ಬೆಂಗಳೂರು: ವಿಶ್ವ ಹಿರಿಯ ನಾಗರಿಕರ ದಿನದ (World Senior Citizens Day) ಪ್ರಯುಕ್ತ ಹಿರಿಯರ ಆರೋಗ್ಯದ ಬಗೆಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಆಗಸ್ಟ್ 21 ರಂದು ವಾಸವಿ ಆಸ್ಪತ್ರೆಯು ವಿಶೇಷವಾದ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಪ್ರತಿ ವರ್ಷ ಆಗಸ್ಟ್ 21 ಅನ್ನು ವಿಶ್ವ ನಾಗರಿಕರ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಅನುಭವಿ ವೈದ್ಯರಿಂದ ಉಚಿತ ಸಮಾಲೋಚನೆ, ಲ್ಯಾಬ್ ಪರೀಕ್ಷೆಯಲ್ಲಿ ಶೇ.20ರಷ್ಟು ರಿಯಾಯಿತಿ ಮತ್ತು ರೇಡಿಯಾಲಜಿ ಸೇವೆಗಳಲ್ಲಿ ಶೇ.50ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿದೆ.
ಇದನ್ನೂ ಓದಿ: Kannada New Movie: ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ನಟ ಶರಣ್
58 ವರ್ಷ ಮೇಲ್ಪಟ್ಟ ಹಿರಿಯರು ಈ ಆರೋಗ್ಯ ಶಿಬಿರದಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ. ವಯೋಮಿತಿಯನ್ನು ದೃಢಪಡಿಸುವ ಯಾವುದೇ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ವಾಸವಿ ಆಸ್ಪತ್ರೆಯಲ್ಲಿ ಈ ಸೌಲಭ್ಯವನ್ನು ಪಡೆಯಬಹುದು.
ಇದನ್ನೂ ಓದಿ: Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ
ನಗರದ ವಾಸವಿ ಆಸ್ಪತ್ರೆಯು ನುರಿತ ತಂತ್ರಜ್ಞಾನಗಳನ್ನು ಒಳಗೊಂಡಿದ್ದು, ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುತ್ತಾ ಬಂದಿದೆ. ಅಲ್ಲದೆ ಹಿರಿಯ ನಾಗರಿಕರ ಆರೋಗ್ಯದ ಕಾಳಜಿಯ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂ.ಸಂಖೈ: 080 71500500/504 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.