ಬೆಂಗಳೂರು: ಅನುಮತಿಯಿಲ್ಲದೇ ಬೃಹತ್ ಕಾರ್ಯಕ್ರಮ ಆಯೋಜಿಸಿ ಟ್ರಾಫಿಕ್ ಜಾಮ್‌ಗೆ ಕಾರಣವಾದದ್ದಕ್ಕಾಗಿ ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಆಗಸ್ಟ್ 15ರಂದು ಇವೆಂಟ್ ಆಯೋಜನೆ ಮಾಡಲಾಗಿತ್ತು. ಇವೆಂಟ್‌ನಲ್ಲಿ ಸುಮಾರು 8ರಿಂದ 10 ಸಾವಿರ ಮಂದಿ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಮೌಂಟ್ ಕಾರ್ಮೆಲ್ ಕಾಲೇಜಿನಿಂದ ನಡೆದಿದ್ದ ಇವೆಂಟ್‌ನಲ್ಲಿ ಪ್ರತಿ ವಿದ್ಯಾರ್ಥಿಗೆ 20 ಪಾಸ್ ನೀಡಲಾಗಿತ್ತು. ಪ್ರತಿ ಪಾಸ್‌ಗೆ 100 ರೂ.ನಂತೆ ವಿದ್ಯಾರ್ಥಿಗಳು ಮಾರಾಟ ಮಾಡಿದ್ದರು. ಬೇರೆ ಕಾಲೇಜಿನ ವಿದ್ಯಾರ್ಥಿಗಳ ಜೊತೆ ಇತರರೂ ಪಾಸ್ ಪಡೆದು ಇವೆಂಟ್‌ನಲ್ಲಿ ಭಾಗಿಯಾಗಿದ್ದರು.
ಆದರೆ ಈ ಇವೆಂಟ್‌ಗೆ ಯಾವುದೇ ಅನುಮತಿ ಪಡೆದಿರಲಿಲ್ಲ. ಇದರಿಂದಾಗಿ ಟ್ರಾಫಿಕ್ ಜಾಮ್, ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗಿತ್ತು. ನಂತರ ಹೈಗ್ರೌಂಡ್ಸ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಗುಂಪನ್ನು ಚದುರಿಸಿದ್ದರು. ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.
ಇದನ್ನೂ ಓದಿ: Heavy Drugs| ಬೆಂಗಳೂರು ರೈಲು ನಿಲ್ದಾಣದಲ್ಲಿ 112 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