ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಟಿಶ್ಯೂ ಪೇಪರ್ ಕಂಪನಿಯ ಗೋಡೌನ್ ಸಂಪೂರ್ಣ ಭಸ್ಮವಾಗಿದೆ.
ಬೆಂಗಳೂರಿನ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಸಮೀಪದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿರುವ ಭಾರಿ ಅಗ್ನಿ ಅನಾಹುತದಲ್ಲಿ ಗಾಮಿ ಕೇರ್ ಐಜಿನ್ ಕಂಪನಿ ಎಂಬ ಟಿಶ್ಯೂ ಪೇಪರ್ ಮ್ಯಾನುಫ್ಯಾಕ್ಚರ್ ಕಂಪನಿಗೆ ಸೇರಿದ ಗೋಡೌನ್ ಪೂರ್ತಿ ಸುಟ್ಟುಹೋಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಊಟಕ್ಕೆಂದು ಹೊರ ಹೋಗಿದ್ದ ವೇಳೆ ಗೋದಾಮಿನೊಳಗೆ ಬೆಂಕಿ ಕಾಣಿಸಿಕೊಂಡಿದೆ. ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ಬೆಂಕಿ ಕೆಲವೇ ನಿಮಿಷಗಳಲ್ಲಿ ಇಡೀ ಗೋದಾಮನ್ನು ಆವರಿಸಿದೆ.
9 ವಾಹನಗಳಲ್ಲಿ ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸತತ ಏಳೆಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮೇಲ್ನೋಟಕ್ಕೆ ಇದು ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕಚೇರಿ, ತಯಾರಿಕ ಘಟಕದಲ್ಲಿದ್ದ ಕಂಪ್ಯೂಟರ್ಸ್, ಯಂತ್ರೋಪಕರಣಗಳು, ಕೆಮಿಕಲ್ಸ್, ಕಚ್ಚಾ ವಸ್ತುಗಳು ಸೇರಿದಂತೆ ಕೋಟ್ಯಾಂತರ ರೂಪಾಯಿ ಮೌಲ್ಯದ ಸ್ವತ್ತು ಬೆಂಕಿಯಲ್ಲಿ ಬೆಂದು ಬೂದಿಯಾಗಿವೆ. ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: Fire Accident: ಜೆ.ಸಿ. ನಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಪ್ರಾಣಾಪಾಯದಿಂದ ಚಾಲಕ ಪಾರು