Dry day order : ಚುನಾವಣೆ ಹೆಸರಲ್ಲಿ 48 ಗಂಟೆ ಮದ್ಯ ಮಾರಾಟ ನಿಷೇಧ‌ ಬೇಕಾ?; ಆಕ್ಷೇಪ ಸರಿ ಎಂದ ಕೋರ್ಟ್ - Vistara News

ಬೆಂಗಳೂರು

Dry day order : ಚುನಾವಣೆ ಹೆಸರಲ್ಲಿ 48 ಗಂಟೆ ಮದ್ಯ ಮಾರಾಟ ನಿಷೇಧ‌ ಬೇಕಾ?; ಆಕ್ಷೇಪ ಸರಿ ಎಂದ ಕೋರ್ಟ್

Dry day order : ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮತ ಹಾಕಲಿರುವ ಒಟ್ಟು ಮತದಾರರು 16000. ಆದರೆ, ಇಡೀ ಬೆಂಗಳೂರಿನ ಅರ್ಧ ಭಾಗದಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಆದೇಶ ಹೊರಡಿಸಿರುವುದು ಚರ್ಚೆಗೆ ಕಾರಣವಾಗಿದೆ.

VISTARANEWS.COM


on

Dry day order
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಫೆಬ್ರವರಿ 16ರಂದು ನಡೆಯಲಿರುವ ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗಾಗಿ (MLC Election) ಎರಡು ದಿನಗಳ ಕಾಲ ‌ ಪ್ರದೇಶ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ (Dry day order) ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ನಡುವೆ ಕೆಲವರು ಇದನ್ನು ಪ್ರಶ್ನಿಸಿ ಹೈಕೋರ್ಟ್‌ (Karnataka high Court) ಮೊರೆ ಹೊಕ್ಕಿದ್ದಾರೆ. ಈ ಪ್ರಕರಣವನ್ನು ಗಮನಿಸಿದ ಹೈಕೋರ್ಟ್‌ ಕೂಡಾ ಈ ಆದೇಶ ಮೇಲ್ನೋಟಕ್ಕೆ ಸೂಕ್ತವಾಗಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಮಂಗಳವಾರ ಸಲ್ಲಿಕೆಯಾದ ಅರ್ಜಿಗೆ ಸಂಬಂಧಿಸಿದ ವಿಚಾರಣೆಯನ್ನು ಫೆ. 14ಕ್ಕೆ ಮುಂದೂಡಿದೆ.

ಚುನಾವಣೆ ನಡೆಯಲಿರುವುದು ಫೆಬ್ರವರಿ 16ರಂದು. ಆದರೆ, ಫೆ. 14ರ ಸಂಜೆಯಿಂದಲೇ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧಕ್ಕೆ ಆದೇಶ ಹೊರಡಿಸಲಾಗಿದೆ. ಪ್ರೇಮಿಗಳ ದಿನಾಚರಣೆಯ ದಿನವೂ ಮದ್ಯ ನಿಷೇಧ ಜಾರಿಯಲ್ಲಿರುತ್ತದೆ ಎಂಬ ಕಾರಣಕ್ಕಾಗಿ ಈ ಆದೇಶ ಚರ್ಚೆಗೆ ಕಾರಣವಾಗಿತ್ತು. ಅದೇ ಹೊತ್ತಿಗೆ ಒಂದು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ . ಎರಡು ದಿನಗಳ ಮದ್ಯ ಮಾರಾಟ ನಿಷೇಧ ಬೇಕಾ ಎಂಬ ಚರ್ಚೆಯೂ ಇತ್ತು.

ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಫೆಬ್ರವರಿ 1ರಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬೃಹತ್‌ ಬೆಂಗಳೂರು ಹೋಟೆಲ್‌ಗಳ ಸಂಘಟನೆಯ ಕಾರ್ಯದರ್ಶಿ ವೀರೇಂದ್ರ ಎನ್‌.ಕಾಮತ್‌ ಸೇರಿದಂತೆ ಒಟ್ಟು ನಾಲ್ವರು ಹೈಕೋರ್ಟ್‌ ಮೊರೆ ಹೊಕ್ಕಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಇದನ್ನೂ ಓದಿ: Valentines Day : ಪ್ರೇಮಿಗಳಿಗೆ ಭಾರಿ ನಿರಾಸೆ; ವ್ಯಾಲೆಂಟೈನ್ಸ್‌ ಡೇ ದಿನ ಮದ್ಯ ಸಿಗಲ್ಲ!

