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್‌ ಸೈನ್ಸಸ್ (RUAS) ಅಡಿಯಲ್ಲಿ ಪ್ರತಿಷ್ಠಿತ ಸಂಸ್ಥೆ ರಾಮಯ್ಯ ಮೆಡಿಕಲ್ ಕಾಲೇಜು (RMC) ಕಾರ್ಯ ನಿರ್ವಹಿಸುತ್ತದೆ. ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಅಕಾಡೆಮಿ ಎಂಬುದು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Srinivas Prasad:ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

Koo

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) (Srinivas Prasad) ಅವರು ತೀವ್ರ ಹೃದಯಾಘಾತದಿಂದ (Heart Aattack) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಡರಾತ್ರಿ 1:20ಕ್ಕೆ (Manipal Hospital ) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಅವರು ಏಪ್ರಿಲ್ 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗತ್ತು. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎನ್ನಲಾಗಿದೆ.

ಇನ್ನು ಈ ಬಗ್ಗೆ ಶ್ರೀನಿವಾಸ್ ಪ್ರಸಾದ್ ಅಳಿಯ ಹರ್ಷವರ್ಧನ್ ಮಾಹಿತಿ ನೀಡಿದ್ದು, ಶ್ರೀನಿವಾಸ್ ಪ್ರಸಾದ್ ಅವರು ರಾತ್ರಿ 1:20ರ ಸುಮಾರಿಗೆ ತೀವ್ರವಾದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ರೀತಿಯಲ್ಲಿ ಪ್ರಯತ್ನ ಮಾಡಿದ್ದರು. ಅವರ ಈ ಅಗಲಿಕೆ ಇಡೀ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟ. ನನಗೆ ರಾಜಕೀಯಕ್ಕೆ ಜನ್ಮ ಕೊಟ್ಟಂತವರು. ರಾಜಕೀಯದಲ್ಲಿ ಏಕಾಂಗಿಯಾಗಿ ಹೋರಾಟ ಮಾಡೋದಕ್ಕೆ ಬಿಟ್ಟು ಹೋಗಿದ್ದಾರೆ. ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡಿದ್ದಾರೆ, ಹೋರಾಟದ ಜೀವಿ ಅವರು. ಐದು ವರ್ಷದ ಹಿಂದೆ ನಾನು ನಂಜನಗೂಡಿನಲ್ಲಿ ಗೆದ್ದಾಗ ಅವರು ಲೋಕಸಭೆಯಲ್ಲಿ ಸ್ಪರ್ಧೆ ಮಾಡ್ತಿನಿ ಅಂದರು. ನನ್ನನ್ನು ಅವರು ತಂದೆ ಸ್ಥಾನದಲ್ಲಿ ನಿಂತು ರಾಜಕೀಯವಾಗಿ ಬೆಳೆಸಿದ್ದಾರೆ ಯಾವುದೆ ವಿಚಾರ ಆಗಿದ್ದರೂ ಅವರ ಜೊತೆ ಚರ್ಚೆ ಮಾಡಿಯೇ ನಿರ್ಧಾರಕ್ಕೆ ಬರುತ್ತಿದೆ. ಈಗ ಯಾರ ಬಳಿ ಹೋಗಿ ಕೇಳಲಿ ಎಂದು ಅನಿಸಿ ಬಿಟ್ಟಿದೆ ಎಂದು ಭಾವುಕರಾಗಿ ಮಾತನಾಡಿದರು. ಅವರ ಪಾರ್ಥೀವ ಶರೀರವನ್ನು ನೇರವಾಗಿ ಮೈಸೂರಿಗೆ ತೆಗೆದುಕೊಂಡು ಹೋಗುತ್ತೇವೆ. ನಂತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತೆ ಎಂದು ತಿಳಿಸಿದರು.

