Gali Anjaneya Temple : ಗಾಳಿ ಆಂಜನೇಯ ದೇಗುಲದಲ್ಲಿ ಹಣ ಲಪಟಾಯಿಸಲು ಹತ್ತಾರು ತಂತ್ರ; ಟ್ರಸ್ಟಿಗಳು, ಅರ್ಚಕರಿಂದಲೇ ದೇವರ ಹಣಕ್ಕೆ‌ ಕನ್ನ! - Vistara News

ಬೆಂಗಳೂರು

Gali Anjaneya Temple : ಗಾಳಿ ಆಂಜನೇಯ ದೇಗುಲದಲ್ಲಿ ಹಣ ಲಪಟಾಯಿಸಲು ಹತ್ತಾರು ತಂತ್ರ; ಟ್ರಸ್ಟಿಗಳು, ಅರ್ಚಕರಿಂದಲೇ ದೇವರ ಹಣಕ್ಕೆ‌ ಕನ್ನ!

Gali Anjaneya Temple : ಗಾಳಿ ಆಂಜನೇಯ ದೇಗುಲದಲ್ಲಿ ಹಣ ಲಪಟಾಯಿಸಲು ಟ್ರಸ್ಟಿಗಳು, ಅರ್ಚಕರೇ ಹತ್ತಾರು ತಂತ್ರ ಮಾಡಿ ದೇವರ ಹಣಕ್ಕೆ‌ ಕನ್ನ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

VISTARANEWS.COM


on

Gali Anjaneya Temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ದೇಗುಲದಲ್ಲಿ ಮತ್ತೊಂದು ಅವ್ಯವಹಾರ ಬೆಳಕಿಗೆ ಬಂದಿದೆ. ಗಾಳಿ ಆಂಜನೇಯ ದೇಗುಲದಲ್ಲಿ (Gali Anjaneya Temple) ಹಣ ಲಪಟಾಯಿಸಲು ಹತ್ತಾರು ತಂತ್ರ ಮಾಡಿರುವ ಆರೋಪ ಕೇಳಿ ಬಂದಿದೆ. ದೇಗುಲದ ಟ್ರಸ್ಟಿಗಳು, ಅರ್ಚಕರಿಂದ ದೇಗುಲದ ಹಣಕ್ಕೆ‌ ಕನ್ನ ಹಾಕಲಾಗಿದೆ. ಈ ಹಿಂದೆ ಹುಂಡಿ ಎಣಿಕೆ ವೇಳೆ ಹಣ ಕಳ್ಳತನ ವಿಚಾರ ಬಯಲಾಗಿತ್ತು. ಈಗ ದೇವಸ್ಥಾನದ ಮತ್ತೊಂದು ಅನಾಚಾರ ಬೆಳಕಿಗೆ ಬಂದಿದೆ.

ಹುಂಡಿ‌ ಹಣ ಕದಿಯುವುದಲ್ಲದೇ ಟೆಕ್ನಾಲಜಿ ಬಳಸಿ ಭಕ್ತರ ಕಾಣಿಕೆಗಳಿಗೂ ಕನ್ನ ಹಾಕುತ್ತಿದ್ದಾರೆ. QR ಕೋಡ್ ಮೂಲಕ ದೇಗುಲಕ್ಕೆ ಸೇರಬೇಕಿದ್ದ ಹಣ ಪೂಜಾರಿ ಖಾತೆಗೆ ಸೇರುತ್ತಿದೆ. ದೇಗುಲದಲ್ಲಿ ಇಟ್ಟಿರೋ QR ಕೋಡ್ ಬ್ಯಾಂಕ್ ಖಾತೆ ಅರ್ಚಕ ಶ್ರೀನಿವಾಸ್ ವೈಯಕ್ತಿಕ ಖಾತೆಗೆ ಲಿಂಕ್ ಮಾಡಲಾಗಿದೆ. ಇದರಿಂದ ಸೇವೆಗಳ ಶುಲ್ಕ, ಕಾಣಿಕೆ ರೂಪದ ಹಣ ನೇರವಾಗಿ ಪೂಜಾರಿ ಖಾತೆಗೆ ಹೋಗುತ್ತಿದೆ. ದೇಗುಲದ ಬ್ಯಾಂಕ್ ಖಾತೆ ಬದಲಿಗೆ ಅರ್ಚಕ ಶ್ರೀನಿವಾಸ ರಾಮಾನುಜ ಭಟ್ಟಾಚಾರ್ಯ ಖಾತೆಗೆ ಹಣ ಸೇರುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ದೇಗುಲದ ಭಕ್ತರಾದ ಮೋಹನ್ ಪಿ.ವಿ ಈ ಬಗ್ಗೆ ಬ್ಯಾಟರಾಯನಪುರ ಠಾಣೆಗೆ ದೂರು‌ ನೀಡಿದ್ದಾರೆ. ಅಷ್ಟಲ್ಲದೇ ಟ್ರಸ್ಟಿಗಳು, ಪೂಜಾರಿಗಳಿಂದ ದೇಗುಲದ ಟ್ರಸ್ಟ್ ಆಸ್ತಿ ದುರುಪಯೋಗವಾಗುತ್ತಿದೆ. ದೇಗುಲದ ಚಿನ್ನಾಭರಣ, ಬೆಳ್ಳಿ ಆಭರಣಗಳು, ಹುಂಡಿ ಹಣಕೆ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಹೀಗಾಗಿ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ದೂರು ನೀಡಿದ್ದಾರೆ.