ಅರ್ಜಿದಾರರ ವಾದ ಏನಾಗಿತ್ತು?

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಹಿರಿಯ ವಕೀಲ ಅರುಣ್‌ ಶ್ಯಾಮ್‌ ಅವರು. ಅವರು ಹಲವಾರು ವಿಚಾರಗಳನ್ನು ತಮ್ಮ ದಾವೆಯಲ್ಲಿ ಉಲ್ಲೇಖ ಮಾಡಿದ್ದಾರೆ.

  1. ಉಪಚುನಾವಣೆಯು ಸಾರ್ವತ್ರಿಕ ಚುನಾವಣೆಯಲ್ಲ. ಇದರಲ್ಲಿ ಕೇವಲ 16 ಸಾವಿರ ಮತದಾರರು ಮತ ಚಲಾಯಿಸಲು ಅರ್ಹತೆ ಹೊಂದಿದ್ದಾರೆ.
  2. ಹೀಗಾಗಿ, 48 ಗಂಟೆಗಳ ಅವಧಿಯವರೆಗೆ ಮದ್ಯ ಮಾರಾಟ ನಿಷೇಧಿಸಿದರೆ ವರ್ತಕರು, ಉದ್ದಿಮೆದಾರರು ಸಾಕಷ್ಟು ತೊಂದರೆ ಅನುಭವಿಸಲಿದ್ದಾರೆ.
  3. ಪರಿಷತ್‌ ಚುನಾವಣೆಯಲ್ಲಿ ಬಾಂಬೆ ಹೈಕೋರ್ಟ್ ಇಂತಹ ನಿಷೇಧದ ಅವಧಿಯನ್ನು ಒಂದು ದಿನಕ್ಕೆ ಸೀಮಿತಗೊಳಿಸಿರುವ ಪೂರ್ವನಿದರ್ಶನದ ತೀರ್ಪಿದೆ. ಹೀಗಾಗಿ, ಈ ಪ್ರಕರಣದಲ್ಲೂ ಕೇವಲ ಮತದಾನದ ದಿನದಂದು ಮಾತ್ರವೇ ನಿಷೇಧ ಅನ್ವಯಿಸಲು ನಿರ್ದೇಶಿಸಬೇಕು.
  4. ಅರ್ಜಿದಾರರು ಎಂದಿನಿಂತೆ ಉಳಿದ ಅವಧಿಯಲ್ಲಿ ಚಿಲ್ಲರೆ, ಸಗಟು ವ್ಯಾಪಾರ, ಹೋಟೆಲ್‌, ಬಾರ್ ಅಂಡ್‌ ರೆಸ್ಟೋರೆಂಟ್‌ಗಳನ್ನು ತೆರೆಯಲು ಅನುಮತಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಬೇಕು.
dry day order high court

ಅರ್ಜಿದಾರರ ಆಕ್ಷೇಪದಲ್ಲಿ ಹುರುಳಿದೆ ಎಂದು ಮೌಖಿಕವಾಗಿ ಹೇಳಿದ ಕೋರ್ಟ್‌

ಕೇವಲ 16 ಸಾವಿರ ಮತದಾರರು ಇರುವ ಚುನಾವಣೆಗೆ ಸಂಬಂಧಿಸಿ ಎರಡು ದಿನ ಮದ್ಯ ನಿಷೇಧ ಮಾಡಿರುವುದು ತಪ್ಪು ಎಂಬ ಅರ್ಜಿದಾರರ ವಾದವನ್ನು ಹೈಕೋರ್ಟ್‌ ನ್ಯಾಯಮೂರ್ತಿಗಳು ಕೂಡಾ ಮೌಖಿಕವಾಗಿ ಒಪ್ಪಿಕೊಂಡಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್‌, “ಈ ಕುರಿತಂತೆ ಕಾನೂನು ಏನು ಹೇಳುತ್ತದೆ ಎಂಬುದನ್ನು ವಿವರಿಸಿ” ಎಂದು ಸರ್ಕಾರದ ಪರ ವಕೀಲೆ ಸಾವಿತ್ರಮ್ಮ ಅವರಿಗೆ ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 14ಕ್ಕೆ ಮುಂದೂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Karnataka Weather : ರಾಜ್ಯಾದ್ಯಂತ ಇನ್ನೂ ಮೂರು ದಿನಗಳು ಗುಡುಗು ಸಹಿತ ಮಳೆಯು (Rain News) ಅಬ್ಬರಿಸಲಿದೆ. ಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮೇ 14ರವರೆಗೆ ಗುಡುಗು ಸಹಿತ ಮಿಂಚು ಮತ್ತು ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Karnataka Weather Forecast) ನೀಡಿದೆ.

