ಚಾಮರಾಜಪೇಟೆಯಲ್ಲಿ ಶಾಲಾ ಮಕ್ಕಳೊಂದಿಗೆ ಗಾಂಧಿ ಜಯಂತಿ; ಶಾಸಕ ಜಮೀರ್‌ ಭಾಗಿ - Vistara News

ನೋಟಿಸ್ ಬೋರ್ಡ

ಚಾಮರಾಜಪೇಟೆಯಲ್ಲಿ ಶಾಲಾ ಮಕ್ಕಳೊಂದಿಗೆ ಗಾಂಧಿ ಜಯಂತಿ; ಶಾಸಕ ಜಮೀರ್‌ ಭಾಗಿ

ವ್ಯಾಪ್ತಿಯ ಸರ್ಕಾರಿ ಬಾಲಕಿಯರ ವಸತಿ ಶಾಲೆಯ ಮಕ್ಕಳೊಡನೆ ಲಾಲ್‌ ಬಹದ್ದೂರ್‌ ಶಾಸ್ತ್ರಿ ಮತ್ತು ಗಾಂಧಿ ಜಯಂತಿ ಕಾರ್ಯಕ್ರಮವನ್ನು ಕನ್ನಡದ ತಿಂಡಿ ಕೇಂದ್ರದಲ್ಲಿ ಆಚರಣೆ ಮಾಡಲಾಗುವುದು.

VISTARANEWS.COM


on

gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಮಹಾತ್ಮ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕನ್ನಡದ ತಿಂಡಿ ಕೇಂದ್ರ ನಿರ್ಧರಿಸಿದೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಬಾಲಕಿಯರ ವಸತಿ ಶಾಲೆಯ ಮಕ್ಕಳೊಡನೆ ಕನ್ನಡದ ತಿಂಡಿ ಕೇಂದ್ರದಲ್ಲಿ ಬೆಳಗ್ಗೆ ೯ ಗಂಟೆಗೆ ಆಚರಣೆ ಮಾಡಲಾಗುತ್ತಿದ್ದು, ಶಾಸಕ ಜಮೀರ್ ಅಹಮದ್ ಖಾನ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ನಂತರ ಮಕ್ಕಳಿಗೆ ಕನ್ನಡದ ತಿಂಡಿ ಕೇಂದ್ರದ ಕೃ.ವೆಂ. ರಾಮಚಂದ್ರ ಉಪಾಹಾರ ವ್ಯವಸ್ಥೆ ಮಾಡಿದ್ದಾರೆ. ರೇಣುಕ ವೈಕುಂಠಯ್ಯ, ಸಂಜೆ ಸಮಯ ಪತ್ರಿಕೆಯ ಅನಿಲ್ ಕುಮಾರ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರ ಸಂಪರ್ಕಾಧಿಕಾರಿ ಶಂಕರ್ ‌ಎಸ್‌.ಎನ್‌., ‌ಸಮಾಜ ಸೇವಕ ವಿನಾಯಕ್‌ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ | Bharat Jodo | ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲಾಗುತ್ತಿದೆ: ರಾಹುಲ್‌ ಗಾಂಧಿ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

KCET Result 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ 2024 ಫಲಿತಾಂಶ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

VISTARANEWS.COM


on

KCET Result 2024
Koo

ಬೆಂಗಳೂರು: 2024ನೇ ಸಾಲಿನ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET Result 2024) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಿಇಟಿ ಪರೀಕ್ಷೆಯನ್ನು (KCET Exam) ಏಪ್ರಿಲ್ 18, 19 ಹಾಗೂ 20ರಂದು ನಡೆಸಿತ್ತು. ಇದರಲ್ಲಿ ಸುಮಾರು 3.28 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿ ಕೊಂಡಿದ್ದರು. ಜೂನ್‌ ಮೊದಲ ವಾರದಲ್ಲಿ (KCET Result 2024) ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿತ್ತು. ಇದೀಗ ಅಧಿಕೃತವಾಗಿ ಕೆಇಎ ಫಲಿತಾಂಶ ಬಿಡುಗಡೆ ಮಾಡಿದೆ.

