ಬೆಂಗಳೂರು: ನೆಲಮಂಗಲ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ಅಪಘಾತದಲ್ಲಿ (Road accident) ತಂದೆ ಮತ್ತು ಐದು ವರ್ಷದ ಮಗಳು (Father and daughter Dead) ಮೃತಪಟ್ಟಿದ್ದಾರೆ. ಬೈಕ್ ಡಿವೈಡರ್‌ಗೆ ಡಿಕ್ಕಿ (Bike hits Divider) ಹೊಡೆದು ಸಂಭವಿಸಿದ ದುರಂತ ಇದಾಗಿದೆ.
ಬೆಂಗಳೂರಿನ ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಂದೆ-ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತ್ನಿಗೆ ಗಂಭೀರ ಗಾಯಗಳಾಗಿವೆ.
ಬೆಂಗಳೂರಿನ ಚಿಕ್ಕಪೇಟೆಯ ಅಮಿತ್ (32) ಹಾಗೂ 5 ವರ್ಷದ ಮಗಳು ಅನಿತಾ ಮೃತಪಟ್ಟವರು. ಅಮಿತ್ ಪತ್ನಿ ಕುಸುಮಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ತಂದೆ ಹಾಗೂ ಮಗಳ ಇಬ್ಬರ ತಲೆಗೂ ಗಂಭೀರ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟರು.
ಅಮಿತ್ ಮತ್ತು ಕುಸುಮಾ ಅವರು ತಮ್ಮ ಪುಟ್ಟ ಮಗಳೊಂದಿಗೆ ಸಂಕ್ರಾಂತಿ ಹಬ್ಬಕ್ಕೆಂದು ಊರಿಗೆ ಹೋಗಿದ್ದರು. ಅಲ್ಲಿಂದ ಹಬ್ಬ ಮುಗಿಸಿ ಮರಳುವಾಗ ನೆಲಮಂಗಲ ಬಳಿಯ ಅಡಕಮಾರನಹಳ್ಳಿಯ ಪ್ಲೈಓವರ್ ಮೇಲೆ ಅವರು ಚಲಾಯಿಸುತ್ತಿದ್ದ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟರೆ, ತಾಯಿಯ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ: Road Accident: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಡೆಲಿವರಿ ಬಾಯ್ ಸಾವು
ಸಂಕ್ರಾಂತಿ ದಿನ ಅಪಘಾತಗಳ ಸರಮಾಲೆ
ಸಂಕ್ರಾಂತಿ ಹಬ್ಬದ (Sankranti Fest) ದಿನವಾದ ಸೋಮವಾರ ರಾಜ್ಯದ ಹಲವು ಕಡೆ ಅಪಘಾತಗಳು ಸಂಭವಿಸಿದ್ದು, ಸಾಕಷ್ಟು ಸಾವು-ನೋವುಗಳು ವರದಿಯಾಗಿವೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ (Within 24 Hours) 10 ಭೀಕರ ಅಪಘಾತಗಳು ಸಂಭವಿಸಿವೆ. ಅಪಘಾತಗಳಲ್ಲಿ 16 ಮಂದಿ ದಾರುಣವಾಗಿ ಮೃತಪಟ್ಟಿದ್ದರೆ, 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಒಂದೊಂದು ಎರಡು ಅಪಘಾತದಲ್ಲಿ ತಲಾ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.