Water Price Hike: ಯಾರು ಬೇಕಾದರೂ ಬಯ್ಯಲಿ, ನಾನು ನೀರು ಬೆಲೆ ಏರಿಕೆ ಮಾಡೋನೇ: ಡಿಸಿಎಂ ಡಿಕೆ ಶಿವಕುಮಾರ್‌ - Vistara News

ಬೆಂಗಳೂರು

Water Price Hike: ಯಾರು ಬೇಕಾದರೂ ಬಯ್ಯಲಿ, ನಾನು ನೀರು ಬೆಲೆ ಏರಿಕೆ ಮಾಡೋನೇ: ಡಿಸಿಎಂ ಡಿಕೆ ಶಿವಕುಮಾರ್‌

Water Price Hike:
ಮೀಡಿಯಾದವರಾದರೂ ಬೈಯಲಿ, ಜನರಾದರೂ ಬಯ್ಯಲಿ, ವಿರೋಧ ಪಕ್ಷದವರಾದರೂ ವಿರೋಧ ಮಾಡಲಿ. ಕಂಪನಿ ಉಳಿಯಬೇಕಾಗಿದೆ ಅದಕ್ಕಾಗಿ ನಾವು ನೀರಿನ ದರ ಹೆಚ್ಚಳ‌ ಮಾಡಿಯೇ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.

VISTARANEWS.COM


on

DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯಲ್ಲಿ ಕುಡಿಯುವ ನೀರಿನ ದರ ಏರಿಕೆ (Water Price Hike) ಮಾಡಲೇಬೇಕಿದೆ. ಜಲಮಂಡಳಿ (Bangalore Water Supply and Sewerage Board) ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡಲು ಹಣವಿಲ್ಲ. ಯಾರು ಏನು ಹೇಳಿದರೂ ನಾನು ನೀರಿನ ಬೆಲೆ ಏರಿಸುವವನೇ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಹೇಳಿದ್ದಾರೆ.

ನೀರಿದ ದರ 8-9 ವರ್ಷದಿಂದ ಏರಿಕೆ ಮಾಡಿಲ್ಲ. ನೀರಿನ‌ ದರ ಹೆಚ್ಚಿಸಬೇಕು, ಅಂತರ್ಜಲ ಹೆಚ್ಚಳ ಆಗಬೇಕು. ಜಲಮಂಡಳಿ ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡೋಕೆ‌ ಆಗುತ್ತಿಲ್ಲ. ಮಂಡಳಿಯ ವಿದ್ಯುತ್ ದರವೂ ಪಾವತಿ ಮಾಡಲು ಆಗುತ್ತಿಲ್ಲ. ಕೆಲವು ಸೆಕ್ಷನ್‌ಗೆ ನೋಡಿ ದರ ನಿಗದಿ ಮಾಡಬೇಕು. ಎಷ್ಟು ದರ ಏರಿಕೆ ಮಾಡಬೇಕು ಅಂತ ನಿರ್ಧಾರ ಮಾಡಿಲ್ಲ. ಕಮಿಟಿ‌ ಸಭೆ ಮತ್ತು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡುತ್ತೇವೆ. ಆದರೆ ಇಂದಿನ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಈ ವಿಷಯ ಇಲ್ಲ ಎಂದು ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ನಾಗರಿಕರಿಗೆ ಎಷ್ಟು ಮಾಡಿದರೂ ಅಷ್ಟೆ, ಅವರಿಗೆ ಉಪಕಾರ ಸ್ಮರಣೆ ಇಲ್ಲ. ಬೈತಾರೆ, ಕಾಮೆಂಟ್ ಮಾಡ್ತಾರೆ, ವಾಟ್ಸ್ಯಾಪ್‌ನಲ್ಲಿ ಹಾಕ್ತಾರೆ. ನಂತರ ಮರೆತು ಬಿಡ್ತಾರೆ. ನೀರು ಕೊಟ್ಟರೆ ತಗೋತಾರೆ ಅಷ್ಟೆ. ಕೆಲವರು ದುಡ್ಡು ಕಟ್ಟುವವರು ಕಟ್ಟುತ್ತಾರೆ, ಕೆಲವರು ಕಟ್ಟಲ್ಲ. ಮೀಡಿಯಾದವರಾದರೂ ಬೈಯಲಿ, ಜನರಾದರೂ ಬಯ್ಯಲಿ, ವಿರೋಧ ಪಕ್ಷದವರಾದರೂ ವಿರೋಧ ಮಾಡಲಿ. ಕಂಪನಿ ಉಳಿಯಬೇಕಾಗಿದೆ ಅದಕ್ಕಾಗಿ ನಾವು ನೀರಿನ ದರ ಹೆಚ್ಚಳ‌ ಮಾಡಿಯೇ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.