ಒಟ್ಟು 8 ಮಂದಿ ವಿರುದ್ಧ ಮೋಹನ್ ಪಿ. ವಿ ದೂರು ನೀಡಿದ್ದಾರೆ. ದೂರು ಆಧರಿಸಿ ಟ್ರಸ್ಟಿಗಳಾದ ಡಿ.ಎಂ.ಹನುಮಂತಪ್ಪ, ಬಿ.ಪಿ.ನಾಗರಾಜ್ @ ಅಶೋಕ್, ಬಿ.ವಿ.ಶ್ರೀನಿವಾಸ ರಾಮಾನುಜ ಭಟ್ಟಾಚಾರ್ಯ, ಎ.ಎಚ್.ಗೋಪಿನಾಥ್, ಅರ್ಚಕರಾದ ಬಿ.ಕೆ.ರಾಮನುಜ ಭಟ್ಟಾಚಾರ್ಯ, ಸುರೇಶ್, ರಾಘವೇಂದ್ರ, ಮಲ್ಲಿಕಾರ್ಜುನ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ದೂರಿನ ಸಂಬಂಧ ದೂರುದಾರ ಅಗತ್ಯ ಮಾಹಿತಿ ಒದಗಿಸಲು ಸಿದ್ದ ಎಂದಿದ್ದಾರೆ. 2 ತಿಂಗಳ ಹಿಂದೆ ಹಣ ಕಳ್ಳತ‌ನ‌ ಸಂಬಂಧ ಎಫ್‌ಐಆರ್‌ ದಾಖಲಾಗಿತ್ತು. ಈಗ ಹಣ ದುರುಪಯೋಗ ಸಂಬಂಧ ಮತ್ತೊಂದು ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಚಿಕ್ಕೋಡಿ

Car Fire : ಧಗಧಗನೆ ಹೊತ್ತಿ ಉರಿದ ಕಾರಿನೊಳಗೆ ವ್ಯಕ್ತಿ ಸಜೀವ ದಹನ; ಇದು ಅಪಘಾತವೋ, ಕೊಲೆಯೋ!

Car Fire : ಬೆಳಗಾವಿ-ಚಿಕ್ಕೋಡಿ ರಾಜ್ಯ ಹೆದ್ದಾರಿಯ ಜೈನಾಪುರ ಗ್ರಾಮದಲ್ಲಿ ಕಾರೊಂದು ಧಗಧಗನೇ ಹೊತ್ತಿ ಉರಿದು, ಒಳಗೆ ಇದ್ದ ವ್ಯಕ್ತಿಯೊಬ್ಬ ಸಂಪೂರ್ಣ ಸುಟ್ಟು ಕರಕಲಾಗಿದ್ದಾನೆ.

VISTARANEWS.COM


on

By

Car Fire
Koo

ಚಿಕ್ಕೋಡಿ: ಬೆಳಗಾವಿ-ಚಿಕ್ಕೋಡಿ ರಾಜ್ಯ ಹೆದ್ದಾರಿಯ ಜೈನಾಪುರ ಗ್ರಾಮದ ಬಳಿ ಕಳೆದ ರಾತ್ರಿ ಕಾರೊಂದು ಧಗಧಗನೇ ಹೊತ್ತಿ ಉರಿದು ಸಂಪೂರ್ಣ (Car Fire) ಸುಟ್ಟು ಕರಕಲಾಗಿತ್ತು. ಕಾರಿನೊಳಗೆ ವ್ಯಕ್ತಿಯೊಬ್ಬ ಸಜೀವ ದಹನವಾಗಿದ್ದ, ಹೀಗಾಗಿ ಗುರುತು ಪತ್ತೆಯಾಗಿರಲಿಲ್ಲ. ಹೀಗಾಗಿ ಪೊಲೀಸರು ಕಾರಿನ ಚಾರ್ಸಿ ನಂಬರ್‌ ಮೂಲಕ ಮಾಲೀಕನ ಪತ್ತೆಗೆ ಮುಂದಾಗಿದ್ದರು.

ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಅದರ ತೀವ್ರತೆಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಪೈರೋಜ್ ಬಡಗಾಂವ (40) ಕಾರಿನಲ್ಲಿದ್ದ ವ್ಯಕ್ತಿ ಎನ್ನಲಾಗುತ್ತಿದೆ. ಪೈರೋಜ್ ಚಿಕ್ಕೋಡಿ ಪಟ್ಟಣದ ಮುಲ್ಲಾ ಪ್ಲಾಟ್ ನಿವಾಸಿಯಾಗಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಟ್ಟ ಕಾರು ಹಾಗೂ ಮೃತದೇಹವನ್ನು ಎಫ್‌ಎಸ್‌ಎಲ್‌ ತಂಡ ಪರಿಶೀಲಿಸುತ್ತಿದೆ. ಸ್ಥಳೀಯರು ಇದು ಅಪಘಾತವೋ ಕೊಲೆಯೋ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಅಸ್ತಿಪಂಜರ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಸ್ತಿಪಂಜರ ಪತ್ತೆಯಾಗಿದೆ. ಉತ್ತರಕನ್ನಡದ ಭಟ್ಕಳದ ಬಂದರು ರಸ್ತೆಯ ಮುಗ್ದುಂ ಕಾಲೋನಿಯ ಸಮೀಪ ಪತ್ತೆಯಾಗಿದೆ. ವ್ಯಕ್ತಿಯೊರ್ವ ಹಾರೆಯ ಹಿಡಿಗೋಲಿಗಾಗಿ ಕಟ್ಟಿಗೆ ಹುಡುಕುತ್ತಿದ್ದಾಗ ಅಸ್ತಿಪಂಜರ ಕಂಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಒಂದೆರಡು ತಿಂಗಳ ಹಿಂದೆ ಮೃತಪಟ್ಟಿರುವ ಶಂಕೆ ಇದೆ. ನೆಲದಿಂದ ಸುಮಾರು 10 ಅಡಿ ಎತ್ತರದಲ್ಲಿ ನೈಲಾನ ಹಗ್ಗದಿಂದ ಮರಕ್ಕೆ ಬಿಗಿದ ಸ್ಥಿತಿಯಲ್ಲಿರುವ ಶವ ಸಿಕ್ಕಿದೆ. ಶವ ಕೊಳೆತು ದೇಹದಿಂದ ಬೇರ್ಪಟ್ಟು ರುಂಡ ಕೆಳಗೆಬಿದ್ದಿದೆ. ಅಸ್ತಿಪಂಜರದ ಪಕ್ಕದಲ್ಲಿ ಪುರುಷನ ಪಾದರಕ್ಷೆ ಪತ್ತೆಯಾಗಿರುವುದರಿಂದ ಇದು ಪುರುಷನ ಶವ ಎಂದು ಗುರುತಿಸಿದ್ದಾರೆ. ಅಸ್ಥಿಪಂಜರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಭಟ್ಕಳ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬರ್ತ್ ಡೇ ಸೆಲೆಬ್ರೇಷನ್‌ನಲ್ಲಿ ಪಿಸ್ತೂಲ್ ಸದ್ದು!

ರಿಯಲ್ ಎಸ್ಟೇಟ್ ಉದ್ಯಮಿ ಬರ್ತ್‌ ಡೇ ಸಂಭ್ರಮದಲ್ಲಿ 6 ಸುತ್ತು ಏರ್ ಫೈರ್ ಮಾಡಿ ಪುಂಡಾಟ ಮೆರೆದಿದ್ದಾರೆ. ಸೆಪ್ಟೆಂಬರ್ 22 ರಂದು ಘಟನೆ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಸ್ಕ್ರಾಪ್ ಗೋಡೌನ್‌ನಲ್ಲಿ ಸೈಯದ್ ಅಲ್ತಫ್ ಅಹಮದ್ ಗುಂಡು ಹಾರಿಸಿದ್ದಾನೆ. ಸೆಪ್ಟೆಂಬರ್ 22 ರಂದು ಮೊಯಿನ್ ಖಾನ್ ಎಂಬಾತನ ಹುಟ್ಟು ಹಬ್ಬವಿತ್ತು. ಬರ್ತ್ ಡೇ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಅಲ್ತಫ್ ಈ ವೇಳೆ ಏರ್ ಫೈರ್ ಮಾಡಿ ಪುಂಡಾಟ ಮೆರೆದಿದ್ದಾನೆ.

