Fraud Case: ಟ್ರೇಡಿಂಗ್‌ ಹೆಸ್ರಲ್ಲಿ ಕೋಟಿ ಕೋಟಿ ಗುಳುಂ; ಗುಜರಿ ವ್ಯಾಪಾರಿಗೆ ಖೋಟಾ ನೋಟು ಕೊಟ್ಟು ವಂಚನೆಗೆ ಯತ್ನ - Vistara News

ಬೆಂಗಳೂರು

Fraud Case: ಟ್ರೇಡಿಂಗ್‌ ಹೆಸ್ರಲ್ಲಿ ಕೋಟಿ ಕೋಟಿ ಗುಳುಂ; ಗುಜರಿ ವ್ಯಾಪಾರಿಗೆ ಖೋಟಾ ನೋಟು ಕೊಟ್ಟು ವಂಚನೆಗೆ ಯತ್ನ

Fraud Case: ಆನ್‌ಲೈನ್‌ ಟ್ರೇಡಿಂಗ್‌ ಹೆಸರಿನಲ್ಲಿ ವಂಚಕರು ಕೋಟಿ ಕೋಟಿ ಗುಳುಂ ಮಾಡಿದ್ದರೆ, ಗುಜರಿ ವ್ಯಾಪಾರಿಗೆ ಖೋಟಾ ನೋಟು ಕೊಟ್ಟು ವಂಚನೆಗೆ ಯತ್ನಿಸಲು ಹೋಗಿ ಕಾಲ್ಕಿತ್ತಿದ್ದಾರೆ.

VISTARANEWS.COM


on

Fraud in the name of trading and by giving fake notes to a scrap dealer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿತ್ಯಾ ನೂರಾರು ವಂಚನೆ ಪ್ರಕರಣಗಳು (Fraud Case) ದಾಖಲಾಗುತ್ತಲೇ ಇರುತ್ತದೆ. ನಿವೃತ್ತ ಎಸಿಪಿ ಟೈಗರ್‌ ಅಶೋಕ್‌ ಹೆಸರಿನಲ್ಲಿ ನಕಲಿ ಫೇಸ್‌ ಬುಕ್‌ ಖಾತೆ ತೆಗೆದು ಹಣಕ್ಕೆ ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಆನ್‌ಲೈನ್‌ ಟ್ರೇಡಿಂಗ್ ಹೆಸರಲ್ಲಿ ಸೈಬರ್ ವಂಚನೆ ನಡೆದಿದೆ. ಗುಜರಿ ವ್ಯಾಪಾರಿಗೆ ಖೋಟಾ ನೋಟು ಕೊಟ್ಟು ವಂಚನೆಗೆ ಯತ್ನಿಸಿ ಆರೋಪಿಗಳು ಕಾಲ್ಕಿತ್ತಿದ್ದಾರೆ. ಇ ಸಿಗರೇಟ್‌ ಮಾರಾಟ ಮಾಡುತ್ತಿದ್ದ ಖತರ್ನಾಕ್‌ ಕಳ್ಳರನ್ನು ಬಂಧಿಸಲಾಗಿದೆ.

ನಿವೃತ್ತ ಎಸಿಪಿ ಟೈಗರ್‌ ಅಶೋಕ್‌ ಹೆಸ್ರಲ್ಲಿ ನಕಲಿ ಫೇಸ್‌ ಬುಕ್‌

ಸೈಬರ್‌ ವಂಚಕರು ನಿವೃತ್ತ ಎಸಿಪಿ ಬಿ.ಬಿ.ಅಶೋಕ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರದು ಹಲವರಿಗೆ ಮೆಸೇಜ್ ಮಾಡಿದ್ದಾರೆ. ಟೈಗರ್ ಅಶೋಕ್ ಕುಮಾರ್ ಹೆಸರು ಬಳಸಿ ಹಣ ಕೀಳಲು ಯತ್ನಿಸಿದ್ದಾರೆ. ಅಶೋಕ್ ಕುಮಾರ್ ಫೋಟೊ ಬಳಸಿ ನಕಲಿ ಅಕೌಂಟ್ ಓಪನ್ ಮಾಡಿ ಹಣಕ್ಕಾಗಿ ಮೆಸೇಜ್ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ಟೈಗರ್ ಅಶೋಕ್ ಕುಮಾರ್‌ ಅವರು ದೂರು ನೀಡಿದ್ದಾರೆ. ಜತೆಗೆ ನಕಲಿ ಖಾತೆಯಿಂದ ಯಾರಾದರೂ ಮೆಸೇಜ್ ಮಾಡಿ, ಹಣ ಕೇಳಿದರೆ ಯಾರು ಸ್ಪಂದಿಸಬೇಡಿ ಎಂದು ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಆನ್‌ಲೈನ್‌ ಟ್ರೇಡಿಂಗ್ ಹೆಸರಲ್ಲಿ ಸೈಬರ್ ವಂಚನೆ