ನೀರಿನ ದರ ಸಾಕಷ್ಟು ವರ್ಷದಿಂದ ಏರಿಸಿಲ್ಲ. 1.40 ಕೋಟಿ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ‌. ಮೇಕೆದಾಟು ಯೋಜನೆ ಬಗ್ಗೆ ನನಗೆ ಭರವಸೆ ಇದ್ದು, ಆದಷ್ಟು ಬೇಗ ಅದು ಆಗಲಿದೆ. ಶರಾವತಿ ಕುಡಿಯುವ ನೀರಿನ ಯೋಜನೆಯೂ ಇದ್ದು ಅದಕ್ಕೆ ಆ ಭಾಗದಲ್ಲಿ ವಿರೋಧವಿದೆ‌. ಎತ್ತಿನ ಹೊಳೆ ಯೋಜನೆಯೂ ಒಂದು ಹಂತದಲ್ಲಿ ಇದೆ. ನೀರಾವರಿ ಯೋಜನೆಯಲ್ಲಿ ಹೊಸ ಬಿಲ್ ತಂದಿದ್ದೇವೆ. ನೀರಿನ ಕಾಲುವೆಗಳ ಅಕ್ಕಪಕ್ಕ ಅರ್ಧ ಕಿಮೀನಲ್ಲಿ ಯಾರೂ ಬೋರ್‌ವೆಲ್ ಕೊರೆಯುವಂತಿಲ್ಲ. ಯಾರೂ ಕಾಲುವೆಗಳಿಂದ ನೇರವಾಗಿ ನೀರು ಟ್ಯಾಪ್ ಮಾಡುವಂತಿಲ್ಲ. ರಾಜ್ಯಪಾಲರು ಸಹಿ ಹಾಕಿದ್ದಾರೆ, ಹೊಸ ಕಾನೂನು ಬಂದಿದೆ ಎಂದು ಅವರು ವಿವರಿಸಿದರು.

ಖಾಸಗೀಕರಣ ಇಲ್ಲ

ಜಲ ಮತ್ತು ಇಂಧನ ಈ ಎರಡೂ ಪ್ರಮುಖವಾಗಿದ್ದು, ಎರಡೂ ಇಲಾಖೆ ನಾನು ನೋಡ್ತಾ ಇದ್ದೇನೆ. ಹಿಂದೆ ಎಸ್.ಎಂ.ಕೃಷ್ಣ ಅವಧಿಯಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೀರು ಸರಬರಾಜು ಖಾಸಗೀಕರಣ ಕುರಿತು ಚರ್ಚೆ ನಡೆದಿತ್ತು. ಅದರ ಬಗ್ಗೆ ಫ್ರಾನ್ಸ್‌ಗೆ ಎಲ್ಲಾ ಹೋಗಿ ನೋಡಿಕೊಂಡು ಹೋಗುತ್ತಿದ್ದಾರೆ. ನಾನೂ ಹೋಗಿ ಬಂದೆ. ನೋಡಿ ಬಂದು ನಮ್ಮ ರಾಜ್ಯದಲ್ಲಿ ಇದು ಕಷ್ಟವಾಗುತ್ತೆ ಎಂದು ಮಾಹಿತಿ ‌ನೀಡಿದೆ. ಸಾಕಷ್ಟು ವಿರೋಧ ವ್ಯಕ್ತವಾಯ್ತು. ಆನಂತರ ಕೈ ಬಿಟ್ಟೆವು. ಈಗಲೂ ನಾನು ಸಚಿವನಾದ ಮೇಲೆ ಮತ್ತೆ ಕೆಲವರು ಬಂದರು. ಆಗಲ್ಲ, ನಾನಿರುವವರೆಗೆ ಆಗಲ್ಲ ಅಂತ ಹೇಳಿದ್ದೇನೆ ಎಂದು ಅವರು ಹೇಳಿದರು.

ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ

110 ಹಳ್ಳಿಗಳ ಕಾವೇರಿ ನೀರಿನ ಸಂಪರ್ಕ ಅಭಿಯಾನಕ್ಕೆ ಡಿಕೆಶಿ ಇಂದು ಚಾಲನೆ ನೀಡಿದರು. ವಿಧಾನ ಸೌಧದ ಮುಂಭಾಗದ ಗ್ರಾಂಡ್ ಸ್ಟೆಪ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾವೇರಿ ಸಂಪರ್ಕದ ಜೊತೆಗೆ ಮಳೆ ನೀರು ಕೊಯ್ಲು ಜಾಗೃತಿ ಅಭಿಯಾನ, ವರುಣಮಿತ್ರ ತರಬೇತಿ ಹಾಗೂ ಯುನೈಟೆಡ್ ನೇಷನ್ ಇನೋವೇಷನ್ ಪ್ರಾಜೆಕ್ಟ್ ಫಾರ್ ವಾಟರ್ ಸೆಕ್ಯುರಿಟಿ ಇನ್ ಬೆಂಗಳೂರು ಸಿಟಿ ಯೋಜನೆಗಳಿಗೂ ಅವರು ಚಾಲನೆ ನೀಡಿದರು.

110 ಹಳ್ಳಿಗಳಿಗೆ ಕಾವೇರಿ ಸಂಪರ್ಕ ಅಭಿಯಾನದಡಿ ಬೊಮ್ಮನಹಳ್ಳಿ, ರಾಜರಾಜೇಶ್ವರಿ ನಗರ, ಟಿ ದಾಸರಹಳ್ಳಿ, ಬ್ಯಾಟರಾಯನಪುರ ಹಾಗೂ ಮಹದೇವಪುರ ವಿಧಾನಸಭೆ ಕ್ಷೇತ್ರಗಳಿಗೆ ಸೇರಿರುವ ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ದೊರೆಯಲಿದೆ.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೀತಾರಾ? ಡಿಕೆ ಶಿವಕುಮಾರ್ ಏನಂದ್ರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Green Ammonia Export: ಜಪಾನ್‌ಗೆ ಇನ್ನು ಭಾರತದಿಂದ ಹಸಿರು ಅಮೋನಿಯಾ ರಫ್ತು! ಒಪ್ಪಂದಕ್ಕೆ ಸಹಿ

ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಒಂದು ಹೆಜ್ಜೆ ಮುಂದಿರುವ ಭಾರತ ಇದೀಗ ಜಪಾನ್‌ಗೆ ಹಸಿರು ಅಮೋನಿಯಾ ರಫ್ತು (Green Ammonia Export) ಮಾಡಲು ಒಪ್ಪಂದ ಮಾಡಿಕೊಂಡಿದೆ. ನವದೆಹಲಿಯಲ್ಲಿ ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ, ಜಪಾನ್‌ಗೆ ಇದೇ ಮೊದಲ ಬಾರಿ ಹಸಿರು ಅಮೋನಿಯ ರಫ್ತು ಯೋಜನೆ ಆಫ್‌ಟೇಕ್ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿದ್ದಾರೆ.