ಮಾತ್ರವಲ್ಲ ಅದನ್ನು ಇನ್ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿ ಬಿಲ್ಡಪ್ ತೆಗೆದುಕೊಂಡಿದ್ದಾರೆ. ಘಟನೆ ವಿಡಿಯೊ ಜುಬೇರ್ ಖಾನ್ ಲಿಮ್ರಾ ಎಂಬ ಇನ್ಸ್ಟಾ ಅಕೌಂಟ್‌ನಲ್ಲಿ ಪೋಸ್ಟ್ ಆಗಿತ್ತು. ಇದನ್ನು ಗಮನಿಸಿದ್ದ ಬೆಂಗಳೂರು ಪೊಲೀಸ್ ಸೋಷಿಯಲ್ ಮೀಡಿಯಾ ವಿಂಗ್ ತಕ್ಷಣ ಅಪರಾಧ ವಿಭಾಗ-2 ಡಿಸಿಪಿ ಶ್ರೀನಿವಾಸ್ ಗೌಡಗೆ ಮಾಹಿತಿ ನೀಡಿದೆ. ಮಾಹಿತಿ ಆಧರಿಸಿ ಸಿಸಿಬಿಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆರೋಪಿ ಅಲ್ತಾಫ್‌ನ ಆರ್ಮ್ಸ್ ಆ್ಯಕ್ಟ್ ಅಡಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Love Case : ಸಿರಿಯಲ್ ನಟಿಯ ಮದುವೆ ಕಿರಿಕ್‌; ವಾಶ್‌ರೂಮ್‌ನಲ್ಲಿ ಯುವಕ ಆತ್ಮಹತ್ಯೆ

Love Case : ಸಿರಿಯಲ್ ನಟಿ ಮದುವೆ ಆಗುವಂತೆ ಒತ್ತಾಯಿಸಿದ್ದಕ್ಕೆ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

By

Love case
Koo

ಬೆಂಗಳೂರು: ಸಿರಿಯಲ್ ನಟಿ ಮದುವೆ ಆಗುವಂತೆ ಪೀಡಿಸುತ್ತಿದ್ದಳು ಎಂದು ಯುವಕನೊಬ್ಬ ಆತ್ಮಹತ್ಯೆಗೆ (Love Case) ಶರಣಾಗಿದ್ದಾನೆ. ಮದನ್ (25) ಮೃತ ದುರ್ದೈವಿ. ಸಿರಿಯಲ್ ನಟಿ ವೀಣಾ ಎಂಬಾಕೆ ಜತೆಗೆ ಮದನ್ ಲಿವಿಂಗ್‌ ರಿಲೇಷನ್‌ಶಿಪ್‌ನಲ್ಲಿದ್ದ. ನಿನ್ನೆ ರಾತ್ರಿ ಇಬ್ಬರು ಒಂದೇ ರೂಮಿನಲ್ಲಿ ಪಾರ್ಟಿ ಮಾಡಿದ್ದರು. ಪಾರ್ಟಿ ನಂತರ ಮದನ್‌ ಜತೆಗೆ ವೀಣಾ ಮದುವೆ ಪ್ರಸ್ತಾಪಿಸಿದ್ದಳಂತೆ.

ಮದನ್‌ ಇವೆಂಟ್ ಮ್ಯಾನೇಜ್ ಮೆಂಟ್‌ನಲ್ಲಿ ಡೆಕೊರೇಟ್ ಕೆಲಸ ಮಾಡಿಕೊಂಡಿದ್ದ. ಈ ವೇಳೆ ಸಿರಿಯಲ್ ಸೆಟ್‌ನಲ್ಲಿ ಕಾಣಿಸಿಕೊಂಡಿದ್ದ ವೀಣಾಳನ್ನು ಕೆಲ ತಿಂಗಳ ಹಿಂದೆ ಪರಿಚಯ ಮಾಡಿಕೊಂಡಿದ್ದ. ಸಲುಗೆ ಬೆಳೆಸಿಕೊಂಡು ಇಬ್ಬರು ಲೀವಿಂಗ್ ರಿಲೇಶನ್ ಹೊಂದಿದ್ದರು.

