ಬೆಂಗಳೂರು : 2024-25ರ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿಕೃತ ಶಾಲೆಗಳ ಪಟ್ಟಿ (authorized Schools) ಪ್ರಕಟ ಮಾಡುವಂತೆ (Education News) ಶಾಲಾ ಶಿಕ್ಷಣ ಇಲಾಖೆಯು (Department of School Education) ಬಿಇಓಗಳಿಗೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಬಿ. ವಿ ಕಾವೇರಿ ಆದೇಶವನ್ನು ಹೊರಡಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅನಧಿಕೃತ ಶಾಲೆಗಳ ಹಾವಳಿ ಹೆಚ್ಚಾಗಿದೆ. ನಮ್ಮ ಮಕ್ಕಳು ಪ್ರತಿಷ್ಠಿತ ಶಾಲೆಯಲ್ಲಿ ಓದಬೇಕು ಎಂದು ಬಯಸುವ ಪೋಷಕರು ಲಕ್ಷ ಲಕ್ಷ ಹಣವನ್ನು ಶುಲ್ಕವಾಗಿ ಕಟ್ಟುತ್ತಾರೆ. ಆದರೆ ಕೆಲ ಶಾಲೆಗಳು ಹೊರಗೆಲ್ಲ ತಳುಕು, ಒಳಗೆ ಹುಳುಕು ಎಂಬಂತೆ ಅನಧಿಕೃತ ಶಾಲೆಗಳು (Unauthorized Schools) ತಲೆ ಎತ್ತಿವೆ.
ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯದೆಯೇ ಕೆಲ ಸಂಸ್ಥೆಗಳು ಶಾಲೆಗಳನ್ನು ನಡೆಸುತ್ತಿವೆ. ಸಿಬಿಎಸ್‌ಸಿ, ಐಸಿಎಸ್‌ಇ ಎಂದು ಬೋರ್ಡ್ ನೇತು ಹಾಕಿಕೊಂಡು ಅಂತಾರಾಷ್ಟ್ರೀಯ ಗುಣಮಟ್ಟದ ಶಾಲೆ ಎಂದು ಕಳ್ಳಾಟ ಆಡುತ್ತಿವೆ. ರಾಜ್ಯ ಪಠ್ಯಕ್ರಮ ಹೆಸರಲ್ಲಿ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದು ಸಿಬಿಎಸ್‌ಸಿ, ಐಸಿಎಸ್‌ಇ ಪಠ್ಯವನ್ನು ಬೋಧಿಸುತ್ತಿದ್ದಾರೆ. ದಾಖಲಾತಿ ವೇಳೆ ಸಿಬಿಎಸ್‌ಸಿ, ಐಸಿಎಸ್‌ಇ ಶಾಲೆ ಎಂದು ನಂಬಿಸಿ ಪೋಷಕರಿಂದ ಲಕ್ಷ ಲಕ್ಷ ರೂಪಾಯಿ ಶುಲ್ಕವನ್ನು ಸುಲಿಗೆ ಮಾಡುತ್ತಿದ್ದಾರೆ. ಹೀಗಾಗಿ ಫೇಕ್ ಶಾಲೆಗಳ ಬಣ್ಣ ಬಯಲು ಮಾಡಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.
ಇದೇ ಏಪ್ರಿಲ್ 24ರೊಳಗೆ ಎಲ್ಲ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಅಧಿಕೃತ ಶಾಲೆಗಳ ಪಟ್ಟಿಯನ್ನು ಪ್ರಕಟಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲೆಯ ಹೆಸರು ಮತ್ತು ವಿಳಾಸ, ಡ್ರೆಸ್ ಕೋಡ್, ನೋಂದಣಿ ಪಡೆದ ವರ್ಷ, ಮಾಧ್ಯಮ ಹಾಗೂ ಅನುಮತಿ ಪಡೆದ ಪಠ್ಯಕ್ರಮ, ಮಾನ್ಯತೆ ನವೀಕರಿಸಿದ ಮಾಹಿತಿ ಸೇರಿ ಇನ್ನಿತರ ಅಂಶಗಳನ್ನು ಕಡ್ಡಾಯವಾಗಿ ಪ್ರಕಟ ಮಾಡಬೇಕು.
