ಬೆಂಗಳೂರು: ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ. ಅವರಿಂದ 20 ಲಕ್ಷ ರೂ. ಬೆಲೆ ಬಾಳುವ ಎಂ.ಡಿ.ಎಂ.ಎ ಹರಳುಗಳನ್ನು ವಶಪಡಿಸಿಕೊಂಡಿದ್ದಾರೆ.
ಸಿಸಿಬಿಯ ಮಾದಕ ವಸ್ತು ನಿಗ್ರಹ ದಳ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಗಳೂರಿನ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ತಂಡವು ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕೇರಳ ರಾಜ್ಯದಿಂದ ಕಡಿಮೆ ಬೆಲೆಗೆ ಎಂ.ಡಿ.ಎಂ.ಎ ಹರಳುಗಳನ್ನು ಖರೀದಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರತಿ ಗ್ರಾಂ ಗೆ ಸುಮಾರು ₹8 ರಿಂದ ₹10 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಹೆಚ್ಚಿನ ಬೆಲೆಗೆ ಈ ಮಾದಕ ವಸ್ತಗಳನ್ನು ಮಾರಾಟ ಮಾಡಿ ಅಕ್ರಮವಾಗಿ ಹೆಚ್ಚು ಹಣ ಸಂಪಾದಿಸುತ್ತಿದ್ದರೆಂದು ತಿಳಿದುಬಂದಿತ್ತು.
ಈ ಹಿನ್ನೆಲೆಯಲ್ಲಿ ಸಿ.ಸಿ.ಬಿ ಅಧಿಕಾರಿಗಳು ತನಿಖೆ ಆರಂಭಿಸಿದರು. ಮಾದಕ ವಸ್ತುಗಳ ಮಾರಾಟ/ಸಾಗಾಟ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿತ್ತು. ಈ ಪ್ರಕರಣದ ವಿರುದ್ಧ ತನಿಖೆ ಮುಂದುವರಿದಿದ್ದು ಸದ್ಯ ಇಬ್ಬರು ಅಂತರ್ ರಾಜ್ಯ ಡ್ರಗ್ಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಹಾಗೂ ಮಾದಕ ವಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಸಿ.ಸಿ.ಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.
ಇದನ್ನೂ ಓದಿ: ಡ್ರಗ್ಸ್ ಸೇವನೆ, ರೇವ್ ಪಾರ್ಟಿ ಆರೋಪ, ಪಬ್ ಮೇಲೆ ಪೊಲೀಸರ ದಾಳಿ