Fraud Case : ಚಂದದ ಹುಡುಗಿ ಅಂತ ಆಸೆಪಟ್ಟು ರೂಮಿಗೆ ಹೋದರೆ ಅಲ್ಲಿ ಕಂಡಿದ್ದೇ ಬೇರೆ! - Vistara News

ಕರ್ನಾಟಕ

Fraud Case : ಚಂದದ ಹುಡುಗಿ ಅಂತ ಆಸೆಪಟ್ಟು ರೂಮಿಗೆ ಹೋದರೆ ಅಲ್ಲಿ ಕಂಡಿದ್ದೇ ಬೇರೆ!

Fraud Case : ಸೂರತ್‌ ನಿಂದ ಬೆಂಗಳೂರಿಗೆ ಬಂದಿದ್ದ ನಿವೃತ್ತ ಅಧಿಕಾರಿಯೊಬ್ಬರ ಕಥೆ ಇದು. ಇಲ್ಲಿ ಯಾವುದೂ ನಿಜವಲ್ಲ ಎನ್ನುವುದು ಅವರು ಮೋಸ ಹೋದ ಕಥೆಯ ಸಾರಾಂಶ.

VISTARANEWS.COM


on

lusty old man and a woman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಅವರು ಸೂರತ್‌ ಮೂಲದ ಒಬ್ಬ ನಿವೃತ್ತ ಅಧಿಕಾರಿ (Retired officer). ಗಜೆಟೆಡ್‌ ಹುದ್ದೆಯಲ್ಲಿದ್ದವರು. ಬೆಂಗಳೂರಿಗೆ ಯಾವುದೋ ಟ್ರಿಪ್‌ ಮೇಲೆ (Officer came on trip to Bangalore) ಬಂದಿದ್ದರು. ಊರು ಬಿಟ್ಟು ಬೆಂಗಳೂರಿಗೆ ಬಂದ ಅವರು ಸ್ವಲ್ಪ ಮೈ ಚಳಿ ಬಿಟ್ಟು ಸುತ್ತಾಡಿದ್ದರು. ಆಗ ಅವರಿಗೆ ಚರ್ಚ್‌ ಸ್ಟ್ರೀಟ್‌ನಲ್ಲಿ (Church Street) ಒಬ್ಳು ಸುಂದರವಾದ ಹುಡುಗಿ ಸಿಗ್ತಾಳೆ (A Beautiful Girl). ಅದೂ ಇದೂ ಮಾತಾಡೋ ಹೊತ್ತಿಗೆ 61ರ ವಯಸ್ಸಿನಲ್ಲಿ 16ರ ಕಾಮನೆ ಕೆರಳಿಬಿಡುತ್ತದೆ ಈ ರಿಟೈರ್ಡ್‌ ಆಫೀಸರ್‌ಗೆ. ಚಂದದ ಹುಡುಗಿ, ಬೆಂಗಳೂರಿನ ಹಿತವಾದ ವಾತಾವರಣ, ಚರ್ಚ್‌ ಸ್ಟ್ರೀಟ್‌ನ ಹಿತವಾದ ಜಾಗ.. ಇದಕ್ಕಿಂತ ಬೇರೆ ಬೇಕಾ ಎಂದು ಮಾತನಾಡುತ್ತಲೇ ಹುಡುಗಿಯನ್ನು ಸೆಟ್‌ ಮಾಡಿಕೊಂಡರು. ಆಕೆಯೋ ಮೊದಲೇ ಪಳಗಿದ ಹುಡುಗಿ. ಇವರು ನಾನ್‌ ರೆಡಿ ಎಂದ ಕೂಡಲೇ ಆಟೋ ಅಂತ ಕೂಗಿ ಕರೆದಳು. ಅವರಿಬ್ಬರು ಹೋಗಿದ್ದು ಒಂದು ಮನೆಗೆ!