ಸದ್ಯ ಮೈಸೂರಿನ ಜಯಲಕ್ಷ್ಮೀಪುರ ನಿವಾಸಕ್ಕೆ ಶ್ರೀನಿವಾಸ್‌ ಪ್ರಸಾದ್‌ ಅವರ ಪಾರ್ಥಿವ ಶರೀರ ರವಾನೆ ಮಾಡಲಾಗಿದ್ದು, ಇಂದು ಮೈಸೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನೆಚ್ಚಿನ ನಾಯಕನ ಅಗಲಿಕೆ ಬಗ್ಗೆ ತಿಳಿಯುತ್ತಿದ್ದಂತೆ ಅನೇಕ ಬೆಂಬಲಿಗರು ಅವರ ನಿವಾಸದತ್ತ ದೌಡಾಯಿಸಿದ್ದಾರೆ. ಮಧ್ಯಾಹ್ನದ ಬಳಿಕ ಅಂತಿ ವಿಧಿ ವಿಧಾನ ನೆರವೇರು ಸಾಧ್ಯತೆ ಇದೆ.

ಇದನ್ನೂ ಓದಿ:Raja Marga Column :‌ ಕಣ್ಣೇ ಕಾಣದ ಆಕೆ ಎರಡು ಬಾರಿ ಐಎಎಸ್‌ ಪಾಸ್‌ ಮಾಡಿದ್ದರು!

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು.

Continue Reading

ಕರ್ನಾಟಕ

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Karnataka Weather: ರಾಜ್ಯದ ಬಹುತೇಕ ಕಡೆ ಮೇ 5ರವರೆಗೆ ರಣ ಬಿಸಿಲು ಕಾಡಲಿದೆ. ಇನ್ನು ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಏಪ್ರಿಲ್ 29ರಂದು ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ.

ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಕರ್ನಾಟಕ

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

ಭಾರತೀಯ ರಿಸರ್ವ್‌ ಬ್ಯಾಂಕ್‌ ಮಾರ್ಗಸೂಚಿಗಳನ್ನು ಪಾಲಿಸದೆ ಇಬ್ಬರು ಆರೋಪಿಗಳು ನೋಟುಗಳನ್ನು ನಗದೀಕರಣ ಮಾಡಿಕೊಂಡಿದ್ದಾರೆ. ಹಾಗಾಗಿ, ಇಬ್ಬರಿಗೂ ನ್ಯಾಯಾಲಯವು ತಲಾ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.

VISTARANEWS.COM


on

Notes
Koo

ಬೆಂಗಳೂರು: ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ನಿಯಮಗಳನ್ನು ಉಲ್ಲಂಘಿಸಿ ನೋಟುಗಳನ್ನು ನಗದೀಕರಣ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯವು (CBI Special Court) ಇಬ್ಬರು ಆರೋಪಿಗಳಿಗೆ ತಲಾ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನೋಟು ನಗದೀಕರಣ ಮಾಡಿದ ಎಸ್.‌ ಗೋಪಾಲಯ್ಯ ಹಾಗೂ ಎಲ್‌ಐಸಿ ಏಜೆಂಟ್‌ ಕೆ.ರಾಘವೇಂದ್ರ ಎಂಬುವರಿಗೆ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

2016ರಲ್ಲಿ ಕೇಂದ್ರ ಸರ್ಕಾರವು ಐನೂರು ಹಾಗೂ ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿದ ಸಂದರ್ಭದಲ್ಲಿ ನಿಷೇಧಿತ ಕರೆನ್ಸಿಗಳ ನಗದೀಕರಣಕ್ಕೆ ಆರ್‌ಬಿಐ ಹಲವು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೆ, ಇಬ್ಬರೂ ಆರ್‌ಬಿಐ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ನೋಟುಗಳನ್ನು ನಗದೀಕರಣ ಮಾಡಿಕೊಂಡಿದ್ದರು. ಹಾಗಾಗಿ, ಸಿಬಿಐ ನ್ಯಾಯಾಲಯವು ಇಬ್ಬರಿಗೂ ಜೈಲು ಶಿಕ್ಷೆಯ ಜತೆಗೆ ಭಾರಿ ದಂಡ ವಿಧಿಸಿದೆ. ಎಸ್‌.ಗೋಪಾಲಯ್ಯಗೆ 2.10 ಲಕ್ಷ ರೂ. ಹಾಗೂ ರಾಘವೇಂದ್ರಗೆ 1.6 ಲಕ್ಷ ರೂ. ದಂಡ ವಿಧಿಸಿದೆ.