ಆನ್‌ಲೈನ್‌ ಟ್ರೇಡಿಂಗ್‌ ಹೆಸರಿನಲ್ಲಿ ವಂಚಿಸುತ್ತಿದ್ದ ಆರೋಪಿಗಳ ಬಂಧನವಾಗಿದೆ. ಷೇರು ಮಾರುಕಟ್ಟೆಯಲ್ಲಿ ನಕಲಿ‌ ಕಂಪನಿಗಳ ಹೆಸರಲ್ಲಿ ಹಣಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ನಕಲಿ ದಾಖಲೆ ನೀಡಿ ಹತ್ತಾರು ಬ್ಯಾಂಕ್ ಅಕೌಂಟ್ ತೆರೆದಿದ್ದರು. ಹಣ ಟ್ರಾನ್ಸ್‌ಫರ್ ಆದ ನಂತರ ಬೇರೆ ಬೇರೆ ಅಕೌಂಟ್‌ಗೆ ಟ್ರಾನ್ಸ್‌ಫರ್ ಮಾಡಿಕೊಳ್ಳುತ್ತಿದ್ದರು. ನಂತರ ಹಣ ಜಮಾ ಮಾಡಿದವರ ನಂಬರ್ ಬ್ಲಾಕ್ ಮಾಡುತ್ತಿದ್ದರು. ಈ ಬಗ್ಗೆ ಬೆಂಗಳೂರು ಸೈಬರ್ ಠಾಣೆಗಳಲ್ಲಿ ಹತ್ತಾರು ದೂರು ದಾಖಲಾಗಿದ್ವು. ಕೋಟ್ಯಾಂತರ ರೂ. ಹಣ ಟ್ರಾನ್ಸ್‌ಫರ್ ಆಗಿದ್ದ ಹಿನ್ನೆಲೆಯಲ್ಲಿ ಸೈಬರ್‌ ಕ್ರೈಂ ಪೊಲೀಸರು ಇಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ಶಶಿಕುಮಾರ್, ಸಚಿನ್, ಕಿರಣ್, ಚರಣ್ ರಾಜ್ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತ ನಾಲ್ವರನ್ನು ಬೆಂಗಳೂರಿನ ಇಡಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ, ಏಳು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Actor Darshan : ಪವಿತ್ರಾಗೌಡಗೆ ಅಶ್ಲೀಲ ಫೋಟೊ ಕಳಿಸಿದ್ದು ದೃಢ; ಆದ್ರೆ ರೇಣುಕಾಸ್ವಾಮಿ ಕೊಲೆಯಲ್ಲಿ ಈ ಮೂವರು ಭಾಗಿಯೇ ಆಗಿಲ್ಲ! ಯಾರವರು?

ಗುಜರಿ ವ್ಯಾಪಾರಿಗೆ ಖೋಟಾ ನೋಟು ಕೊಟ್ಟು ವಂಚನೆ

ಬೆಂಗಳೂರಿನ ಗುಜುರಿ ವ್ಯಾಪಾರಿಗೆ ಖೋಟಾ ನೋಟಿನ ಮೂಲಕ ವಂಚನೆಗೆ ಯತ್ನಿಸಲಾಗಿದೆ. ಕಾಟನ್ ಪೇಟೆ ಗುಜುರಿ ವ್ಯಾಪಾರಿ ಕಾರ್ತಿಕ್ ಎಂಬುವವರು ದೆಹಲಿಗೆ ಗುಜುರಿ ವಸ್ತುಗಳನ್ನು ಕಳಿಸುವ ಬಿಜಿನೆಸ್ ಮಾಡುತ್ತಿದ್ದರು. ದೆಹಲಿಯಲ್ಲಿ ಕಾರ್ತಿಕ್ ವಹಿವಾಟು ಗಮನಿಸಿದ ಭರತ್ ಎಂಬಾತ ಪರಿಚಯವಾಗಿದ್ದ. ಕೆಲ ದಿನಗಳ ನಂತರ ಭರತ್‌ ತನಗೆ ದೆಹಲಿಯಲ್ಲಿ 20 ಲಕ್ಷ ರೂ. ಹಣ ತುರ್ತಾಗಿ ಬೇಕಾಗಿದೆ. ನಿಮಗೆ ಬೆಂಗಳೂರಿನಲ್ಲಿ‌ ನಮ್ಮ ಕಡೆಯವರು 20 ಲಕ್ಷ ರೂ. ಕೊಡುತ್ತಾರೆ. ದೆಹಲಿಯಲ್ಲಿ ನಿಮಗೆ ಪರಿಚಯದವರ ಕಡೆಯಿಂದ ನನಗೆ 20 ಲಕ್ಷ ಕೊಡಿಸಿ ಎಂದಿದ್ದ.

