ಬೆಂಗಳೂರು: ರೈತರ ಸಾಲ ಮನ್ನಾ (Farmers loan Waiver), ಕಾವೇರಿ ನೀರು ವಿಚಾರ, ರೈತರಿಗೆ ಎಕರೆಗೆ 25 ಸಾವಿರ ರೂ. ಬರ ಪರಿಹಾರ, ಕಬ್ಬಿನ ಎಫ್ ಆರ್‌ಪಿ ದರ ಬದಲಾವಣೆ, ಆತ್ಮಹತ್ಯೆ ಮಾಡಿಕೊಂಡ ರೈತರಿಗೆ 5 ಲಕ್ಷ ರೂ. ಪರಿಹಾರ ಸೇರಿದಂತೆ 18 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಮಂಗಳವಾರ (ಫೆಬ್ರವರಿ 6) ಅನ್ನದಾತರ ಬೆಂಗಳೂರು ಚಲೋ (Farmers protest) ನಡೆಯಿತು. ರೈತ ನಾಯಕ ಕುರುಬೂರು ಶಾಂತ ಕುಮಾರ್ (Kuruburu Shanthakumar) ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ರೈತರು ಭಾಗಿಯಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ (Farmers attack on Government) ವ್ಯಕ್ತಪಡಿಸುತ್ತಿದ್ದಾರೆ.
ಬಜೆಟ್ ಪೂರ್ವಭಾವಿಯಾಗಿ ನಡೆದಿರುವ ಈ ಪ್ರತಿಭಟನೆಯ ವೇಳೆ ಮುಂದಿನ ಬಜೆಟ್‌ನಲ್ಲೇ ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆದಿದೆ.
ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ರವರ ನೇತೃತ್ವದಲ್ಲಿ ಚಲೋ ನಡೆದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.
ರೈತರ ಪರವಾಗಿ ನಿಲ್ಲದ ಸರ್ಕಾರ: ಕುರುಬೂರು ಶಾಂತ ಕುಮಾರ್ ಆಕ್ರೋಶ
ʻʻರಾಜ್ಯ ರೈತರು ಆತ್ಮಹತ್ಯೆ ಮಾಡ್ಕೊಳ್ತಿದ್ದಾರೆ. ಬೇರೆ ಕಡೆಗೆ ವಲಸೆ ಹೋಗುತ್ತಿದ್ದಾರೆ. ಇಷ್ಟೆಲ್ಲಾ ಕಷ್ಟದಲ್ಲಿದ್ದರೂ ಸರ್ಕಾರ ರೈತರ ಪರವಾಗಿ ನಿಲ್ಲುತ್ತಿಲ್ಲʼʼ ಎಂದು ಹೇಳಿದ ಕುರುಬೂರು ಶಾಂತ ಕುಮಾರ್ ಅವರು, ʻʻತೆಲಂಗಾಣದ ಕಾಂಗ್ರೆಸ್ ಸರ್ಕಾರ ಅಲ್ಲಿನ ರೈತರ ಸಾಲವನ್ನು ಮನ್ನಾ ಮಾಡಿದೆ. ರಾಜ್ಯದ ಸಿದ್ದರಾಮಯ್ಯ ಸರ್ಕಾರ ಕೂಡ ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಈ ಬಜೆಟ್ ನಲ್ಲಿ ರೈತರಿಗೆ ಹೆಚ್ಚಿನ ಅನುದಾನ ಕೊಡಬೇಕು. ಈ ಬಜೆಟ್ ನಲ್ಲಿ ರೈತರ ಸಾಲವನ್ನ ಸಂಪೂರ್ಣ ಮನ್ನಾ ಮಾಡಬೇಕುʼʼ ಎಂದು ಆಗ್ರಹಿಸಿದರು.
ʻʻಸಿದ್ದರಾಮಯ್ಯ ರೈತ ಕುಟುಂಬದಿಂದ ಬಂದವರಾದರೂ ರೈತರ ಅನುದಾನ ಕಡಿತ ಮಾಡ್ತಿದ್ದಾರೆʼʼ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರವು, ರಾಜ್ಯಕ್ಕೆ ಅನುದಾನ ಕಡಿತ ಮಾಡಿರುವುದನ್ನು ಪ್ರತಿಭಟಿಸಲು ಫೆಬ್ರವರಿ 7ರಂದು ದಿಲ್ಲಿಯಲ್ಲಿ ಪ್ರಕತಿಭಟನೆ ಆಯೋಜಿಸಿರುವ ಬಗ್ಗೆ ಪ್ರಶ್ನಿಸಿದಾಗ, ರಾಜ್ಯ ಸರ್ಕಾರ ಕೇಂದ್ರದ ಮೇಲೆ ಕೇಂದ್ರ ಸರ್ಕಾರವು ರಾಜ್ಯದ ಮೇಲೆ ಗೂಬೆ ಕೂರಿಸುತ್ತಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗೆ ಇದುವರೆಗೂ ಕೊಟ್ಟ ಯೋಜನೆಯ ಶ್ವೇತ ಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು ಕುರುಬೂರು ಶಾಂತ ಕುಮಾರ್.
ʻʻಶ್ವೇತಪತ್ರ ಹೊರಡಿಸಿದರೆ ಸ್ವಾತಂತ್ರ್ಯ ಬಂದ ನಂತರ ಸರ್ಕಾರಗಳು ರೈತರಿಗೆ ಎಷ್ಟು ಹಣವನ್ನು ಕೊಟ್ಟಿವೆ ಎನ್ನುವುದು ಗೊತ್ತಾಗುತ್ತದೆ.ʼʼ ಎಂದು ಹೇಳಿದರು.
