Site icon Vistara News

Kshatriya Convention : ನಾಡಿನ ರಕ್ಷಣೆ, ಪರಂಪರೆಗೆ ಕ್ಷತ್ರಿಯರ ಕೊಡುಗೆ ಅಪಾರ: ಡಾ. ಸಿ.ಎನ್‌. ಅಶ್ವತ್ಥನಾರಾಯಣ

Dr CN Ashwathnarayana speech in Kshatriya Convention

#image_title

ಬೆಂಗಳೂರು: ನಾಡಿನ ರಕ್ಷಣೆ ಹಾಗೂ ಸಂಸ್ಕೃತಿ ಪರಂಪರೆಗಳ ಹಿರಿಮೆಗೆ ಕ್ಷತ್ರಿಯರ ಕೊಡುಗೆ ಅಪಾರವಾದದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಕರ್ನಾಟಕ ಕ್ಷತ್ರಿಯರ ಒಕ್ಕೂಟದ ವತಿಯಿಂದ ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಕ್ಷತ್ರಿಯ ಸಮಾವೇಶದಲ್ಲಿ (Kshatriya Convention) ಪಾಲ್ಗೊಂಡು ಅವರು ಮಾತನಾಡಿದರು.

“ಕ್ಷತ್ರಿಯರ ನಡೆ, ರಾಜಧಾನಿಯ ಕಡೆ” ಎಂಬ ಘೋಷವಾಕ್ಯದೊಂದಿಗೆ ಈ ಸಮಾವೇಶ ನಡೆಯುತ್ತಿದೆ. ಅದಕ್ಕೂ ಮೀರಿ ಕ್ಷತ್ರಿಯರ ನಡೆ ವಿಧಾನಸೌಧದ ಒಳಕ್ಕೂ ಮುಂದುವರಿಯಬೇಕು ಎಂದು ಅವರು ಈ ಸಂದರ್ಭದಲ್ಲಿ ಆಶಿಸಿದರು. ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರವು ಕ್ಷತ್ರಿಯರ ಹಿತರಕ್ಷಣೆಗೆ ಬದ್ಧವಾಗಿದ್ದು, ಅದಕ್ಕೆ ಪೂರಕವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರು ಹೇಳಿದರು.

ಇದನ್ನೂ ಓದಿ : Kshatriya Convention : ಕ್ಷತ್ರಿಯ ಸಮಾಜದ ಜತೆಗೆ ಸರ್ಕಾರ ಸದಾ ಇರುತ್ತದೆ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಅಖಂಡ ಭಾರತ ನಿರ್ಮಾಣಕ್ಕೆ ಕ್ಷತ್ರಿಯರ ಕೊಡುಗೆ ಏನೆಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ ಆಗಿದೆ. ನಮ್ಮ ಧರ್ಮ, ಭಾಷೆ ಹಾಗೂ ಭೂಪ್ರದೇಶದ ರಕ್ಷಣೆಗೆ ಹೆಚ್ಚಿನ ಕೊಡುಗೆ ನೀಡಿರುವ ಕ್ಷತ್ರಿಯರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಆರವಿಂದ ಲಿಂಬಾವಳಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೂ ಮಾತನಾಡಿದರು. ಒಕ್ಕೂಟದ ರಾಜ್ಯಾಧ್ಯಕ್ಷ ಉದಯ್ ಸಿಂಗ್, ತಿಗಳರ ಜನಾಂಗದ ಮುಖಂಡ ಸುಬ್ಬಣ್ಣ ಮತ್ತಿತರರು ಇದ್ದರು.

Exit mobile version