ಅದರಂತೆ ಭರತ್ ಕಡೆಯ ರಮಾಕಾಂತ್ ಎಂಬಾತನಿಂದ 20 ಲಕ್ಷ ಹಣ ಪಡೆಯಲು ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಬಳಿ ಕಾರ್ತಿಕ್‌ ತೆರಳಿದ್ದರು. 500 ಮುಖಬೆಲೆಯ ಹತ್ತು ಬಂಡಲ್ ನೀಡಿದ್ದರು. ಆದರೆ ಬಂಡೆಲ್‌ ಮೇಲಿನ ಹಾಗೂ ಕೆಳಗಿನ ನೋಟು ಮಾತ್ರ ಅಸಲಿಯಾಗಿದ್ದು, ಒಳಗಿನ ಎಲ್ಲ ನೋಟು ವೈಟ್ ಪೇಪರ್ ಇಡಲಾಗಿತ್ತು. 500ರೂ.ಅಸಲಿ ನೋಟನ್ನು ಹೋಲುವಂತೆ ವೈಟ್ ಪೇಪರ್‌ನಲ್ಲಿ ನಕಲಿ ನೋಟು ಪ್ರಿಂಟ್ ಮಾಡಿದ್ದರು. ಇತ್ತ ರಮಾಕಾಂತ್ ಬಂಡೆಲ್ ಓಪನ್ ಮಾಡಲು ಬಿಡದಂತೆ ಪದೆಪದೇ ದೆಹಲಿಗೆ ಕರೆ ಮಾಡಿ ಹಣ ನೀಡುವಂತೆ ಕಾರ್ತಿಕ್‌ಗೆ ಸೂಚಿಸಿದ್ದ. ಇದರಿಂದ ಅನುಮಾನ ಬಂದು ಬಂಡೆಲ್ ಓಪನ್ ಮಾಡುತ್ತಿದ್ದಂತೆ ಸ್ಥಳದಿಂದ ಎಸ್ಕೇಪ್ ಆಗಿದ್ದ. ಸದ್ಯ ಕಾರ್ತಿಕ್‌ರಿಂದ ಭರತ್ ಹಾಗೂ ರಮಾನಂತ್ ಎಂಬುವವರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರು ನಗರದಾದ್ಯಂತ ಇದೇ ರೀತಿ‌ ನಾಲ್ಕೈದು ವಂಚನೆಯಾಗಿರುವುದು ಪತ್ತೆಯಾಗಿದ್ದು, ಆರೋಪಿಗಳ ಪತ್ತೆಗೆ ಸಿಸಿಬಿಯಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.

ಇ ಸಿಗರೇಟ್‌ ಸೀಜ್‌

ಜೆಜೆ ನಗರ ಪೊಲೀಸರು ಖತರ್ನಾಕ್ ಗ್ಯಾಂಗ್‌ನ ಕಳ್ಳಾಟವನ್ನು ಬೇಧಿಸಿದ್ದಾರೆ. ಏರ್‌ಪೋರ್ಟ್‌ನಲ್ಲಿ ವಿದೇಶದಿಂದ ಬರುವವರ ಬಳಿ ಇ-ಸಿಗರೇಟ್ ಸೀಜ್ ಮಾಡಲಾಗುತ್ತೆ. ಆದರೆ ಈ ರೀತಿ ಸೀಜ್ ಆದ ವಸ್ತುಗಳನ್ನು ಇತರೆ ವೇಸ್ಟ್ ಜತೆ ಹರಾಜು ಹಾಕಲಾಗುತ್ತದೆ. ಹರಾಜಿನಲ್ಲಿ ತೆಗೆದುಕೊಂಡ ವಸ್ತುಗಳನ್ನು ಜೆಜೆ ನಗರ ಠಾಣಾ ವ್ಯಾಪ್ತಿಯ ಗೋಡೌನ್‌ನಲ್ಲಿ ಶೇಖರಿಸಲಾಗುತ್ತದೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿದ್ದ ಖದೀಮರು ಹರಾಜಿನಲ್ಲಿ ಬಂದ ಇ-ಸಿಗರೇಟ್‌ಗಳನ್ನು ವಿಂಗಡಿಸುತ್ತಿದ್ದರು. ಬಳಸಿದ ಇ -ಸಿಗರೇಟ್‌ಗಳನ್ನು 300-400 ರೂ. ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ತಿಳಿದು ದಾಳಿ ನಡೆಸಿದ ಜೆಜೆ ನಗರ ಪೊಲೀಸರು, ಇಬ್ಬರು ಆರೋಪಿಗಳಿಂದ ಸುಮಾರು 110 ಇ- ಸಿಗರೇಟ್ ವಶಕ್ಕೆ ಪಡೆಯಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan : ಪವಿತ್ರಾಗೌಡಗೆ ಅಶ್ಲೀಲ ಫೋಟೊ ಕಳಿಸಿದ್ದು ದೃಢ; ಆದ್ರೆ ರೇಣುಕಾಸ್ವಾಮಿ ಕೊಲೆಯಲ್ಲಿ ಈ ಮೂವರು ಭಾಗಿಯೇ ಆಗಿಲ್ಲ! ಯಾರವರು?

