ED Raid: ಬೆಂಗಳೂರು, ಧಾರವಾಡದಲ್ಲಿ ಕೆಐಎಡಿಬಿ ಕಚೇರಿಗಳಿಗೆ ಇಡಿ ದಾಳಿ; 26 ಗಂಟೆ ಪರಿಶೀಲಿಸಿದರೂ ಮುಗಿಯದ ಹಗರಣದ ದಾಖಲೆ! - Vistara News

ಬೆಂಗಳೂರು

ED Raid: ಬೆಂಗಳೂರು, ಧಾರವಾಡದಲ್ಲಿ ಕೆಐಎಡಿಬಿ ಕಚೇರಿಗಳಿಗೆ ಇಡಿ ದಾಳಿ; 26 ಗಂಟೆ ಪರಿಶೀಲಿಸಿದರೂ ಮುಗಿಯದ ಹಗರಣದ ದಾಖಲೆ!

ED Raid: ಬೆಂಗಳೂರಿನ ಖನಿಜ ಭವನದಲ್ಲಿರುವ ಕೆಐಎಡಿಬಿ ಮುಖ್ಯ ಕಚೇರಿ ಹಾಗೂ ಧಾರವಾಡ ಕೆಐಎಡಿಬಿ ಭೂ ಸ್ವಾಧೀನ ಕಚೇರಿಗಳಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆಯಿಂದಲೂ ದಾಖಲೆಗಳ ಹಾಗೂ ಲೆಕ್ಕಪತ್ರಗಳ ಪರಿಶೀಲನೆ ನಡೆಯುತ್ತಿದೆ. ಕೆಐಎಡಿಬಿ ಬಹುಕೋಟಿ ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

VISTARANEWS.COM


on

ed raid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು (Bangalore) ಹಾಗೂ ಧಾರವಾಡದಲ್ಲಿ (Dharwad) ಕೆಐಎಡಿಬಿ (KIADB) ಕಚೇರಿಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ (ED Raid) ನಡೆಸಿದ್ದು, ನಿನ್ನೆ ಮುಂಜಾನೆಯಿಂದ ಆರಂಭವಾದ ದಾಖಲೆಗಳ ಪರಿಶೀಲನೆ ಇಂದೂ ಮುಂದುವರಿದಿದೆ.

ಬೆಂಗಳೂರಿನ ಖನಿಜ ಭವನದಲ್ಲಿರುವ ಕೆಐಎಡಿಬಿ ಮುಖ್ಯ ಕಚೇರಿ ಹಾಗೂ ಧಾರವಾಡ ಕೆಐಎಡಿಬಿ ಭೂ ಸ್ವಾಧೀನ ಕಚೇರಿಗಳಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆಯಿಂದಲೂ ದಾಖಲೆಗಳ ಹಾಗೂ ಲೆಕ್ಕಪತ್ರಗಳ ಪರಿಶೀಲನೆ ನಡೆಯುತ್ತಿದೆ. ಕೆಐಎಡಿಬಿ ಬಹುಕೋಟಿ ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಭೂ ಸ್ವಾಧೀನ ಹೆಸರಲ್ಲಿ ಕೆಐಇಡಿಬಿ ಅಧಿಕಾರಿಗಳು ನೂರಾರು ಕೋಟಿ ಲೂಟಿ ಮಾಡಿದ ಆರೋಪವಿದೆ. ಒಂದೇ ಭೂಮಿಗೆ ಎರಡೆರಡು ಬಾರಿ ಪರಿಹಾರ ನೀಡುವ ನೆಪದಲ್ಲಿ ಹಣಕಾಸಿನ ಅಕ್ರಮ, ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ಓಪನ್‌ ಮಾಡಿ ಕಾಸು ಲಪಟಾಯಿಸಿರುವುದು ಕಂಡುಬಂದಿದೆ. IDBI ಬ್ಯಾಂಕ್‌ನ ಒಂದೇ ಶಾಖೆಯಲ್ಲಿ 24 ನಕಲಿ ಖಾತೆಗಳನ್ನು ತೆರೆದು ಹಣ ಕಳಿಸಲಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಭೂ ಸ್ವಾಧೀನದ ಹೆಸರಲ್ಲಿ, ಧಾರವಾಡ ಕೆಲಗೇರಿ ಹಾಗು ಮುಮ್ಮಿಗಟ್ಟಿ ಗ್ರಾಮಗಳಲ್ಲಿ ಭೂ ಸ್ವಾಧೀನ ಹೆಸರಲ್ಲಿಯೂ ಲೂಟಿ ಮಾಡಲಾಗಿದೆ.

