ಬೆಂಗಳೂರು: ಬೆಂಗಳೂರಿನಲ್ಲಿ ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಕಡಿಮೆ ಸಮಯದಲ್ಲಿ ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಆರೋಪಿಗಳು (Drug peddling) ಈ ದಂಧೆಗಿಳಿದಿದ್ದರು.
ಇದಕ್ಕಾಗಿ ನೈಜೀರಿಯನ್ ಪ್ರಜೆಗಳ ಬಳಿ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿದ್ದರು. 4 ರಿಂದ 5 ಸಾವಿರ ರೂ.ಗಳಿಗೆ ಎಂಡಿಎಂಎ ಕ್ರಿಸ್ಟೆಲ್ ಖರೀದಿ ಮಾಡುತ್ತಿದ್ದರು. ಅದನ್ನು 10 ರಿಂದ 12 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು.
ಪರಿಚಯಸ್ಥ ಗಿರಾಕಿಗಳು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಕೃತ್ಯವೆಸಗುತ್ತಿದ್ದರು. ಬಂಧಿತರಿಂದ 10 ಲಕ್ಷ ಮೌಲ್ಯದ 60 ಗ್ರಾಂ ಎಂಡಿಎಂಎ ಕ್ರಿಸ್ಟೆಲ್ ವಶಪಡಿಸಿಕೊಳ್ಳಲಾಗಿದೆ. ಬೇಗೂರು ಠಾಣೆಯಲ್ಲಿ ಎನ್ ಡಿ ಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.