Pavitra Gowda : ಪವಿತ್ರಾಗೌಡಗೆ ಅಶ್ಲೀಲ ಫೋಟೊ ಕಳಿಸಿದ್ದು ದೃಢವಾಗಿದೆ. ಆದರೆ ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್‌ (Actor Darshan) ಮತ್ತು ಗ್ಯಾಂಗ್‌ ಅರೆಸ್ಟ್‌ ಆಗಿದೆ. ಆದರೆ ಬಂಧಿತರಲ್ಲಿ ಕೊಲೆ ಕೇಸ್‌ನಲ್ಲಿ ಮೂವರು ಭಾಗಿಯೇ ಆಗಿಲ್ಲ ಎನ್ನಲಾಗಿದೆ. ಹಾಗಾದರೆ ಆ ಮೂವರು ಯಾರು?

VISTARANEWS.COM


on

By

Actor Darshan and gang
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder case) ಸಂಬಂಧಿಸಿದಂತೆ ಸ್ಫೋಟಕ ತಿರುವು ಸಿಕ್ಕಿದೆ. ಈಗಾಗಲೇ ದರ್ಶನ್‌ ಮತ್ತು ಗ್ಯಾಂಗ್‌ (Actor Darshan) ಜೈಲಿನಲ್ಲಿ ಬಂಧಿಯಾಗಿದ್ದಾರೆ. ಚಾರ್ಜ್ ಶೀಟ್‌ನಲ್ಲಿ ರೇಣುಕಾಸ್ವಾಮಿ ಕೊಲೆಯಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳು ಭಾಗಿಯಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಚಾರ್ಜ್​​​ಶೀಟ್​​​ನಲ್ಲಿ ಕೊಲೆಯಲ್ಲಿ ಮೂವರು ಆರೋಪಿಗಳ ಪಾತ್ರವಿಲ್ಲ ಎಂದು ಉಲ್ಲೇಖಿಸಲಾಗಿದೆ.

ನಿಖಿಲ್ ನಾಯ್ಕ್, ಕೇಶವಮೂರ್ತಿ ಹಾಗೂ ಕಾರ್ತಿಕ್ ಈ ಮೂವರು ಆರಂಭದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರಿಗೆ ತಾವೇ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದಾಗಿ ಸೆರೆಂಡರ್ ಆಗಿದ್ದರು. ಆದರೆ ಈಗ ಈ ಕೊಲೆಯಲ್ಲಿ ಮೂವರ ಪಾತ್ರ ಇಲ್ಲ ಎಂಬುದು ಸಾಬೀತಾಗಿದೆ. ನಿಖಿಲ್ ನಾಯ್ಕ್, ಕೇಶವಮೂರ್ತಿ, ಕಾರ್ತಿಕ್‌ ಮೇಲೆ ಕೊಲೆ ಕೇಸ್‌ ಇಲ್ಲದಿದ್ದರೂ, ಚಾರ್ಜ್​​​ಶೀಟ್​​​ನಲ್ಲಿ 201 ಅಡಿ ಸಾಕ್ಷಿ ನಾಶ ಆರೋಪವಿದೆ. ಮೂವರ ವಿರುದ್ಧ ಸಾಕ್ಷ್ಯ ನಾಶ ಮಾಡಿದ ಆರೋಪವನ್ನು ಪೊಲೀಸರು ಪ್ರಸ್ತಾಪ ಮಾಡಿದ್ದಾರೆ. ಸಾಕ್ಷಿ ನಾಶ ಹಾಗೂ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Road Accident : ಯಶವಂತಪುರ ಫ್ಲೈಓವರ್‌ ಮೇಲಿಂದ ಬಿದ್ದು ಛಿದ್ರಗೊಂಡ ಕಾರು; ಭೀಕರ ಅಪಘಾತಕ್ಕೆ ಬೆಚ್ಚಿ ಬಿದ್ದ ಜನ