ನಿನ್ನೆ ಬೆಳಗ್ಗೆ 9 ಗಂಟೆಯಿಂದಲೂ ಇಡಿ ಅಧಿಕಾರಿಗಳು ಶೋಧಕಾರ್ಯ ಆರಂಭಿಸಿದ್ದು, ಕಚೇರಿಯನ್ನು ಇಂಚಿಂಚೂ ಜಾಲಾಡುತ್ತಿದ್ದಾರೆ. ಬರೋಬ್ಬರಿ 26 ಗಂಟೆಗಳಿಂದ ಶೋಧ ನಡೆಸುತ್ತಿದ್ದಾರೆ. ಧಾರವಾಡದ ಲಕಮನಹಳ್ಳಿಯಲ್ಲಿರುವ ಕೆಐಎಡಿಬಿ ಕಚೇರಿಯಲ್ಲಿ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಓರ್ವ ಏಜೆಂಟ್‌ನನ್ನು ವಶಕ್ಕೆ ಪಡೆದಿದ್ದಾರೆ. ರವಿ ಕುರಬೇಟ್ ಎಂಬ ಏಜೆಂಟ್‌ನನ್ನು ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.

ಧಾರವಾಡದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿ ಅನೇಕ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಸಿಐಡಿ ತನಿಖೆಯಲ್ಲಿ 19.50 ಕೋಟಿ ರೂ. ಅಕ್ರಮ ನಡೆದಿರುವುದು ಪತ್ತೆಯಾಗಿತ್ತು. ಸಿಐಡಿ ಎಫ್‌ಐಆರ್ (CID FIR) ಆಧರಿಸಿ ಇಡಿ ತನಿಖೆಗಿಳಿದಿದೆ.

ಇನ್ಮುಂದೆ ಖಾಸಗಿ ಪದವಿ ಕಾಲೇಜುಗಳಲ್ಲೂ ಸಿಗಲಿದೆ ಸರ್ಕಾರಿ ಕೋಟಾ ಸೀಟ್!

ಬೆಂಗಳೂರು: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಸೀಟ್ ಹಂಚಿಕೆ ಮಾದರಿಯಂತೆ ಇನ್ನು ಮುಂದೆ ಖಾಸಗಿ ಪದವಿ ಕಾಲೇಜುಗಳಲ್ಲೂ ಸರ್ಕಾರಿ ಕೋಟಾದಡಿ ಸೀಟು ಹಂಚಿಕೆ (Govt Quota Seats) ಮಾಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.

ಬಡ ವಿದ್ಯಾರ್ಥಿಗಳಿಗೆ ಬಿಎ, ಬಿಎಸ್ಸಿ, ಬಿ.ಕಾಂ ಸೇರಿ ಇನ್ನಿತರ ಪದವಿ ಕೋರ್ಸ್‌ ವ್ಯಾಸಂಗ ಮಾಡಲು ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲೂ ಅವಕಾಶ ಸಿಗಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಮಾಡಿದೆ ಎನ್ನಲಾಗಿದೆ.

ಖಾಸಗಿ ಕಾಲೇಜುಗಳಲ್ಲಿ ಇನ್ಮುಂದೆ ಶೇ.40 ಸರ್ಕಾರಿ ಕೋಟಾದಡಿಯಲ್ಲಿ ಪದವಿ ಸೀಟ್‌ಗಳನ್ನ ಸರ್ಕಾರಕ್ಕೆ ಪಡೆಯಲು ಮುಂದಾದ ಉನ್ನತ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಈ ಹಿಂದೆ ಖಾಸಗಿ ಪದವಿ ಕಾಲೇಜುಗಳು 100ಕ್ಕೆ 100 ಮ್ಯಾನೇಜ್‌ಮೆಂಟ್ ಕೋಟಾದಡಿ ಸೀಟ್ ದಾಖಲಾತಿ ಇತ್ತು. ಖಾಸಗಿ ಕೋಟಾದಡಿಯೇ ಪದವಿ ದಾಖಲಾತಿ ಪಡೆಯುತ್ತಿದ್ದರು. ಹೀಗಾಗಿ ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲಿ ಓದಲು ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶುಲ್ಕ ಕಟ್ಟಲಾಗದೆ ಪರದಾಡ್ತಾ ಇದ್ದರು.