VISTARANEWS.COM


on

Green Ammonia Export
Koo

ನವದೆಹಲಿ: ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಒಂದು ಹೆಜ್ಜೆ ಮುಂದಿರುವ ಭಾರತ ಇದೀಗ ಜಪಾನ್‌ಗೆ ಹಸಿರು ಅಮೋನಿಯಾ ರಫ್ತು (Green Ammonia Export) ಮಾಡಲು ಒಪ್ಪಂದ ಮಾಡಿಕೊಂಡಿದೆ. ನವದೆಹಲಿಯಲ್ಲಿ ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ, ಜಪಾನ್‌ಗೆ ಇದೇ ಮೊದಲ ಬಾರಿ ಹಸಿರು ಅಮೋನಿಯ ರಫ್ತು ಯೋಜನೆ ಆಫ್‌ಟೇಕ್ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ವೇಳೆ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿ, ಜಪಾನ್‌ಗೆ ಹಸಿರು ಅಮೋನಿಯಾ ರಫ್ತು ಮಾಡುವ ಈ ಒಪ್ಪಂದ ಹಸಿರು ಹೈಡ್ರೋಜನ್ ಮತ್ತು ಅಮೋನಿಯಾ ಉತ್ಪಾದನೆಯಲ್ಲಿ ಭಾರತ ಜಾಗತಿಕ ನಾಯಕನಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: KPSC Exams : ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಭಾರತದಲ್ಲಿ ಹಸಿರು ಅಮೋನಿಯಾ ಉತ್ಪಾದನೆಗೆ ಸೆಂಬ್‌ಕಾರ್ಪ್ ಇಂಡಸ್ಟ್ರೀಸ್ ಮುಂದಾಗಿದ್ದು, ಇದಕ್ಕಾಗಿ ದೇಶದ ನವೀಕರಿಸಬಹುದಾದ ಇಂಧನ ಮೂಲಗಳನ್ನು ಬಳಸಿಕೊಳ್ಳುತ್ತದೆ ಎಂದರು. ಜಪಾನ್‌ ತನ್ನ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಬಳಕೆಯನ್ನು ಭಾಗಶಃ ಬದಲಾಯಿಸಿ ಹಸಿರು ಅಮೋನಿಯಾ ಬಳಕೆಗೆ ಮುಂದಾಗಿದ್ದು, ಭಾರತ ಹಸಿರು ಅಮೋನಿಯಾ ಪೂರೈಕೆ ಮಾಡುವ ಮೂಲಕ ಜಪಾನ್ ಈ ಕಾರ್ಯಕ್ಕೆ ಸಾಥ್ ನೀಡಲಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಸಿರು ಜಲಜನಕ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುತ್ತಿದ್ದು, ಹಸಿರು ಅಮೋನಿಯಾ ರಫ್ತು ಮಾಡುವ ಜಪಾನ್ ನೊಂದಿಗಿನ ಒಪ್ಪಂದ ನಿದರ್ಶನ ಎಂದು ಹೇಳಿದರು.

7.5 ಲಕ್ಷ ಟಿಪಿಎಗೆ ಟೆಂಡರ್

ಪ್ರಸ್ತುತದಲ್ಲಿ ಗ್ರೀನ್ ಅಮೋನಿಯಾದ 7.5 ಲಕ್ಷ ಟಿಪಿಎಗೆ ಟೆಂಡರ್ ಆಗಿದೆ. 4.5 ಲಕ್ಷ ಟಿಪಿಎ ಸಾಮರ್ಥ್ಯಕ್ಕೆ ಹೆಚ್ಚುವರಿ ಟೆಂಡರ್‌ಗಳನ್ನು ಸಹ ನಿರೀಕ್ಷಿಸಲಾಗಿದೆ ಎಂದು ಸಚಿವ ಜೋಶಿ ತಿಳಿಸಿದರು.

1 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಉತ್ಪಾದನೆ ಗುರಿ

ಭಾರತದಲ್ಲಿ ವಾರ್ಷಿಕ ಒಂದು ಮಿಲಿಯನ್ ಟನ್‌ಗಳಷ್ಟು ಹಸಿರು ಹೈಡ್ರೋಜನ್ ಉತ್ಪಾದನೆ ಗುರಿ ಹೊಂದಿದ್ದು, ಇದಕ್ಕಾಗಿ ಅಗತ್ಯ ಪ್ರೋತ್ಸಾಹ ನೀಡಲಾಗುತ್ತಿದೆ. ಹಸಿರು ಶಕ್ತಿ ಉತ್ಪಾದನೆಯಲ್ಲಿ ಭಾರತ ತ್ವರಿತ ಮತ್ತು ಅಭೂತಪೂರ್ವ ಸಾಧನೆ ತೋರುತ್ತಿದೆ ಎಂದರು.

