Futures Literacy: ಬೆಂಗಳೂರಿನಲ್ಲಿ ಅ.9, 10 ರಂದು ಭವಿಷ್ಯದ ಸಾಕ್ಷರತೆ ಸಮ್ಮೇಳನ - Vistara News

ನೋಟಿಸ್ ಬೋರ್ಡ

Futures Literacy: ಬೆಂಗಳೂರಿನಲ್ಲಿ ಅ.9, 10 ರಂದು ಭವಿಷ್ಯದ ಸಾಕ್ಷರತೆ ಸಮ್ಮೇಳನ

ಬೆಂಗಳೂರು ಇಂಟರ್‌ನ್ಯಾಷನಲ್‌ ಸೆಂಟರ್‌ (ಬಿಐಸಿ) ಸಭಾಂಗಣದಲ್ಲಿ ಅಕ್ಟೋಬರ್ 9 ಮತ್ತು 10 ರಂದು ʼಭವಿಷ್ಯದ ಸಾಕ್ಷರತೆʼ ಸಮ್ಮೇಳನ ನಡೆಯಲಿದೆ. ವಿವಿಧ ದೇಶಗಳ ಶಿಕ್ಷಣ ತಜ್ಞರು ಮತ್ತು ದೂರದೃಷ್ಟಿಯುಳ್ಳ ತಜ್ಞರು ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.

VISTARANEWS.COM


on

quest alliance
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲಾಭರಹಿತ ಸಂಸ್ಥೆ ಕ್ವೆಸ್ಟ್ ಅಲಯನ್ಸ್ (Quest Alliance) ವತಿಯಿಂದ ಹವಾಮಾನ ಬಿಕ್ಕಟ್ಟು ಮತ್ತು ಕೃತಕ ಬುದ್ಧಿಮತ್ತೆಯಿಂದ ಉಂಟಾಗುವ ಅಡೆತಡೆಗಳ ಹಿನ್ನೆಲೆಯಲ್ಲಿ ಕೌಶಲ್ಯಗಳ ಭವಿಷ್ಯ ಮತ್ತು ಶಿಕ್ಷಣದ ಕುರಿತು ಚರ್ಚಿಸಲು ʼಭವಿಷ್ಯದ ಸಾಕ್ಷರತೆʼ (Futures Literacy) ಸಮ್ಮೇಳನವನ್ನು ಅಕ್ಟೋಬರ್ 9 ಮತ್ತು 10 ರಂದು ನಗರದ ಬೆಂಗಳೂರು ಇಂಟರ್‌ನ್ಯಾಷನಲ್‌ ಸೆಂಟರ್‌ (ಬಿಐಸಿ) ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಹಲವು ಜನಪ್ರಿಯ ಶಿಕ್ಷಣ ತಜ್ಞರು ಮತ್ತು ದೂರದೃಷ್ಟಿ ತಜ್ಞರು ಸಮ್ಮೇಳದಲ್ಲಿ ಭಾಗವಹಿಸಲಿದ್ದಾರೆ.

ಈ ಸಮ್ಮೇಳನ ಭವಿಷ್ಯದ ಸಾಕ್ಷರತೆಯ ಕುರಿತು ನಡೆಯಲಿರುವ ಮೊದಲ ಸಮ್ಮೇಳನವಾಗಿರುವುದರಿಂದ ಮಹತ್ವದ ಮೈಲುಗಲ್ಲು ಕೂಡ ಆಗಲಿದೆ. ಈ ಪ್ರಮುಖ ಕಾರ್ಯಕ್ರಮವು ಹವಾಮಾನ ಬಿಕ್ಕಟ್ಟು ಮತ್ತು ಕೃತಕ ಬುದ್ಧಿಮತ್ತೆಯ ಬಗ್ಗೆ ಆಳವಾದ ಚರ್ಚೆಗೆ ವೇದಿಕೆ ಕಲ್ಪಿಸಲಿದೆ. ಜತೆಗೆ ಇದು ಶಿಕ್ಷಣ ಮತ್ತು ಉದ್ಯೋಗದ ಮೇಲೆ ಬೀರುವ ಪರಿಣಾಮಗಳ ಮೇಲೆ ಬೆಳಕು ಚೆಲ್ಲಲಿದೆ. ಭವಿಷ್ಯದ ಕಲಿಕೆ ಮತ್ತು ಔದ್ಯೋಗಿಕ ಕ್ಷೇತ್ರದ ಮೇಲೆ ಕೃತಕ ಬುದ್ಧಿಮತ್ತೆಯ ಪ್ರಭಾವ, ಶಿಕ್ಷಣದ ಮೇಲೆ ಮತ್ತು ಯುವ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಹವಾಮಾನ ಬದಲಾವಣೆಯ ಪರಿಣಾಮ, ಮುಂಬರುವ ವರ್ಷಗಳಲ್ಲಿ ಪರಿಸರ ಸಂರಕ್ಷಣೆಯ ಕೇಂದ್ರಿತ ಹಸಿರು ಉದ್ಯೋಗಾವಕಾಶಗಳ (green employment) ಕುರಿತು ಈ ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ.

ಇದನ್ನೂ ಓದಿ | Narahalli Award: ಬಸವನಗುಡಿಯಲ್ಲಿ ಅ.8ರಂದು ನರಹಳ್ಳಿ ಪ್ರಶಸ್ತಿ, ನರಹಳ್ಳಿ ದಶಮಾನ ಪುರಸ್ಕಾರ ಪ್ರದಾನ

ಈ ಸಮ್ಮೇಳನವು ಹೊಸ ಹೊಳಹುಗಳನ್ನೊಳಗೊಂಡ ಪರಿಣಾಮಕಾರಿ ಚರ್ಚೆಗೆ ಅವಕಾಶ ನೀಡಲಿದೆ. ಸವಾಲುಗಳನ್ನು ಅರಿಯಲು ಹಾಗೂ ಭವಿಷ್ಯದಲ್ಲಿ ಭಾರತದಲ್ಲಿ ಕೌಶಲ್ಯ ಹೊಂದಿರುವ ಸಿಬ್ಬಂದಿಯನ್ನು ರೂಪಿಸುವಂತೆ ಯೋಜನೆ ರೂಪಿಸುವ ನಿಟ್ಟಿನಲ್ಲಿ ತಜ್ಞರು ಮತ್ತು ಪಾಲುದಾರರನ್ನು ಒಂದುಗೂಡಿಸಲು ಈ ಸಮ್ಮೇಳನ ನೆರವಾಗಲಿದೆ.