ಸರ್ಕಾರ ಪದವಿ ಖಾಸಗಿ ಕಾಲೇಜುಗಳಲ್ಲಿ ಕಾನೂನಾತ್ಮಕವಾಗಿ ಬರಬೇಕಾದ ಶೇ.40 ಸರ್ಕಾರಿ ಕೋಟಾದ ಸೀಟ್ ಗಳನ್ನು ಈ ವರ್ಷದಿಂದ ಪಡೆಯಲು ಮುಂದಾಗಿದೆ. ಈ ಸೀಟ್‌ಗಳನ್ನ ಕೆಇಎ ಅಥವಾ ಕಾಮೆಡ್‌ ಕೆ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Anganawadi workers: ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ಅಂಗನವಾಡಿ ಶಿಕ್ಷಕಿ, ಸಹಾಯಕಿ ವಜಾ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Building Collapsed: ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಓರ್ವ ಸಾವು, ಮತ್ತೋರ್ವ ಗಂಭೀರ

Building Collapsed : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಘಟನೆಯಲ್ಲಿ ಒರ್ವ ಮೃತಪಟ್ಟರೆ, ಮತ್ತೊರ್ವ ಗಂಭೀರ ಗಾಯಗೊಂಡಿದ್ದಾನೆ.

VISTARANEWS.COM


on

By

building collapses in Bengaluru One dead another critical
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು (Building Collapsed) ವ್ಯಕ್ತಿಯೊರ್ವ ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ಪೀಣ್ಯದ ಎನ್‌ಟಿಎಸ್ ಸರ್ಕಲ್‌ನಲ್ಲಿ‌ ಘಟನೆ ನಡೆದಿದೆ.

ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮತೋರ್ವ ಗಾಯಾಳಾನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕರೆಂಟ್‌ ಶಾಕ್‌ಗೆ ಕಂಬದಲ್ಲೇ ನೇತಾಡಿದ ಲೈನ್‌ಮ್ಯಾನ್‌

ಲೈನ್‌ ಸರಿಪಡಿಸುವ ವೇಳೆ ವಿದ್ಯುತ್ ಪ್ರವಹಿಸಿದ್ದರಿಂದ ಕಂಬದಲ್ಲೇ ಲೈನ್‌ ಮ್ಯಾನ್‌ ನೇತಾಡಿದ್ದಾರೆ. ಬಾಗಲಕೋಟೆಯ ಮದಲಮಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಲೈನ್‌ಮ್ಯಾನ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರವೀಣ್ ಹಿರೇಮಠ (30) ಕರೆಂಟ್‌ ಶಾಕ್‌ಗೆ ಒಳಗಾದವರು.

ರಬಕವಿ ಹೆಸ್ಕಾಂ ಕಚೇರಿಯಲ್ಲಿ ಲೈನ್‌ಮನ್ ಆಗಿರುವ ಪ್ರವೀಣ್ ಮೂಲತಃ ವಿಜಯಪುರ ಜಿಲ್ಲೆ ಬಬಲೇಶ್ವರ ನಿವಾಸಿಯಾಗಿದ್ದಾರೆ. 10 ವರ್ಷಗಳಿಂದ ಕೆಇಬಿಯಲ್ಲಿ ಲೈನ್‌ಮನ್ ಆಗಿ ಸೇವೆ ಸಲ್ಲಿಸುತ್ತಿರುವ ಪ್ರವೀಣ್‌ ವಿದ್ಯುತ್‌ ಸರಿಪಡಿಸಲು ಮುಂದಾಗಿದ್ದರು. ಈ ವೇಳೆ ವಿದ್ಯುತ್‌ ಪ್ರವಹಿಸಿದೆ, ಇದನ್ನು ಗಮನಿಸಿದ ಯುವಕರು ಕೂಡಲೇ ರಬಕವಿ ಹೆಸ್ಕಾಂಗೆ ಕಚೇರಿಗೆ ಕರೆ ಮಾಡಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಆನಂತರ ಏಣಿ ಮೂಲಕ ನೇತಾಡುತ್ತಿದ್ದ ಪ್ರವೀಣ್ ಕೆಳಗಿಳಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಕೆ‌ಎಲ್‌ಇಗೆ ಸ್ಥಳಾಂತರ ಮಾಡಿದ್ದಾರೆ.