ಸಿಇಟಿ ಫಲಿತಾಂಶವನ್ನು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ದ್ವಿತೀಯ ಪಿಯುಸಿ 2ರ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದರು. ಕಳೆದ ಮೇ 21ರಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವು ಪ್ರಕಟಗೊಂಡಿತ್ತು.

ಇದನ್ನೂ ಓದಿ | Spoken English Classes : ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ; ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿ ಶನಿವಾರ ಇಂಗ್ಲಿಷ್‌ ಕ್ಲಾಸ್‌!

ಪಿಯುಸಿ ಪರೀಕ್ಷೆಯ ಯಾವ ಅಂಕ ಪರಿಗಣನೆ?

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುತ್ತದೆ.

ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಹೇಗೆ?

ರಿಸಲ್ಟ್‌ ಪ್ರಕಟವಾದ ಬಳಿಕ ಚೆಕ್‌ ಮಾಡುವ ವಿಧಾನದ ಹಂತ ಹಂತದ ಮಾಹಿತಿ ಇಲ್ಲಿದೆ. ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿ ಅಫೀಶಿಯಲ್ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ ನೀಡಿ.

ಓಪನ್‌ ಆದ ಪುಟದ ಮೇಲ್ಭಾಗದಲ್ಲಿರುವ ʼಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ ಬಳಿಕ ʼಯುಜಿಸಿಇಟಿ 2024′ ಆಪ್ಶನ್‌ ಸೆಲೆಕ್ಟ್‌ ಮಾಡಿ.

ಇತ್ತೀಚಿನ ಪ್ರಕಟಣೆಗಳು ಎಂದಿರುವ ಕೆಳಗಡೆ ‘ಯುಜಿಸಿಇಟಿ 2024’ ಫಲಿತಾಂಶದ ಲಿಂಕ್ ನೀಡಲಾಗಿರುತ್ತದೆ. ಅದನ್ನು ಕ್ಲಿಕ್ ಮಾಡಿ.

ಈಗ ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ, ‘Submit’ ಬಟನ್‌ ಕ್ಲಿಕ್‌ ಮಾಡಿದರೆ ಫಲಿತಾಂಶ ಕಾಣಿಸುತ್ತದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳ ಫೋನ್‌ ನಂಬರ್‌ಗೆ ಫಲಿತಾಂಶದ ಮಸೇಜ್‌ ಬರಲಿದೆ.

ನಾರಾಯಣ ಒಲಿಂಪಿಯಾಡ್‌ ಶಾಲೆಯ ಹರ್ಷ ಪ್ರಥಮ

ಸಿಇಟಿ 2024ರಲ್ಲಿ ಬೆಂಗಳೂರಿನ ಸಹಕಾರ ನಗರದ ನಾರಾಯಣ ಒಲಿಂಪಿಯಾಡ್‌ ಶಾಲೆಯ ವಿದ್ಯಾರ್ಥಿ ಹರ್ಷ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಮಾರತ್‌ಹಳ್ಳಿಯ ಚೈತನ್ಯ ಟೆಕ್ನೋ ಶಾಲೆಯ ಮನೋಜ್ ದ್ವಿತೀಯ ಸ್ಥಾನ, ಜಯನಗರ ನೆಹರು ಸ್ಮಾರಕ ವಿದ್ಯಾಲಯದ ಅಭಿನವ್ ತೃತೀಯ ಸ್ಥಾನ ಪಡೆದಿದ್ದಾರೆ.

Continue Reading

ಕರ್ನಾಟಕ

Old Students Association: ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ, ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಲು ಆದೇಶ

Old Students Association:
ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪಿಸಲು ಹಾಗೂ ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಲು ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ.ಕಾವೇರಿ ಆದೇಶ ಹೊರಡಿಸಿದ್ದಾರೆ.