ಶಿಕ್ಷಣ ಸಂಸ್ಥೆಗಳು, ಸರ್ಕಾರಗಳು ಮತ್ತು ಸಮಾಜವು ʼಭವಿಷ್ಯದ ಸಾಕ್ಷರತೆʼಯ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಹೇಗೆ ನೆರವಾಗಬಹುದು ಎಂಬುದನ್ನು ತಜ್ಞರು ಇಲ್ಲಿ ಚರ್ಚಿಸಲಿದ್ದಾರೆ. ಈ ಪರಿಕಲ್ಪನೆಯ ಪದವನ್ನು ಮೊದಲ ಬಾರಿಗೆ ಯುನೆಸ್ಕೋ ಹುಟ್ಟುಹಾಕಿದೆ. ʼಭವಿಷ್ಯದ ಪಾತ್ರವನ್ನು ವರ್ತಮಾನದಲ್ಲಿ ನೋಡುವ ಸಾಮರ್ಥ್ಯ’ ಎಂಬುದು ಇದರ ಅರ್ಥ. ಯುವಜನರು ಭವಿಷ್ಯವನ್ನು ಹಾಗೆಯೇ ಸ್ವೀಕರಿಸುವ ಬದಲು, ಗುರಿಯನ್ನು ರೂಪಿಸಿಕೊಂಡು ಸಿದ್ಧಗೊಳ್ಳುವಂತೆ ಸಬಲೀಕರಣಗೊಳಿಸುವ ಕುರಿತು ತಜ್ಞರು ಇಲ್ಲಿ ಬೆಳಕು ಚೆಲ್ಲಲಿದ್ದಾರೆ.

ಅಸೋಸಿಯೇಷನ್ ಆಫ್ ಪ್ರೊಫೆಷನಲ್ ಫ್ಯೂಚರಿಸ್ಟ್ಸ್ (APF) ಮುಖ್ಯಸ್ಥ ಮತ್ತು ಫಿಲಿಪೈನ್ಸ್‌ನ ನಾರ್ತ್‌ವೆಸ್ಟರ್ನ್‌ ವಿಶ್ವವಿದ್ಯಾಲಯದ ಯುನೆಸ್ಕೋದ ಆಂಟಿಸಿಪೇಟರಿ ಗವರ್ನೆನ್ಸ್‌ ಮತ್ತು ರೀಜನರೇಟಿವ್‌ ಸಿಟೀಸ್‌ನ ಮುಖ್ಯ ಅಭ್ಯರ್ಥಿ ಪ್ರೊ.ಶೆರ್ಮನ್ ಕ್ರೂಜ್, ನೀತಿ ಆಯೋಗದ (ಕಾರ್ಮಿಕ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ) ಹಿರಿಯ ತಜ್ಞರಾದ ಡಾ.ಸಾಕ್ಷಿ ಖುರಾನಾ, ಎಡ್ ಟೆಕ್ ಹಬ್‌ನ ಬಾಂಗ್ಲಾದೇಶದ ಮುಖ್ಯಸ್ಥ ಮತ್ತು ರಿಡಿಕ್ಯುಲಸ್ ಫ್ಯೂಚರ್ಸ್‌ನ ತಜ್ಞ ಶಕೀಲ್ ಅಹ್ಮದ್, ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಸ್ಟ್ರಾಟೆಜಿ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಮನೀಷ್ ಮಿಶ್ರಾ ಸೇರಿದಂತೆ ಹಲವು ತಜ್ಞರು ಹಾಗೂ ತಂತ್ರಜ್ಞಾನ ಪರಿಣತರು ಭವಿಷ್ಯ ರೂಪಿಸುವಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರದ ಬಗ್ಗೆ ಮಾತನಾಡಲಿದ್ದಾರೆ.

ಕ್ವೆಸ್ಟ್‌ ಅಲಯನ್ಸ್‌ನ ಸಿಇಒ ಆಕಾಶ್‌ ಸೇಥಿ ಮಾತನಾಡಿ, “ಹವಾಮಾನ ಬದಲಾವಣೆ ಮತ್ತು ಕೃತಕ ಬುದ್ಧಿಮತ್ತೆಯಲ್ಲಿನ ಬೆಳವಣಿಗೆಗಳು ನಮ್ಮ ಯುವಜನರಲ್ಲಿ ಆತಂಕ ಸೃಷ್ಟಿಸಿದೆ. ಈ ಆತಂಕವನ್ನು ಭರವಸೆಯಾಗಿ ಬದಲಿಸಲು ಭವಿಷ್ಯದ ಬಗ್ಗೆ ಗಂಭೀರವಾಗಿ ಆಲೋಚಿಸುವ ತುರ್ತು ಇದೆ. ಭವಿಷ್ಯದ ಬಗ್ಗೆ ಚಿಂತಿಸುವ ಮೂಲಕ ಸಾಮೂಹಿಕವಾಗಿ ಭವಿಷ್ಯವನ್ನು ಮರು ರೂಪಿಸಲು ಮತ್ತು ಭವಿಷ್ಯದ ಸಾಕ್ಷರತೆಯನ್ನು ಸಾಮರ್ಥ್ಯವಾಗಿ ರೂಪಿಸುವ ಸಮಯ ಬಂದಿದೆ. ಈ ಸಮ್ಮೇಳನವು ಈ ನಿಟ್ಟಿನಲ್ಲಿ ಇಟ್ಟಿರುವ ಒಂದು ಹೆಜ್ಜೆ” ಎಂದು ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ವಿಶಿಷ್ಟವಾದ ಪ್ರದರ್ಶನ ಏರ್ಪಡಿಸಲಾಗಿದೆ. ಇಲ್ಲಿ ಭಾಗವಹಿಸುವವರು 2045ರ ಭವಿಷ್ಯದ ಶಿಕ್ಷಣವನ್ನು ನೋಡಬಹುದು. ಈ ಪ್ರದರ್ಶನದಲ್ಲಿ AR/VR ನೆರವಿನಿಂದ ಹಿಂದಿನ ಶಾಲೆಗಳು ಹಾಗೂ ಭವಿಷ್ಯದ ಶಾಲೆಗಳ ಬೆಳವಣಿಗೆಯನ್ನು ಇಲ್ಲಿ ನೋಡಬಹುದು. 2045ರಲ್ಲಿ ಯುವಜನರ ಜೀವನ ಹೇಗಿರುತ್ತದೆ ಎಂಬ ಮುನ್ನೋಟವನ್ನು ಕೂಡ ಇದು ಒದಗಿಸುತ್ತದೆ.