ಉಡುಪಿಯಲ್ಲಿ ವಿದ್ಯಾರ್ಥಿನಿ ಮೇಲೆ ಬೀದಿನಾಯಿಗಳು ಅಟ್ಯಾಕ್‌

ಶಾಲಾ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಅಟ್ಯಾಕ್ ಮಾಡಿವೆ. ಉಡುಪಿಯ ಕೆಮ್ಮಣ್ಣು ಹೂಡೆಯಲ್ಲಿ ಘಟನೆ ನಡೆದಿದೆ. ಬೆಳಗ್ಗೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ನಾಯಿಗಳು ದಾಳಿ ಮಾಡಲು ಮುಂದಾಗಿವೆ. ಇದನ್ನೂ ಗಮಿನಿಸಿದ ವಿದ್ಯಾರ್ಥಿನಿ ಕೂಗಿ ಬೊಬ್ಬೆ ಹಾಕಿದ್ದಾಳೆ. ಬಳಿಕ ಕೈಯಲ್ಲಿದ್ದ ಕೊಡೆಯನ್ನು ಬೀಸಿ, ನಾಯಿಗಳಿಂದ ರಕ್ಷಿಸಿಕೊಂಡು ಬಚಾವಾಗಿ ಓಡಿದ್ದಾಳೆ. ಇದೆಲ್ಲವೂ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CDPO suspended: ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣ; ಸಿಡಿಪಿಒ ಅಮಾನತಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

CDPO suspended: ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯಲ್ಲಿ ನಡೆದ ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣದಲ್ಲಿ ಈಗಾಗಲೇ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡಲಾಗಿದೆ. ಇದೀಗ ಸಿಡಿಪಿಒ ಅಮಾನತು ಮಾಡಿ, ಡಿಡಿಗೆ ನೋಟೀಸ್ ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚಿಸಿದ್ದಾರೆ.

VISTARANEWS.COM


on

CDPO suspended
Koo

ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆಯನ್ನು ತಟ್ಟೆಯಿಂದ ಎತ್ತಿಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿಕಾರಿ (ಸಿಡಿಪಿಒ) ಅಮಾನತು (CDPO suspended) ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ. ಜೊತೆಗೆ ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರಿಗೆ (ಡಿಡಿ) ನೋಟೀಸ್ ನೀಡಲು ಸೂಚಿಸಿದ್ದಾರೆ.

ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡುವಂತೆ ಸೂಚಿಸಿದರು. ಇಡೀ ಪ್ರಕರಣದ ವರದಿ ನೀಡುವಂತ ಆದೇಶಿಸಿದ್ದಾರೆ.

ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕು. ಕೆಳ ಹಂತದಿಂದ ಇಲಾಖೆಯಲ್ಲಿ‌ ಸುಧಾರಣೆ ತರಬೇಕು ಅಂತ ಕಷ್ಟ ಪಡುತ್ತಿದ್ದೇನೆ. ಪೌಷ್ಟಿಕ ಆಹಾರ, ಗುಣಮಟ್ಟದ ಶಿಕ್ಷಣ ಅಂಗನವಾಡಿಯ ಮೂಲ‌ ಉದ್ದೇಶ. ಆದರೆ, ಬಡಮಕ್ಕಳಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಒಂದು ಮಗುವಿಗೆ ಊಟಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 8 ರೂ. ಭರಿಸಲಾಗುತ್ತಿದೆ. ಕಳೆದ 9 ವರ್ಷಗಳಿಂದ ಯೂನಿಟ್ ದರ ಏರಿಕೆ ಮಾಡಿಲ್ಲ. ಬೇಳೆಗಳ ಬೆಲೆ ಬಹಳಷ್ಟು ಹೆಚ್ಚಳವಾಗಿದೆ. ಮೊಟ್ಟೆ, ಗುಣಮಟ್ಟದ ಕೆನೆ ಭರಿತ ಹಾಲು ಕೊಡುವುದು ಸಿಎಂ ಸಿದ್ದರಾಮಯ್ಯ ಸರ್ಕಾರದ ಯೋಜನೆ. ಮ‌ಕ್ಕಳಿಗೆ ಊಟ ಬಡಿಸುವ ವೇಳೆ ಕಡ್ಡಾಯವಾಗಿ ವೀಡಿಯೊ ಚಿತ್ರೀಕರಣ ಮಾಡಬೇಕು ಎಂದು ತಿಳಿಸಿದರು. ‌

