ಬೆಂಗಳೂರು: ಪುನೀತ್ ರಾಜ್ ಕುಮಾರ್ (Puneeth Raj Kumar) ಅವರ ಚಲನಚಿತ್ರಗಳನ್ನು ನಿರ್ದೇಶನ ಮಾಡಿದ್ದ ಖ್ಯಾತ ನಿರ್ದೇಶಕರೊಬ್ಬರ (sandalwood director) ವಿರುದ್ಧ ವಂಚನೆ ದೂರು (fraud case) ದಾಖಲಾಗಿದೆ.
ಪೃಥ್ವಿ, ಸವಾರಿ, ಸವಾರಿ-2, ಚಂಬಲ್ ಚಿತ್ರಗಳ ನಿರ್ದೇಶಕ ಜಾಕೋಬ್ ವರ್ಗೀಸ್ (jacob varghese) ಮೇಲೆ ದೂರು ದಾಖಲಾಗಿದೆ. ಸಾಕ್ಷ್ಯಚಿತ್ರದ (documentary) ಕಾಪಿರೈಟ್ಸ್ ನೀಡದೆ (copyrights) ಬೆಂಗಳೂರು ಸ್ಕೂಲ್ ಸ್ಪೋರ್ಟ್ಸ್ ಫೌಂಡೇಶನ್‌ಗೆ ವಂಚನೆ ಮಾಡಲಾಗಿದೆ ಎಂದು ದೂರಲಾಗಿದೆ.
ಎಚ್ಐವಿ ಬಾಧಿತ ಮಕ್ಕಳ ಜೀವನ ಕ್ರಮದ ಬಗ್ಗೆ ಸಂಸ್ಥೆ ಜಾಕೋಬ್ ಬಳಿ ವಿಡಿಯೋ ಮಾಡಿಸಿತ್ತು. ʼರನ್ನಿಂಗ್ ಪಾಸಿಟಿವ್ʼ ಎನ್ನುವ ಸಾಕ್ಷ್ಯಚಿತ್ರ ಮಾಡಲು ಫೌಂಡೇಶನ್ ಹಣ ನೀಡಿತ್ತು. ವಿಡಿಯೋ ಚಿತ್ರೀಕರಣ ಮಾಡಿದ್ದ ಜಾಕೋಬ್ ವರ್ಗೀಸ್ ಕಾಪಿರೈಟ್ಸ್ ಅನ್ನು ಸಂಸ್ಥೆಗೆ ನೀಡಿಲ್ಲ ಎಂದು ದೂರಲಾಗಿದೆ.
4 ವರ್ಷದ ಇಬ್ಬರು ವಿದ್ಯಾರ್ಥಿಗಳ ಬಗ್ಗೆ ವಿಡಿಯೋ ಚಿತ್ರಿಕರಣ ಮಾಡಿದ್ದ ಜಾಕೋಬ್‌ಗೆ ವಿಡಿಯೋ ಚಿತ್ರಿಕರಣ ಮಾಡಲು ಹಂತ ಹಂತವಾಗಿ ಫೌಂಡೇಶನ್ ಹಣ ನೀಡಿತ್ತು. ಇದೀಗ ಕಾಪಿರೈಟ್ಸ್ ಸಂಸ್ಥೆಗೆ ನೀಡದೆ ತಾನೇ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿರುವ ಆರೋಪ ಬಂದಿದೆ.
ಆಸ್ಕರ್ ಅಕಾಡೆಮಿ ಅವಾರ್ಡ್ ವಿಭಾಗದಲ್ಲಿ ತಾನೇ ಕಾಪಿರೈಟ್ಸ್ ಮಾಲೀಕ ಎಂದು ಮಾಹಿತಿ ನೀಡಿದ್ದಾರೆ. ಆಯುಷ್ಮಾನ್ ಚಲನಚಿತ್ರ ಪ್ರಶಸ್ತಿಗೂ ಈ ಚಿತ್ರವನ್ನು ಆಯ್ಕೆ ಮಾಡಿಸಿ ಕಾಪಿರೈಟ್ಸ್ ಉಲ್ಲಂಘನೆ ಮಾಡಲಾಗಿದೆ. ಆ ಮೂಲಕ ಬೆಂಗಳೂರು ಸ್ಕೂಲ್ ಸ್ಪೋರ್ಟ್ಸ್ ಫೌಂಡೇಶನ್‌ಗೆ ಅರ್ಥಿಕ ನಷ್ಟ ಉಂಟುಮಾಡಲಾಗಿದೆ ಎಂದು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಸಂಸ್ಥೆ ಪ್ರಕರಣ ದಾಖಲಿಸಿದೆ.
ಇದನ್ನೂ ಓದಿ: Chaitra Fraud Case : ಚೈತ್ರಾ ವಂಚನೆ ಪ್ರಕರಣ; ಸಿಸಿಬಿ ತನಿಖೆ ಪೂರ್ಣ, ಮುಂದಿನ ವಾರ ಚಾರ್ಜ್‌ಶೀಟ್?