ಪವಿತ್ರಾಗೌಡಗೆ ಅಶ್ಲೀಲ ಫೋಟೊ ಕಳಿಸಿದ್ದು ದೃಢ

ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೇಣುಕಾ ಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಫೋಟೊಗಳನ್ನು ಕಳಿಸಿರುವುದು ದೃಢವಾಗಿದೆ. ಪವಿತ್ರಾಗೌಡ ಇನ್ಸ್ಟಾಗ್ರಾಮ್‌ ಅಕೌಂಟ್‌ಗೆ ರೇಣುಕಾ ಸ್ವಾಮಿ ಬಳಸುತ್ತಿದ್ದ ಅಕೌಂಟ್‌ನಿಂದ ಫೋಟೊ ಕಳಿಸಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿದ್ದಾರೆ.

ರೇಣುಕಾಸ್ವಾಮಿ ಫೋಟೊ ಕಳಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇನ್ಸ್ಟಾಗ್ರಾಂಗೆ ಪತ್ರ ಬರೆದಿದ್ದರು. ಇದೀಗ ಪೊಲೀಸರ ಮನವಿಗೆ ಸ್ಪಂದಿಸಿ ಮಾಹಿತಿ ಕೊಟ್ಟಿದ್ದಾರೆ. ಪವಿತ್ರಾಗೌಡಗೆ ಕಳುಹಿಸಿದ್ದ ಮೇಸೆಜ್‌ಗಳು ಹಾಗೂ ಅಶ್ಲೀಲ ಫೋಟೊ ಬಗ್ಗೆ ಇನ್ಸ್ಟಾಗ್ರಾಂ ಖಚಿತಪಡಿಸಿದೆ. ತನಿಖಾ ತಂಡ ಈ ಮಾಹಿತಿಯನ್ನು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ.

ಚಾರ್ಜ್‌ಶೀಟ್‌ ಸಲ್ಲಿಕೆ ಯಾವಾಗ?

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.3ರಂದು ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಮಂಗಳವಾರ ಚಾರ್ಜ್ ಶೀಟ್ ಸಲ್ಲಿಕೆ ಮಾಡುವುದು ಅನುಮಾನವಾಗಿದೆ. 4,500 ಪುಟಗಳ ಒಟ್ಟು 22 ಪ್ರತಿಗಳ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಪ್ರಿಂಟಿಂಗ್ ಆ್ಯಂಡ್ ಬೈಂಡಿಂಗ್ ಕಾರ್ಯ ಮುಗಿಯದ ಕಾರಣ ಇವತ್ತು ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವುದು ಅನುಮಾನವಾಗಿದೆ. ಇನ್ನು ಚಾರ್ಜ್ ಶೀಟ್ ಸಲ್ಲಿಕೆ ಹಿನ್ನೆಲೆಯಲ್ಲಿ ಮಾಗಡಿ ರಸ್ತೆಯ ಡಿಸಿಪಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ಚರ್ಚೆ ನಡೆಯುತ್ತಿದೆ. ನಾಳೆ ಬುಧವಾರ ಚಾರ್ಜ್ ಶೀಟ್‌ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಸಿಪಿ ಚಂದನ್‌, ಇನ್ಸ್‌ಸೆಕ್ಟರ್‌ಗಳಿಂದ ಚರ್ಚೆ ನಡೆಯುತ್ತಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಪ್ರತಿಕ್ರಿಯಿಸಿದ್ದಾರೆ.ಈಗಾಗಲೇ ನಮ್ಮ ಎಲ್ಲಾ ತನಿಖೆ ಮುಗಿದಿದೆ. ಸದ್ಯ ಸ್ಕ್ರಟಿನ ಆಗಬೇಕಿದೆ. ಕೆಲವೊಂದು ಅಬ್ಸರ್ ವೇಷನ್ ಮಾಡಿದ್ದು ತಿದ್ದುಪಡಿಯಾಗುತ್ತಿದೆ. ಬೆಂಗಳೂರು ಎಫ್ ಎಸ್ ಎಲ್ ನಿಂದ ಎಲ್ಲಾ ವರದಿ ಬಂದಿದೆ. ಹೈದರಾಬಾದ್‌ನಿಂದ ಬರಬೇಕಾದ ವರದಿ ಕೆಲವು ಬಂದಿಲ್ಲ. ಹೊರತುಪಡಿಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡುತ್ತೇವೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Road Accident : ಯಶವಂತಪುರ ಫ್ಲೈಓವರ್‌ ಮೇಲಿಂದ ಬಿದ್ದು ಛಿದ್ರಗೊಂಡ ಕಾರು; ಭೀಕರ ಅಪಘಾತಕ್ಕೆ ಬೆಚ್ಚಿ ಬಿದ್ದ ಜನ

