ಬೆಂಗಳೂರು: ರಾಜಧಾನಿಯ (Bangalore news) ರಾಮಮೂರ್ತಿನಗರದಲ್ಲಿ ಆಕಸ್ಮಿಕ ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಐಟಿ ಕಂಪನಿ ಹಾಗೂ ಪೀಠೋಪಕರಣ ಮಳಿಗೆ ಸಂಪೂರ್ಣ ಹೊತ್ತಿ ಉರಿದು ಭಸ್ಮವಾಗಿದೆ.
ಕಟ್ಟಡದಲ್ಲಿದ್ದ ಐಟಿ ಕಂಪನಿ, ಫರ್ನಿಚರ್ ಶಾಪ್ ಹಾಗೂ ಕೋಚಿಂಗ್ ಸೆಂಟರ್ ಸಂಪೂರ್ಣ ಸುಟ್ಟು ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಢ (fire mishap, fire tragedy) ನಡೆದಿರುವ ಶಂಕೆಯಿದೆ.
ಬಾಣಸವಾಡಿ ಔಟರ್ ರಿಂಗ್ ರೋಡ್‌ನಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನ ದೌಡಾಯಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಕಟ್ಟಡದ ನಾಲ್ಕು ಅಂತಸ್ತಿನಲ್ಲಿದ್ದ ವಸ್ತುಗಳು ಸಂಪೂರ್ಣ ಭಸ್ಮವಾಗಿವೆ.
ನೆಲ ಹಾಗೂ ಮೊದಲ ಮಹಡಿಯಲ್ಲಿ ಸ್ಟ್ಯಾನ್ಲಿ ಫರ್ನಿಚರ್ಸ್, ಎರಡನೇ ಮಹಡಿಯಲ್ಲಿ ಕಾಮೆಡ್ ಕೋಂಚಿಂಗ್ ಸೆಂಟರ್ ಹಾಗೂ 3, 4ನೇ ಮಹಡಿಯಲ್ಲಿ ಬ್ರೇಕ್ಸ್ ಕಂಟ್ರೋಲ್ಸ್ ಸಾಫ್ಟ್‌ವೇರ್ ಕಂಪನಿಗಳಿದ್ದವು. ಇವೆಲ್ಲವೂ ಸಂಪೂರ್ಣ ಸುಟ್ಟುಹೋಗಿವೆ.
ಕಟ್ಟಡದಲ್ಲಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಟ್ಟಡದಲ್ಲಿ ಸಿಲುಕಿದ್ದ ಸೆಕ್ಯೂರಿಟಿ ಗಾರ್ಡ್‌ಗಳನ್ನು ಅಗ್ನಿಶಾಮಕದಳ ಸಿಬ್ಬಂದಿಗಳು ರಕ್ಷಿಸಿದರು.
ಇದನ್ನೂ ಓದಿ: Fire Accident : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ; 20ಕ್ಕೂ ಅಧಿಕ ಐಷಾರಾಮಿ ಬಸ್‌ಗಳು ಭಸ್ಮ