ಹೊಸಕೋಟೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ (bisiyuta) ಸೇವಿಸಿದ 8 ಮಕ್ಕಳು (Food Poison) ಅಸ್ವಸ್ಥರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ನೆಲವಾಗಿಲು ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಈ ಘಟನೆ ನಡೆದಿದೆ.
ಅಸ್ವಸ್ಥತರಾದ 8 ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಳೆದೆರಡು ದಿನಗಳಿಂದ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಳೆತ ಮೊಟ್ಟೆ ವಿತರಿಸಿರುವ ಆರೋಪ ಇದೆ. ಕೊಳೆತ ಮೊಟ್ಟೆಯನ್ನು ತಿಂದು 8 ಮಂದಿ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಹೇಳಲಾಗಿದೆ.
ಅಸ್ವಸ್ಥವಾಗಿರುವ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಉಳಿದುಕೊಂಡಿರುವವರು. ನಿನ್ನೆ ಮಧ್ಯಾಹ್ನ ಊಟ ಮಾಡಿದ ನಂತರ ವಸತಿನಿಲಯದಲ್ಲಿದ್ದ ಕೆಲ ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ವಸತಿ ನಿಲಯದ ವಾರ್ಡನ್, ವಿದ್ಯಾರ್ಥಿಗಳನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಚಿಕಿತ್ಸೆ ಪಡೆದ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ. ಪ್ರೌಢಶಾಲೆಯಲ್ಲಿ ನೀಡಿದ ಕೊಳೆತ ಮೊಟ್ಟೆಯೇ ಇದಕ್ಕೆ ಕಾರಣ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಹೆದ್ದಾರಿಯಲ್ಲಿ ಸರಣಿ ಅಪಘಾತ
ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಹಲವು ಪ್ರಯಾಣಿಕರು ಪಾರಾಗಿದ್ದಾರೆ. ಇಬ್ಬರಿಗೆ ಗಾಯವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ಘಟನೆ ನಡೆದಿದೆ.
ಐದು ಕಾರು, ಒಂದು ಬಸ್, ಒಂದು ಕ್ಯಾಂಟರ್ ನಡುವೆ ಅಪಘಾತವಾಗಿದ್ದು, ವಾಹನಗಳು ಜಖಂ ಆಗಿವೆ. ಅತೀಯಾದ ವೇಗದಿಂದ ಸರಣಿ ಅಪಘಾತವಾಗಿರುವ ಶಂಕೆ ಮೂಡಿದೆ. ಗಾಯಗೊಂಡ ಇಬ್ಬರು ಪ್ರಯಾಣಿಕರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದಿಂದ ಹೆದ್ದಾರಿಯಲ್ಲಿ ಸುಮಾರು ಎರಡು ಕಿ.ಮೀವರೆಗೂ ಟ್ರಾಫಿಕ್ ಜಾಂ ಉಂಟಾಯಿತು. ನೆಲಮಂಗಲ ಸಂಚಾರಿ ಪೊಲೀಸರು ಮತ್ತು ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಹೆದ್ದಾರು ಮಾಡಿಸಿದ್ದಾರೆ. ನೆಲಮಂಗಲ ಸಂಚಾರಿ ರಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Hospet News: ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 14 ಜನರು ಅಸ್ವಸ್ಥ