ಅದುಮಿಟ್ಟಿದ್ದ ಆಕಾಂಕ್ಷೆಗಳನ್ನು ಬೆಂಗಳೂರಿನಲ್ಲಿ ಪೂರ್ಣವಾಗಿ ತೆರೆದಿಡುವ ಉತ್ಸಾಹದಲ್ಲಿ ಹೋಗಿದ್ದ ನಿವೃತ್ತ ಅಧಿಕಾರಿಗೆ ಅಲ್ಲಿ ಒಬ್ಬಳಲ್ಲ, ಇಬ್ಬರು ಸುಂದರಿಯರು ಸಿಕ್ಕರು. ಒಂದಕ್ಕೆ ಒಂದು ಫ್ರೀ ಎಂದು ಖುಷಿಯಲ್ಲಿದ್ದ ಅವರ ಉತ್ಸಾಹ ಕೆಲವೇ ಕ್ಷಣಗಳಲ್ಲಿ ಇಳಿದುಹೋಯಿತು. ಹಾಗಿದ್ದರೆ ಅಲ್ಲಿ ನಡೆದಿದ್ದೇನು? (Fraud Case)

ಇದು ಯಾರೋ ಹೇಳಿದ ಕಥೆಯಲ್ಲ, ಸ್ವತಃ ಆ ವ್ಯಕ್ತಿಯೇ ಕಬ್ಬನ್‌ ಪಾರ್ಕ್‌ ಪೊಲೀಸ್‌ ಸ್ಟೇಷನ್‌ ಗೆ ಬಂದು ವಿವರಿಸಿದ ರೋಚಕ ಕಹಾನಿ. ಅವರ ಕಥೇನ ಅವರದೇ ಬಾಯಿಯಲ್ಲಿ ಕೇಳಿ..

ನಾನು ಹಿಮವತ್‌ (ಹೆಸರು ಬದಲಿಸಿದೆ) ಅಂತ. ಸೂರತ್‌ ನನ್ನ ಊರು. ನಿವೃತ್ತ ಅಧಿಕಾರಿ. ಬೆಂಗಳೂರಿಗೆ ಒಂದು ಕೆಲಸದಲ್ಲಿ ಬಂದಿದ್ದೆ. ಇಲ್ಲೇ ಒಂದು ಹೋಟೆಲ್‌ನಲ್ಲಿ ರೂಮ್‌ ಮಾಡಿದ್ದೆ. ನನಗೆ ಒಂದು ಬ್ಯಾಗ್‌ ಬೇಕಿತ್ತು. ಹಾಗಾಗಿ ನಾನು ನವೆಂಬರ್‌ 29ರಂದು ಸಂಜೆ ಚರ್ಚ್‌ ಸ್ಟ್ರೀಟ್‌ಗೆ ಹೋದೆ. ಅಲ್ಲಿ ಮಲ್ಟಿನ್ಯಾಷನಲ್‌ ಕಾಫಿ ಚೈನ್‌ನ ಒಂದು ಔಟ್‌ ಲೆಟ್‌ ಎದುರು ನಿಂತಿದ್ದಾಗ ಒಬ್ಬ ಹುಡುಗಿ ಪರಿಚಯ ಆದ್ಳು. ನಾವಿಬ್ಬರೂ ಮಾತನಾಡಿಕೊಂಡೆವು.

ನಾನೂ ಸೂರತ್‌ ನಿಂದ ಬಂದಿದ್ದೆ. ಬೆಂಗಳೂರಿನ ಹುಡುಗಿಯರು ಹೇಗೆ ಅಂತ ನೋಡುವ ಆಸೆ ಆಯಿತು. ಇಬ್ಬರೂ ಒಪ್ಪಿಕೊಂಡು ಒಂದು ಸುತ್ತಿನ ಸುಖ ಪಡೆಯುವುದು ಎಂದು ತೀರ್ಮಾನ ಮಾಡಿದೆವು. ಇದು ಸೆಕ್ಸ್‌ ಫಾರ್‌ ಮನಿ ಡೀಲ್‌.