VISTARANEWS.COM


on

Old Students Association
Koo

ಬೆಂಗಳೂರು: ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ (Old Students Association) ಸ್ಥಾಪಿಸಲು ಹಾಗೂ ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಲಾ ಶಿಕ್ಷಣ ಇಲಾಖೆಯ (Education Department) ಆಯುಕ್ತೆ ಬಿ.ಬಿ.ಕಾವೇರಿ ಸೂಚಿಸಿದ್ದಾರೆ.

ಈ ಬಗ್ಗೆ ಆದೇಶ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ.ಕಾವೇರಿ ಅವರು, ಸರ್ಕಾರದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಸ್ಥಾಪಿಸಲು ಹಾಗೂ ಅದಕ್ಕೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ ಗ್ರೂಪ್ ಮಾಡಿ ಹಳೆಯ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನಾಗಿ ಮಾಡಿಕೊಳ್ಳಲು ತಿಳಿಸಲಾಗಿತ್ತು. ಈಗಾಗಲೇ 25,007 ಶಾಲೆಗಳು ವಿದ್ಯಾರ್ಥಿಗಳ ಸಂಘ ಸ್ಥಾಪಿಸಿಕೊಂಡಿದ್ದು, ಅವುಗಳಲ್ಲಿ 15,170 ಶಾಲೆಗಳು ವಾಟ್ಸ್‌ಆ್ಯಪ್‌ ಗ್ರೂಪನ್ನು ರಚಿಸಿಕೊಂಡಿವೆ ಎಂದು ಹೇಳಿದ್ದಾರೆ.

ಈಗಾಗಲೇ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪಿಸಿರುವ ಎಲ್ಲಾ ಶಾಲೆಗಳು ಕೂಡಲೇ ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಿಕೊಂಡು ಸದಸ್ಯರ ಸಂಖ್ಯೆ ಹೆಚ್ಚಿಸುವುದು ಹಾಗೂ ಇಲ್ಲಿಯವರೆಗೆ ಸಂಘ ರಚಿಸಿಕೊಳ್ಳದೇ ಇರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಒಂದುವಾರದೊಳಗೆ ಕಡ್ಡಾಯವಾಗಿ ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಿ, ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಿಕೊಂಡು, ಕಚೇರಿಯಿಂದ ನೀಡಿರುವ ಗೂಗಲ್ ಫಾರ್ಮ್‌ನಲ್ಲಿ ಮಾಹಿತಿ ಭರ್ತಿ ಮಾಡಬೇಕು ಎಂದು ಸೂಚಿಸಿದ್ದಾರೆ.

ಎಲ್ಲಾ ಶಾಲೆಗಳು ಸಂಘ ಸ್ಥಾಪಿಸುವಂತೆ ಹಾಗೂ ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಿಕೊಳ್ಳುವಂತೆ ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರು (ಆಡಳಿತ) ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | PGCET 2024: ಪಿಜಿಸಿಇಟಿ 2024ಕ್ಕೆ ಮೇ 27ರಿಂದ ಅರ್ಜಿ ಸಲ್ಲಿಕೆ ಆರಂಭ; ಪರೀಕ್ಷೆ ಯಾವಾಗ, ಇಲ್ಲಿದೆ ವೇಳಾಪಟ್ಟಿ

ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿ ಶನಿವಾರ ಇಂಗ್ಲಿಷ್‌ ಕ್ಲಾಸ್‌!

Spoken English Classes

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳು ಹಾಗೂ ಪೋಷಕರಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ (Spoken English Classes) ಶುರು ಮಾಡಲು ತಯಾರಿ ನಡೆದಿದೆ. How to Make English Easy ಎಂಬ ಪರಿಕ್ಪನೆಯೊಂದಿಗೆ ಈ ಯೋಜನೆಯನ್ನು ರೂಪಿಸುವಂತೆ ಶಾಲಾ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪರಿಚಯಿಸಲಿದೆ. 40 ನಿಮಿಷಗಳ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಪ್ರತಿ ಶನಿವಾರ ನಡೆಸಲು ಸಿದ್ಧತೆ ನಡೆದಿದೆ.