money guide

ಮಾರ್ಗಸೂಚಿ ಅನುಸರಿಸದೆ ನೋಟುಗಳನ್ನು ನಗದೀಕರಣ ಮಾಡಿಕೊಂಡ ಹಿನ್ನೆಲೆಯಲ್ಲಿ ಸಿಬಿಐ 2017ರ ಮಾರ್ಚ್‌ನಲ್ಲಿ ಈಗ ಶಿಕ್ಷೆಗೆ ಗುರಿಯಾಗಿರುವ ಇಬ್ಬರು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಿಸಿತ್ತು. ತನಿಖೆ ವೇಳೆ ಇವರ ದುರುದ್ದೇಶ ಬಯಲಾಗಿತ್ತು. ತನಿಖೆ ಪೂರ್ಣಗೊಳಿಸಿದ್ದ ತಂಡವು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದರಂತೆ, ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ.

ಕೆಲ ತಿಂಗಳ ಹಿಂದಷ್ಟೇ, ರಾಷ್ಟ್ರೀಯ ತನಿಖಾ ದಳವು ನಕಲಿ ನೋಟು ಜಾಲದ ಮೇಲೆ ಮುಗಿಬಿದ್ದಿತ್ತು. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಎನ್‌ಐಎ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅದರಲ್ಲಿ ಕರ್ನಾಟಕದ ಬಳ್ಳಾರಿಯಲ್ಲೂ ಒಬ್ಬನನ್ನು ಸೆರೆ ಹಿಡಿದಿತ್ತು. ಬಳ್ಳಾರಿಯಲ್ಲಿ ಬಂಧಿತ ಆರೋಪಿಯನ್ನು ಮಹೇಂದ್ರ ಎಂದು ಗುರುತಿಸಲಾಗಿದ್ದು, ಆತನಿಂದ ಭಾರಿ ಪ್ರಮಾಣದ ನಕಲಿ ನೋಟು, ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮೆಷಿನ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಈತ 500, 200, ಹಾಗೂ 100 ರೂ ಮುಖಬೆಲೆಯ ನೋಟು ತಯಾರಿಸುತ್ತಿದ್ದ ಎಂದು ತಿಳಿದುಬಂದಿತ್ತು.

ಇದನ್ನೂ ಓದಿ: Fake Currency: ಬಳ್ಳಾರಿಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಇಬ್ಬರ ಬಂಧನ

Continue Reading

ಕರ್ನಾಟಕ

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

CET 2024: ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಮೇ ಕೊನೇ ವಾರದಲ್ಲಿ ಸಿಇಟಿ 2024 ಫಲಿತಾಂಶ ಬಿಡುಗಡೆಯಾಗಲಿದೆ.

VISTARANEWS.COM


on

cet exam karnataka exam authority
Koo

ಬೆಂಗಳೂರು: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೇಳಿದ್ದ ಹಿನ್ನೆಲೆಯಲ್ಲಿ ಮರು ಪರೀಕ್ಷೆ (CET 2024) ನಡೆಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು, ಆದರೆ, ಇದೀಗ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು (Out Of Syllabus Questions) ಕೈ ಬಿಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಮರು ಪರೀಕ್ಷೆ ನಡೆಸದೇ ಫಲಿತಾಂಶ ಬಿಡುಗಡೆ ಮಾಡಲು ತೀರ್ಮಾನಿಸಿದೆ.

ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ಔಟ್ ಆಫ್‌ ಸಿಲಬಸ್ ಪ್ರಶ್ನೆ ಕೈ ಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಜ್ಞರ ಸಮಿತಿ ಶಿಫಾರಸಿಗೆ ಒಪ್ಪಿಗೆ ನೀಡಿದ ಉನ್ನತ ಶಿಕ್ಷಣ ಇಲಾಖೆ, ಔಟ್ ಆಫ್ ಸಿಲಬಸ್ ಪ್ರಶ್ನೆ ಬಿಟ್ಟು ಉಳಿದ ಪ್ರಶ್ನೆಗಳನ್ನು ಫಲಿತಾಂಶಕ್ಕೆ ಪರಿಗಣಿಸಲು ನಿರ್ಧಾರ ಮಾಡಿದೆ.