Road Accident : ಬೆಂಗಳೂರಿನಲ್ಲಿ ಭೀಕರ ಅಪಘಾತ (Yashawanthpura flyover) ಸಂಭವಿಸಿದೆ. ಫ್ಲೈ ಓವರ್ ಮೇಲಿನ ಡಿವೈಡರ್‌ಗೆ ಬಡಿದು, ಬೈಕ್‌ಗೆ ಗುದ್ದಿ, ಫ್ಲೈ ಓವರ್ ಮೇಲಿನಿಂದ ಕೆಳಗೆ ಕಾರು ಬಿದ್ದಿದೆ. ಪರಿಣಾಮ ಐವರು ಗಾಯಗೊಂಡಿದ್ದಾರೆ.

VISTARANEWS.COM


on

By

Road Accident
Koo

ಬೆಂಗಳೂರು: ಬೆಂಗಳೂರಿನ ಯಶವಂತಪುರ ಸರ್ಕಲ್‌ನಲ್ಲಿ (Yashawanthpura flyover) ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಫ್ಲೈಓವರ್‌ ಮೇಲಿಂದ ಕಾರೊಂದು ಕೆಳಗೆ ಬಿದ್ದಿದೆ. ಪರಿಣಾಮ ಕಾರು ಛಿದ್ರ ಛಿದ್ರಗೊಂಡಿದೆ. ಬೆಳಗಿನ ಜಾವ 3.45 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ತಮಿಳುನಾಡು ರಿಜಿಸ್ಟ್ರೇಷನ್ ವೋಲ್ಕ್ ಸ್ವಾಗನ್ ಕಾರು ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಮಾರ್ಗವಾಗಿ ಬರುತ್ತಿತ್ತು. ಫ್ಲೈ ಓವರ್ ಮೇಲ್ಭಾಗದಲ್ಲಿ ಒಂದು ಬೈಕ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಕಾರು ಕೆಳಗೆ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಮತ್ತು ಬೈಕ್‌ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮಹಿಳೆಯೂ ಸೇರಿದಂತೆ ಐವರಿಗೆ ಗಂಭೀರ ಗಾಯವಾಗಿದೆ.

ಫ್ಲೈ ಓವರ್ ಮೇಲಿನ ಡಿವೈಡರ್‌ಗೆ ಬಡಿದು, ಬೈಕ್‌ಗೆ ಗುದ್ದಿ, ಫ್ಲೈ ಓವರ್ ಮೇಲಿನಿಂದ ಕೆಳಗೆ ಕಾರು ಬಿದ್ದಿದೆ. ಸ್ಥಳದಲ್ಲಿದ್ದ ಹೊಯ್ಸಳ ಪೊಲೀಸರಿಂದ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಮತ್ತು ಪೊಲೀಸರಿಂದ ಅಪಘಾತಕ್ಕೊಳಗಾದವರ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೊಯ್ಸಳ ಪೊಲೀಸರ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಯಶವಂತಪುರದಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಶಬರೀಷ್‌ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather: 6 ಜಿಲ್ಲೆಗಳಲ್ಲಿ ಭಯಂಕರ ಮಳೆ; ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಅಬ್ಬರ ಮುಂದುವರಿಯಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಸೆ.3ಕ್ಕೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ (Karnataka Weather Forecast) ಸಾಧಾರಣದೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಹಾಗೂ ಒಳನಾಡಿನ ಸುತ್ತಮುತ್ತ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ, ತುಮಕೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕಲಬುರಗಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿಯಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಯೆಲ್ಲೋ ಅಲರ್ಟ್‌ ಘೋಷಣೆ

ಉತ್ತರ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಸೆಪ್ಟೆಂಬರ್ 6 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Railway news: ಪ್ರಯಾಣಿಕರ ಗಮನಕ್ಕೆ; ಸುರಕ್ಷತಾ ಕಾಮಗಾರಿ ಹಿನ್ನೆಲೆ ಈ ರೈಲುಗಳ ಓಡಾಟ ಸ್ಥಗಿತ

railway news: ನೈರುತ್ಯ ರೈಲ್ವೆ ಪತ್ರಿಕಾ ಪ್ರಕಟಣೆ ಸಂಖ್ಯೆ 226 ಪ್ರಕಾರ ದಿನಾಂಕ: 02.09.2024ರಂದು ರೈಲುಗಳ ಭಾಗಶಃ ರದ್ದು / ಮಾರ್ಗ ಬದಲಾವಣೆಯಾಗಲಿದೆ.

