ಬೆಂಗಳೂರು: ರಾಜ್ಯದ ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್‌ವೊಂದಿದೆ. ಪೆಟ್ರೋಲ್-ಡಿಸೇಲ್ ಬೆಲೆಯಿಂದ ಕೈ ಸುಟ್ಟುಕೊಂಡಿದ್ದ ಸವಾರರಿಗೆ, ಇದೀಗ ವಾಹನಗಳ ಎಮಿಷನ್ ಟೆಸ್ಟಿಂಗ್ ದರ ಏರಿಕೆಗೆ (Emission Testing Rate) ಚಿಂತನೆ ನಡೆದಿದೆ. ಕಾರು, ಬೈಕ್, ಲಾರಿ ಹಾಗೂ ಬಸ್ಸು ಹೀಗೆ ಎಲ್ಲ ವಾಹನಗಳಿಗೂ ಪ್ರತಿ ಆರು ತಿಂಗಳಿಗೆ ಎಮಿಷನ್ ಟೆಸ್ಟ್ ಮಾಡಿಸಬೇಕು. ಸದ್ಯದಲ್ಲೇ ಎಮಿಷನ್ ಟೆಸ್ಟಿಂಗ್ ದರ ಹೆಚ್ಚಾಗಲಿದೆ.
ದರ ಏರಿಕೆ ಮಾಡುವಂತೆ ಸಾರಿಗೆ ಸಚಿವರಿಗೆ ಕರ್ನಾಟಕ ಎಮಿಷನ್ ಟೆಸ್ಟಿಂಗ್ ಸೆಂಟರ್ ಓನರ್ ಅಸೋಸಿಯೇಷನ್ ಮನವಿ ಕೊಟ್ಟಿದೆ. ರಾಜ್ಯದಲ್ಲಿ ಮೂರು ಕೋಟಿಗೂ ಹೆಚ್ಚು ವಾಹನಗಳಿವೆ. ರಾಜಧಾನಿ ಬೆಂಗಳೂರಲ್ಲೇ ಒಂದು ಕೋಟಿ ಮೂವತ್ತು ಲಕ್ಷ ವಾಹನಗಳಿವೆ. ಎಮಿಷನ್ ಟೆಸ್ಟ್ ಸರ್ಟಿಫಿಕೇಟ್ ಇಲ್ಲದಿದ್ದರೆ, ಟ್ರಾಫಿಕ್ ಪೋಲಿಸರು 500 ರಿಂದ 1000 ರೂಪಾಯಿವರೆಗೆ ದಂಡ ಹಾಕುತ್ತಾರೆ.
ಎಮಿಷನ್ ಸರ್ಟಿಫಿಕೇಟ್ ಇಲ್ಲದಿದ್ದರೆ ಆರ್‌ಟಿಓ ಅಧಿಕಾರಿಗಳು ವಾಹನಗಳಿಗೆ ಎಫ್ಸಿ ಮಾಡುವುದಿಲ್ಲ. ಈ ಹಿಂದೆ ಒಂದು ವಾಹನಕ್ಕೆ ಎಮಿಷನ್ ಟೆಸ್ಟ್ ಮಾಡಿದರೆ, ಎಮಿಷನ್ ಟೆಸ್ಟಿಂಗ್ ಸೆಂಟರ್‌ಗಳಿಂದ ಸರ್ಕಾರಕ್ಕೆ 3.25 ಪೈಸೆ ರೂ. ನೀಡಬೇಕಿತ್ತು ಆದರೆ ಇನ್ನು ಮುಂದೆ ಸರ್ಕಾರಕ್ಕೆ 13.80 ಪೈಸೆ ನೀಡಬೇಕಂತೆ. ಹಾಗಾಗಿ ಎಮಿಷನ್ ಟೆಸ್ಟಿಂಗ್ ಸೆಂಟರ್ ಮಾಲೀಕರು ದರ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದಾರೆ.
ದರ ಏರಿಕೆ ಪಟ್ಟಿ ಹೀಗಿದೆ.
ಸದ್ಯ ಒಂದು ಬೈಕ್ ಎಮಿಷನ್ ಮಾಡಲು – 65 ರೂ. ತೆಗೆದುಕೊಳ್ಳಲಾಗುತ್ತಿದೆ. ಮುಂದೆ 110ರೂ.ಗೆ ಏರಿಕೆ ಮಾಡುವಂತೆ ಮನವಿ ಮಾಡಿದ್ದಾರೆ. ತ್ರಿಚಕ್ರ- ( ಆಟೋ, ಗೂಡ್ಸ್ ಆಟೋ ) ಸದ್ಯ 75 ರೂ ರಿಂದ 100 ರೂ, ನಾಲ್ಕು ಚಕ್ರದ ಪೆಟ್ರೋಲ್ ಕಾರುಗಳು- ಸದ್ಯ- 115 ರುಪಾಯಿ 200 ರುಪಾಯಿ ಏರಿಕೆ ಆಗಲಿದೆ. ಎಲ್ಲಾ ಮಾದರಿಯ ಡಿಸೇಲ್ ವಾಹನಗಳು ( ಲಾರಿ, ಬಸ್ ಹಾಗೂ ಟ್ರಕ್ ) ಸದ್ಯ – 160 ರುಪಾಯಿ 250 ಏರಿಕೆ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: Road Accident : ಹಿಟ್ ಆ್ಯಂಡ್ ರನ್‌ಗೆ ಐಸಿಯು ಪಾಲಾದ ವೃದ್ಧ; ಬ್ರೇಕ್ ಬದಲು ಎಕ್ಸಿಲೇಟರ್ ತುಳಿದ ಡ್ರೈವರ್
ಜು.29ರಿಂದ ಪೀಣ್ಯ ಫ್ಲೈ ಓವರ್ ಮೇಲೆ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ
ಬೆಂಗಳೂರು: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಜುಲೈ 29ರಿಂದ ಪೀಣ್ಯ ಫ್ಲೈ ಓವರ್ (Peenya flyover) ಮೇಲೆ ಭಾರಿ ವಾಹನ ಸೇರಿ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಪ್ರತಿ ಶುಕ್ರವಾರ ಮಾತ್ರ ಭಾರಿ ವಾಹನಗಳ ಓಡಾಟ ನಿರ್ಬಂಧಿಸಲಾಗಿದೆ.