ಚಿತ್ರೀಕರಣದ ಬಳಿಕ ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ವಾಟ್ಸ್‌ ಆ್ಯಪ್ ಗ್ರೂಪ್‌ಗಳ ಮೂಲಕ ಅಪ್‌ ಲೋಡ್ ಆಗಬೇಕು. ಇದೇ ರೀತಿಯ ಪ್ರಕರಣ ಕಳೆದ ಬಾರಿಯೂ ಕೇಳಿಬಂದಿದ್ದು, ನಂತರ ವೀಡಿಯೊ ಚಿತ್ರೀಕರಣ ಕಡ್ಡಾಯ ಮಾಡಿದ್ದೇವೆ.‌ ಇದೀಗ ವೀಡಿಯೋ‌ ಚಿತ್ರೀಕರಣ ಕಡ್ಡಾಯದಿಂದಲೇ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದರು.

ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಅನ್ನೋ ಸ್ಥಿತಿ ಮಕ್ಕಳಿಗೆ ಆಗಿದೆ. 69 ಸಾವಿರ ಅಂಗನವಾಡಿಗಳನ್ನು ಕರ್ನಾಟಕ ರಾಜ್ಯದಲ್ಲಿ ನಡೆಸುತ್ತಿದ್ದೇವೆ‌ ಎಲ್ಲೋ ಒಂದು ಕಡೆ ಆದ್ರೆ ಸಂಪೂರ್ಣ ಇಲಾಖೆಗೆ ಕಷ್ಟ ಆಗುತ್ತೆ. ನಿನ್ನೆ ರಾತ್ರಿಯೇ ಈ ಪ್ರಕರಣ ನನ್ನ ಗಮನಕ್ಕೆ ಬಂದಿದ್ದು ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಆ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನ ಈಗಾಗಲೇ ಕೆಲಸದಿಂದ ಸಸ್ಪೆಂಡ್ ಮಾಡಲಾಗಿದ್ದು , ಇಂತಹ ತಪ್ಪನ್ನು ಮಾಡಿದ್ರೆ ಕಡ್ಡಾಯವಾಗಿ ಕೆಲಸದಿಂದ ನಿವೃತ್ತಿಗೊಳಿಸುತ್ತೇನೆ. ಬೇರೆಯವರಿಗೆ ಈ ಪ್ರಕರಣ ಪಾಠ ಆಗಬೇಕು. ಸಿಡಿಪಿಒ ಅಮಾನತು ಮಾಡಿ, ಡಿಡಿಗೆ ನೋಟೀಸ್ ನೀಡಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಅಧ್ಯಕ್ಷತೆಯಲ್ಲಿ ಸಭೆ

ಬೆಂಗಳೂರು: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರುಗಳ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಭಾಗವಹಿಸಿದರು.

ಇಲಾಖೆ ವತಿಯಿಂದ ಕರ್ನಾಟಕದಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು. ಇಲಾಖೆಯ ಪ್ರಗತಿ ಕುರಿತು ಕೇಂದ್ರ ಸಚಿವರಿಗೆ ಮಾಹಿತಿ ನೀಡಿದ ಸಚಿವರು, ಜತೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ಎಲ್ಲಾ ಅನುದಾನದ ಕುರಿತು ಮತ್ತೊಮ್ಮೆ ಸದರಿ ಸಭೆಯಲ್ಲಿ ಪ್ರಸ್ತಾಪ ಮಾಡಿದರು.