ವೀಣಾ ಕನ್ನಡತಿ ಸೀರಿಯಲ್ ಹಾಗೂ ಕೆಲವು ಆ್ಯಡ್ ಗಳಲ್ಲಿ ನಟಿಸುತ್ತಿದ್ದಳು ಎನ್ನಲಾಗಿದೆ. ಸದ್ಯ ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಯುವತಿ ಹಲವು ಯುವಕರಿಗೆ ಮದುವೆ ಆಗುವುದಾಗಿ ವಂಚಿಸಿದ್ದಾಳೆ ಎಂದು ಮೃತನ ಪೋಷಕರು ಆರೋಪಿಸಿದ್ದಾರೆ.

ಕೈ ಕೊಯ್ದುಕೊಂಡು ಗಲಾಟೆ ಮಾಡಿದ್ದ ನಟಿ

ಮದುವೆಯಾಗುವಂತೆ ಒತ್ತಾಯಿಸಿ ವೀಣಾ ಈ ಹಿಂದೆ ಕೈ ಕೊಯ್ದುಕೊಂಡು ಮದನ್‌ ಮನೆ ಮುಂದೆ ಗಲಾಟೆ ಮಾಡಿದ್ದಳಂತೆ. ವೀಣಾಗೆ ಹಲವು ಹುಡುಗರ ಪರಿಚಯವಿತ್ತು. ಇದರಿಂದ ಆಕೆಯ ಕ್ಯಾರೆಕ್ಟರ್ ಮೇಲೆ ಮದನ್‌ ಅನುಮಾನ ಪಟ್ಟಿದ್ದ. ಹೀಗಾಗಿ ಮದನ್‌ ಮದುವೆಯಾಗಲು ನಿರಾಕರಿಸಿದ್ದ ಎನ್ನಲಾಗಿದೆ.

ಆದರೆ ಫೋನ್‌ ಮೂಲಕ ಮದನ್‌ಗೆ ಟಾರ್ಚರ್ ನೀಡುತ್ತಿದ್ದಳಂತೆ. ಸಿಕೆ ಪಾಳ್ಯದಲ್ಲಿ ರೂಂ ಮಾಡಿ ವಾಸವಿದ್ದ ವೀಣಾ ನಿನ್ನೆಯೂ ಸಹ ಮದನ್‌ನನ್ನು ಮನೆಗೆ ಕರೆಸಿಕೊಂಡಿದ್ದಳು. ನಿನ್ನೆ ಇಬ್ಬರು ಪಾರ್ಟಿ ಮಾಡಿದ್ದು, 8:30 ರಾತ್ರಿಯಲ್ಲಿ ಮತ್ತೆ ಮದುವೆ ವಿಚಾರ ಪ್ರಸ್ತಾಪವಾಗಿದೆ. ಇಬ್ಬರೂ ಕಂಠಪೂರ್ತಿ ಪಾನಮತ್ತರಾಗಿದ್ದರು. ಈ ವೇಳೆ ವಾಶ್ ರೂಂ ಗೆ ಹೋಗಿ ಬರ್ತಿನಿ ಅಂತ ಹೇಳಿದ್ದ ಮದನ್, ಅಲ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Assault Case : ಡೋರ್‌ ಹತ್ರ ನಿಲ್ಲಬೇಡ ಒಳಗೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದು ಹುಚ್ಚನಂತೆ ವರ್ತಿಸಿದ ಪ್ರಯಾಣಿಕ!

ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

ರಾಯಚೂರು: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ಜಮೀನು ವಿಚಾರಕ್ಕೆ (Land dispute) ಅತ್ತೆ – ಅಳಿಯನ ನಡುವೆ ಜಗಳ (Family Dispute) ನಡೆದಿದ್ದು, ಅತ್ತೆಯ ಬೆದರಿಕೆಗೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಹುಲಿಗೇಪ್ಪ (20) ಮೃತ ದುರ್ದೈವಿ.