ಇದನ್ನೂ ಓದಿ | PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

ತಪ್ಪಾದ 2 ಪ್ರಶ್ನೆಗಳಿಗೆ ಮಾತ್ರ ಗ್ರೇಸ್ ಅಂಕ ನೀಡಲು ‌ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಪ್ಪಾದ 2 ಪ್ರಶ್ನೆಗೆ ಗ್ರೇಸ್ ಅಂಕಗಳನ್ನು ಕೆಇಎ ನೀಡಲಿದೆ. ಉಳಿದಂತೆ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಟ್ಟು ಉಳಿದ ಪ್ರಶ್ನೆಗಳ‌ನ್ನು ಅಂಕಗಳಾಗಿ ಪರಿಗಣಿಸಲಾಗುತ್ತದೆ. ಇನ್ನು ಮೇ ಕೊನೇ ವಾರದಲ್ಲಿ ಸಿಇಟಿ ಫಲಿತಾಂಶವನ್ನು ಕೆಇಎ ಪ್ರಕಟ ಮಾಡಲಿದೆ.

ಸಿಇಟಿ ಪರೀಕ್ಷೆಯಲ್ಲಿ (CET 2024) ಪಠ್ಯಕ್ರಮದ ಹೊರತಾದ ಪ್ರಶ್ನೆಗಳಿಂದ (Out of syllabus questions) ವಿದ್ಯಾರ್ಥಿಗಳಲ್ಲಿ ಆತಂಕ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ತಜ್ಞರ ಸಮಿತಿ ರಚನೆ ಮಾಡಲಾಗಿತ್ತು. ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು.

ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀಕರ್‌ ಎಂ.ಎಸ್‌ ತಿಳಿಸಿದ್ದರು.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏ.18 ಮತ್ತು 19ರಂದು ನಡೆಸಲಾಗಿತ್ತು. 4 ವಿಷಯಗಳಿಗೆ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ) ನಡೆದಿದ್ದ ಸಿಇಟಿ ಪರೀಕ್ಷೆಗೆ ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆದ ನಂತರ, ಪತ್ರಿಕೆಗಳಲ್ಲಿ ಹಲವು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿವೆ ಎಂದು ವಿದ್ಯಾರ್ತಿಗಳು ಆರೋಪಿಸಿದ್ದರು. ಆದ್ದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯ ಕೇಳಿಬಂದಿತ್ತು. ಆದರೆ ಇದೀಗ ಮರು ಪರೀಕ್ಷೆ ನಡೆಸದಿರಲ್ಲಿ ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

Continue Reading
Advertisement
Amith Shah
ಪ್ರಮುಖ ಸುದ್ದಿ13 mins ago

Amit Shah: ಎಸ್​​ಸಿ, ಎಸ್​ಟಿ ಮೀಸಲು ರದ್ದು; ಅಮಿತ್​ ಶಾ ನಕಲಿ ವಿಡಿಯೊ ಬಗ್ಗೆ ಡೆಲ್ಲಿಯಲ್ಲಿ ಎಫ್​ಐಆರ್​​

Mahanati Show complaint against Gagana Contestant and Ramesh
ಕಿರುತೆರೆ23 mins ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Physical Abuse
ಪ್ರಮುಖ ಸುದ್ದಿ37 mins ago

Physical Abuse : ಮದುವೆ ಪ್ರಸ್ತಾಪ ತಿರಸ್ಕರಿಸಿದ ಬಾಲಕಿ ಮೇಲೆ ಅತ್ಯಾಚಾರ, ಮುಖಕ್ಕೆ ಕಬ್ಬಿಣದಿಂದ ಬರೆ

ದೇಶ48 mins ago

Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

srinivasa prasad sutturu sri
ಕರ್ನಾಟಕ1 hour ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Gurucharan Singh soon to get married faced financial crunch
ಸಿನಿಮಾ2 hours ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ2 hours ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್2 hours ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

hd revanna prajwal revanna
ಪ್ರಮುಖ ಸುದ್ದಿ2 hours ago

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ವಿದೇಶ2 hours ago

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202419 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202421 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202423 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202424 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