ಇದನ್ನೂ ಓದಿ: Kannada New Movie: ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಟೀಸರ್ ರಿಲೀಸ್‌

ಭಾರತ, ಜಪಾನ್ ಮತ್ತು ಸಿಂಗಾಪುರ ಈ ಮೂರು ದೇಶಗಳು ಇಂಧನ ದಕ್ಷತೆ ಮತ್ತು ನವೀಕರಿಸಬಹುದಾದ ಇಂಧನ ತಂತ್ರಜ್ಞಾನಗಳ ಮೇಲೆ ಸಹಯೋಗ ಮಾಡುತ್ತಿವೆ ಎಂದು ತಿಳಿಸಿದರು.

Continue Reading

ಬೆಂಗಳೂರು

Gas Cylinder Blast: ಸಿಲಿಂಡರ್‌ ಸ್ಫೋಟಕ್ಕೆ ಸುಟ್ಟುಕರಕಲಾದ ವ್ಯಕ್ತಿ; ಮನೆ ಗೋಡೆ ಬಿದ್ದು ಮಕ್ಕಳು ಗಾಯ

Gas Cylinder Blast: ಲೈಟ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮನೆ ಗೋಡೆ ಕುಸಿದ ಪರಿಣಾಮ ಮಕ್ಕಳಿಬ್ಬರು ಗಾಯಗೊಂಡಿದ್ದಾರೆ.

VISTARANEWS.COM


on

By

cylinder blast
Koo

ಚಿಕ್ಕೋಡಿ: ಮನೆಯಲ್ಲಿ ಸಿಲಿಂಡರ್ ಸ್ಫೋಟಕ್ಕೆ (Gas Cylinder Blast) ವ್ಯಕ್ತಿಯೊರ್ವ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ಘಟನೆ ನಡೆದಿದೆ. ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರದ ಬೀಡ್ ಮೂಲದ ಸೂರ್ಯಕಾಂತ ಸೆಳಕೆ (55) ಮೃತ ದುರ್ದೈವಿ.

ಮತ್ತೋರ್ವ ಕಾರ್ಮಿಕ ಜ್ಞಾನೋದಯ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು, ಆತನನ್ನು ಚಿಕ್ಕೋಡಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಪಕ್ಕದ ಮನೆಯ ಗೋಡೆ ಕುಸಿದು, ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದೆ. ಮಕ್ಕಳಿಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗ್ಯಾಸ್‌ ಪೈಪ್ ಕಟ್ ಆಗಿ ರಾತ್ರಿಯಿಡೀ ಸೋರಿಕೆಯಾಗಿದೆ. ಇದರ ಅರಿವು ಇರದ ಸೂರ್ಯಕಾಂತ ಬೆಳಗಿನ ಜಾವ ಅಡುಗೆ ಮನೆ ಲೈಟ್ ಆನ್‌ ಮಾಡಿದ್ದಾರೆ. ಈ ವೇಳೆ ಏಕಾಏಕಿ ಬೆಂಕಿ ಹತ್ತಿಕೊಂಡು ಸಿಲಿಂಡ್‌ ಬ್ಲಾಸ್ಟ್‌ ಆಗಿದೆ. ಸೂರ್ಯಕಾಂತ ಸುಟ್ಟಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಕುಸಿದು, ಪಕ್ಕದ ಮನೆಯ ಗೋಡೆಗೂ ಹಾನಿಯಾಗಿದೆ. ಮಕ್ಕಳಿಬ್ಬರ ಮೇಲೆ ಗೋಡೆ ಬಿದ್ದ ಪರಿಣಾಮ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಕಲಾಗಿದೆ.

ಇದನ್ನೂ ಓದಿ: Murder Case : ಆಸ್ತಿಗಾಗಿ ಸಹೋದರನ ಕಣ್ಣಿಗೆ ಖಾರದ ಪುಡಿ ಎರಚಿ, ಕೊಚ್ಚಿ ಸಾಯಿಸಿದ ರಾಕ್ಷಸಿ ಸಹೋದರಿಯರು!

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ, ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ತುರ್ತುಸ್ಥಿತಿ

ತಿರುವನಂತಪುರಂ: ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ (Air India) ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ (Bomb Threat) ಹಿನ್ನೆಲೆಯಲ್ಲಿ ಇಂದು ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Thiruvananthapuram Airport) ಸಂಪೂರ್ಣ ತುರ್ತು ಪರಿಸ್ಥಿತಿ (Emergency) ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ವಿಮಾನವು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿಯಿತು ಮತ್ತು ಅದನ್ನು ಪ್ರತ್ಯೇಕ ವಿಭಾಗಕ್ಕೆ ಸ್ಥಳಾಂತರಿಸಲಾಯಿತು. ಪ್ರಯಾಣಿಕರನ್ನು ಶೀಘ್ರವಾಗಿ ವಿಮಾನದಿಂದ ಸ್ಥಳಾಂತರಿಸಲಾಯಿತು. ವಿಮಾನವು ತಿರುವನಂತಪುರಂ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಪೈಲಟ್‌ನಿಂದ ಬಾಂಬ್ ಬೆದರಿಕೆ ಕರೆಯ ಬಗ್ಗೆ ಮಾಹಿತಿ ದೊರೆತಿದೆ.