ಯುವ ವಿದ್ಯಾರ್ಥಿಗಳು ಭವಿಷ್ಯವನ್ನು ಹೇಗೆ ಗ್ರಹಿಸುತ್ತಾರೆ ಎಂಬ ಸಂಶೋಧನಾ ವರದಿ ಸಮ್ಮೇಳನದಲ್ಲಿ ಬಿಡುಗಡೆಯಾಗಲಿದೆ. ಒಡಿಶಾ, ಅಸ್ಸಾಂ ಮತ್ತು ಗುಜರಾತ್‌ನ 600 ವಿದ್ಯಾರ್ಥಿಗಳ ಅಭಿಪ್ರಾಯ ಒಳಗೊಂಡಿರುವ ಈ ವರದಿಯು, ಯುವಜನರು ತಮ್ಮ ಭವಿಷ್ಯವನ್ನು ಹೇಗೆ ಕಲ್ಪಿಸಿಕೊಳ್ಳುತ್ತಿದ್ದಾರೆ ಎಂಬುದರ ಕುರಿತು ತಿಳಿಸುತ್ತದೆ. 21ನೇ ಶತಮಾನದ ಕೌಶಲ್ಯಗಳನ್ನು ವಿಸ್ತರಿಸುವ ಅಗತ್ಯದ ಬಗ್ಗೆ ತಜ್ಞರು ಮಾತನಾಡಲಿದ್ದಾರೆ.

ಇದನ್ನೂ ಓದಿ | Utthana Katha Spardhe: ಉತ್ಥಾನ ವಾರ್ಷಿಕ ಕಥಾಸ್ಪರ್ಧೆ 2023; ಕಥೆ ತಲುಪಿಸಲು ಅ.10 ಕೊನೆ ದಿನ

ಕ್ವೆಸ್ಟ್‌ ಅಲಯನ್ಸ್‌

ಕ್ವೆಸ್ಟ್ ಅಲಯನ್ಸ್ ಎಂಬುದು ಲಾಭರಹಿತ ಟ್ರಸ್ಟ್. ಸ್ವಯಂ-ಕಲಿಕೆಯ ಮೂಲಕ 21ನೇ ಶತಮಾನದ ಕೌಶಲ್ಯಗಳನ್ನು ಕಲಿಯಲು ಯುವಜನರನ್ನು ಈ ಟ್ರಸ್ಟ್‌ ಸಜ್ಜುಗೊಳಿಸುತ್ತದೆ. ಗುಣಮಟ್ಟದ ಶಿಕ್ಷಣ ಮತ್ತು ಕೌಶಲ್ಯ ತರಬೇತಿಯ ನಡುವಿನ ಅಂತರವನ್ನು ಕಡಿಮೆ ಮಾಡಲು ಶಿಕ್ಷಕರಿಗೆ ನಾವು ಪರಿಹಾರ ನೀಡುತ್ತೇವೆ. ನಾವು ಶಿಕ್ಷಣ ಕ್ಷೇತ್ರಕ್ಕೆ ನೆರವಾಗುವುದರ ಜತೆಗೆ, ಸಂಶೋಧನೆ ಮತ್ತು ಆವಿಷ್ಕಾರಗಳ ಮೂಲಕ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಹಯೋಗದೊಂದಿಗೆ ಕೆಲಸ ಮಾಡುತ್ತೇವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

SSLC 2024 Exam 2: ಎಸ್ಎಸ್ಎಲ್‌ಸಿ ಪರೀಕ್ಷೆ-2, ಜೂನ್‌ 14ರಿಂದ 22 ರವರೆಗೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಸುತ್ತೋಲೆ ಬಿಡುಗಡೆ ಮಾಡಿದೆ.

VISTARANEWS.COM


on

SSLC 2024 Exam 2
Koo

ಬೆಂಗಳೂರು: 2024ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-2ರ (SSLC 2024 Exam 2) ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿದ್ದು, ಜೂನ್‌ 14 ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್‌.ಮಂಜುಶ್ರೀ ಸುತ್ತೋಲೆ ಹೊರಡಿಸಿದ್ದಾರೆ.

2024ರ ಎಸ್ಎಸ್ಎಲ್‌ಸಿ ಪರೀಕ್ಷೆ-2 ಅನ್ನು ಈ ಹಿಂದೆ ಜೂನ್‌ 7ರಿಂದ 14ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಸರ್ಕಾರದ ಸೂಚನೆ ಅನ್ವಯ ಪರೀಕ್ಷೆ-2ನ್ನು ಮುಂದೂಡಿ, ಜೂನ್‌ 14ರಿಂದ 22 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್ಎಸ್ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದುಕೊಂಡು ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾ ಉಪನಿರ್ದೇಶಕರು(ಆಡಳಿತ) ಸೇರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ

  • 14-06-2024 ಶುಕ್ರವಾರ: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(ಎನ್‌ಸಿಇಆರ್‌ಟಿ), ಸಂಸ್ಕೃತ.
  • 15-06-2024 ಶನಿವಾರ: ತೃತೀಯ ಭಾಷೆ – ಹಿಂದಿ (ಎನ್‌ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • 18-06-2024 ಮಂಗಳವಾರ: ಕೋರ್ ಸಬ್ಜೆಕ್ಟ್‌ -ಗಣಿತ, ಸಮಾಜ ಶಾಸ್ತ್ರ
  • 19-06-2024 ಬುಧವಾರ: ಅರ್ಥ ಶಾಸ್ತ್ರ
  • 20-06-2024 ಗುರುವಾರ: ಕೋರ್ ಸಬ್ಜೆಕ್ಟ್- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ.
  • 21-06-2024 ಶುಕ್ರವಾರ– ದ್ವಿತೀಯ ಭಾಷೆ – ಇಂಗ್ಲಿಷ್, ಕನ್ನಡ
  • 22-06-2024 ಶನಿವಾರ – ಕೋರ್ ಸಬ್ಜೆಕ್ಟ್- ಸಮಾಜ ವಿಜ್ಞಾನ

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

SSLC Exam 2024

ಬೆಂಗಳೂರು: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ (SSLC 2024 Exam 2) ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿ ರಾಜ್ಯ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಮುಂದೂಡಲಾಗಿದ್ದು, ಮೇ 29ರಿಂದ ಜೂ.6ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳು ನಡೆಯಲಿವೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ನಿರ್ದೇಶಕರು (ಪ್ರೌಢ ಶಿಕ್ಷಣ) ಆದೇಶ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ವರೆಗೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

Hebbal flyover: ಮೇ 14ರಿಂದ ಹೆಬ್ಬಾಳ ಫ್ಲೈ ಓವರ್‌ನ ಕೆ.ಆರ್. ಪುರಂ ಅಪ್ ರ‍್ಯಾಂಪ್ ಮುಚ್ಚುತ್ತಿರುವುದರಿಂದ ಕೆ.ಆರ್‌.ಪುರಂ., ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿರ್ಬಂಧಿಸಲಾಗಿದೆ.

