Site icon Vistara News

Food Poisoning : ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು; ದಂಪತಿ ಸ್ಥಿತಿ ಗಂಭೀರ

5-year-old boy dies after eating cake in Bengaluru Couple's condition critical

ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ ಕೇಕ್‌ ತಿಂದು ಒಂದೇ ಕುಟುಂಬದ ಮೂವರು (Food Poisoning) ಅಸ್ವಸ್ಥಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಧೀರಜ್ (5) ಎಂಬ ಮಗು ಸಾವನ್ನಪ್ಪಿದೆ. ತಂದೆ ಬಾಲರಾಜ್, ತಾಯಿ ನಾಗಲಕ್ಷ್ಮಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಾಲರಾಜ್‌ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಮಗನಿಗಾಗಿ ಮನೆಗೆ ಕೇಕ್‌ ತೆಗೆದು ಕೊಂಡು ಹೋಗಿದ್ದರು. ಮನೆಯಲ್ಲಿ ಪತ್ನಿ ಮತ್ತು ಮಗುವಿನ ಜತೆ ಸೇರಿ ಮೂವರು ಕೇಕ್ ತಿಂದಿದ್ದರು. ಕೇಕ್ ತಿಂದ ನಂತರ ಮೂವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ.

ಕೂಡಲೇ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಮೂವರ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಧೀರಜ್‌ ತೀವ್ರ ಅಸ್ವಸ್ಥಗೊಂಡಿದ್ದರಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಬಾಲರಾಜ್ , ನಾಗಲಕ್ಷ್ಮಿ ದಂಪತಿ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೆಪಿ ಅಗ್ರಹಾರ ಠಾಣೆ ಪೊಲೀಸರಿಂದ ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೇಕ್ ತಂದಿದ್ದು ಯಾವ ಬೇಕರಿಯಿಂದ? ಕೇಕ್‌ನಲ್ಲಿರೋ ಅಂಶಗಳಿಂದ ಅಸ್ವಸ್ಥರಾಗಿದ್ದಾರಾ ? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರು ಪುಡ್ ಪಾಯನ್ಸ್‌ನಿಂದ ಸಾವು ಸಂಭವಿಸಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ವೈದ್ಯರ ವರದಿಗಾಗಿ ಕಾಯುತ್ತಿದ್ದಾರೆ.

ಬಾಲಕ ಧೀರಜ್‌ ತಂದೆ ಬಾಲರಾಜ್‌ ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ವ್ಯಕ್ತಿಯೊಬ್ಬರು ಕೇಕ್ ಆರ್ಡರ್ ಮಾಡಿ, ನಂತರ ಕ್ಯಾನ್ಸಲ್ ಮಾಡಿದ್ದರಂತೆ. ಹೀಗಾಗಿ ಬಾಲರಾಜ್‌ ಕೇಕ್ ಮನೆಗೆ ತಂದು ಕುಟುಂಬದೊಂದಿಗೆ ತಿಂದಿದ್ದಾರೆ. ನಂತರ ಮೂವರು ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡು ಧೀರಜ್‌ ಮೃತಪಟ್ಟಿದ್ದಾನೆ.
ಸದ್ಯ ಈ ಪ್ರಕರಣ ಹಲವು ಅನುಮಾನ ಮೂಡಿಸಿದೆ. ಕೇಕ್ ನಿಂದನೇ ಘಟನೆ ಸಂಭವಿಸಿದ್ಯಾ? ಅಥವಾ ಆತ್ಮಹತ್ಯೆಗೆ ಏನಾದರೂ ಪ್ರಯತ್ನ ಮಾಡಿದ್ರಾ? ಎಂಬ ಅನುಮಾನ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version