ಬೆಂಗಳೂರು: ಬೆಂಗಳೂರಿಗೆ ಇತ್ತೀಚೆಗೆ ಡ್ರಗ್ಸ್ ಮಾರಾಟಗಾರರ ಸಂಖ್ಯೆ ಹೆಚ್ಚಾಗಿತ್ತಿದೆ. ಕುಮಾರ್‌ಸ್ವಾಮಿ ಲೇಔಟ್ ಬಳಿ ಅಮಾಯಕ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಒಂದು ಗುಂಪು, ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಗಿರಿನಗರ ಬಳಿ ಡ್ರಗ್ಸ್ ಮಾರುತ್ತಿದ್ದ ಮತ್ತೊಂದು ಗುಂಪನ್ನು ಪೊಲೀಸರು ಬಂಧಿಸಿದ್ದಾರೆ.
ಕುಮಾರಸ್ವಾಮಿ ಲೇಔಟ್:
ಕುಮಾರಸ್ವಾಮಿ ಲೇಔಟ್ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೂ ₹10 ಲಕ್ಷ ಮೌಲ್ಯದ ಡ್ರಗ್ಸ್ ಕೂಡ ಈ ವೇಳೆ ಜಪ್ತಿ ಮಾಡಲಾಗಿದೆ. ಬಂಧಿತರಾದ ಆರೋಪಿಗಳನ್ನು ಸುರೇಂದ್ರ ಹಾಗು ರಾಜೇಶ ಎಂದು ಗುರುತಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಈ ಆರೋಪಿಗಳು ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಅವರಿಗೆ ಡ್ರಗ್ಸ್ ಮಾರಾಟ ಮಾಡಲಾಗುತ್ತಿತ್ತು. ಕಾಲೇಜಿ ವಿದ್ಯಾರ್ಥಿಗಳನ್ನು ಸಾದಿ ತಪ್ಪಿಸಿ ಈ ರೀತಿಯ ದುಷ್ಚಟಗಳಿಗೆ ಒಳಪಡಿಸಲಾಗುತ್ತಿತ್ತು.
ಈ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಖಚಿತ ಮಾಹಿತಿ ಸಿಕ್ಕ ಕೂಡಲೇ ಸಿಸಿಬಿ ಅಧಿಕಾರಿಗಳು ಕ್ರಮ ಕೈಗೊಂಡಿಂದ್ದಾರೆ. ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಹಾಗೂ ಐದು ಕೆಜಿ ಗಾಂಜಾ, 250 ಗ್ರಾಂ ಹ್ಯಾಶಿಶ್ ಆಯಿಲ್, 20 ಎಲ್ಎಸ್‌ಡಿ ಸ್ಟ್ರಿಪ್ಸ್ ವಶಪಡಿಸಿಕೊಂಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಮೂವರು ಆರೋಪಿಗಳು ಎಸ್ಕೇಪ್ ಆಗಿದ್ದು, ಅವರನ್ನು ಶೀಘ್ರವೇ ಸೆರೆ ಹಿಡಿಯುವುದಾಗಿ ಪೊಲೀಸರು ತಿಳಿಸಿದ್ದಾರೆ.
ಗಿರಿನಗರ
ಐಷಾರಾಮಿ ಜೀವನಕ್ಕಾಗಿ ಅಕ್ರಮ ಮಾದಕ ವಸ್ತು ಮಾರಾಟದ ದಂಧೆಯಲ್ಲಿ ತೊಡಗಿದ್ದ ಆರೋಪಿಗಳನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಐಷಾರಾಮಿ ಜೀವನ ನಡೆಸುವ ಆಸೆಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಇದರಿಂದ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದರು. ತಮ್ಮ ಐಷಾರಾಮಿ ಜೀವನಕ್ಕಾಗಿ ಅಮಯಾಕರನ್ನು ಬಲಿ ನೀಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೊಸಕೆರೆಹಳ್ಳಿ ಬಳಿ ಕಾರ್‌ನಲ್ಲಿ ಮಾದಕ ವಸ್ತಗಳನ್ನು ಸಾಗಿಸುತ್ತಿರುವ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿಗಳಾದ ವಿ. ಮನೋರಂಜಿತ್ ಬಿನ್ ವೆಂಕಟೇಶ (20) ಹಾಗೂ ಎಂ. ಸುಗೇಶ್ ಕುಮಾರನ್ (20) ಎಂದು ಗುರುತಿಸಲಾಗಿದೆ.
ಈ ಬಗ್ಗೆ ಗಿರಿನಗರ ಠಾಣೆಯ ಪಿಎಸ್‌ಐ ಡಿ. ರಾಕೇಶ್ ಅವರು ಬಾತ್ಮೀದಾರರಿಂದ ಲಭಿಸಿದ ಮಾಹಿತಿಯ ಮೇರೆಗೆ ದೂರು ದಾಖಲಿಸಿದ್ದರು. ಈ ಬಗ್ಗೆ ಕ್ರಮ ಕೈಗೊಂಡ ಪೊಲೀಸರು ದಾಳಿ ನಡೆಸಿದ್ದರು. ದಾಳಿಯಲ್ಲಿ ಒಟ್ಟು 51.44 ಗ್ರಾಂ ತೂಕದ ಮಾದಕ ವಸ್ತು ಎಕ್ಸ್‌ಟಸಿ ಟ್ಯಾಬ್ಲೆಟ್ಸ್, 3,850 ನಗದು ಹಣ, 2 ಐ-ಘೋನ್‌ಗಳು ಹಾಗೂ ಒಂದು ಕಾರ್ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: Drug peddler ಬಂಧನ! ₹20 ಲಕ್ಷ ಮೌಲ್ಯದ ಡ್ರಗ್ಸ್ ವಶ