ಈ ಹಿಂದೆ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶುರು ಮಾಡಿರುವುದು ಸಾಕಷ್ಟು ಸದ್ದು ಮಾಡಿತ್ತು. ಇದೀಗ ರಾಜ್ಯದಲ್ಲೂ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಇಂಗ್ಲಿಷ್‌ ಕಲಿಯುವ ಅವಕಾಶ ಕಲ್ಪಿಸಲು ಮುಂದಾಗಿದೆ.

2024-25ರ ಶೈಕ್ಷಣಿಕ ವರ್ಷದಿಂದ ಸ್ಪೋಕನ್ ಕ್ಲಾಸ್ ಶುರುವಾಗಲಿದೆ. ಸರ್ಕಾರಿ ಶಾಲೆಗಳಲ್ಲಿರುವ ಇಂಗ್ಲಿಷ್ ಶಿಕ್ಷಕರಿಂದ ಸ್ಪೋಕನ್ ಇಂಗ್ಲಿಷ್ ಪಾಠ ಮಾಡಲಾಗುತ್ತದೆ. ಈ ಬಗ್ಗೆ ವಿಶೇಷ ತರಬೇತಿಯನ್ನು ನೀಡಲಾಗಿದ್ದು, ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ತರಗತಿ ಶುರು ಮಾಡಲಾಗುತ್ತದೆ. ಈ ಮೂಲಕ ಸರಕಾರಿ ಶಾಲೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ ಆಗಿರುವ ಇಂಗ್ಲಿಷ್ ಭಾಷೆಯನ್ನು ಕರಗತಗೊಳಿಸಲು ಇದು ಸಹಕಾರಿ ಆಗಲಿದೆ.

ಎಸ್‌ಎಸ್‌ಎಲ್‌ಸಿ ಮುಗಿದ ಮೇಲೆ ಇಂಗ್ಲಿಷ್‌ ಬರಲ್ಲ ಎಂಬ ಕಾರಣಕ್ಕೆ ವಿಜ್ಞಾನ ಬಿಟ್ಟು ಬೇರೆ ಬೇರೆ ಕೋರ್ಸ್‌ ಸೇರುವ ಅವಶ್ಯಕತೆಯು ಇರುವುದಿಲ್ಲ. ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಮುಗಿದ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ(JEE), ಎನ್ ಇಇಟಿ(NEET), ಸಾಮಾನ್ಯ ಪ್ರವೇಶ ಪರೀಕ್ಷೆ(CET)ಗಳನ್ನು ಎದುರಿಸಲು ವೃತ್ತಿಪರಕೋರ್ಸ್‌ಗಳಾದ ವೈದ್ಯಕೀಯ ಮತ್ತು ಎಂಜಿನಿಯರಿಂಗ್‌ಗೆ ಪ್ರವೇಶ ಪಡೆಯಲು ಇಂಗ್ಲೀಷ್ ಭಾಷೆ ಅಗತ್ಯವಿದ್ದ ಕಾರಣ ವಿದ್ಯಾರ್ಥಿಗಳು ಹೆದರುತ್ತಿದ್ದರು. ಈ ಹಿನ್ನೆಲೆಯಲ್ಲಿ ಶಾಲೆಗಳ ಹಂತದಲ್ಲೇ ಸ್ಪೋಕನ್ ಇಂಗ್ಲೀಷ್ ತರಬೇತಿಯನ್ನು ನೀಡಿದರೇ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನ ಎದುರಿಸಲು ಸಹಕಾರಿಯಾಗುತ್ತದೆ ಎಂದು ಶಿಕ್ಷಣ ಇಲಾಖೆ ಈ ಮಹತ್ವದ ಹೆಜ್ಜೆ ಇಟ್ಟಿದೆ.

ಇದನ್ನೂ ಓದಿ: Vijayanagara News : ದೇವಸ್ಥಾನಕ್ಕೆ ನುಗ್ಗಿ ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು

ಇಂಗ್ಲಿಷ್‌ನಲ್ಲೇ ಮಾತಾಡಬೇಕು!