ಮನೆಯಲ್ಲಿ ಯಾರು ಇಲ್ಲದ ವೇಳೆ ಡೆತ್‌ ನೋಟ್ ಬರೆದಿಟ್ಟು ವಿಷ ಸೇವಿಸಿದ್ದಾನೆ. ಡೆತ್ ನೋಟ್‌ನಲ್ಲಿ ಜಾಗದ ವಿಚಾರವಾಗಿ ಅತ್ತೆ ಲಕ್ಷ್ಮಿ, ಅತ್ತೆಯ ಮಗಳ ಅನುರಾಧ, ಮಹಾದೇವಿ, ಅನಿಲ್ ಎಂಬುವವರ ಹೆಸರು ಪ್ರಸ್ತಾಪ ಮಾಡಿದ್ದಾನೆ. ನನ್ನ ಸಾವಿಗೆ ನನ್ನ ಅತ್ತೆ ಲಕ್ಷ್ಮಿದೇವಿ ಮತ್ತು ಆಕೆಯ ಮಕ್ಕಳೇ ಕಾರಣ. ನಮ್ಮ 17 ಗುಂಟೆ ಜಾಗ ತಮ್ಮದು ಎಂದು ನಮಗೆ ಬೆದರಿಕೆ ಹಾಕಿದ್ದಾರೆ. ನನ್ನ ಸಾವಿನ ಬಳಿಕವಾದರೂ ನಮ್ಮ ಜಾಗ ನಮಗೆ ಕೊಡಿ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಸಿರವಾರ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Assault Case : ಡೋರ್‌ ಹತ್ರ ನಿಲ್ಲಬೇಡ ಒಳಗೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದು ಹುಚ್ಚನಂತೆ ವರ್ತಿಸಿದ ಪ್ರಯಾಣಿಕ!

Assault Case : ಡೋರ್‌ ಹತ್ರ ನಿಲ್ಲಬೇಡ ಒಳಗೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್‌ಗೆ ಪ್ರಯಾಣಿಕ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Assault Case
Koo

ಬೆಂಗಳೂರು: ಒಂದು ಸಣ್ಣ ಸಿಟ್ಟು ಏನೆಲ್ಲ ಅವಾಂತರವನ್ನು ಸೃಷ್ಟಿಸುತ್ತದೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ವೋಲ್ವೊ ಬಸ್‌ನ ಕಂಡಕ್ಟರ್‌ ಪ್ರಯಾಣಿಕನಿಗೆ ಬಾಗಿಲ ಬಳಿ ನಿಲ್ಲಬೇಡ ಎಂದಿದ್ದಾರೆ. ಇದಕ್ಕೆ ಸಿಟ್ಟಾದ ಪ್ರಯಾಣಿಕ ತನ್ನ ಬಳಿ ಇದ್ದ ಚಾಕುವನ್ನು ತೆಗೆದು ಏಕಾಏಕಿ ಕಂಡಕ್ಟರ್‌ಗೆ (Assault Case) ಚುಚ್ಚಿದ್ದಾನೆ. ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್‌ನಲ್ಲಿ ಘಟನೆ ನಿನ್ನೆ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.

ವೈಟ್ ಫೀಲ್ಡ್ ಬಳಿ ಬಸ್ ಕಂಡಕ್ಟರ್‌ಗೆ ಪ್ರಯಾಣಿಕನಿಂದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಜಾರ್ಖಂಡ್ ಮೂಲದ ಹರ್ಷ್ ಸಿನ್ಹಾ ಚಾಕು ಇರಿದಿರುವ ಆರೋಪಿ ಆಗಿದ್ದಾನೆ. ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್‌ ಚಾಕು ಇರಿತಕ್ಕೆ ಒಳಗಾದವರು. ಎರಡ್ಮೂರು ಬಾರಿ ಚಾಕು ಇರಿದು, ನಂತರ ಬಸ್‌ನಲ್ಲಿದ್ದ ಸುತ್ತಿಗೆಯಿಂದ ಬಸ್ ಗಾಜುಗಳನ್ನು ಪುಡಿ ಮಾಡಿದ್ದಾನೆ. ಬಸ್ ಡೋರ್ ಅನ್ನು ಕಾಲಿನಿಂದ ಗುದ್ದಿ ಹುಚ್ಚನಂತೆ ವರ್ತಿಸಿದ್ದಾನೆ.

ಬಿಎಂಟಿಸಿ ವೋಲ್ವೋ ಬಸ್ ನಿರ್ವಾಹಕ ಯೋಗೇಶ್ ಬಾಗಿಲ ಬಳಿ ನಿಲ್ಲಬೇಡ ಒಳಗೆ ಹೋಗು ಎಂದಿದ್ದಕ್ಕೆ ಕೋಪಗೊಂಡಿದ್ದ ಹರ್ಷ್‌ ಸಿನ್ಹಾ, ಏಕಾಏಕಿ ತನ್ನ ಬಳಿ ಇದ್ದ ಚಾಕುವಿನಿಂದ ಇರಿದಿದ್ದಾನೆ. ಹರ್ಷ್ ಸಿನ್ಹಾ ಟೆಲಿಫರ್ಫಾಮೆನ್ಸ್ ಎಂಬ ಖಾಸಗಿ ಕೆಲಸ ಮಾಡುತ್ತಿದ್ದ. ಕಳೆದ ಹತ್ತು ದಿನಗಳ ಹಿಂದೆ ಹರ್ಷ್ ಸಿನ್ಹಾನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು ಎನ್ನಲಾಗಿದೆ.

