ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ತಿಗಳರ ಬೀದಿಯಲ್ಲಿ ಕಟ್ಟಡದ ಮೇಲಿಂದ ಬಿದ್ದು(Falling From Buliding) ಯುವಕನೊಬ್ಬ ಮೃತಪಟ್ಟಿದ್ದಾನೆ. ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದರಿಂದ ತಲೆಗೆ ತೀವ್ರ ಪೆಟ್ಟಾಗಿ ಪಟ್ಟಣದ ನಿವಾಸಿ ಮಂಜುನಾಥ್ ಎಂಬಾತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಕೆಲ ತಿಂಗಳುಗಳ ಹಿಂದೆ ಯುವಕ ಕೊಲೆ ಯತ್ನ ನಡೆಸಿದ್ದ. ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷೆಯ ಪತಿಯ ಕೊಲೆಗೆ ಮಂಜುನಾಥ್ ಮುಂದಾಗಿದ್ದ. ಆದರೆ, ಅದೃಷ್ಟವಶಾತ್ ವ್ಯಕ್ತಿ ಅಪಾಯದಿಂದ ಪಾರಾಗಿದ್ದ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಕೊಲೆ ಯತ್ನ ಪ್ರಕರಣದಲ್ಲಿ ಮೃತ ಯುವಕ ಜೈಲಿಗೆ ಹೋಗಿ ಬಂದಿದ್ದ. ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ, ಭಾನುವಾರ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.
ಇದನ್ನೂ ಓದಿ | Murder Case | ಜಮೀನಿಗಾಗಿ ಯೋಧರಿಬ್ಬರ ಗಲಾಟೆ ಕೊಲೆಯಲ್ಲಿ ಅಂತ್ಯ