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಹೊರಟ ಬಳಿಕ ಬಾಂಬ್‌ ಬೆದರಿಕೆ ಗೊತ್ತಾಗಿತ್ತು. ಏರ್ ಇಂಡಿಯಾದ ಮುಂಬೈ-ತಿರುವನಂತಪುರಂ ವಿಮಾನ ನಂ. AI657ರಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದರು. ಬಾಂಬ್ ಬೆದರಿಕೆಯ ಮೂಲದ ವಿವರಗಳನ್ನು ಮತ್ತು ಇತರ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.‌

ಹೋಟೆಲ್‌ನಲ್ಲಿ ಏರ್‌ ಇಂಡಿಯಾ ಗಗನಸಖಿ ಮೇಲೆ ಹಲ್ಲೆ; ನೆಲಕ್ಕೆ ಕೆಡವಿ ಎಳೆದಾಡಿದ ದುಷ್ಕರ್ಮಿ

ಲಂಡನ್‌: ಏರ್‌ ಇಂಡಿಯಾ ವಿಮಾನದ ಗಗನಸಖಿ (Air India Hostess)ಯೊಬ್ಬರ ಮೇಲೆ ಇಂಗ್ಲೆಂಡ್‌ನ ಲಂಡನ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ನಡೆದಿರುವ ಆಘಾತಕಾರಿ ಘಟನೆ ನಡೆದಿದೆ. ಗಗನಸಖಿ ತಂಗಿದ್ದ ಹೋಟೆಲ್‌ ರೂಮ್‌ಗೆ ನುಗ್ಗಿದ ಅಪರಿಚಿತನೊಬ್ಬ ಹಲ್ಲೆ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಲಂಡನ್‌ನ ಹೀಥ್ರೂನಲ್ಲಿರುವ ರಾಡಿಸನ್ ರೆಡ್ ಹೋಟೆಲ್‌ನಲ್ಲಿ ಆಗಸ್ಟ್‌ 15ರಂದು ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏರ್ ಇಂಡಿಯಾ ವಿಮಾನದ ಹಲವು ಸಿಬ್ಬಂದಿ ತಂಗಿರುವ ಈ ಹೋಟೆಲ್‌ಗೆ ನುಗ್ಗಿದ ದುಷ್ಕರ್ಮಿ ಏಕಾಏಕಿ ದಾಳಿ ನಡೆಸಿದ್ದಾನೆ. ಸದ್ಯ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಹಲ್ಲೆಗೊಳಗಾದ ಗಗನಸಖಿಗೆ ಸೂಕ್ತ ಚಿಕಿತ್ಸೆ ನೀಡಿ ಭಾರತಕ್ಕರ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.

“ಪ್ರಮುಖ ಅಂತಾರಾಷ್ಟ್ರೀಯ ಹೋಟೆಲ್‌ನಲ್ಲಿ ನಡೆದ ಈ ಕಾನೂನುಬಾಹಿರ ಒಳನುಸುಳುವಿಕೆಯಿಂದ ಆಘಾತಕ್ಕೆ ಒಳಗಾಗಿದ್ದೇವೆ. ಇದು ನಮ್ಮ ಸಿಬ್ಬಂದಿಯೊಬ್ಬರ ಮೇಲೆ ಪರಿಣಾಮ ಬೀರಿದೆ. ಕೌನ್ಸಿಲಿಂಗ್‌ ಸೇರಿದಂತೆ ನಮ್ಮ ಸಹೋದ್ಯೋಗಿಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಿದ್ದೇವೆʼʼ ಎಂದು ಏರ್‌ ಇಂಡಿಯಾ ತಿಳಿಸಿದೆ.

ಏರ್‌ ಇಂಡಿಯಾ ವಿಮಾನದ ಸಿಬ್ಬಂದಿ ತಂಗಿರುವ ಹೋಟೆಲ್‌ನಲ್ಲಿ ಮಧ್ಯರಾತ್ರಿಯ ವೇಳೆಗೆ ಈ ಘಟನೆ ನಡೆದಿದೆ. ʼʼಗಗನಸಖಿ ತಮ್ಮ ರೂಮ್‌ನಲ್ಲಿ ನಿದ್ರಿಸುತ್ತಿದ್ದರು. ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಆಗಂತುಕನೊಬ್ಬ ಗಗನಸಖಿಯ ರೂಮ್‌ಗೆ ನುಗ್ಗಿದ. ಅನಿರೀಕ್ಷಿತ ಘಟನೆಯಿಂದ ಆಘಾತಕ್ಕೊಳಗಾದ ಆಕೆ ಕೂಡಲೇ ಸಹಾಯಕ್ಕಾಗಿ ಕೂಗಿಕೊಂಡರು. ಸಿಟ್ಟಿನಿಂದ ಆತ ಹ್ಯಾಂಗರ್‌ನಿಂದ ಹಲ್ಲೆ ನಡೆಸಿದ. ಅಲ್ಲದೆ ತಪ್ಪಿಸಿಕೊಳ್ಳಲು ಯತ್ನಿಸಿದ ಆಕೆಯನ್ನು ನೆಲಕ್ಕೆ ಕೆಡವಿ ಎಳೆದಾಡಿದ್ದಾನೆʼʼ ಎಂದು ಮೂಲಗಳು ತಿಳಿಸಿವೆ.