ಇದನ್ನೂ ಓದಿ: Theft Case : ಕಳ್ಳತನವನ್ನೇ ಕಾಯಕ ಮಾಡಿಕೊಂಡ ಅಪ್ಪ-ಮಗ; ಗರಿ ಗರಿ ನೋಟು, ಡೈಮಂಡ್ ಕದ್ದವರು ಜೈಲುಪಾಲು
ಆಯಾ ಬಿಇಓಗಳು ತಮ್ಮ ವ್ಯಾಪ್ತಿಯಲ್ಲಿರುವ ಅಧಿಕೃತ ಶಾಲೆಗಳ ಕರಡು ಪಟ್ಟಿಯನ್ನು ಕಡ್ಡಾಯವಾಗಿ ಪರಿಶೀಲಿಸಿ ಖಚಿತ ಪಡಿಸಿಕೊಂಡು, ನಂತರ ಅಧಿಕೃತ ಶಾಲೆಗಳ ಅಂತಿಮ ಪಟ್ಟಿಯನ್ನು ಏ.24ರಂದು ಪ್ರಕಟಿಸಲು ಸೂಚಿಸಲಾಗಿದೆ. ಈ ಪ್ರಕಟಣೆಯನ್ನು ಕಚೇರಿಯ ಆವರಣದಲ್ಲಿ ಹಾಗೂ ಸಂಬಂಧಿಸಿದ ಶಾಲೆಗಳು ತಮ್ಮ ಸೂಚನಾ ಫಲಕದಲ್ಲಿ ಪ್ರಕಟ ಮಾಡಬೇಕು. ಅಧಿಕೃತ ಶಾಲೆಗಳ ಪಟ್ಟಿಯಲ್ಲಿ ಲೋಪ ಉಂಟಾದರೆ ಅದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗಿದೆ.
ಇದನ್ನೂ ಓದಿ: Fire Accident : ಶಾರ್ಟ್ ಸಕ್ಯೂರ್ಟ್‌ನಿಂದ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ; 4 ವರ್ಷದ ಮಗು ಉಸಿರುಗಟ್ಟಿ ಸಾವು
CET 2024: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ
ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.
ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ್ಯಾಂಕಿಂಗ್ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೂಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.
ನಿಯಮದಲ್ಲಿ ಬದಲಾವಣೆ
ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ.
ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಮಾತನಾಡಿ, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದ್ದಾರೆ.
ಪಿಯುಸಿ ಪರೀಕ್ಷೆ 2
ದ್ವಿತೀಯ ಪಿಯುಸಿ ಪರೀಕ್ಷೆ 2 ಬರೆಯಲು ಇಚ್ಛಿಸುವವರು ಏಪ್ರಿಲ್ 10ರಿಂದ 16 ರವರೆಗೆ ಅರ್ಜಿ ಸಲ್ಲಿಸಬಹುದು. ಕಾಲೇಜಿನಲ್ಲಿ ಪ್ರಾಂಶುಪಾಲರ ಸಹಾಯದೊಂದಿಗೆ ಅಥವಾ ವೆಬ್‌ಸೈಟ್‌ನಲ್ಲಿ ನೇರವಾಗಿ ಪರೀಕ್ಷೆ 2ಕ್ಕೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇದು ದಂಡ ರಹಿತ ಅವಕಾಶವಾಗಿದೆ. ಇನ್ನು ಇದರ ನಂತರ ದಂಡ ಸಹಿತವಾಗಿ ಏಪ್ರಿಲ್ 17 ಮತ್ತು 18ಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ದ್ವಿತೀಯ ಪಿಯು ಪರೀಕ್ಷೆ 2 ಬರೆಯಲು ಇಚ್ಛಿಸುವವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರೆ ಅದರ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಕೂಡಲೇ ಅರ್ಜಿ ಸಲ್ಲಿಸಲು ಅವಕಾಶ ಇದೆ. ಪರೀಕ್ಷೆ 2 ಅನ್ನು ಬರೆಯುವವರಿಗೆ ಒಂದು ವಿಷಯಕ್ಕೆ 140 ರೂಪಾಯಿ ಶುಲ್ಕವನ್ನು ನಿಗದಿ ಮಾಡಿದ್ದರೆ, ಎರಡು ವಿಷಯಕ್ಕೆ 270 ರೂ., ಮೂರು ಅಥವಾ ಹೆಚ್ಚಿನ ವಿಷಯಕ್ಕೆ 400 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ.
ಸಿಇಟಿ ಪರೀಕ್ಷೆ ಯಾವಾಗ?
ಸಿಇಟಿ 2024ರ ಪರೀಕ್ಷೆಗಳು ಏಪ್ರಿಲ್ 18 ಮತ್ತು 19ರಂದು ನಡೆಯಲಿದೆ. ಏಪ್ರಿಲ್ 18 – ಬೆಳಿಗ್ಗೆ 10-30ರಿಂದ ಜೀವಶಾಸ್ತ್ರ , ಮಧ್ಯಾಹ್ನ 2.30ರಿಂದ ಗಣಿತ, ಏಪ್ರಿಲ್ 19 – ಬೆಳಿಗ್ಗೆ 10-30ರಿಂದ ಭೌತಶಾಸ್ತ್ರ , ಮಧ್ಯಾಹ್ನ ರಸಾಯನ ಶಾಸ್ತ್ರ, ಏಪ್ರಿಲ್ 20 – ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ ಭಾಷಾ ಪರೀಕ್ಷೆ ಆಯೋಜಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