VISTARANEWS.COM


on

Hebbal Flyover
Koo

ಬೆಂಗಳೂರು: ಬಿಡಿಎ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಹೆಬ್ಬಾಳ ಮೇಲ್ಸೇತುವೆಯ ಕೆ.ಆರ್.ಪುರಂ ಅಪ್ ರ‍್ಯಾಂಪ್ ಮುಚ್ಚಲಾಗಿದ್ದು, ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ವಾಹನಗಳಿಗೆ ಫ್ಲೈ ಓವರ್ (Hebbal flyover) ಮೇಲೆ ಸಂಚಾರ ನಿರ್ಬಂಧಿಸಲಾಗಿದೆ. ಏಪ್ರಿಲ್ 17ರಿಂದ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ವಾಹನಗಳಿಗೆ ನಿರ್ಬಂಧ ಇತ್ತು. ಈಗ ಎಲ್ಲಾ ರೀತಿಯ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಈ ಮಾರ್ಗದ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ.

ಹೆಬ್ಬಾಳ ಮೇಲ್ಸೇತುವೆಗೆ ಎರಡು ಹೊಸ ಟ್ರ್ಯಾಕ್‌ಗಳನ್ನು ಸೇರಿಸಲು ಬಿ.ಡಿ.ಎ ಕಾಮಗಾರಿ ಆರಂಭಿಸಿರುವುದರಿಂದ ಈಗಾಗಲೇ ಏ.17ರಿಂದ ಕೆ.ಆರ್.ಪುರ ಲೂಪ್ ಸೇರುವ ಟ್ರ್ಯಾಕ್‌ನಲ್ಲಿ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಇದೀಗ ಮೇ 14ರಿಂದ ಕೆ.ಆರ್.ಪುರಂ ಕಡೆಯಿಂದ ಬರುವ ಲೂಪ್ ಹೆಬ್ಬಾಳ ಫ್ಲೈ ಓವರ್‌ನ ಮುಖ್ಯ ಟ್ರ್ಯಾಕ್‌ಗೆ ಸೇರಿಸುವ ಎರಡು ಲಿಂಕ್ ಸ್ಪ್ಯಾನ್‌ಗಳನ್ನು ತೆಗೆದುಹಾಕುತ್ತಿರುವುದರಿಂದ ರ‍್ಯಾಂಪ್ ಮತ್ತು ಮುಖ್ಯ ಟ್ರ್ಯಾಕ್‌ಗೆ ಸಂಪರ್ಕ ಕಡಿತವಾಗಲಿದೆ. ಹೀಗಾಗಿ ಯಾವುದೇ ರೀತಿಯ ವಾಹನ ಸಂಚಾರ ಸಾಧ್ಯವಿರದ ಹಿನ್ನೆಲೆಯಲ್ಲಿ, ಕಾಮಗಾರಿ ಮುಕ್ತಾಯವಾಗುವವರೆಗೆ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ವಿಭಾಗದಿಂದ ಈ ಕೆಳಕಂಡ ಮಾರ್ಪಾಡುಗಳನ್ನು ಮಾಡಲಾಗಿದೆ.

ಇದನ್ನೂ ಓದಿ | Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಮೇ 14ರಿಂದ ಹೆಬ್ಬಾಳ ಫ್ಲೈ ಓವರ್‌ನ ಕೆ.ಆರ್. ಪುರಂ ಅಪ್ ರ‍್ಯಾಂಪ್ ಮುಚ್ಚುತ್ತಿರುವುದರಿಂದ ಕೆ.ಆರ್‌.ಪುರಂ., ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿರ್ಬಂಧಿಸಲಾಗಿದೆ.

ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

  1. ನಾಗವಾರ(ಔಟರ್‌ರಿಂಗ್ ರಸ್ತೆ) ಕಡೆಯಿಂದ ನಗರದ ಒಳಗೆ ಮೇಖ್ರಿ ಸರ್ಕಲ್ ಮುಖಾಂತರ ಸಂಚರಿಸುವ ವಾಹನಗಳು ಹೆಬ್ಬಾಳ ಸರ್ಕಲ್‌ನಲ್ಲಿ ಫ್ಲೈ ಓವರ್ ಕೆಳಗಿನಿಂದ ಬಲ ತಿರುವು ಪಡೆದು ಕೊಡಿಗೇಹಳ್ಳಿ ಜಂಕ್ಷನ್ ಬಳಿ ಯೂ ಟರ್ನ್ ಪಡೆದು ಸರ್ವಿಸ್ ರಸ್ತೆಯಿಂದ ಹೆಬ್ಬಾಳ ಫ್ಲೈ ಓವರ್‌ನ ರ‍್ಯಾಂಪ್ ಮುಖೇನ ನಗರದ ಕಡೆಗೆ ಚಲಿಸಬಹುದಾಗಿರುತ್ತದೆ.
  2. ಕೆ.ಆರ್. ಪುರಂ, ನಾಗವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು ಈ ಕೆಳಕಂಡ ರಸ್ತೆಗಳ ಮೂಲಕ ನಗರ ಪ್ರವೇಶಿಸಬಹುದಾಗಿದೆ.
    ಐ.ಒ.ಸಿ. ಮುಕುಂದ ಥಿಯೇಟರ್ ರಸ್ತೆ,
    ಲಿಂಗರಾಜಪುರ ಮೇಲ್ಸೇತುವೆ ಮಾರ್ಗ,
    ನಾಗವಾರ ಟ್ಯಾನರಿ ರಸ್ತೆ ಮಾರ್ಗವಾಗಿ
  3. ಹೆಗಡೆನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನಗಳು ಜಿ.ಕೆ.ವಿಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದಾಗಿದೆ.
  4. ಕೆ.ಆ‌ರ್.ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಫ್ಲೈ ಓವರ್ ಕೆಳಗಡೆ ನೇರವಾಗಿ ಬಿ.ಇ.ಎಲ್. ಸರ್ಕಲ್ ತಲುಪಿ ಎಡತಿರುವು ಪಡೆದು ಸದಾಶಿವನಗರ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಐ.ಐ.ಎಸ್.ಸಿ. ಮುಖಾಂತರ ಚಲಿಸಬಹುದಾಗಿದೆ.
  5. ಕೆ.ಆ‌ರ್.ಪುರಂ, ಹೆಣ್ಣೂರು, ಎಚ್.ಆರ್.ಬಿ.ಆರ್. ಲೇಔಟ್, ಕೆ.ಜಿ.ಹಳ್ಳಿ, ಬಾಣಸವಾಡಿ ಕಡೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಸಂಚರಿಸುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯ ಮುಖಾಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಬಹುದಾಗಿದೆ.

Continue Reading

ಬೆಂಗಳೂರು

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Award Ceremony: 2022ನೇ ಸಾಲಿನ ಅ. ನ. ಕೃ. ಪ್ರಶಸ್ತಿಗೆ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಹಾಗೂ 2023ನೇ ಸಾಲಿನ ಅ. ನ. ಕೃ. ಪ್ರಶಸ್ತಿಗೆ ಡಾ. ಬಿ. ಎಸ್. ಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

VISTARANEWS.COM


on

Award Ceremony
Koo

ಬೆಂಗಳೂರು: ಅ. ನ. ಕೃ. ಪ್ರತಿಷ್ಠಾನ ವತಿಯಿಂದ ಕಾದಂಬರಿ ಸಾರ್ವಭೌಮ ಅ. ನ. ಕೃ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೇ 19ರಂದು ಬೆಳಗ್ಗೆ 10ಗಂಟೆಗೆ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜಿನ ಎಚ್. ಎನ್. ಮಲ್ಟಿಮೀಡಿಯಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 2022ನೇ ಸಾಲಿನ ಅ. ನ. ಕೃ. ಪ್ರಶಸ್ತಿಯನ್ನು ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಹಾಗೂ 2023ನೇ ಸಾಲಿನ ಅ. ನ. ಕೃ. ಪ್ರಶಸ್ತಿಯನ್ನು ಡಾ. ಬಿ. ಎಸ್. ಸ್ವಾಮಿ ಅವರಿಗೆ ಪ್ರದಾನ (Award Ceremony) ಮಾಡಲಾಗುತ್ತದೆ.

ಪ್ರಶಸ್ತಿ ಪುರಸ್ಕೃತರಾದ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಅವರು ರಾಷ್ಟೋತ್ಥಾನ ಸಾಹಿತ್ಯದ ಗೌರವ ಪ್ರಧಾನ ಸಂಪಾದಕರಾಗಿದ್ದು, ಡಾ. ಬಿ. ಎಸ್. ಸ್ವಾಮಿ ಅವರು ಆಕಾಶವಾಣಿಯ ವಿಶ್ರಾಂತ ಕಾರ್ಯಕ್ರಮ ನಿರ್ವಾಹಕರಾಗಿದ್ದಾರೆ.

ಪ್ರಜಾವಾಣಿ ದಿನಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಬಹುಶ್ರುತ ವಿದ್ವಾಂಸರಾದ ಶತಾವಧಾನಿ ಡಾ. ಆರ್. ಗಣೇಶ್, ಲೇಖಕ, ಉಪನ್ಯಾಸಕ ಡಾ. ಬಂಡ್ಲಹಳ್ಳಿ ವಿಜಯಕುಮಾ‌ರ್ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಇದನ್ನೂ ಓದಿ | ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ಡಾ. ಕೆ.ಆರ್. ಸಂಧ್ಯಾರೆಡ್ಡಿ, ಶಾ.ಮಂ. ಕೃಷ್ಣರಾವ್, ಎಂ. ವೆಂಕಟೇಶ್ ಅವರು ಉಪಸ್ಥಿತರಿರಲಿದ್ದು, ಮಾಜಿ ಅಡ್ವೊಕೇಟ್ ಜನರಲ್ ಹಾಗೂ ನ್ಯಾಯವಾದಿ ಅಶೋಕ್ ಹಾರನಹಳ್ಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅ. ನ. ಕೃ. ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಗೌತಮ್ ಅ. ನ. ಕೃ, ಪ್ರತಿಷ್ಠಾನದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿರಲಿದ್ದಾರೆ.

2022ರ ಪ್ರಶಸ್ತಿ ಪುರಸ್ಕೃತರು: ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ

ಆರೂವರೆ ದಶಕಗಳ ಕಾಲ ಪತ್ರಿಕೋದ್ಯಮ, ಸಾಹಿತ್ಯ ಮತ್ತು ಸಮಾಜಕಾರ್ಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಎಸ್. ಆರ್. ರಾಮಸ್ವಾಮಿ ಅವರು (ಜನನ: 29-10-1937) ಕಳೆದ 45 ವರ್ಷಗಳಿಂದ ‘ಉತ್ಥಾನ’ ಮಾಸಪತ್ರಿಕೆ ಮತ್ತು ‘ರಾಷ್ಟ್ರೋತ್ಥಾನ ಸಾಹಿತ್ಯ’ ಪ್ರಕಾಶನದ ಪ್ರಧಾನ ಸಂಪಾದಕರಾಗಿದ್ದಾರೆ.

ಸುಭಾಷ್‌ಚಂದ್ರ ಬೋಸ್ ಅವರ ಸಮಗ್ರ ಜೀವನಚರಿತ್ರೆ ‘ಕೋಲ್ಮಿಂಚು’ ಜಯಪ್ರಕಾಶ್ ನಾರಾಯಣ್ ವಲ್ಲಭಭಾಯಿ ಪಟೇಲ್, ಮೋಕ್ಷಗುಂಡಂ ವಿಶ್ವೇಶ್ವರಯ್ಯ, ಸ್ವಾಮಿ ವಿವೇಕಾನಂದ, ಭಗಿನಿ ನಿವೇದಿತಾ ಮೊದಲಾದ ಇಪ್ಪತ್ತಕ್ಕೂ ಹೆಚ್ಚು ಜೀವನಚರಿತ್ರೆಗಳೂ ಸೇರಿ ಸುಮಾರು 60 ಗ್ರಂಥಗಳನ್ನು ಬರೆದಿದ್ದಾರೆ. ‘ಭಾರತದಲ್ಲಿ ಸಮಾಜಕಾರ್ಯ’, ‘ಸ್ವಾತಂತ್ರ್ಯೋದಯದ ಮೈಲಿಗಲ್ಲುಗಳು’ ಮೊದಲಾದ ಹಲವಾರು ಪ್ರತಿಷ್ಠಿತ ಕೃತಿಗಳಿಗೆ ವಿಸ್ತತ ಸ್ವತಂತ್ರ ಅವಲೋಕನ ಪ್ರಬಂಧಗಳನ್ನು ಬರೆದು ಸಂಪಾದನ ಮಾಡಿದ್ದಾರೆ.