ಇನ್ನು ಘಟನೆ ಕುರಿತು ಬಿಎಂಟಿಸಿ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಐಟಿಪಿಎಲ್ ಬಸ್ ನಿಲ್ದಾಣದ ಬಳಿ ಐ ಟಿ ಪಿ ಎಲ್ ಮತ್ತು ಬನಶಂಕರಿ ಮಾರ್ಗದಲ್ಲಿ ಅಹಿತಕರ ಘಟನೆ ಒಂದು ಸಂಭವಿಸಿದೆ. ಕಂಡಕ್ಟರ್‌ ಯೋಗೇಶ್ ಕರ್ತವ್ಯದಲ್ಲಿದ್ದಾಗ, ಸುರಕ್ಷತೆಯ ಕಾರಣಗಳಿಗಾಗಿ ಬಸ್ಸಿನ ಮಧ್ಯದ ಬಾಗಿಲಿನಿಂದ ದೂರ ನಿಲ್ಲುವಂತೆ ಪ್ರಯಾಣಿಕ ಹರ್ಷ ಸಿನ್ಹಾ ಅವರಿಗೆ ಸೂಚಿಸಿದ್ದಾರೆ. ಆದರೆ ಯೋಗೇಶ್‌ ಮೇಲೆ ದಾಳಿ ಮಾಡಿ, ಏಕಾಏಕಿ ಚಾಕುವಿನಿಂದ ಇರಿದಿದ್ದಾನೆ. ದಾಳಿಯ ನಂತರ, ಹರ್ಷ ಸಿನ್ಹಾ ಇತರ ಪ್ರಯಾಣಿಕರಿಗೆ ಬೆದರಿಕೆ ಹಾಕಿ, ಅವರು ತಕ್ಷಣ ಬಸ್ ಅನ್ನು ಇಳಿಯುವಂತೆ ಹೇಳಿದ್ದಾನೆ. ಅಲ್ಲದೆ ಮತ್ತಷ್ಟು ಆಕ್ರಮಣಕಾರಿಯಾಗಿ ದಾಳಿಕೋರನು ಸುತ್ತಿಗೆಯನ್ನು ಬಳಸಿ ಬಸ್ಸಿನ ಕಿಟಕಿಗಳನ್ನು ಹಾನಿಗೊಳಿಸಿದ್ದಾನೆ.

ದಾಳಿ ಕೋರ ಪ್ರಯಾಣಿಕನನ್ನು ಬಸ್ಸಿನೊಳಗೆ ಬಂಧಿಸಿ, ಎಲ್ಲಾ ಪ್ರಯಾಣಿಕರ ಸುರಕ್ಷತೆಯನ್ನು ಚಾಲಕ ಸಿದ್ದಲಿಂಗಸ್ವಾಮಿ ಖಾತ್ರಿಪಡಿಸಿದ್ದಾರೆ. ಪ್ರಯಾಣಿಕರ ನೆರವಿನೊಂದಿಗೆ ಚಾಲಕ ಸಿದ್ದಲಿಂಗಸ್ವಾಮಿ, ಪೊಲೀಸರಿಗೆ ಕರೆ ಮಾಡಿ ಕಂಡಕ್ಟರ್ ಯೋಗೇಶ್ ಅವರನ್ನು ಚಿಕಿತ್ಸೆಗಾಗಿ ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಯೋಗೇಶ್‌ ಅಪಾಯದಿಂದ ಪಾರಾಗಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಹಿತಿ ಪಡೆದ ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ಸಾರಥಿ ಸ್ಕ್ವಾಡ್ ತಕ್ಷಣ ಆಸ್ಪತ್ರೆಗೆ ಮತ್ತು ಘಟನಾ ಸ್ಥಳಕ್ಕೆ ಆಗಮಿಸಿದ್ದು, ವೈಟ್‌ಫೀಲ್ಡ್ ಪೊಲೀಸ್ ಠಾಣೆ ಪೊಲೀಸರು ಆರೋಪಿ ಹರ್ಷ ಸಿನ್ಹಾನನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಕಂಡೆಕ್ಟರ್‌ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ಬಿಎಂಟಿಸಿ ಎಂಡಿಗೆ ಗಾಯಾಳುವಿಗೆ ಹಣಕಾಸಿನ ನೆರವು ವಿಚಾರವಾಗಿ ಸೂಚನೆ ಕೊಟ್ಟಿದ್ದಾಗಿ ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಲಘು, ಮಲೆನಾಡು ಸುತ್ತಮುತ್ತ ಭಾರಿ ಮಳೆ ಸಾಧ್ಯತೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ ಹಾಗೂ ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡದ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಕೊಡಗಿನಲ್ಲಿ ಭಾರಿ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Car Fire
ಚಿಕ್ಕೋಡಿ33 ಸೆಕೆಂಡುಗಳು ago