ಇದನ್ನೂ ಓದಿ | CM Siddaramaiah: ಆರೋಪಗಳ ವಿರುದ್ಧ ರಾಜಕೀಯ, ಕಾನೂನು ಹೋರಾಟಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಉಪಸ್ಥಿತರಿದ್ದರು.

Continue Reading

ಬೆಂಗಳೂರು

KEA: ಸಹಾಯ ಎಂಜಿನಿಯರ್ ಹುದ್ದೆಗಳಿಗೆ ನಾಳೆ ನೇಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ

KEA : ಸಹಾಯ ಎಂಜಿನಿಯರ್ ಹುದ್ದೆಗಳಿಗೆ ಭಾನುವಾರ ನೇಮಕ ಪರೀಕ್ಷೆ ನಡೆಯಲಿದ್ದು, ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡಲಾಗಿದೆ.

VISTARANEWS.COM


on

By

KEA
Koo

ಬೆಂಗಳೂರು: ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ 50 ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಭಾನುವಾರ (ಆ.11) ಪರೀಕ್ಷೆ ನಡೆಸಲಿದೆ. ವೆಬ್ ಕಾಸ್ಟಿಂಗ್ ಮೂಲಕ ಕಟ್ಟುನಿಟ್ಟಿನ ನಿಗಾ‌ ಇಡಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ಬೆಂಗಳೂರು ಉತ್ತರ, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲ್ಬುರ್ಗಿ ಮತ್ತು ಮೈಸೂರು ನಗರಗಳ ಒಟ್ಟು 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಒಟ್ಟು 14,131 ಮಂದಿ ಅರ್ಜಿ ಸಲ್ಲಿಸಿದ್ದು ಅಷ್ಟೂ ಮಂದಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷಾ ವ್ಯವಸ್ಥೆ ಮೇಲೆ ನಿಗಾ ಇಡಲಾಗುತ್ತದೆ. ಯಾವುದೇ ಅಕ್ರಮಕ್ಕೆ ಅವಕಾಶ ಇರುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: Govt Quota Seats: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ಇನ್ಮುಂದೆ ಖಾಸಗಿ ಪದವಿ ಕಾಲೇಜುಗಳಲ್ಲೂ ಸಿಗಲಿದೆ ಸರ್ಕಾರಿ ಕೋಟಾ ಸೀಟ್!

ಬಿಎಂಟಿಸಿ, ಕೆಕೆಆರ್‌ಟಿಸಿ ಅಂಕಪಟ್ಟಿ ಪ್ರಕಟ

ಬೆಂಗಳೂರು: ಬಿಎಂಟಿಸಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕೆಕೆಆರ್‌ಟಿಸಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಅಂಕಪಟ್ಟಿಯನ್ನು ಸದ್ಯದಲ್ಲೇ ಸಂಬಂಧಪಟ್ಟ ಸಂಸ್ಥೆಗಳಿಗೆ ರವಾನಿಸಲಾಗುವುದು. ನಂತರ ನಿಯಮ ಪ್ರಕಾರ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೀ ಉತ್ತರಗಳಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮವಾಗಿ ಅಂಕ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Siddaramaiah: ಆರೋಪಗಳ ವಿರುದ್ಧ ರಾಜಕೀಯ, ಕಾನೂನು ಹೋರಾಟಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ

CM Siddaramaiah: ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ನನಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

VISTARANEWS.COM


on

Koo

ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಬಿಜೆಪಿ ಹಾಗೂ ಜೆಡಿಎಸ್‌ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ನನಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು.

