ಬೆಂಗಳೂರು: ಬೂತ್ ಲಿಸ್ಟ್ ಹಿಡಿದು ಸರ್ವೇ ಮಾಡುತ್ತಿದ್ದ ಕಾರ್ಯಕರ್ತರನ್ನು ಪ್ರಶ್ನಿಸಿದ ಪರಿಣಾಮ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಕುರಿತು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಿಂದ ದೂರುಗಳು ದಾಖಲಾಗಿವೆ.
ಕಾಂಗ್ರೆಸ್ ಕಾರ್ಯಕರ್ತರು ಬೂತ್ ಲಿಸ್ಟ್ ಹಿಡಿದು ಮತದಾರರ ಸರ್ವೇ ಮಾಡುತ್ತಿದ್ದ ವೇಳೆ ಅದನ್ನು ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದು, ಈ ಸಂದರ್ಭದಲ್ಲಿ ಮಾತಿನ ಚಕಮಕಿ ಉಂಟಾಗಿದೆ. ಎರಡೂ ಕಡೆಯವರೂ ತಮ್ಮ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಪರಸ್ಪರ ದೂರು ದಾಖಲಿಸಿದ್ದಾರೆ.
ರಘು, ಶ್ಯಾಮ್, ಗೋಪಾಲ್ ಎಂಬ ಮೂವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಗುಲಾಬ್ ಜಾನ್ ಎಂಬವರು ನೀಡಿದ ದೂರಿನ ಮೇರೆಗೆ ಕೇಸ್ ದಾಖಲು ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ರಘು ಕೊಟ್ಟ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತರಾದ ಮಾಜಿ ಪಾಲಿಕೆ ಸದಸ್ಯ ವೆಂಕಟೇಶ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ | ಶೃಂಗೇರಿ ಮಸೀದಿ ಮುಂಭಾಗ ಕೇಸರಿ ಬಾವುಟ, ಯುವಕರ ಚಕಮಕಿ