Site icon Vistara News

Free Bus Service : ಎಲ್ಲ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಜಾರಿ: ಡಿಕೆಶಿ ಘೋಷಣೆ

D K Shivakumar

#image_title

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಸೇವೆಯನ್ನು ಎಲ್ಲ ಜಿಲ್ಲೆಗಳಲ್ಲೂ ವಿಸ್ತರಿಸಲಾಗಿದೆ. ಇದು ನಿಜವಾದ ಜನತಾ ಜನಾರ್ಧನ ಸೇವೆಯಾಗಿದೆ. ಕರ್ನಾಟಕ ಮತ್ತು ದೇಶದಲ್ಲಿ ಹೊಸ ಬದಲಾವಣೆಯನ್ನು ಕಾಂಗ್ರೆಸ್‌ ತಂದು ಕೊಟ್ಟಿದೆ. ಕೇಂದ್ರ-ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ಇದ್ದರೂ, (Free Bus Service) ರಾಜ್ಯದ ಜನತೆ ಕಾಂಗ್ರೆಸ್‌ ಮೇಲೆ ನಂಬಿಕೆ ಇಟ್ಟು ಬಹುಮತ ನೀಡಿ ಆಶೀರ್ವದಿಸಿದ್ದಾರೆ. ನಾವು ಬಸವಣ್ಣನ ನಾಡಿನಲ್ಲಿ ಬದುಕುತ್ತಿದ್ದೇವೆ. ನುಡಿದಂತೆ ನಡೆದಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದರು.

ಕಾಂಗ್ರೆಸ್‌ ನೇತೃತ್ವದ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಅದರಲ್ಲಿ ಶಕ್ತಿ ಯೋಜನೆಯೂ ಒಂದು. ಭಾರತದ ಸಂಸ್ಕೃತಿಯಲ್ಲಿ ಹೆಣ್ಣಿಗೆ ಮಹತ್ವದ ಸ್ಥಾನವಿದೆ. ಮಹಿಳೆಯರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ಮಹತ್ವದ ಯೋಜನೆಯನ್ನು ಸಿದ್ಧಪಡಿಸಿದೆ. ಪರಿಶುದ್ಧವಾದ ಆಳ್ವಿಕೆಯನ್ನು ನಾವು ನೀಡಲಿದ್ದೇವೆ. ಬಿಜೆಪಿ-ಜೆಡಿಎಸ್‌ನ ಮಿತ್ರರು ಯೋಜನೆಯ ಜಾರಿ ಬಗ್ಗೆ ಸಾಕಷ್ಟು ಟೀಕೆಗಳನ್ನು ಮಾಡಿದ್ದಾರೆ. ಆದರೆ ಅದಕ್ಕೆ ಉತ್ತರ ಕೊಡಲು ಹೋಗುವುದಿಲ್ಲ. ನಾವು ಕಾರ್ಯತಃ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದು ವಿವರಿಸಿದರು.

ಇದನ್ನೂ ಓದಿ: Free Bus Service: ಮಹಿಳೆಯರಿಗೆ ‘ಶಕ್ತಿ’ ನೀಡಿದ ಸಿದ್ದರಾಮಯ್ಯ; ಚಾಲನೆಗೊಂಡ ಮೊದಲ ಗ್ಯಾರಂಟಿ!

ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಸಿಗಲಿದೆ. ಆದರೆ ಹೆಣ್ಣು ಮಕ್ಕಳಿಗೆ ನೀಡುವ ಸೌಲಭ್ಯದ ಬಗ್ಗೆ ಲೆಕ್ಕಾಚಾರ ಇಡಲು ಸ್ಮಾರ್ಟ್‌ ಕಾರ್ಡ್‌ ಅಗತ್ಯ ಇದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿಗೆ ನಷ್ಟವಾಗದಂತೆ ನೋಡಿಕೊಳ್ಳಲಾಗುವುದು ಎಂದು ವಿವರಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಾಧ್ಯವೇ ಎಂದು ಬಿಜೆಪಿ ಮತ್ತು ಪ್ರತಿಪಕ್ಷಗಳು ಪ್ರಶ್ನಿಸಿವೆ. ಆದರೆ ಮಧ್ಯಪ್ರದೇಶದಲ್ಲಿ ಮಹಿಳೆಯರಿಗೆ 1,000 ರೂ. ಕೊಡುತ್ತೇವೆ ಎಂದು ಅಲ್ಲಿನ ಮುಖ್ಯಮಂತ್ರಿಗಳು ಹೇಳಿದ್ದಾರೆ. ಉತ್ತರಪ್ರದೇಶದಲ್ಲೂ ನೆರವಿನ ಯೋಜನೆಗಳಿವೆ. ನಾವು ಎಲ್ಲವನ್ನೂ ಗಮನಿಸಿದ್ದೇವೆ. ಕೆಲಸ ಮಾಡಿ ತೋರಿಸುತ್ತೇವೆ ಎಂದರು.

ಇದನ್ನೂ ಓದಿ: ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ಡಿ ಕೆ ಶಿವಕುಮಾರ್​; ಉಡುಪಿ ಶ್ರೀಕೃಷ್ಣನ ಪಾದಕ್ಕೆರಗಿದ ಲಕ್ಷ್ಮಿ ಹೆಬ್ಬಾಳ್ಕರ್​

Exit mobile version