ರಾಜಕೀಯವಾಗಿ ಮಣಿಸಲು ಬಿಜೆಪಿ ಜೆಡಿಎಸ್ ತಂತ್ರ

ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್‌ನವರ ಹಗರಣಗಳು ಬೇಕಾದಷ್ಟಿದ್ದು, ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ | Hindenburg: ಶೀಘ್ರದಲ್ಲೇ ಭಾರತದಲ್ಲಿ ಬಹುದೊಡ್ಡ ಸಂಚಲನ ಸೃಷ್ಟಿಯಾಗಲಿದೆ; ಹೊಸದೊಂದು ಬಾಂಬ್‌ ಸಿಡಿಸಿದ ಹಿಂಡನ್‌ಬರ್ಗ್‌

ಸುಳ್ಳು ಆರೋಪಗಳ ವಿರುದ್ಧ ಹೋರಾಟ

ಮುಖ್ಯಮಂತ್ರಿಗಳು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ-ಜೆಡಿಎಸ್‌ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ , ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.

4 ದಶಕದಿಂದ ರಾಜಕೀಯದಲ್ಲಿರುವ ನನ್ನ ಬದುಕು ತೆರೆದ ಪುಸ್ತಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾಲ್ಕು ದಶಕಗಳಿಂದ ರಾಜಕೀಯದಲ್ಲಿರುವ ನನ್ನ ಬದುಕು ತೆರೆದ ಪುಸ್ತಕ. ಈ ಪುಸ್ತಕದ ಪುಟಪುಟಗಳು ರಾಜ್ಯದ ಜನರಿಗೆ ತಿಳಿದಿದೆ. ಜನರ ವಿಶ್ವಾಸ ನನ್ನ ಮೇಲಿರುವವರೆಗೆ ವಿರೋಧಿಗಳ ಯಾವ ಷಡ್ಯಂತ್ರ, ಹೋರಾಟ, ಪಾದಯಾತ್ರೆಗಳು ನನ್ನನ್ನು ಒಂದಿಂಚು ಅಲುಗಾಡಿಸಲೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಅಧಿಕಾರ ದುರುಪಯೋಗ ಮತ್ತು ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರ ದುರುದ್ದೇಶದ ಪಾದಯಾತ್ರೆಯ ವಿರುದ್ಧವಾಗಿ ಇಂದು ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಜನಾಂದೋಲನ ಸಭೆ ಅತ್ಯಂತ ಯಶಸ್ವಿಯಾಗಿದೆ. ಸತ್ಯ, ನ್ಯಾಯ, ಪ್ರಾಮಾಣಿಕತೆಗೆ ಸಹೃದಯಿ ಕನ್ನಡಿಗರು ಸದಾ ಜೊತೆ ನಿಲ್ಲುತ್ತಾರೆ ಎಂಬುದಕ್ಕೆ ಇಂದು ಸೇರಿದ್ದ ಲಕ್ಷಾಂತರ ಜನರು ಸಾಕ್ಷಿಯಾದರು.

ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿ, ಬಿಜೆಪಿ – ಜೆಡಿಎಸ್ ವಿರುದ್ಧದ ನಮ್ಮ ಹೋರಾಟಕ್ಕೆ ಬೆಂಬಲವಾಗಿ ನಿಂತ ತಮ್ಮೆಲ್ಲರಿಗೂ ನಾನು ಸದಾ ಋಣಿ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನಮ್ಮ ಹಿರಿಯ-ಕಿರಿಯ ನಾಯಕರು ಪ್ರಮುಖವಾಗಿ ಪಕ್ಷದ ಸಾವಿರಾರು ಕಾರ್ಯಕರ್ತರು ಶ್ರಮಿಸಿದ್ದಾರೆ. ಅವರೆಲ್ಲರಿಗೂ ನಾನು ಆಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನೂ ಓದಿ | Bangladesh Unrest: ಶೇಖ್‌ ಹಸೀನಾ ಓಡಿ ಬಂದ ಬಳಿಕ ಬಾಂಗ್ಲಾದೇಶದಲ್ಲಿ 232 ಜನರ ಕಗ್ಗೊಲೆ, ಹಿಂದೂಗಳೇ ಟಾರ್ಗೆಟ್