ಈ ದಾಳಿಯಿಂದ ಗಗನಸಖಿ ತೀವ್ರವಾಗಿ ಗಾಯಗೊಂಡಿದ್ದರು. ನಂತರ ಪೊಲೀಸರನ್ನು ಕರೆಸಿ ಆತನನ್ನು ಅವರ ವಶಕ್ಕೆ ಒಪ್ಪಿಸಲಾಯಿತು. ದಾಳಿಗೊಳಗಾದ ಗಗನಸಖಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಅವರೊಂದಿಗೆ ಸ್ನೇಹಿತರು ಉಳಿದುಕೊಂಡಿದ್ದರು. ಈ ಹಿಂದೆಯೂ ವಿಮಾನ ಸಿಬ್ಬಂದಿ ತಮಗಾಗುತ್ತಿರುವ ಕರಾಳ ಅನುಭವಗಳ ಬಗ್ಗೆ ದೂರು ನೀಡಿದ್ದರು. ಸೂಕ್ತ ದೀಪದ ವ್ಯವಸ್ಥೆ ಇಲ್ಲದಿರುವುದು, ಪದೇ ಪದೆ ಬಾಗಿಲು ತಟ್ಟುವುದು ಇತ್ಯಾದಿ ಅನುಭವಗಳ ಬಗ್ಗೆ ಮಾಹಿತಿ ನೀಡಿದ್ದರು. ಸದ್ಯ ದುಷ್ಕರ್ಮಿ ಯಾಕಾಗಿ ಈ ದಾಳಿ ನಡೆಸಿದ್ದಾನೆ ಎನ್ನುವ ಬಗ್ಗೆ ಮಾಹಿತಿ ಲಭಿಸಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Kannada New Movie: ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಟೀಸರ್ ರಿಲೀಸ್‌

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಅಭಿನಯದ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ (Kannada New Movie) ಟೀಸರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಭರ್ಜರಿ ಫಲಿತಾಂಶವನ್ನು ಕಾಣುತ್ತಿದೆ. ನಿರ್ದೇಶಕ ಸಡಗರ ರಾಘವೇಂದ್ರ ನಿರ್ದೇಶನದ ಈ ಚಿತ್ರವು ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದ್ದು, ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ (Kannada New Movie) ಟೀಸರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಭರ್ಜರಿ ಫಲಿತಾಂಶವನ್ನು ಕಾಣುತ್ತಿದೆ.

ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ ಇದೆ ಮೊದಲ ಬಾರಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಹಂಚಿಕೊಂಡಿದೆ.

ಮೊದಲು ಮಾತನಾಡಿದ ನಿರ್ದೇಶಕ ಸಡಗರ ರಾಘವೇಂದ್ರ, ನಾನು ಕನ್ನಡದ ಹೆಸರಾಂತ ನಿರ್ದೇಶಕರ ಜತೆ ಹಲವಾರು ವರ್ಷಗಳಿಂದ ಕೆಲಸ ಮಾಡಿದ ನಂತರ ಇದೇ ಮೊದಲ ಬಾರಿಗೆ ತನ್ನ ಚೊಚ್ಚಲ ಚಿತ್ರದ ನಿರ್ದೇಶನ ಮಾಡಿದ್ದೇನೆ. ಈ ಚಿತ್ರದ ನಾಯಕನಾಗಿ ನಟಿಸಿರುವ ಕವೀಶ್ ಶೆಟ್ಟಿ ಈ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಹಾಗೂ ಚಿತ್ರದ ನಿರ್ಮಾಪಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಇನ್ನು ಇದೊಂದು ನಕ್ಸಲಿಸಂ ಬೇಸ್‌ ಆಗಿಟ್ಟಿಕೊಂಡು ಹೆಣೆದಿರುವ ಕಥೆ‌.‌ ಹಾಗಂತ ನಕ್ಸಲಿಸಂನ ವೈಭವಿಕರಿಸಿಲ್ಲ. ಯಾವುದೇ ಒಬ್ಬ ವ್ಯಕ್ತಿಯ ಕುರಿತಾದ ಚಿತ್ರವೂ ಇದಲ್ಲ. ಇದು ಆಫ್ಟರ್ “ಆಪರೇಷನ್ ಲಂಡನ್ ಕೆಫೆ”. ನೀವು ಮೊದಲು ನೋಡುವುದು ಚಿತ್ರದ ಪ್ರೀಕ್ವೆಲ್. ಮೊದಲ ಭಾಗ ಆನಂತರ ಬರಲಿದೆ. ಆ ಚಿತ್ರದ ಕುರಿತು ಈಗಾಗಲೇ ಕಾರ್ಯ ಆರಂಭವಾಗಿದೆ. ಕನ್ನಡ ಹಾಗೂ ಮರಾಠಿ ಎರಡೂ ಭಾಷೆಯಲ್ಲಿ ನೇರವಾಗಿ ಚಿತ್ರೀಕರಣ ಮಾಡಲಾಗಿದೆ‌. ಉಳಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂನಲ್ಲೂ ಚಿತ್ರ ಬಿಡುಗಡೆಯಾಗಲಿದೆ. ಕನ್ನಡ ಕಲಾವಿದರು ಮರಾಠಿ ಕಲಿತು, ಮರಾಠಿ ಕಲಾವಿದರು ಕನ್ನಡ ಕಲಿತು ಅಭಿನಯಿಸಿರುವುದು ಈ ಚಿತ್ರದ ವಿಶೇಷ.