ಅಭ್ಯುದಯ ಅರ್ಥಶಾಸ್ತ್ರದಲ್ಲಿ ಆಳವಾದ ಪರಿಶ್ರಮ ಮಾಡಿರುವ ಇವರು ಜಾಗತೀಕರಣದ ಹಿನ್ನೆಲೆಯಲ್ಲಿ ಬರೆದ ‘ಆರ್ಥಿಕತೆಯ ಎರಡು ಧ್ರುವ’ ಅರ್ಥಶಾಸ್ತ್ರ ಕ್ಷೇತ್ರದ ಒಂದು ಉನ್ನತ ಕೃತಿಯೆಂದು ಪರಿಗಣಿತವಾಗಿದೆ. ಸ್ವಾತಂತ್ರ್ಯೋತ್ತರ ಭಾರತದ ಅರ್ಥಿಕ ಯೋಜನೆಗಳನ್ನು ತಲಸ್ಪರ್ಶಿಯಾಗಿ ವಿಶ್ಲೇಷಿಸಿರುವ ರಾಮಸ್ವಾಮಿಯವರ ‘ಶತಮಾನದ ತಿರುವಿನಲ್ಲಿ ಭಾರತ’ ಸಮಾಜವಿಜ್ಞಾನ ಕ್ಷೇತ್ರದ ಆ ವರ್ಷದ ಶ್ರೇಷ್ಠ ಕೃತಿಯೆಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಪಡೆದಿದೆ. ಬ್ರಿಟಿಷ್-ಪೂರ್ವ ಭಾರತದ ಉನ್ನತ ಸ್ಥಿತಿ ಕುರಿತ ಖ್ಯಾತ ಸಂಶೋಧಕ ಧರ್ಮಪಾಲ್ ಅವರ ಕೃತಿಗಳನ್ನು ಇವರು ಕನ್ನಡಕ್ಕೆ ಪರಿಚಯಿಸಿದ್ದಾರೆ. ಸ್ವದೇಶೀ ಚಿಂತನೆಯ ಪ್ರತಿಪಾದಕಗಳಾದ ಇವರ ಹಲವಾರು ಕೃತಿಗಳು ಪಥದರ್ಶಕವೆನಿಸಿವೆ.

ಅನೇಕ ಹಿರಿಯ ಸಾಹಿತಿಗಳ ಒಡನಾಟದಲ್ಲಿದ್ದ ರಾಮಸ್ವಾಮಿಯವರು, ಡಿ.ವಿ.ಗುಂಡಪ್ಪ, ಸೀತಾರಾಮಯ್ಯ, ರಾಕ್ಲಪಲ್ಲಿ ಅನಂತಕೃಷ್ಣಶರ್ಮ, ವೀರಕೇಸರಿ ಸೀತಾರಾಮಶಾಸ್ತ್ರಿ, ತಿ. ತಾ. ಶರ್ಮ, ಪಿ. ಕೋದಂಡರಾವ್, ತೋಟಗಾರಿಕೆ ಋಷಿ ಎಂ. ಎಚ್. ಮರಿಗೌಡ ಮೊದಲಾದ ಧೀಮಂತರನ್ನು ಕುರಿತು ಬರೆದ ‘ದೀವಟಿಗೆಗಳು’, ‘ದೀಪ್ತಿಮಂತರು’ ಮತ್ತು ‘ದೀಪ್ತಶೃಂಗಗಳು’ – ಇವು ಅನುಪಮ ವ್ಯಕ್ತಿಚಿತ್ರಮಾಲಿಕೆಗಳಾಗಿವೆ. ಈಗಿನ ಜಗದ್‌ವ್ಯಾಪಿ ತುಮುಲಗಳ ಬೇರುಗಳಿರುವುದು ಎರಡು ಭಿನ್ನ ಜೀವನದೃಷ್ಟಿಗಳಲ್ಲಿ – ಎಂದು ಅವರ ‘ನಾಗರಿಕತೆಗಳ ಸಂಘರ್ಷ’ ಕೃತಿ ಪ್ರತಿಪಾದಿಸಿದೆ. ಅವರ ‘ಕೆಲವು ಇತಿಹಾಸ-ಪರ್ವಗಳು’ ಮತ್ತು ‘ಮರೆಯಬಾರದ ಇತಿಹಾಸಾಧ್ಯಾಯಗಳು’ ಮೈಲಿಗಲ್ಲುಗಳೆಂದು ಅಂಕಿತಗೊಂಡಿರುವ ಕೆಲವು ಇತಿಹಾಸ ಘಟನಾಸರಣಿಗಳ ಪರಾಮರ್ಶನೆಯಾಗಿವೆ. ಭಾರತದ ಈಚಿನ ಇತಿಹಾಸಕ್ಕೆ ನಿರ್ಣಾಯಕ ತಿರುವನ್ನಿತ್ತ ರಾಜಾ ರಾಮಮೋಹನರಾಯ್ ಅವರಿಂದ ಜಯಪ್ರಕಾಶ ನಾರಾಯಣ್ ವರೆಗಿನ ಹತ್ತಾರು ಮಹನೀಯರ ಜೀವಿತಕಥನಗಳು `ನವೋತ್ಥಾನದ ಅಧ್ವರ್ಯುಗಳು’ ಮತ್ತು ‘ಹಲವರು ರಾಷ್ಟ್ರಾರಾಧಕರು’. ರಾಮಸ್ವಾಮಿಯವರ ‘ಕವಳಿಗೆ’ ಮತ್ತು ‘ಸಾಹಿತ್ಯ ಸಾನ್ನಿಹಿತ್ಯ ಉನ್ನತಮಟ್ಟದ ಸಾಹಿತ್ಯ ಪರಾಮರ್ಶಕ ಕೃತಿಗಳಾಗಿವೆ. ರಾಮಸ್ವಾಮಿಯವರು ಕಳೆದ ಅರವತ್ತು ವರ್ಷಗಳಲ್ಲಿ ವಿವಿಧ ಪತ್ರಿಕೆಗಳಲ್ಲಿ 2000ಕ್ಕೂ ಹೆಚ್ಚು ಅಧ್ಯಯನಪೂರ್ಣ ಲೇಖನಗಳನ್ನು ಬರೆದಿದ್ದಾರೆ.