ಕರಾವಳಿಯಲ್ಲಿ ಮೇ 13ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಮೇ 12ರಿಂದ 13ರವರೆಗೆ, ದಕ್ಷಿಣ ಒಳನಾಡಿನಲ್ಲಿ ಮೇ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಿಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 32 ಮತ್ತು 21 ಡಿ.ಸೆ ಇರಲಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

Child Actor Master OM: ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಹಾಗೂ ಬಾಲ ನಟ ಮಾಸ್ಟರ್ ಓಂ‌, ಇದೀಗ 10ನೇ ತರಗತಿಯ ಬೋರ್ಡ್‌ ಎಕ್ಸಾಂ (ಐಸಿಎಸ್‌ಇ ಸಿಲಬಸ್)ನಲ್ಲಿ 97% ಅಂಕ ಗಳಿಸುವ ಮೂಲಕ ಬೆಂಗಳೂರಿನ ಆಚಾರ್ಯ ಪಾಠಶಾಲೆಯ ಟಾಪರ್ಸ್‌ ಲಿಸ್ಟ್‌ಗೆ ಸೇರಿದ್ದಾನೆ. ನಟನೆ, ಮಾಡೆಲಿಂಗ್‌ನಂಥ ಪಠ್ಯೇತರ ಚಟುವಟಿಕೆ ತನ್ನ ಓದಿಗೆ ಅಡ್ಡಿಯಾಗಲಿಲ್ಲ ಎನ್ನುವ ಓಂ, ಮುಂದಿನ ತರಗತಿಗಳಲ್ಲೂ ಉತ್ತಮ ಅಂಕ ಗಳಿಸುವ ಗುರಿ ಹೊಂದಿದ್ದಾನೆ.

VISTARANEWS.COM


on

ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಮತ್ತು ಬಾಲ ನಟ ಓಂ
Koo

ಬೆಂಗಳೂರು: ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಹಾಗೂ ಬಾಲ ನಟನಾಗಿದ್ದ (Child Actor Master OM) ಮಾಸ್ಟರ್ ಓಂ, ಇದೀಗ 10ನೇ ತರಗತಿ ಬೋರ್ಡ್‌ ಎಕ್ಸಾಂ (ಐಸಿಎಸ್‌ಇ ಸಿಲಬಸ್) ಪರೀಕ್ಷೆಯಲ್ಲಿ 97% ಅಂಕ ಗಳಿಸುವ ಮೂಲಕ ಪ್ರತಿಷ್ಠಿತ ಆಚಾರ್ಯ ಪಾಠಶಾಲೆಯ ಟಾಪರ್ಸ್‌ ಲಿಸ್ಟ್‌ಗೆ ಸೇರಿದ್ದಾನೆ. ಐಸಿಎಸ್‌ಸಿ ಸಿಲಬಸ್‌ನಲ್ಲಿ ಓದುವವರು ಕನ್ನಡವೆಂದರೇ ಕಬ್ಬಿಣದ ಕಡಲೆ ಎಂದು ಭಾವಿಸುತ್ತಾರೆ. ಆದರೆ, ಓಂ ಕನ್ನಡದಲ್ಲಿ 100 ಕ್ಕೆ 97 ಅಂಕಗಳನ್ನು ಗಳಿಸುವ ಮೂಲಕ ಇದನ್ನು ಸಾಧಿಸಿ ತೋರಿಸಿದ್ದಾನೆ. ಗಣಿತ ಹಾಗೂ ಹಿಸ್ಟರಿಯಲ್ಲಿ 100ಕ್ಕೆ 99 ಮಾರ್ಕ್ಸ್‌ ಗಳಿಸಿದ್ದಾನೆ. ಇನ್ನುಳಿದ ಎಲ್ಲಾ ವಿಷಯಗಳಲ್ಲೂ ಕ್ರಮವಾಗಿ 95, 96, 97 ಹೀಗೆ ಅತ್ಯಧಿಕ ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಇದಕ್ಕೆಲ್ಲಾ ಶಾಲೆಯ ಪ್ರಾಂಶುಪಾಲರು, ಟೀಚರ್ಸ್‌ ಹಾಗೂ ಪೋಷಕರ ಸಹಕಾರವೇ ಕಾರಣ ಎಂದು ಸಂತಸ ಹಂಚಿಕೊಂಡಿದ್ದಾನೆ.