Car Fire : ಧಗಧಗನೆ ಹೊತ್ತಿ ಉರಿದ ಕಾರಿನೊಳಗೆ ವ್ಯಕ್ತಿ ಸಜೀವ ದಹನ; ಇದು ಅಪಘಾತವೋ, ಕೊಲೆಯೋ!

Gali Anjaneya Temple
ಬೆಂಗಳೂರು52 ನಿಮಿಷಗಳು ago

Gali Anjaneya Temple : ಗಾಳಿ ಆಂಜನೇಯ ದೇಗುಲದಲ್ಲಿ ಹಣ ಲಪಟಾಯಿಸಲು ಹತ್ತಾರು ತಂತ್ರ; ಟ್ರಸ್ಟಿಗಳು, ಅರ್ಚಕರಿಂದಲೇ ದೇವರ ಹಣಕ್ಕೆ‌ ಕನ್ನ!

Helicopter crashes in Pune's Bhavdan hilly area Three dead
ದೇಶ2 ಗಂಟೆಗಳು ago

Helicopter crashed: ಪುಣೆಯ ಬವ್‌ದಾನ್ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್‌ ಪತನ; ಮೂವರು ದುರ್ಮರಣ

Love case
ಬೆಂಗಳೂರು2 ಗಂಟೆಗಳು ago

Love Case : ಸಿರಿಯಲ್ ನಟಿಯ ಮದುವೆ ಕಿರಿಕ್‌; ವಾಶ್‌ರೂಮ್‌ನಲ್ಲಿ ಯುವಕ ಆತ್ಮಹತ್ಯೆ

Road Accident
ಹಾವೇರಿ3 ಗಂಟೆಗಳು ago

Road Accident : ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌! ನಿಯಂತ್ರಣ ತಪ್ಪಿ ಗೂಡ್ಸ್‌ ಲಾರಿ ಪಲ್ಟಿ, ಚಾಲಕನ ಎದೆಗೆ ಹೊಕ್ಕಿದ ಕಬ್ಬಿಣದ ಪೈಪ್‌!

Family Dispute
ರಾಯಚೂರು4 ಗಂಟೆಗಳು ago

Family Dispute : ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಬರೆದಿಟ್ಟ ನೋವಿನ ಕಥೆ

Assault Case
ಬೆಂಗಳೂರು4 ಗಂಟೆಗಳು ago

Assault Case : ಡೋರ್‌ ಹತ್ರ ನಿಲ್ಲಬೇಡ ಒಳಗೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದು ಹುಚ್ಚನಂತೆ ವರ್ತಿಸಿದ ಪ್ರಯಾಣಿಕ!

Mahatma Gandhi How did the name Gandhi Class come about
ದೇಶ10 ಗಂಟೆಗಳು ago

Gandhi Jayanti 2024: `ಗಾಂಧಿ ಕ್ಲಾಸ್‌’ ಹೆಸರು ಬಂದಿದ್ದು ಹೇಗೆ?

karnataka Weather Forecast
ಮಳೆ11 ಗಂಟೆಗಳು ago

Karnataka Weather : ಬೆಂಗಳೂರಿನಲ್ಲಿ ಲಘು, ಮಲೆನಾಡು ಸುತ್ತಮುತ್ತ ಭಾರಿ ಮಳೆ ಸಾಧ್ಯತೆ

Dina bhavishya
ಭವಿಷ್ಯ11 ಗಂಟೆಗಳು ago

Dina Bhavishya : ಈ ರಾಶಿಯವರು ಅಮಾವಾಸ್ಯೆ ದಿನದ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವಿರಿ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