ವಿಪಕ್ಷಗಳು ಏನನ್ನೂ ಮಾಡಲು ಹೇಸದವರು, ತಮ್ಮ ದುರುದ್ದೇಶವನ್ನು ಈಡೇರಿಸಲು ಯಾವ ಮಟ್ಟಕ್ಕೂ ಹೋಗಬಲ್ಲರು. ಇಂತಹ ಬೆದರಿಕೆ, ಬ್ಲ್ಯಾಕ್ ಮೇಲ್ ತಂತ್ರಕ್ಕೆ ಬಗ್ಗುವ, ಕುಗ್ಗುವ, ಅಂಜುವ ವ್ಯಕ್ತಿ ನಾನಲ್ಲ. ಪ್ರಾಣಕ್ಕಿಂತ ಮಾನ ಮುಖ್ಯ ಎಂದು ತಿಳಿದುಕೊಂಡವನು ನಾನು. ನಾಲ್ಕು ದಶಕಗಳಿಂದ ರಾಜಕೀಯದಲ್ಲಿರುವ ನನ್ನ ಬದುಕು ತೆರೆದ ಪುಸ್ತಕ. ಈ ಪುಸ್ತಕದ ಪುಟಪುಟಗಳು ರಾಜ್ಯದ ಜನರಿಗೆ ತಿಳಿದಿದೆ ಎಂದು ಹೇಳಿದ್ದಾರೆ.

Continue Reading
Advertisement
building collapses in Bengaluru One dead another critical
ಬೆಂಗಳೂರು3 mins ago

Building Collapsed: ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಓರ್ವ ಸಾವು, ಮತ್ತೋರ್ವ ಗಂಭೀರ

Narendra Modi
ಪ್ರಮುಖ ಸುದ್ದಿ12 mins ago

Narendra Modi: ವಯನಾಡಿನಲ್ಲಿ ಭೂಕುಸಿತದ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಮೋದಿ; ದುರಂತದ ಭೀಕರತೆ ಕೇಳಿ ಭಾವುಕ

Californium Stone
ಕ್ರೈಂ26 mins ago

Californium Stone: ಪೊಲೀಸರಿಂದ ಭರ್ಜರಿ ಬೇಟೆ; 850 ಕೋಟಿ ರೂ. ಮೌಲ್ಯದ ಅಪರೂಪದ ವಿಕಿರಣಶೀಲ ಹರಳು ವಶ

Vinesh Phogat
ಕ್ರೀಡೆ41 mins ago

Vinesh Phogat: ಇಂದು ರಾತ್ರಿ 9.30ಕ್ಕೆ ವಿನೇಶ್ ಫೋಗಟ್‌ ಬೆಳ್ಳಿ​ ಪದಕದ ಭವಿಷ್ಯ ನಿರ್ಧಾರ

Varamahalaxmi Decoration
ಧಾರ್ಮಿಕ41 mins ago

Varamahalaxmi Decoration: ವರಮಹಾಲಕ್ಷ್ಮಿಯ ಸಿಂಗಾರಕ್ಕೂ ಬಂತು ಮಿನಿ ವಸ್ತ್ರಾಭರಣಗಳು!

Trainee Doctor
ದೇಶ44 mins ago

Trainee Doctor: ಆಸ್ಪತ್ರೆಯಲ್ಲಿಯೇ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ, ಬಳಿಕ ಹತ್ಯೆ; ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸ್ಫೋಟಕ ಮಾಹಿತಿ

Motivational Tips
ಲೈಫ್‌ಸ್ಟೈಲ್52 mins ago

Motivational Tips: ನಿಮ್ಮದೇ ಈ 10 ಅಭ್ಯಾಸಗಳು ಜೀವನದ ಯಶಸ್ಸಿಗೆ ಅಡ್ಡಗೋಡೆಯಾಗಬಹುದು!

CDPO suspended
ಕರ್ನಾಟಕ57 mins ago

CDPO suspended: ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣ; ಸಿಡಿಪಿಒ ಅಮಾನತಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

Viral Video
Latest60 mins ago

Viral Video: ಟಿಕೆಟ್ ಇಲ್ಲದೆ ಎಸಿ ಬೋಗಿಯಲ್ಲಿ ಪ್ರಯಾಣಿಸಿದ ಪೊಲೀಸರು; ಟಿಕೆಟ್‌ ಪರಿಶೀಲಕರಿಗೇ ಧಮಕಿ!

KEA
ಬೆಂಗಳೂರು1 hour ago

KEA: ಸಹಾಯ ಎಂಜಿನಿಯರ್ ಹುದ್ದೆಗಳಿಗೆ ನಾಳೆ ನೇಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