ಬೆಂಗಳೂರು: ರಾಜಧಾನಿಯ ಪಿಜಿಯೊಂದರಲ್ಲಿ (PG) ಊಟ ಮಾಡುತ್ತಿರುವಾಗ ಇಲಿ ವಿಷ (Rat Poison spray) ಸ್ಪ್ರೇ ಮಾಡಿದ ಕಾರಣ ವಿದ್ಯಾರ್ಥಿಗಳು ಅಸ್ವಸ್ಥಗೊಂಡು (Food Poison) ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿತ್ತು. ಪಿಜಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಎಂಬಾತ ಸ್ಪ್ರೇ ಮಾಡಿದ್ದು, ಇದರಿಂದ ಫುಡ್ ಪಾಯಿಸನ್ ಆಗಿದೆ.
ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ತಿರದ ಅಭಯ ಆಸ್ಪತ್ರೆ, ಭಾನು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ನರ್ಸಿಂಗ್ ಕಾಲೇಜಿನಿಂದ ಹಾಸ್ಟೆಲ್ ನಡೆಸಲಾಗುತ್ತಿದ್ದು, ಹಾಸ್ಟೆಲ್ ಬಿಲ್ಡಿಂಗ್‌ನ ನೆಲ ಮಹಡಿಯಲ್ಲಿ ಊಟದ ಹಾಲ್ ಇದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿಡ್ನ್ಯಾಪ್ ಮಾಡಿ ಮಹಿಳೆ ಮೇಲೆ ಅತ್ಯಾಚಾರ, ಮಗನ ಮೇಲೂ ಹಲ್ಲೆ; 9 ಆರೋಪಿಗಳ ಅರೆಸ್ಟ್
ಬೆಂಗಳೂರು: ತಾಯಿ-ಮಗನನ್ನು ಕಿಡ್ನ್ಯಾಪ್ ಮಾಡಿ ಕಿರುಕುಳ ನೀಡಿದ ಆರೋಪದಲ್ಲಿ 9 ಆರೋಪಿಗಳನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕಿಡ್ನ್ಯಾಪ್ ಆಗಿದ್ದ ಯುವಕನ ಮೇಲೆ ಕಳ್ಳತನ ಪ್ರಕರಣಗಳಿದ್ದವು. ಹೀಗಾಗಿ ಹಣ ವಸೂಲಿ ಮಾಡಲು ಯುವಕ ಹಾಗೂ ಆತನ ತಾಯಿಯನ್ನು ಆರೋಪಿಗಳು ಅಪಹರಿಸಿ, ಕಿರುಕುಳ (Physical Abuse) ನೀಡಿದ್ದರು. ಹೀಗಾಗಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವರುಣ್ ಮತ್ತು ಆತನ ತಾಯಿಯನ್ನು ಅಪಹರಣ ಮಾಡಲಾಗಿತ್ತು. ರೌಡಿ ಶೀಟರ್‌ಗಳಾದ ಜೋಸೆಫ್, ಶ್ರೀನಿವಾಸ್ @ ಪಾಗಲ್ ಸೀನಾ, ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಬಂಧಿತ ಆರೋಪಿಗಳು.
ವರುಣ್ ಹಾಗೂ ತಾಯಿ ಇಬ್ಬರು ಸೇರಿ ಕಳ್ಳತನ ಮಾಡಿರುವ ವಿಚಾರ ಆರೋಪಿಗಳಿಗೆ ತಿಳಿದಿತ್ತು. ಹಾಗಾಗಿ ಕಳ್ಳತನ ಮಾಡಿರುವ ಹಣ ನೀಡುವಂತೆ ತಾಯಿ-ಮಗನನ್ನು ಆರೋಪಿಗಳು ಬೆದರಿಸಿದ್ದರು. ಆದರೆ, ಅವರು ಹಣ ನೀಡದ ಹಿನ್ನೆಲೆ ತಾಯಿ- ಮಗನನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು.
ಆ. 13ರಂದು ತಾಯಿ-ಮಗನನ್ನು ಆರೋಪಿಗಳಾದ ಜೋಸೇಫ್ ಮತ್ತು ಶ್ರೀನಿವಾಸ್@ಪಾಗಲ್ ಸೀನಾ ಕಿಡ್ನ್ಯಾಪ್ ಮಾಡಿದ್ದರು. ನಂತರ ಪರಿಚಯಸ್ಥ ಪ್ರತಾಪ್ ಮನೆಯಲ್ಲಿ ಅಕ್ರಮವಾಗಿ ಇರಿಸಿ ಟಾರ್ಚರ್ ನೀಡಲಾಗಿದೆ. ಈ ವೇಳೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿತ್ತು.
2 ಲಕ್ಷ ರೂ. ಕೊಡುವಂತೆ ಆರೋಪಿಗಳಿಂದ ಕಿರುಕುಳ ನೀಡಲಾಗಿದೆ. ಇಬ್ಬರ ಬಳಿಯೂ ಹಣ ಇಲ್ಲ ಎಂದು ಗೊತ್ತಾದಾಗ ಬಿಟ್ಟು ಕಳಿಸಿದ್ದಾರೆ. ನಂತರ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದ್ದರಿಂದ ಪ್ರಕರಣ ಸಂಬಂದ 9 ಆರೋಪಿಗಳ ಬಂಧನವಾಗಿದೆ.
ಆರೋಪಿಗಳಾದ ಜೋಸೆಫ್ ಮತ್ತು ಪಾಗಲ್ ಸೀನ ಚಂದ್ರಾ ಲೇಔಟ್ ರೌಡಿ ಶೀಟರ್‌ಗಳಾಗಿದ್ದು, ಶಹಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ | Food Poisoning: ಶಾಲೆಯಲ್ಲಿ ಕೊಟ್ಟ ಬಿಸ್ಕೇಟ್ ಸೇವಿಸಿ ಬರೋಬ್ಬರಿ 80 ವಿದ್ಯಾರ್ಥಿಗಳು ಅಸ್ವಸ್ಥ