ಪತ್ರಿಕೋದ್ಯಮ ಸೇವೆಗಾಗಿ 2006ರಲ್ಲಿ ಇವರಿಗೆ ‘ಆರ್ಯಭಟ ಪ್ರಶಸ್ತಿ’ ದೊರೆತಿದೆ. ಸಾಹಿತ್ಯಸೇವೆಗಾಗಿ 2008ರಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ ಇವರಿಗೆ ದೊರೆತಿದೆ. 2011ರಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಇವರ ಸುದೀರ್ಘ ಸಾಹಿತ್ಯಸೇವೆಗಾಗಿ ಗೌರವಾರ್ಥ ಡಾಕ್ಟರೇಟ್ ನೀಡಿದೆ. ದೀರ್ಘ ಪತ್ರಿಕೋದ್ಯಮ ಸೇವೆಗಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ‘ವರ್ಷದ ಶ್ರೇಷ್ಠ ವ್ಯಕ್ತಿ’ ಸಮ್ಮಾನ ದೊರೆತಿದೆ (2012). ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳ ಜೀವಮಾನ ಸಾಧನೆಗಾಗಿ 2015ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ‘ನಾಡೋಜ’ ಪದವಿಯನ್ನು ಇವರಿಗೆ ನೀಡಲಾಗಿದೆ. ಕರ್ನಾಟಕ ಸರಕಾರವು 2022-23ರ ‘ಪಂಪಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ.

2023ರ ಪ್ರಶಸ್ತಿ ಪುರಸ್ಕೃತರು : ಡಾ. ಬಿ. ಎಸ್. ಸ್ವಾಮಿ

ಬಿ. ಸಿದ್ಧಲಿಂಗ ಸ್ವಾಮಿಯವರು ಮೂಲತಃ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯವರು. ವಿ. ಬಸವಲಿಂಗಪ್ಪ – ಶಿವನಾಗಮ್ಮ ದಂಪತಿಯ ಸುಪುತ್ರರಾದ ಇವರು ಎಂ. ಎ., ಪಿಎಚ್. ಡಿ. ಪದವೀಧರರು. ಐದು ವರ್ಷ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ನಂತರ ಬೆಂಗಳೂರು ಆಕಾಶವಾಣಿಯಲ್ಲಿ ಇಪ್ಪತ್ತು ವರ್ಷ ಕಾರ್ಯನಿರ್ವಹಿಸಿ ಅನಂತರ ಗುಲ್ಬರ್ಗ, ಬೆಂಗಳೂರು, ಮಂಗಳೂರು ಬಾನುಲಿಕೇಂದ್ರಗಳಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿ ಹದಿನಾಲ್ಕು ವರ್ಷ ದುಡಿದು ನಿವೃತ್ತರಾದರು.

ಬಾನುಲಿಯ ಸುದೀರ್ಘ ಸೇವೆಯಲ್ಲಿ ಇವರು ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸಿ, ಪ್ರತಿಭಾವಂತರನ್ನು ಹುಡುಕಿ ಅವರನ್ನು ಆಕಾಶವಾಣಿಯ ಕಾರ್ಯಕ್ರಮಗಳಲ್ಲಿ ತೊಡಗಿಸಿ ಜನಾನುರಾಗಿಯಾದರು.
1967ರಲ್ಲಿ ಇವರ ಮೊದಲ ಕವನಸಂಗ್ರಹ ‘ಅಮೃತ’ ಪ್ರಕಟವಾಯಿತು. ಅಂದಿನಿಂದ ಇಂದಿನವರೆಗೆ ಆರು ದಶಕ ಲೇಖನಿಯನ್ನು ಕೆಳಗಿಡದೆ ಒಂದೇ ಸಮನೆ ಬರೆಯುತ್ತ ಸುಮಾರು ನಾಲ್ಕುನೂರು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವುಗಳಲ್ಲಿ ‘ಕಲಿ ಭಾರತ’, ‘ಅಲ್ಲಮಪ್ರಭು’, ‘ಅಕ್ಕಮಹಾದೇವಿ’, ‘ಬಸವಣ್ಣ’ ಮಹಾಕಾವ್ಯಗಳೂ, ‘ಬೆಂಕಿಯಲ್ಲಿ ಅರಳಿದ ಹೂವು’ ನಂತಹ ಆತ್ಮಕಥನವೂ ಸೇರಿದೆ.

ಇವರ ಸಾಹಿತ್ಯಸೃಷ್ಟಿಗೆ ಯಾವ ಸರಹದ್ದುಗಳೂ ಇಲ್ಲ. ಕಥೆ, ಕಾದಂಬರಿ, ಕವನ, ನಾಟಕ, ರೂಪಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಸಂಪಾದನೆ, ವೈಚಾಲಕ, ಹಾಸ್ಯ, ಜಾನಪದ, ಪ್ರವಾಸಕಥನ, ಜೀವನ ಚರಿತ್ರೆ, ವಚನಸಾಹಿತ್ಯ, ದಾಸಸಾಹಿತ್ಯ, ಮಕ್ಕಳ ಸಾಹಿತ್ಯ, ಬಿಡಿ ಬರೆಹಗಳು – ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೈಯಾಡಿಸಿದ್ದಾರೆ. ಅನೇಕ ಸಾಮಾಜಿಕ, ಐತಿಹಾಸಿಕ ಕಾದಂಬರಿಗಳನ್ನು ಬರೆದ ಕೈಗಳಿಂದಲೇ ಜಾನಪದ ಸಾಹಿತ್ಯಚರಿತ್ರೆಯ ಹದಿನೈದು ಸಂಪುಟಗಳು, ಮಲೆ ಮಾದೇಶ್ವರ ಕಾವ್ಯ ಸಂಪಾದನೆ ಮಾಡಿದ್ದಾರೆ. ಜಾನಪದ ಕ್ಷೇತ್ರದಲ್ಲಿ ಒಂದು ವಿಶ್ವವಿದ್ಯಾಲಯ ಮಾಡುವಷ್ಟು ಕ್ಷೇತ್ರಕಾರ್ಯ, ಸಂಪಾದನೆ, ವಿಶ್ಲೇಷಣ, ಸಂಗ್ರಹ ಮಾಡಿದ್ದಾರೆ. ಶಿಷ್ಟಸಾಹಿತ್ಯದಲ್ಲಿ ಡಾ. ಸ್ವಾಮಿಯವರ ಕೊಡುಗೆ ಸಣ್ಣದಲ್ಲ. ಕಾಳಿದಾಸನ ಸಾಹಿತ್ಯದ ಕುರಿತು ಬರೆಯಬಲ್ಲ ಡಾ. ಸ್ವಾಮಿಯವರು ಸೂರದಾಸನ ಸಾಹಿತ್ಯದ ಬಗೆಗೂ ಬರೆಯಬಲ್ಲರು. ಹರಿದಾಸ ಪರಂಪರೆಯ ಕುರಿತು ಹಲವು ವರ್ಷ ಸಂಶೋಧನೆ ಮಾಡಿ ಒಂದು ಬೃಹತ್ ಗ್ರಂಥ ಪ್ರಕಟಿಸಿದ್ದಾರೆ. ಅದಕ್ಕಾಗಿ ಅವರು ಊರೂರು ಅಲೆದು ಹಲಕಥಾಕಾರರನ್ನು ಸಂದರ್ಶಿಸಿ, ವಾಚನಾಲಯಗಳಲ್ಲಿ ತಿಂಗಳುಗಟ್ಟಲೆ ಕುಳಿತು ಸಂಶೋಧನೆ ಮಾಡಿದ್ದಾರೆ.

