ಬೆಂಗಳೂರು: ನಗರ ಅಪರಾಧ ವಿಭಾಗದ (Bengaluru City Police) ನೂತನ ಜಂಟಿ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದಿನ ಜಂಟಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿತ್ತು. ಹೀಗಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ ಡಾ. ಶರಣಪ್ಪ ಅವರಿಗೆ ಸಿಬ್ಬಂದಿ ಹಾಗೂ ಸ್ನೇಹಿತರು, ಹಿತೈಷಿಗಳು ಪುಷ್ಪಗುಚ್ಚ ನೀಡಿ ಶುಭ ಕೋರಿದರು.
2009ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಶರಣಪ್ಪ ಅವರು ದಕ್ಷ, ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾಗಿ ಜನಪ್ರಿಯರಾಗಿದ್ದಾರೆ. ಬೆಂಗಳೂರಿನಲ್ಲಿ ದಕ್ಷಿಣ ವಿಭಾಗ, ಪೂರ್ವ ವಿಭಾಗ ಹಾಗೂ ಸಿಸಿಬಿ ಕ್ರೈಂ 1 ವಿಭಾಗದ ಡಿಸಿಪಿಯಾಗಿ ಸೇವೆ ಸಲ್ಲಿಸಿದ್ದು, ಹಲವು ಕ್ಲಿಷ್ಟಕರ ಪ್ರಕರಣಗಳನ್ನು ಭೇದಿಸಿದ್ದಾರೆ. ವಿಶೇಷವಾಗಿ ಡ್ರಗ್ ಮಾಫಿಯಾ ಹಾಗೂ ವಿದೇಶಿಯರ ಪುಂಡಾಟಿಕೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳಿಗಾಗಿ ಸಾರ್ವಜನಿಕರ ವಲಯದಲ್ಲಿ ಮೆಚ್ಚುಗೆ ಪಡೆದಿದ್ದಾರೆ.
ಇದನ್ನೂ ಓದಿ | Lokayukta raid | 5 ಲಕ್ಷ ರೂ. ಲಂಚ ಡಿಮ್ಯಾಂಡ್ ಮಾಡಿದ ಮಹಿಳಾ ತಹಸೀಲ್ದಾರ್ ಲೋಕಾಯುಕ್ತ ಬಲೆಗೆ