ಓಂ ಸಿನಿಮಾ, ಫ್ಯಾಷನ್‌ ಜರ್ನಿ

ಮದುವೆಯ ಮಮತೆಯ ಕರೆಯೊಲೆ, ಲೀ, ವೇಷಧಾರಿ, ಪ್ರೇಮಂ, ಸಂತೋಷ-ಸಂಗೀತ, ಕಾಳಿದಾಸ ಕನ್ನಡ ಮೇಷ್ಟ್ರು, ಕಾಫಿ(ತಮಿಳು) ಸೇರಿದಂತೆ 10ಕ್ಕೂ ಹೆಚ್ಚು ಸಿನಿಮಾ, 35ಕ್ಕೂ ಅಧಿಕ ಜಾಹೀರಾತು ಮತ್ತು ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್‌ ಶೋಗಳಲ್ಲಿ ಸೆಲೆಬ್ರೆಟಿ ಶೋ ಸ್ಟಾಪರ್‌ ಆಗಿ ವಾಕ್‌ ಮಾಡಿರುವ ಓಂ ಓದಿನಲ್ಲೂ ಮುಂದಿರುವುದು ಸಿನಿಮಾ ಬಾಲ ನಟ-ನಟಿಯರಿಗೆ ಮಾದರಿಯಾಗುವಂತಿದೆ. ಇವೆಲ್ಲದರ ಜೊತೆಗೆ ಶಾಲೆಯ ಕ್ಯಾಪ್ಟನ್‌ಶಿಪ್‌ ಹಾಗೂ ತೇಜಸ್ವಿ ಸೂರ್ಯರ ಸೌತ್‌ ಸ್ಕೂಲ್‌ ಲೀಡರ್ಸ್‌ ಟೀಮ್‌ನ ಸಾಮಾಜಿಕ ಕಾರ್ಯಾಗಾರಗಳಲ್ಲೂ ಶಾಲೆಯ ಪ್ರತಿನಿಧಿಯಾಗಿ ಪಾಲ್ಗೊಂಡ ಹೆಗ್ಗಳಿಕೆ ಓಂನದು.

ಇದನ್ನೂ ಓದಿ | Girls Pleats Skirts Fashion: ಹುಡುಗಿಯರ ಮೆಚ್ಚಿನ ಆಯ್ಕೆ ಕೊರಿಯನ್‌ ಪ್ಲೀಟ್ಸ್‌ ಸ್ಕರ್ಟ್ಸ್‌ಗಳು

ನಟನೆ, ಮಾಡೆಲಿಂಗ್‌ನಂಥ ಪಠ್ಯೇತರ ಚಟುವಟಿಕೆ ತನ್ನ ಓದಿಗೆ ಅಡ್ಡಿಯಾಗಲಿಲ್ಲ ಎನ್ನುವ ಓಂ, ಮುಂದಿನ ತರಗತಿಗಳಲ್ಲೂ ಉತ್ತಮ ಅಂಕ ಗಳಿಸುವ ಗುರಿ ಹೊಂದಿದ್ದಾನೆ. ಹಾಗೆಯೇ, ನಟನೆ-ಮಾಡೆಲಿಂಗ್‌ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಬಯಕೆಯನ್ನೂ ವ್ಯಕ್ತಪಡಿಸಿದ್ದಾನೆ.