“ಮುಂಗಾರು ಮಳೆ 2” ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಯಿತು. ನಂತರ 2020 ರಲ್ಲಿ “ಜಿಲ್ಕಾ” ಚಿತ್ರದಲ್ಲಿ ನಟಿಸಿದ್ದೆ. ಸಡಗರ ರಾಘವೇಂದ್ರ ಅವರ ಕಾರ್ಯವೈಖರಿಯನ್ನು ಹತ್ತಿರದಿಂದ ಕಂಡಿದ್ದ ನನಗೆ ಅವರ ಮೊದಲ ನಿರ್ದೇಶನದಲ್ಲಿ ನನ್ನದೊಂದು ಚಿತ್ರ ಮಾಡುವ ಆಸೆಯಿತ್ತು. ಈ ಚಿತ್ರದ ಮೂಲಕ ಅದು ಈಡೇರಿದೆ. ವಿಜಯ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ, ಹವರಾಲ್ ಹಾಗೂ ದೀಪಕ್ ರಾಣೆ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಮೇಘಾ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ ಎಂದು ನಾಯಕ ಕವೀಶ್ ಶೆಟ್ಟಿ ತಿಳಿಸಿದರು.

ನಾನು ಮರಾಠಿ ಕಲಿತು ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕರಾಗಿ ಸಡಗರ ರಾಘವೇಂದ್ರ ಅವರು ತಮ್ಮ ಮೊದಲ ನಿರ್ದೇಶನದಲ್ಲೇ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಒಳ್ಳೆಯ ತಂಡದ ಜತೆಗೆ ಕೆಲಸ ಮಾಡಿರುವ ಖುಷಿಯಿದೆ ಎಂದರು ಮೇಘಾ ಶೆಟ್ಟಿ.

ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಮಾತನಾಡಿ ಈ ಚಿತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದರು.

ಇದನ್ನೂ ಓದಿ: KPSC Exams : ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಛಾಯಾಗ್ರಾಹಕ ಎನ್.ಡಿ. ನಾಗಾರ್ಜುನ್, ಸಾಹಸ ನಿರ್ದೇಶಕ ಮಾಸ್ ಮಾದ ಹಾಗೂ ಚಿತ್ರದಲ್ಲಿ ನಟಿಸಿರುವ ಅರ್ಜುನ್ ಕಾಪಿಕ್ಕಾಡ್, ವಿರಾಟ್ ಮಡಕೆ ಮುಂತಾದವರು “ಆಪರೇಷನ್ ಲಂಡನ್ ಕೆಫೆ” ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿ, ಚಿತ್ರದ ಮೇಕಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Continue Reading

ಬೆಂಗಳೂರು

KPSC Exams : ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

KPSC Exam : ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರ ವಿವರ ಹೀಗಿದೆ

VISTARANEWS.COM


on

By

KPSC announces competitive exam schedule for various posts recruitment process
Koo

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC Exam) ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗಾಗಿ ಕಳೆದ ಮಾರ್ಚ್‌ 13ರಂದು ಅಧಿಸೂಚನೆ ಹೊರಡಿಸಿತ್ತು. ಇದೀಗ ಅದಕ್ಕೆ ಸಂಬಂಧಿಸಿದಂತೆ ಪರೀಕ್ಷಾ ವೇಳಾಪಟ್ಟಿಯನ್ನು (Time Table) ಪ್ರಕಟಿಸಿದೆ.

ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ, ಜಲಸಂಪನ್ಮೂಲ ಇಲಾಖೆ, ಅಂತರ್ಜಲ ನಿರ್ದೇಶನಾಲಯ, ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಆಯುಷ್ ಇಲಾಖೆಯಲ್ಲಿನ ಹೋಮಿಯೋಪತಿ, ಪದವಿ ಪೂರ್ವ ವಿದ್ಯಾರ್ಹತೆಯ ವಿವಿಧ ಇಲಾಖೆ, ಹೀಗೆ ಹಲವು ಇಲಾಖೆಗಳ ಗ್ರೂಪ್‌ ಎ, ಗ್ರೂಪ್‌ ಬಿ, ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧ, ಇದೀಗ ಕೆಪಿಎಸ್‌ಸಿ ನೇಮಕ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವೇಳಾಪಟ್ಟಿ ಬಿಡುಗಡೆ ಮಾಡಿದೆ.

KPSC announces competitive exam schedule for various posts recruitment process
KPSC announces competitive exam schedule for various posts recruitment process

ವೇಳಾಪಟ್ಟಿ ಹೀಗಿದೆ…

1) ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಬಾಯ್ಲರುಗಳ ಸಹಾಯಕ ನಿರ್ದೇಶಕರು 03 ಹುದ್ದೆಗಳು (ಉಳಿಕೆ ಮೂಲ ವೃಂದ)ಕ್ಕೆ- ಸೆಪ್ಟೆಂಬರ್‌ 18ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
2) ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂ ವಿಜ್ಞಾನಿ (ಉಳಿಕೆ ಮೂಲ ವೃಂದ) – 10 ಹುದ್ದೆಗಳು- ಸೆಪ್ಟೆಂಬರ್‌ 19 ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
3) ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳು (ಉಳಿಕೆ ಮೂಲ ವೃಂದ) ಸೆಪ್ಟೆಂಬರ್‌ 26 ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
4) ಕಾರ್ಖಾನೆಗಳು, ಬಾಯ್ಲರ್‌ಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು 07 ಹುದ್ದೆಗಳು (ಉಳಿಕೆ ಮೂಲ ವೃಂದ) ಸೆಪ್ಟೆಂಬರ್‌ 27 ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
5) ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರು 24 ಹುದ್ದೆಗಳು (ಉಳಿಕೆ ಮೂಲ ವೃಂದ) ಅಕ್ಟೋಬರ್‌ 5ರಂದು ಪರೀಕ್ಷೆ ನಡೆಯಲಿದೆ.
6) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ-1) 92 ಹುದ್ದೆಗಳು (ಉಳಿಕೆ ಮೂಲ ವೃಂದ) ಅಕ್ಟೋಬರ್‌ 6 ರಂದು ಪರೀಕ್ಷೆ ನಡೆಯಲಿದೆ.