ಅಷ್ಟೆಲ್ಲ ಆಗುವಾಗ ರಾತ್ರಿ 9.35 ಆಗಿತ್ತು. ಆಕೆ ಒಂದು ಆಟೊವನ್ನು ಕರೆದು ನನ್ನನ್ನು ಇಂದಿರಾನಗರದ ಒಂದು ಕೋಣೆಗೆ ಕರೆದುಕೊಂಡು ಹೋದಳು. ಅಲ್ಲಿ ಹೋಗಿ ನೋಡಿದರೆ ಅಲ್ಲಿ ಇನ್ನೊಬ್ಬಳಿದ್ದಳು. ನಾವು ಇಬ್ಬರೂ ಸೇವೆಗೆ ಸಿದ್ಧ ಎಂದು ಅವರು ಹೇಳಿದರು. ನಂಗೂ ಖುಷಿಯಾಯಿತು.

ಕೆಲವು ನಿಮಿಷ ಮಾತನಾಡಿ ನಾನು ನನ್ನ ಖುಷಿಯ ಕ್ಷಣಗಳನ್ನು ಪಡೆಯುವ ಉದ್ದೇಶದಿಂದ ಸಿದ್ಧನಾಗುತ್ತಿದ್ದರೆ ಅವರಿಬ್ಬರೂ ರೆಡಿ ಆದರು. ಆದರೆ, ನಾನು ಅವರಿಬ್ಬರನ್ನೂ ನೋಡಿ ಬೆಚ್ಚಿ ಬಿದ್ದೆ. ಯಾಕೆಂದರೆ, ಅವರಿಬ್ಬರು ಹುಡುಗಿಯರಾಗಿರಲೇ ಇಲ್ಲ. ಇಬ್ಬರೂ ತೃತೀಯ ಲಿಂಗಿಗಳಾಗಿದ್ದರು.

ಯಾಕೆ ಹೀಗೆ ಮೋಸ ಮಾಡಿದೆ ಎಂದು ನಾನು ಜಗಳ ಮಾಡಿದೆ. ಆಗ ನನ್ನನ್ನು ಕರೆದುಕೊಂಡು ಬಂದವಳು, ನಿನಗೆ ವಯಸ್ಸಾಗಿದೆ, ಇದರಲ್ಲೇ ಅಜಸ್ಟ್‌ ಮಾಡಿಕೋ ಎಂದು ಹೇಳಿದಳು. ನಾನು ಆಕೆ ಮೋಸ ಮಾಡಿದ್ದಕ್ಕೆ ಬೈದೆ. ಆಗ ಅವರಿಬ್ಬರೂ ಸೇರಿ ನನ್ನ ಮೇಲೆ ಮುಗಿಬಿದ್ದರು.

ನನ್ನ ಕೈಯಲ್ಲಿದ್ದ 1000೦ ರೂ. ಭಾರತೀಯ ಕರೆನ್ಸಿ ಮತ್ತು 9500 ರೂ. ಮೌಲ್ಯದ 4000 ಥಾಯ್‌ ಬಹ್ತ್‌ ಕಿತ್ತುಕೊಂಡರು. ನನಗೆ ಬೆದರಿಕೆ ಹಾಕಿ ನನ್ನ ಮೊಬೈಲನ್ನು ಕಿತ್ತುಕೊಂಡರು. ನನ್ನ ಡಿಜಿಟಲ್‌ ಪೇಮೆಂಟ್‌ ಆಪ್‌ನ ಪಾಸ್‌ ವರ್ಡ್‌ ಕೂಡಾ ಬೆದರಿಸಿ ಪಡೆದುಕೊಂಡರು. ಅದರಿಂದ 30000 ರೂ.ವನ್ನು ತಮ್ಮ ಅಕೌಂಟ್‌ಗೆ ವರ್ಗಾವಣೆ ಮಾಡಿಕೊಂಡರು.