Continue Reading

ಬೆಂಗಳೂರು

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

LuLu Fashion Week 2024: ಬೆಂಗಳೂರಿನ ಲುಲು ಮಾಲ್‌ನಲ್ಲಿ ಮೇ 10ರಿಂದ 12ರವರೆಗೆ ಮೂರು ದಿನಗಳವರೆಗೆ ಲುಲು ಫ್ಯಾಷನ್ ವೀಕ್ʼ 2ನೇ ಆವೃತ್ತಿ ಆಯೋಜಿಸಲಾಗಿದೆ. ಶನಿವಾರ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮದಲ್ಲಿ ವಿವಿಧ ಬ್ರ್ಯಾಂಡ್‌ಗಳ ಫ್ಯಾಷನ್ ಶೋ ನಡೆಯಿತು. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ.

VISTARANEWS.COM


on

Koo

ಬೆಂಗಳೂರು: ನಗರದ ಲುಲು ಮಾಲ್‌ನಲ್ಲಿ ʼಲುಲು ಫ್ಯಾಷನ್ ವೀಕ್ʼ 2ನೇ ಆವೃತ್ತಿಯ (LuLu Fashion Week 2024) ಭಾಗವಾಗಿ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮವು 2ನೇ ದಿನವೂ ಅದ್ಧೂರಿಯಾಗಿ ನೆರವೇರಿತು. ಕಲರಫುಲ್ ಸಂಜೆಯಲ್ಲಿ ಮೂಡಿಬಂದ ಫ್ಯಾಷನ್ ಶೋ ನೋಡಲು ಸಾವಿರಾರು ಜನರು ಆಗಮಿಸಿದ್ದರು.

ಮೇ 10ರಂದು ಆರಂಭವಾದ ಕಾರ್ಯಕ್ರಮ ಮೇ 12 ಭಾನುವಾರದವರೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ. ಶನಿವಾರ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮದಲ್ಲಿ ನುವಾ, ಪೆಪೆ ಜೀನ್ಸ್ ಲಂಡನ್, ಪೀಟರ್ ಇಂಗ್ಲೆಂಡ್, ಅಮೆರಿಕನ್ ಟೂರಿಸ್ಟರ್, ಕ್ರೊಯ್ಡಾನ್ ಸೇರಿದಂತೆ ಹಲವಾರು ಬ್ರ್ಯಾಂಡ್‌ಗಳ ಫ್ಯಾಷನ್ ಶೋ ನಡೆಯಿತು. ಜೊತೆಗೆ ಬಿಗ್ ಚೋಕೋ ಡೇಸ್ ಲೋಗೋ ಲಾಂಚ್ ಮಾಡಲಾಯಿತು. ನಂತರ ಫ್ಯಾಷನ್ ಫೋರಂನಲ್ಲಿ ಭವಿಷ್ಯದ ಫ್ಯಾಷನ್ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ಚಂದನವನದ ನಟ ರಿಷಿ ಭಾಗಿಯಾಗಿದ್ದರು.

ಇನ್ನು ಹಲವಾರು ಕಲೆಗಳಿಗೆ ಕಾರ್ಯಕ್ರಮ ವೇದಿಕೆಯಾಯಿತು. ವಿವಿಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಲುಲು ಮಾಲ್ ಅಂಗಳದಲ್ಲಿ ನಡೆದ ಫ್ಯಾಷನ್ ಶೋನಲ್ಲಿ ವಿಭಿನ್ನವಾದ ಬಟ್ಟೆ ತೊಟ್ಟು ನಾರಿಯರು ಕಂಗೊಳಿಸಿದರು. ವಾರಾಂತ್ಯವಾಗಿದ್ದರಿಂದ ಹೆಚ್ಚಿನ ಜನರು ಆಗಮಿಸಿದ್ದು, ಮಕ್ಕಳು ಸಹ ಖುಷಿಪಟ್ಟರು.

