ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಪಡೆಯಲು ಹೊಸ ನಿಯಮದಂತೆ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅರ್ಜಿಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೊನೆಗೂ ಸಲ್ಲಿಕೆ ಮಾಡಿದ್ದಾರೆ.
ಅರ್ಜಿ ಸಲ್ಲಿಕೆಗೆ ಅಂತಿಮ ದಿನವಾಗಿದ್ದ ಸೋಮವಾರ ಮದ್ಯಾಹ್ನದ ನಂತರ ಸಿದ್ದರಾಮಯ್ಯ ಕಚೇರಿ ಸಿಬ್ಬಂದಿ ಆಗಮಿಸಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಆಪ್ತ ಸಹಾಯಕ ವೆಂಕಟೇಶ್ ಹಾಗೂ ಮಾಧ್ಯಮ ಸಂಯೋಜಕ ಕೆ.ವಿ. ಪ್ರಭಾಕರ್ ಆಗಮಿಸಿ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ಎಲ್. ನಾರಾಯಣ್ ಅವರಿಗೆ ಅರ್ಜಿ ಸಲ್ಲಿಸಿದರು.
ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿದೆಯಾದರೂ ಸದ್ಯಕ್ಕೆ ಸಿದ್ದರಾಮಯ್ಯ ಒಂದೇ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಹಾಗಾಗಿ ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಆದರೂ ಯಾವ ಕ್ಷೇತ್ರದಿಂದ ಸ್ಪರ್ಧೆ ಎಂದು ಸಿದ್ದರಾಮಯ್ಯ ತಿಳಿಸಿಲ್ಲ. ಕ್ಷೇತ್ರದ ಹೆಸರು ಬರೆಯಬೇಕಾದ ಸ್ಥಳದಲ್ಲಿ ʼಹೈಕಮಾಂಡ್ ಸೂಚನೆ ಮೇರೆಗೆ ಕ್ಷೇತ್ರ ಆಯ್ಕೆʼ ಎಂದು ಬರೆಯಲಾಗಿದೆ.
ಹೀಗಾಗಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಕುತೂಹಲ ಇನ್ನೂ ಹಾಗೆಯೇ ಉಳಿದಿದೆ.
ಇದನ್ನೂ ಓದಿ | Election 2023 | ವರುಣ ಕ್ಷೇತ್ರದಲ್ಲೇ ಸ್ಪರ್ಧೆ ಮಾಡಲು ತಂದೆಯವರಿಗೆ ಕೋರಿದ್ದೇನೆ: ಯತೀಂದ್ರ ಸಿದ್ದರಾಮಯ್ಯ