Site icon Vistara News

Fraud Case : ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ ಹಾಗೂ ಇನ್ಫಾರ್ಮರ್

Fraud case

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸುಳ್ಳು ಆರೋಪಗಳನ್ನು ಮಾಡಿ ಗುಜರಿ ಅಂಗಡಿ ಮಾಲೀಕನಿಂದ ಹಣ ವಸೂಲಿ (Fraud Case) ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಗುಜರಿ ಅಂಗಡಿ ಮಾಲೀಕ ಅಖ್ತಿರ್ ಅಲಿ ಮಂಡಲ್‌ ಎಂಬುವವರು ಈ ಸಂಬಂಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಅಖ್ತರ್ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಳ್ಳಿಯಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ ಏಪ್ರಿಲ್ 17ರ ಮಧ್ಯಾಹ್ನ 12ಗಂಟೆಗೆ ಗುಜುರಿ ಬಳಿ ಪೊಲೀಸ್ ಸಿಬ್ಬಂದಿ, ಇನ್ಫಾರ್ಮರ್ ಎಸ್.ನಿವಾಸ್ ಎಂಬಾತನ ಜತೆಗೆ ಆಗಮಿಸಿದ್ದರು. ಹೀಗೆ ಬಂದವರೇ ನಾವು ಪೊಲೀಸರು ನೀವು ದಂಧೆ ನಡೆಸುತ್ತಿದ್ದೀರಾ? ಗಾಂಜಾ ಮಾರಾಟ ಮಾಡುತ್ತೀದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ.

ಕೆಲಸಗಾರರ ಮೇಲೆ ಹಲ್ಲೆ ಮಾಡಿ ಅಖ್ತರ್ ಬಳಿ ಸುಮಾರು 2 ಲಕ್ಷ ರೂ. ಹಣವನ್ನು ಇನ್ಫಾರ್ಮರ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೊದಲು 20 ಸಾವಿರ ನಗದು ಪಡೆದುಕೊಂಡು ಬಳಿಕ ಬ್ಯಾಂಕ್ ಖಾತೆಯಿಂದ 80 ಸಾವಿರ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹೋಗುವಾಗ ಬೆದರಿಕೆ ಹಾಕಿ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್‌ ಪಡೆದುಕೊಂಡಿದ್ದಾರೆ. ಬಳಿಕ ಎಟಿಎಂನಿಂದ 50 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ.

ಮರುದಿನ ವಾಪಸ್‌ ಗುಜುರಿ ಅಂಗಡಿಗೆ ಬಂದಿದ್ದ ಆರೋಪಿಗಳು, ಎಟಿಎಂ ಕಾರ್ಡ್ ಕೊಟ್ಟು ಮತ್ತೆ 50 ಸಾವಿರ ಹಣ ಪಡೆದುಕೊಂಡು ಹೋಗಿದ್ದಾರೆ. ಮತ್ತೊಮ್ಮೆ 50 ಸಾವಿರ ರೂ. ಕೊಡಬೇಕು ಇಲ್ಲದಿದ್ದರೆ ಬೈಕ್ ತೆಗೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಇವರ ಕಾಟ ತಾಳಲಾರದೆ ಅಖ್ತಿರ್‌ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Road Accident : ಮಿಡ್‌ನೈಟ್‌ನಲ್ಲಿ ರಸ್ತೆ ಕಾಣದೆ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾಗಿ ವೈಟ್ ಫೀಲ್ಡ್ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ನಕಲಿ ಸಿಐಡಿ ಅಧಿಕಾರಿಗಳ ಬಂಧನ

ಹುಬ್ಬಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ನಕಲಿ ಸಿಐಡಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಸಿಐಡಿ ಅಧಿಕಾರಿಗಳೆಂದು ಹೆದರಿಸಿ ಮಹಿಳೆಯೊಬ್ಬರಿಗೆ ವಂಚನೆ ಮಾಡಿದ್ದರು. ಚೈತನ್ಯ ನಗರದ ನಿವಾಸಿ ಯಶೋಧಾ ಮದುಗಲ್‌ಗೆ ಹೆದರಿಸಿ ಹಣ ವಸೂಲಿ ಮಾಡಿದ್ದರು. ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಹಳೇ ಹುಬ್ಬಳ್ಳಿ ಪೊಲೀಸರು ಕೃಷ್ಣಾಪೂರ ಓಣಿಯ ನಿವಾಸಿ ಚೇತನ ಹಡಪದ (39), ಲಿಂಗಸೂರನ ಪರಶುರಾಮಗೌಡ ಪಾಟೀಲ್ (45), ಗಂಗಾವತಿಯ ಕಾರಟಗಿಯ ಮಧು ಎಮ್ (35) ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಮೊಬೈಲ್, ಒಂದು ಬುಲೆಟ್ ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version