ಇದನ್ನೂ ಓದಿ | Hair Color Fashion: ವೈರಲ್‌ ಆದ ಹೇರ್‌ ಕಲರ್ ಸ್ಟೈಲ್‌

ಒಟ್ಟಿನಲ್ಲಿ ಲುಲು ಫ್ಯಾಷನ್ ವೀಕ್ ಬಹು ಜೋರಾಗಿದ್ದು, ಪ್ಯಾಷನ್ ಶೋ ನೋಡಿ ನೆರೆದಿದ್ದ ಜನರು ಫುಲ್ ಫಿದಾ ಆಗಿದ್ದಾರೆ. ಇನ್ನು ಮೇ 12 ಭಾನುವಾರ ಫ್ಯಾಷನ್ ವೀಕ್ ಮುಕ್ತಾಯಗೊಳ್ಳಲಿದೆ.

Continue Reading

ಕರ್ನಾಟಕ

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Murder Case: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ಯವಕನ ಹತ್ಯೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಕತ್ತು ಕೊಯ್ಯಲಾಗಿದೆ.

VISTARANEWS.COM


on

Murder Case
Koo

ಕಲಬುರಗಿ: ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ (Murder Case) ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ ವಿಚಾರಕ್ಕೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ರಮಜಾನ್ ಮೆಹಬೂಬ್ ತಾರಾ (24) ಹತ್ಯೆಯಾದ ಯುವಕ. ಘಟನಾ ಸ್ಥಳಕ್ಕೆ ಅಫಜಲಪುರ ಸಿಪಿಐ ಮತ್ತು ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

14 ವರ್ಷದ ಬಾಲಕಿಯ ಅಪಹರಿಸಿ ಕೊಲೆಯತ್ನ

ಕಲಬುರಗಿ: 14 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆಯತ್ನ ಮಾಡಿರುವ ಘಟನೆ ಕಲಬುರಗಿ ನಗರದ ಮರಪಳ್ಳಿ‌ ಲೇಔಟ್‌ನಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಹಲರ್ಕಟಿ ಗ್ರಾಮದ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಕತ್ತು ಕೊಯ್ಯಲಾಗಿದೆ.

ಇದನ್ನೂ ಓದಿ | Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ

ಹಲರ್ಕಟಿ ಗ್ರಾಮದಿಂದ ಬಾಲಕಿಯನ್ನು ಕಲಬುರಗಿಗೆ ಕರೆದುಕೊಂಡು ಹೋಗಿದ್ದ ಕಿರಾತಕರು, ಕಲಬುರಗಿಯ ಮರಪಳ್ಳಿ‌ಲೇಔಟ್ ಬಳಿ ಕತ್ತು ಕೊಯ್ದು ಪರಾರಿಯಾಗಿದ್ದಾರೆ. ಸ್ಥಳೀಯರು ಬಾಲಕಿಯ ರಕ್ಷಣೆ ಮಾಡಿ ಕಲಬುರ್ಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರ್ಗಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Murder Case in kodagu

ಕೊಡಗು:‌ ಮದುವೆ ರದ್ದಾಗಿದ್ದಕ್ಕೆ ಕೋಪಗೊಂಡ ಪಾಗಲ್‌ ಪ್ರೇಮಿಯೊಬ್ಬ ಬಾಲಕಿಯನ್ನು ಕೊಲೆ (Murder Case) ಮಾಡಿ ರುಂಡದೊಂದಿಗೆ ಪರಾರಿ ಆಗಿದ್ದ. ಕಾಡಿನಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಶನಿವಾರ ಬಂಧಿಸಿದ್ದರು. ಆದರೆ ಆರೋಪಿ ಸಿಕ್ಕರೂ ಬಾಲಕಿಯ ರುಂಡ ಪತ್ತೆಯಾಗಿರಲಿಲ್ಲ. ಇದೀಗ ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿಯ ತಲೆ ಪತ್ತೆಯಾಗಿದೆ. ಬಾಲಕಿಯ ತಲೆಯನ್ನು ಆರೋಪಿ ಪ್ರಕಾಶ್ ಮರದ ಮೇಲೆ ಇರಿಸಿದ್ದ. ಬಾಲಕಿಯ ತಲೆ ಹಾಗೂ ಆಕೆಯ ಚಪ್ಪಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಶುಕ್ರವಾರ ಇಡೀ ದಿನ ಹುಡುಕಾಡಿದ್ದರೂ ಬಾಲಕಿ ಮೀನಾಳ ತಲೆ ಸಿಕ್ಕಿರಲಿಲ್ಲ. ಇತ್ತ ಮಗಳ ತಲೆ ಸಿಗದೆ ಮೃತದೇಹದ ಅಂತ್ಯ ಸಂಸ್ಕಾರ ಮಾಡುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದಿದ್ದರು. ಹೀಗಾಗಿ ಶನಿವಾರ ಮತ್ತೆ 40ಕ್ಕೂ ಹೆಚ್ಚು ಪೊಲೀಸರಿಂದ ಶೋಧ ಕಾರ್ಯ ನಡೆದಿದ್ದು, ಹತ್ಯೆಯಾಗಿದ್ದ ಮೀನಾ ರುಂಡ ಪತ್ತೆ ಮಾಡಿದ್ದಾರೆ. ತಲೆ ವಶಕ್ಕೆ ಪಡೆದು ಬಾಲಕಿ ಮನೆ ಬಳಿ ಮಹಜರ್‌ ನಡೆಸಿದ್ದಾರೆ.

ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ

ಕೊಡಗಿನಲ್ಲಿ ಬಾಲಕಿ ಹತ್ಯೆಯ ಸ್ಥಳ ಮಹಜರು ವೇಳೆ ವಿಚಿತ್ರ ಘಟನೆಯೂ ನಡೆದಿದೆ. ರುಂಡ ಪತ್ತೆ ಸ್ಥಳದಲ್ಲಿ ಬಾಲಕಿ ಸಹೋದರನ ಮೈಮೇಲೆ ಶಕ್ತಿ ಆವಾಹನೆ ಆದ ರೀತಿ ವರ್ತಿಸಿದ್ದಾನೆ. ರುಂಡ ಪತ್ತೆಯಾದ ಸ್ಥಳಕ್ಕೆ ಆರೋಪಿ ಪ್ರಕಾಶ್‌ ಮತ್ತು ಬಾಲಕಿ ಸಹೋದರ ಹೋದಾಗ ಏಕಾಏಕಿ ಶಕ್ತಿ ಆವಾಹನೆ ಆದಂತೆ ವರ್ತಿಸಿದ್ದಾನೆ. ಏಕಾಏಕಿ ಆತನ ವರ್ತನೆಗೆ ಪೊಲೀಸರು ಕ್ಷಣಕಾಲ ಬೆಚ್ಚಿ ಬಿದ್ದರು. ಕೂಡಲೇ ಅಲ್ಲಿದ್ದವರು ಮೀನಾಳ ಸಹೋದರನನ್ನು ಹಿಡಿದುಕೊಂಡು ಸಮಾಧಾನಪಡಿಸಿದರು.

ಏನಿದು ಪ್ರಕರಣ?

ಮೀನಾ ಇನ್ನೂ ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್‌ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.

ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್‌ ಕೊಲೆ ಮಾಡಿದ್ದ.

ಬಾಲಕಿಯನ್ನು ಆರೋಪಿ ಪ್ರಕಾಶ್‌ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.

Continue Reading
Advertisement
Karnataka Weather Forecast
ಮಳೆ31 mins ago

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Solar
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಭಾರತ ಆತ್ಮನಿರ್ಭರ ಸಾಧನೆ ಶ್ಲಾಘನೀಯ

Protein Supplements
ಆರೋಗ್ಯ2 hours ago

Protein Supplements: ಪ್ರೊಟಿನ್‌ ಸಪ್ಲಿಮೆಂಟ್‌ನ ಸೈಡ್‌ ಎಫೆಕ್ಟ್‌ ಏನೇನು? ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆಯ ಸೂಚನೆ ಇಲ್ಲಿದೆ

Shankara Jayanti 2024
ಧಾರ್ಮಿಕ2 hours ago

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

International Nurses’s Day
ಆರೋಗ್ಯ2 hours ago

International Nurses’s Day: ಇಂದು ನರ್ಸ್‌ಗಳ ದಿನ; ಈ ದಿನಾಚರಣೆ ಹಿನ್ನೆಲೆ ಏನು?

Dina Bhavishya
ಭವಿಷ್ಯ2 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

IPL 2024
ಪ್ರಮುಖ ಸುದ್ದಿ6 hours ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ7 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ8 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು8 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು16 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