ಇದನ್ನೂ ಓದಿ | ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ಇವರ ಸಾಹಿತ್ಯಸೇವೆಯನ್ನು ಗಮನಿಸಿ ಕನ್ನಡಿಗರು ಅವರಿಗೆ ‘ಮಧುವೃತ’ ಎಂಬ ಗೌರವಗ್ರಂಥ ಅರ್ಪಿಸಿದ್ದಾರೆ.
ಇವರ ‘ಕವಿಚಕ್ರೇಶ್ವರ’ ಕಾದಂಬರಿಗೆ ದೇವರಾಜ ಬಹದ್ದೂರ್ ಪ್ರಶಸ್ತಿ(1974), ‘ಜಾನಪದ ಕಥಾಸಂಗಮ’ಕ್ಕೆ ಕರ್ನಾಟಕ ಜಾನಪದ-ಯಕ್ಷಗಾನ ಅಕಾಡೆಮಿಯ ಬಹುಮಾನ(1987), ‘ಮಹಾಜ್ಯೋತಿ ಮಾದೇಶ್ವರ’ ಕೃತಿಗೆ ಮುದ್ದಣ- ರತ್ನಾಕರವರ್ಣಿ ಪ್ರಶಸ್ತಿ, ‘ಜಾನಪದ ಸೌರಭ’, ಅಕ್ಕಮ್ಮ ಗಿರಿಗೌಡ ರುದ್ರಪ್ಪ ಪ್ರಶಸ್ತಿ (1996), ‘ತುಳುನಾಡ ಐಸಿರಿ’ಗೆ ಗೊರೂರು ಪ್ರತಿಷ್ಠಾನದ ಪ್ರಶಸ್ತಿ (1997), ಕದಂಬೋತ್ಸವದಲ್ಲಿ ಅಭಿನಂದನೆ(1998), ‘ಸಮಗ್ರ ನಾಟಕಗಳು’ಗೆ ಆರ್ಯಭಟ ಪ್ರಶಸ್ತಿ, ಜಾನಪದ ಜ್ಞಾನ ವಿಜ್ಞಾನ ಪ್ರಶಸ್ತಿ(2002), ‘ನಾಟಕ ರೂಪಕ’ ಕೃತಿಗೆ ಅತ್ತಿಮಬ್ಬೆ ಸಾಹಿತ್ಯಪ್ರತಿಷ್ಠಾನದ ಪ್ರಶಸ್ತಿ, ‘ಜಾನಪದಶ್ರೀ’ಗೆ ಕರ್ನಾಟಕ ಜಾನಪದ ಅಕಾಡೆಮಿ ಬಹುಮಾನ, ಇಂಥ ಅನೇಕ ಸಂಘಸಂಸ್ಥೆಗಳ ಬಹುಮಾನಗಳು, ಪ್ರಶಸ್ತಿಗಳು ಇವರಿಗೆ ಸಂದಿವೆ.

Continue Reading

ಬೆಂಗಳೂರು

Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

Book Release: ಬೆಂಗಳೂರಿನ ಬನಶಂಕರಿಯ ಸುಚಿತ್ರ ಫಿಲ್ಮ್‌ ಸೊಸೈಟಿಯ ನಾಣಿ ಸಭಾಂಗಣದಲ್ಲಿ ಮೇ 12ರಂದು ಬೆಳಗ್ಗೆ 10ಗಂಟೆಗೆ ಕನ್ನಡದಲ್ಲಿ ಶ್ರೀ ಶಂಕರ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Book Release
Koo

ಬೆಂಗಳೂರು: ಅಯೋಧ್ಯಾ ಪ್ರಕಾಶನ ಪ್ರಕಟನೆಯ ಲೇಖಕ ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರ; ಶಾಂಕರ ಸ್ತೋತ್ರಗಳ ಭಾವಾನುಭವ (Book Release) ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಮೇ 12ರಂದು ಬೆಳಗ್ಗೆ 10ಗಂಟೆಗೆ ನಗರದ ಬನಶಂಕರಿಯ ಬಿ.ವಿ.ಕಾರಂತ್‌ ರಸ್ತೆಯ ಸುಚಿತ್ರ ಫಿಲ್ಮ್‌ ಸೊಸೈಟಿಯ ನಾಣಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ನಗರದ ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀ ಸ್ವಾಮಿ ನಿತ್ಯಸ್ಥಾನಂದಜಿ ಮಹಾರಾಜ್‌ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಾಹಿತಿ ಹಾಗೂ ಸಂಸ್ಕೃತಿ ಚಿಂತಕರಾದ ಡಾ.ಜಿ.ಬಿ. ಹರೀಶ, ವಾಗ್ಮಿ ಹಾಗೂ ಬಹುಭಾಷಾವಿದರು ಶತಾವಧಾನಿ ಆರ್‌. ಗಣೇಶ್‌ ಭಾಗವಹಿಸಲಿದ್ದಾರೆ.

ಇದನ್ನೂ ಓದಿ | Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Continue Reading
Advertisement
Sambita Patra
ದೇಶ3 mins ago

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Anti Terrorism Day
ದೇಶ34 mins ago

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

Dina Bhavishya
ಭವಿಷ್ಯ1 hour ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Prajwal Revanna Case
ಕರ್ನಾಟಕ6 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ6 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20246 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ7 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ7 hours ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ7 hours ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ8 hours ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ16 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