VISTARANEWS.COM


on

Job Alert
Koo

ಡಾ. ಮಂಜುನಾಥ ಕನಮಡಿ
ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ
ನೈರುತ್ಯ ರೈಲ್ವೆ, ಹುಬ್ಬಳ್ಳಿ

ಬೆಂಗಳೂರು ವಿಭಾಗದ (railway news) ಪೆನುಕೊಂಡ-ಮಕ್ಕಾಜಿಪಲ್ಲಿ ನಿಲ್ದಾಣಗಳ ನಡುವೆ ಇಂಜಿನಿಯರಿಂಗ್ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಹಿನ್ನಲೆಯಲ್ಲಿ ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು ಮತ್ತು ಬದಲಾದ ಮಾರ್ಗದ ಮೂಲಕ ಸಂಚರಿಸಲಾಗುತ್ತದೆ. ಅವುಗಳು ಈ ಕೆಳಗಿನಂತಿವೆ:

indian railway

ಭಾಗಶಃ ರದ್ದು

ರೈಲು ಸಂಖ್ಯೆ 06515 ಕೆಎಸ್ಆರ್ ಬೆಂಗಳೂರು-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ಮೆಮು ವಿಶೇಷ ರೈಲು ಸೆಪ್ಟೆಂಬರ್ 5, 10, 11 ಮತ್ತು 12, 2024 ರಂದು ಹಿಂದೂಪುರ-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಹಿಂದೂಪುರದಲ್ಲಿ ಕೊನೆಗೊಳ್ಳುತ್ತದೆ.

ರೈಲು ಸಂಖ್ಯೆ 06516 ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಸೆಪ್ಟೆಂಬರ್ 5, 10, 11 ಮತ್ತು 12, 2024 ರಂದು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಹಿಂದೂಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ನಿಲ್ದಾಣದ ಬದಲು ಹಿಂದೂಪುರದಿಂದ ನಿಗದಿತ ನಿರ್ಗಮನ ಸಮಯದಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ.

ರೈಲು ಸಂಖ್ಯೆ 07693 ಗುಂತಕಲ್-ಹಿಂದೂಪುರ ಡೆಮು ವಿಶೇಷ ರೈಲು ಸೆಪ್ಟೆಂಬರ್ 9 ರಿಂದ 11, 2024 ರವರೆಗೆ ಧರ್ಮಾವರಂ-ಹಿಂದೂಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಧರ್ಮಾವರಂನಲ್ಲಿ ಕೊನೆಗೊಳ್ಳುತ್ತದೆ.

ರೈಲು ಸಂಖ್ಯೆ 07694 ಹಿಂದೂಪುರ-ಗುಂತಕಲ್ ಡೆಮು ವಿಶೇಷ ರೈಲು ಸೆಪ್ಟೆಂಬರ್ 10 ರಿಂದ 12, 2024 ರವರೆಗೆ ಹಿಂದೂಪುರ ನಿಲ್ದಾಣದ ಬದಲು ಧರ್ಮಾವರಂನಿಂದ ನಿಗದಿತ ನಿರ್ಗಮನ ಸಮಯದಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಹೀಗಾಗಿ ಹಿಂದೂಪುರ-ಧರ್ಮಾವರಂ ನಿಲ್ದಾಣಗಳ ನಡುವೆ ರದ್ದುಗೊಂಡಿರುತ್ತದೆ.

railway
railway

ರೈಲುಗಳ ಮಾರ್ಗ ಬದಲಾವಣೆ

ಸೆಪ್ಟೆಂಬರ್ 5 ಮತ್ತು 12, 2024ರಂದು ಪ್ರಾರಂಭವಾಗುವ ರೈಲು ಸಂಖ್ಯೆ 20703 ಕಾಚಿಗುಡ-ಯಶವಂತಪುರ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಶವಂತಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ಸೆಪ್ಟೆಂಬರ್ 5 ಮತ್ತು 12, 2024ರಂದು ಪ್ರಾರಂಭವಾಗುವ ರೈಲು ಸಂಖ್ಯೆ 22231 ಕಲಬುರಗಿ-ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಅನಂತಪುರ, ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ಸೆಪ್ಟೆಂಬರ್ 9, 2024ರಂದು ಹೊರಡುವ ರೈಲು ಸಂಖ್ಯೆ 12976 ಜೈಪುರ-ಮೈಸೂರು ಎಕ್ಸ್ ಪ್ರೆಸ್ ರೈಲು ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಹಿಂದೂಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ಸೆಪ್ಟೆಂಬರ್ 10 ಮತ್ತು 11, 2024ರಂದು ಹೊರಡುವ ರೈಲು ಸಂಖ್ಯೆ 16572 ಬೀದರ್-ಯಶವಂತಪುರ ಎಕ್ಸ್ ಪ್ರೆಸ್ ರೈಲು ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಹಿಂದೂಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ಸೆಪ್ಟೆಂಬರ್ 10 ಮತ್ತು 11, 2024ರಂದು ಹೊರಡುವ ರೈಲು ಸಂಖ್ಯೆ 16593 ಕೆಎಸ್ಆರ್ ಬೆಂಗಳೂರು-ನಾಂದೇಡ್ ಎಕ್ಸ್ ಪ್ರೆಸ್ ರೈಲು ಪೆನುಕೊಂಡ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ & ಧರ್ಮಾವರಂ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