ಯಾರಿಗಾದರೂ ಈ ವಿಷಯ ಹೇಳಿದರೆ ಹುಷಾರ್‌ ಎಂದು ಹೆದರಿಸಿ ನನ್ನನ್ನು ಮನೆಯಿಂದ ಹೊರಗೆ ಹಾಕಿದರು. ನಾನು ಸಿಕ್ಕಿದ ರಿಕ್ಷಾ ಹಿಡಿದುಕೊಂಡು ನನ್ನ ರೂಮಿಗೆ ಬಂದೆ. ಮಾರನೇ ದಿನ ಮತ್ತೆ ಅದೇ ಚರ್ಚ್‌ ಸ್ಟ್ರೀಟ್‌ಗೆ ಹೋದೆ. ಆಕೆ ಅಲ್ಲೇ ಬರಬಹುದಾ ಎನ್ನುವುದು ನನ್ನ ನಿರೀಕ್ಷೆಯಾಗಿತ್ತು. ಆಕೆ ಬಂದಿರಲಿಲ್ಲ.

ನಂತ್ರ ಕಬ್ಬನ್‌ ಪಾರ್ಕ್‌ ಪೊಲೀಸ್‌ ಸ್ಟೇಷನ್‌ ಗೆ ಹೋಗಿ ದೂರು ನೀಡಿದೆ. ಬೆಂಗಳೂರಿನಲ್ಲಿ ಪುರುಷರನ್ನು ಈ ರೀತಿಯಲ್ಲಿಯೂ ಯಾಮಾರಿಸುತ್ತಾರೆ ಎಂದು ಹೇಳಿದೆ.

—-

ಇದಿಷ್ಟು ಹಿಮವತ್‌ ಅಲ್ಲಿ ನಡೆದುದನ್ನು ಹೇಳಿದ್ದು. ಈಗ ದೂರು ದಾಖಲಿಸಿಕೊಂಡಿರುವ ಕಬ್ಬನ್‌ ಪಾರ್ಕ್‌ ಪೊಲೀಸರು ಏನು ಹೇಳುತ್ತಾರೆ ಕೇಳಿ..

ಇದನ್ನೂ ಓದಿ: Fraud Case : ಬಿಟ್ಟೋದ ಗಂಡನ್ನ ಸೇರಿಸ್ತೀನಿ ಅಂತ FDA ಅಧಿಕಾರಿ ಮಹಿಳೆಗೆ ಲಕ್ಷ ಲಕ್ಷ ಮೋಸ!

ಆ ನಿವೃತ್ತ ಅಧಿಕಾರಿ ಆ ಕೋಣೆಗೆ ಹೋಗಿದ್ದು ನಿಜ ಇರಬಹುದು. ಆದರೆ, ಅವರು ಹೆಣ್ಣು ಎಂದುಕೊಂಡೇ ಹೋಗಿದ್ದರಾ ಅಥವಾ ತೃತೀಯ ಲಿಂಗಿ ಎಂದು ಗೊತ್ತಿದ್ದೇ ಹೋಗಿದ್ದಾರಾ ಎನ್ನುವುದು ಗೊತ್ತಾಗುತ್ತಿಲ್ಲ. ನಾವು ಅವರು ನೀಡಿದ ಗುರುತಿನ ಆಧಾರದಲ್ಲಿ ಪತ್ತೆ ಹಚ್ಚಿ ವಿಚಾರಣೆ ನಡೆಸುತ್ತೇವೆ. ಬಳಿಕ ವಿಷಯ ಸ್ಪಷ್ಟವಾಗಲಿದೆ.

ಇಷ್ಟು ಹೇಳಿದ ಮೇಲೆ ಒಂದು ವಿಷಯ ಹೇಳಲೇಬೇಕು: ನೀವು ಅಪರಿಚಿತ ಹೆಣ್ಮಕ್ಕಳ ಜತೆ ವ್ಯವಹರಿಸುವಾಗ ಎಚ್ಚರವಾಗಿರಿ. ಮೋಸ ಹೋಗಬೇಡಿ. ಇದು ಪೊಲೀಸರ ಸಲಹೆಯೂ ಹೌದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading
Advertisement
Live News10 hours ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest16 hours ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest18 hours ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ1 day ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ1 day ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ1 day ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ3 days ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ3 days ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ3 days ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ3 days ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