ಬೆಂಗಳೂರು: ಖ್ಯಾತ ವಿಜ್ಞಾನಿ, ಭಾರತರತ್ನ ಪ್ರೊ.ಸಿ.ಎನ್.ಆರ್.ರಾವ್ ಅವರನ್ನು ಕರ್ನಾಟಕ ಹೋಮಿಯೋಪಥಿ ಮಂಡಳಿಯ ಅಧ್ಯಕ್ಷ ನಾಡೋಜ ಡಾ.ಬಿ.ಟಿ.ರುದ್ರೇಶ್ ಅವರು ನಗರದ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರೀಸರ್ಚ್ ಸೆಂಟರ್‌ನಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ವಿವಿಧ ವಿಶ್ವವಿದ್ಯಾಲಯಗಳಿಂದ 85 ಗೌರವ ಡಾಕ್ಟರೇಟ್ ಪಡೆದಿರುವ ಡಾ.ಸಿ.ಎನ್.ಆರ್.ರಾವ್ ಅವರು, ಪ್ರಪಂಚದ ಅತ್ಯುತ್ತಮ ಸಂಶೋಧನೆ ಸಂಸ್ಥೆಗಳಲ್ಲಿ 7ನೇ ಸ್ಥಾನದಲ್ಲಿರುವ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರೀಸರ್ಚ್ ಸೆಂಟರ್‌ನ (JNCASR) ಗೌರವ ಅಧ್ಯಕ್ಷರಾಗಿದ್ದಾರೆ.
ಸೌಹಾರ್ದ ಭೇಟಿಯ ವೇಳೆ ಭೌತ ವಿಜ್ಞಾನ ಹಾಗೂ ಜೀವ ವಿಜ್ಞಾನದ ನಡುವಿನ ಅಂತರ ಮತ್ತು ಸಾಮ್ಯತೆ ಬಗ್ಗೆ ಪ್ರೊ.ಸಿ.ಎನ್.ಆರ್.ರಾವ್ ಮತ್ತು ಡಾ.ಬಿ.ಟಿ.ರುದ್ರೇಶ್ ಅವರು ಚರ್ಚೆ ನಡೆಸಿದರು. ನಂತರ ಪ್ರೊ.ಸಿ.ಎನ್.ಆರ್.ರಾವ್ ಅವರಿಗೆ ಡಾ.ಬಿ.ಟಿ.ರುದ್ರೇಶ್ ಅವರು ಶಾಲು ಹಾಕಿ, ಹೂಗುಚ್ಛ ನೀಡುವ ಮೂಲಕ ಅಭಿನಂದನೆ ಸಲ್ಲಿಸಿದರು.
ಇದನ್ನೂ ಓದಿ | National Nutrition Week 2023: ರಾತ್ರಿ ಊಟ ಬೇಗ ಮಾಡುವುದರಿಂದಲೂ ಆರೋಗ್ಯ ಹಾಳು?