ಪ್ರತಿಭಟನಾ ನಿರತ ರೈತರ ಪ್ರಮುಖ ಬೇಡಿಕೆಗಳೇನು?
1.ತೆಲಂಗಾಣದಂತೆ ರಾಜ್ಯದಲ್ಲಿ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು.
2. ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡು ಯೋಜನೆ ಜಾರಿ ಮಾಡಬೇಕು.
3.ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಕಾವೇರಿ ಆಚ್ಚುಕಟ್ಟು ರೈತರಿಗೆ ವಂಚನೆ ಆಗಿದೆ. ಅವರಿಗೆ ಸರ್ಕಾರ ಕೂಡಲೇ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡಬೇಕು.
4.ಕಬ್ಬು ಕಟಾವು ಸಾಗಾಣಿಕೆ ದರವನ್ನು ಕಾರ್ಖಾನೆಗಳು ಮನ ಬಂದಂತೆ ಕಡಿತ ಮಾಡಿವೆ. ಕಡಿತ ಮಾಡಿರುವ ಹೆಚ್ಚುವರಿ ಹಣ ರೈತರಿಗೆ ವಾಪಸ್ ಕೊಡಿಸಬೇಕು.
5. ಆಕಸ್ಮಿಕ, ಅಪಘಾತ ಸಾವು, ಆತ್ಮಹತ್ಯೆಗೆ ಒಳಗಾದ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡಬೇಕು.
6. ರಾಜ್ಯದ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಎಂ ಎಸ್ ಪಿ ಖರೀದಿ ಕೇಂದ್ರ ತೆರೆಯಬೇಕು.
ಇದನ್ನೂ ಓದಿ: CM Siddaramaiah: ಸಿಎಂ ಸಿದ್ದರಾಮಯ್ಯಗೆ ಹತ್ತು ಸಾವಿರ ದಂಡ ವಿಧಿಸಿದ ಕೋರ್ಟ್!
7. ರೈತರು ಬೆಳೆದ ಸಿರಿಧಾನ್ಯಗಳನ್ನು ಉತ್ಪಾದನಾ ವೆಚ್ಚಕ್ಕೆ ಬೆಂಬಲ ಬೆಲೆ, ಹೆಚ್ಚುವರಿ ಬೆಲೆ ನಿಗದಿ ಮಾಡಬೇಕು. ಅದನ್ನು ಸರ್ಕಾರವೇ ಕಡ್ಡಾಯವಾಗಿ ಖರೀದಿಸುವಂತೆ ವ್ಯವಸ್ಥೆ ಜಾರಿಗೆ ಬರಬೇಕು.
8.ರೈತರ ಎಲ್ಲಾ ಬೆಳೆಗಳಿಗೆ ಬೆಳೆ ವಿಮೆ ಜಾರಿಯಾಗಬೇಕು, ಬೆಳೆ ವಿಮೆ ಪದ್ದತಿಯ ಕೆಲವು ನೀತಿ ಬದಲಾಗಬೇಕು.
8.ಬೆಳೆ ನಷ್ಟಕ್ಕೆ ಪರಿಹಾರ ವೈಜ್ಞಾನಿಕವಾಗಿ ಸಂಪೂರ್ಣ ನಷ್ಟ ಸಿಗುವಂತಾಗಬೇಕು..
9. ಕೃಷಿ ಸಾಲ ನೀತಿ ಬದಲಾಗಬೇಕು. ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಡ್ಡಿ ರಹಿತ ಸಾಲ ನೀಡುವಂತೆ ಆಗಬೇಕು.
10. ಎಲ್ಲಾ ರೈತರಿಗೂ ಕೇವಲ ಪಹಣಿ ಪತ್ರ ಆಧರಿಸಿ ಕನಿಷ್ಠ 5 ಲಕ್ಷ ಆಧಾರ ರಹಿತ ಬಡ್ಡಿ ಇಲ್ಲದ ಸಾಲ ಕೊಡಿಸುವಂತೆ ಮಾಡಬೇಕು.
11. ಡಿಸೆಂಬರ್ 23ರ ರಾಷ್ಟ್ರೀಯ ರೈತ ದಿನವನ್ನು ರೈತರ ಹಬ್ಬದ ರೀತಿ ಆಚರಿಸಲು ಕ್ರಮ ಕೈಗೊಳ್ಳ ಬೇಕು.
12. ಕೃಷಿಗೆ ಬಳಸುವ ಕೀಟನಾಶಕ, ರಸಗೊಬ್ಬರ, ಉಪಕರಣಗಳು ಟ್ಯಾಕ್ಟರ್ ಬಿಡಿಭಾಗಗಳ ಜಿ ಎಸ್ಟಿ ತೆರಿಗೆ ರದ್ದುಗೊಳಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು.
13. ಎಂಟು ಲಕ್ಷಕ್ಕೂ ಹೆಚ್ಚು ಬಗರ್ ಹುಕುಂ ಸಾಗುವಳಿ ರೈತರಿಗೆ ಸಾಗುವಳಿ ಪತ್ರ ನೀಡಬೇಕು.ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ರದ್ದಾಗಬೇಕು..
14. ಅರುವತ್ತು ವರ್ಷ ತುಂಬಿದ ರೈತರಿಗೆ ಮಾಸಿಕ ಭತ್ಯೆ ಕನಿಷ್ಠ ರೂ 10,000 ಪಿಂಚಣಿ ಯೋಜನೆ ಜಾರಿಗೆ ತರಬೇಕು.