Continue Reading
Advertisement
Conversion to Islam in the name of love
ಉಡುಪಿ34 seconds ago

Forced Conversion : ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರ! ಒಲ್ಲೆ ಎಂದವಳ ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯ

Fraud in the name of trading and by giving fake notes to a scrap dealer
ಬೆಂಗಳೂರು1 hour ago

Fraud Case: ಟ್ರೇಡಿಂಗ್‌ ಹೆಸ್ರಲ್ಲಿ ಕೋಟಿ ಕೋಟಿ ಗುಳುಂ; ಗುಜರಿ ವ್ಯಾಪಾರಿಗೆ ಖೋಟಾ ನೋಟು ಕೊಟ್ಟು ವಂಚನೆಗೆ ಯತ್ನ

Actor Darshan and gang
ಸ್ಯಾಂಡಲ್ ವುಡ್2 hours ago

Actor Darshan : ಪವಿತ್ರಾಗೌಡಗೆ ಅಶ್ಲೀಲ ಫೋಟೊ ಕಳಿಸಿದ್ದು ದೃಢ; ಆದ್ರೆ ರೇಣುಕಾಸ್ವಾಮಿ ಕೊಲೆಯಲ್ಲಿ ಈ ಮೂವರು ಭಾಗಿಯೇ ಆಗಿಲ್ಲ! ಯಾರವರು?

ಸಿನಿಮಾ2 hours ago

Deepika Padukone: ಫೇಕ್ ಬೇಬಿ ಬಂಪ್ ಎಂದವರಿಗೆ ಫೋಟೋ ಮೂಲಕ ಉತ್ತರ ಕೊಟ್ಟ ಬಿಟೌನ್ ಪದ್ಮಾವತಿ..!

Road Accident
ಪ್ರಮುಖ ಸುದ್ದಿ3 hours ago

Road Accident : ಯಶವಂತಪುರ ಫ್ಲೈಓವರ್‌ ಮೇಲಿಂದ ಬಿದ್ದು ಛಿದ್ರಗೊಂಡ ಕಾರು; ಭೀಕರ ಅಪಘಾತಕ್ಕೆ ಬೆಚ್ಚಿ ಬಿದ್ದ ಜನ

Karnataka Weather Forecast
ಮಳೆ8 hours ago

Karnataka Weather: 6 ಜಿಲ್ಲೆಗಳಲ್ಲಿ ಭಯಂಕರ ಮಳೆ; ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ9 hours ago

Dina Bhavishya : ಈ ದಿನ ಒತ್ತಡಗಳು ದೂರಾಗಿ ಹರ್ಷದಿಂದ ಕಾಲ ಕಳೆಯುವಿರಿ

Job Alert
ಬೆಂಗಳೂರು17 hours ago

Railway news: ಪ್ರಯಾಣಿಕರ ಗಮನಕ್ಕೆ; ಸುರಕ್ಷತಾ ಕಾಮಗಾರಿ ಹಿನ್ನೆಲೆ ಈ ರೈಲುಗಳ ಓಡಾಟ ಸ್ಥಗಿತ

PSI exam
ಬೆಂಗಳೂರು17 hours ago

PSI Exam: ಸೆ.22ಕ್ಕೆ ಪಿಎಸ್ಐ ಪರೀಕ್ಷೆ; ಒಟ್ಟು 402 ಹುದ್ದೆಗಳಿಗೆ ಆಹ್ವಾನ

Actor Darshan
ಸ್ಯಾಂಡಲ್ ವುಡ್19 hours ago

Actor Darshan: ನಟ ದರ್ಶನ್‌ಗೆ ಬೆನ್ನುಹುರಿ ನೋವು; ಸರ್ಜಿಕಲ್ ಚೇರ್‌ಗೆ ಸಮ್ಮತಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 days ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್5 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