KPSC announces competitive exam schedule for various posts recruitment process
KPSC announces competitive exam schedule for various posts recruitment process
KPSC announces competitive exam schedule for various posts recruitment process
KPSC announces competitive exam schedule for various posts recruitment process
KPSC announces competitive exam schedule for various posts recruitment process
KPSC announces competitive exam schedule for various posts recruitment process

ಕೆಸೆಟ್- 2024ಕ್ಕೆ ಅರ್ಜಿ ಸಲ್ಲಿಸಲು ಆ.28ರವರೆಗೆ ವಿಸ್ತರಣೆ

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್- 24)ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ಆಗಸ್ಟ್ 28ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಆ.22 ಕೊನೆ ದಿನವಾಗಿತ್ತು. ಸಾರ್ವಜನಿಕರ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, ಆ.30ರೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಅರ್ಹತಾ ನಿಬಂಧನೆ, ಪರೀಕ್ಷಾ ದಿನಾಂಕ ಇತ್ಯಾದಿ ವಿವರಗಳಿಗೆ ಜುಲೈ 13ರಂದು ಹೊರಡಿಸಿದ್ದ ಅಧಿಸೂಚನೆಯನ್ನು ನೋಡುವಂತೆ ತಿಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Green Ammonia Export
ದೇಶ2 mins ago

Green Ammonia Export: ಜಪಾನ್‌ಗೆ ಇನ್ನು ಭಾರತದಿಂದ ಹಸಿರು ಅಮೋನಿಯಾ ರಫ್ತು! ಒಪ್ಪಂದಕ್ಕೆ ಸಹಿ

TVK Party Flag Unveils
ರಾಜಕೀಯ7 mins ago

TVK Party Flag Unveils: ತಮ್ಮ ರಾಜಕೀಯ ಪಕ್ಷದ ಧ್ವಜ, ಚಿಹ್ನೆ ಅನಾವರಣಗೊಳಿಸಿದ ನಟ ವಿಜಯ್

Viral Video
Latest11 mins ago

Viral Video: ಅಪ್ಪ-ಮಗನ ಗುದ್ದಾಟದಿಂದ ಮೂವರು ಅಮಾಯಕರ ಸ್ಥಿತಿ ಗಂಭೀರ!

Neeraj Chopra
ಕ್ರಿಕೆಟ್26 mins ago

Neeraj Chopra: ಬ್ರ್ಯಾಂಡ್ ಮೌಲ್ಯದಲ್ಲಿ ಹಾರ್ದಿಕ್​ ಪಾಂಡ್ಯ ಹಿಂದಿಕ್ಕಿದ ನೀರಜ್​ ಚೋಪ್ರಾ

cylinder blast
ಬೆಂಗಳೂರು39 mins ago

Gas Cylinder Blast: ಸಿಲಿಂಡರ್‌ ಸ್ಫೋಟಕ್ಕೆ ಸುಟ್ಟುಕರಕಲಾದ ವ್ಯಕ್ತಿ; ಮನೆ ಗೋಡೆ ಬಿದ್ದು ಮಕ್ಕಳು ಗಾಯ

DCM DK Shivakumar
ಪ್ರಮುಖ ಸುದ್ದಿ41 mins ago

DK Shivakumar: ಡಿಕೆ ಶಿವಕುಮಾರ್‌ಗೆ ಇಂದು ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ನೋಟೀಸ್

Kannada New Movie
ಬೆಂಗಳೂರು46 mins ago

Kannada New Movie: ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಟೀಸರ್ ರಿಲೀಸ್‌

Kalki 2898 AD
ಸಿನಿಮಾ52 mins ago

Kalki 2898AD: ಎರಡು ಪ್ರಮುಖ ಒಟಿಟಿಗಳಲ್ಲಿ ಹಲವು ಭಾಷೆಗಳಲ್ಲಿ ಲಗ್ಗೆ ಇಟ್ಟ ಕಲ್ಕಿ 2898 ಎಡಿ!

murder case
ಚಿಕ್ಕಮಗಳೂರು1 hour ago

Murder Case : ಆಸ್ತಿಗಾಗಿ ಸಹೋದರನ ಕಣ್ಣಿಗೆ ಖಾರದ ಪುಡಿ ಎರಚಿ, ಕೊಚ್ಚಿ ಸಾಯಿಸಿದ ರಾಕ್ಷಸಿ ಸಹೋದರಿಯರು!

Kolkata Doctor Murder Case
ಕ್ರೀಡೆ2 hours ago

Kolkata Doctor Murder Case: ‘ಖಾಸಗಿ ಅಂಗಕ್ಕೆ ಹೊಡೆದು ಗಲ್ಲಿಗೇರಿಸಿ’; ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಕ್ರಿಕೆಟಿಗ ಚಹಲ್​ ಪೋಸ್ಟ್​

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