ಮೇಲ್ಸೇತುವೆ ವಿಶೇಷ ದುರಸ್ತಿ ಕಾಮಗಾರಿ ಇನ್ನೂ ಪ್ರಗತಿಯಲ್ಲಿರುವುದರಿಂದ ಪ್ರತಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ಭಾರಿ ವಾಹನಗಳ ಓಡಾಟ ನಿಷೇಧಿಸಲಾಗಿದೆ. ಉಳಿದ ದಿನ ಎಲ್ಲಾ ವಾಹನಗಳು ಪ್ಲೈ ಓವರ್ ಮೇಲೆ ಓಡಾಟ ಮಾಡಬಹುದು. ಆದರೆ, ಭಾರಿ ವಾಹನಗಳು ಮಾತ್ರ ಮೇಲ್ಸೇತುವೆ ಎಡಪಥದಲ್ಲಿ ಗರಿಷ್ಠ 40 ಕಿ.ಮೀ ವೇಗ ಮಿತಿಯಲ್ಲಿ ಸಂಚರಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ಸೂಚಿಸಿದೆ.
ನಗರದ ತುಮಕೂರು ರಸ್ತೆಯಲ್ಲಿರುವ 15 ಮೀಟರ್ ಅಗಲದ, 4.2 ಕಿಮೀ ಉದ್ದದ ಮೇಲ್ಸೇತುವೆಯಲ್ಲಿ 2021ರ ಡಿಸೆಂಬರ್‌ನಿಂದ ಬಸ್‌ಗಳು ಮತ್ತು ಟ್ರಕ್‌ಗಳಂತಹ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಫ್ಲೈಓವರ್‌ನಲ್ಲಿ ಪ್ರಿಸ್ಟ್ರೆಸ್ಡ್ ಕೇಬಲ್‌ಗಳು ತುಕ್ಕು ಹಿಡಿದ ಹಿನ್ನೆಲೆಯಲ್ಲಿ ರಿಪೇರಿ ಮಾಡುವ ಅಗತ್ಯವಿತ್ತು. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 38.5 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ಕೇಬಲ್‌ಗಳ ಅಳವಡಿಕೆ ಕಾರ್ಯ ನಡೆದಿದೆ.
ಜನವರಿಯಲ್ಲಿ, 240 ಪ್ರಿಸ್ಟ್ರೆಸ್ಡ್ ಕೇಬಲ್‌ಗಳಲ್ಲಿ ಲೋಡ್ ಪರೀಕ್ಷೆಗಳನ್ನು ನಡೆಸಲು ಎನ್‌ಎಚ್‌ಎಐ 60 ಗಂಟೆಗಳ ಕಾಲ ಫ್ಲೈಓವರ್ ಮುಚ್ಚಿತ್ತು. ಸಮಿತಿಯ ಲೋಡ್ ಪರೀಕ್ಷೆಯ ಫಲಿತಾಂಶಗಳು ತೃಪ್ತಿಕರವಾಗಿದೆ ಎಂದು ತಜ್ಞರ ಸಮಿತಿಯ ಮುಖ್ಯಸ್ಥ, ಐಐಎಸ್‌ಸಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊ. ಚಂದ್ರ ಕಿಶನ್ ಹೇಳಿದ್ದರು. ಮಾರ್ಚ್‌ನಲ್ಲಿ, ಎನ್‌ಎಚ್‌ಎಐ 1,243 ಪ್ರಿಸ್ಟ್ರೆಸ್ಡ್ ಕೇಬಲ್‌ಗಳನ್ನು ಬದಲಾಯಿಸಲು ಪ್ರಾರಂಭಿಸಿತ್ತು. ಸದ್ಯ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದರಿಂದ ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಪ್ರದೇಶಗಳಲ್ಲಿ ಒಂದಾದ ಪೀಣ್ಯದಲ್ಲಿರುವ ಮೇಲ್ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ಎನ್‌ಎಚ್‌ಎಐ ಗ್ರೀನ್ ಸಿಗ್ನಲ್ ನೀಡಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