ಪ್ರತಿ ಶನಿವಾರದ 3ನೇ ತರಗತಿಯನ್ನು ಸ್ಪೋಕನ್ ಇಂಗ್ಲಿಷ್‌ಗೆ ಮೀಸಲಿಡಲಾಗುತ್ತದೆ. ಸುಮಾರು 40 ನಿಮಿಷದ ಅವಧಿಯಲ್ಲಿ ಮಕ್ಕಳು ಇಂಗ್ಲಿಷ್‌ನಲ್ಲಿ ಮಾತ್ರ ಮಾತನಾಡಬೇಕು. ಈ ಮೂಲಕ ವಿದ್ಯಾರ್ಥಿಗಳು, ಸಹಜವಾಗಿ ಇಂಗ್ಲಿಷ್ ಕಲಿಯಲು ಪೂರಕ ವಾತಾವರಣವನ್ನು ಸೃಷ್ಟಿಸಬೇಕೆಂಬ ಸೂಚನೆ ನೀಡಲಾಗಿದೆ.

ಇಂಗ್ಲಿಷ್ ತರಗತಿ ಹೇಗಿರಲಿದೆ?

ಶಾಲೆಯಲ್ಲಿ ವಿದ್ಯಾರ್ಥಿಗಳ ತಂಡವೊಂದು ರಚಿಸಲಾಗುತ್ತದೆ. ಸಂಭಾಷೆ, ನಾಟಕ, ಕಥೆ ಹೇಳುವುದು, ಅನುಭವಗಳನ್ನು ಹಂಚಿಕೆಕೊಳ್ಳುವುದೆಲ್ಲವೂ ಸ್ಪೋಕನ್‌ ಇಂಗ್ಲಿಷ್‌ ಕ್ಲಾಸ್‌ನಲ್ಲಿ ಇರಲಿದೆ. ಶಾಲಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳಿಂದಲೇ ಇಂಗ್ಲಿಷ್‌ನಲ್ಲಿ ನಿರೂಪಣೆ ಮಾಡಿಸಲಾಗುತ್ತದೆ. ಇಂಗ್ಲಿಷ್‌ನಲ್ಲಿ ನಿರ್ವಹಣೆ ಮಾಡುವುದು ಹೇಗೆ ಎಂದು ತಿಳಿಸಿಕೊಡಲಾಗುತ್ತದೆ. ಎಲ್‌ಕೆಜಿಯಿಂದ ನಲಿ-ಕಲಿ ತರಗತಿಗಳಿಗೆ ವಿವಿಧ ರೀತಿಯ ಚಾರ್ಟ್ ರಚಿಸುವುದು. ಮಾನವನ ಶರೀರದ ಭಾಗಗಳು, ಹಣ್ಣು- ತರಕಾರಿಗಳು, ಬಣ್ಣಗಳು, ವಾಹನಗಳು ಸೇರಿ ಇತರೆ ಚಿತ್ರ/ಭಾಗಗಳನ್ನು ಗುರುತಿಸಿ ದಾಖಲಿಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Chakravarthy Sulibele: ಮೈಸೂರಿನಲ್ಲಿ ಇಂದು ಸಂಜೆ ಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್‌ ಸಮ್ಮಾನ್‌ ಪ್ರಶಸ್ತಿ ಪ್ರದಾನ

Chakravarthy Sulibele: ಮೈಸೂರಿನ ಕಲಾಮಂದಿರದಲ್ಲಿ ಮೇ 28 ಸಂಜೆ 5.30ಕ್ಕೆ ‘ವೀರ ಸಾವರ್ಕರ್ ಸಮ್ಮಾನ್’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯುವ ಜನರಲ್ಲಿ ದೇಶಭಕ್ತಿ ಜಾಗೃತಿ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

VISTARANEWS.COM


on

chakravarthy sulibele
Koo

ಮೈಸೂರು: ಭಾಷಣ ಹಾಗೂ ಲೇಖನಗಳಿಂದ ಯುವ ಪೀಳಿಗೆಯ ಜನರಲ್ಲಿ ದೇಶಭಕ್ತಿ ಜಾಗೃತಗೊಳಿಸುವ ಕಾರ್ಯದ ಜತೆಗೆ ವಿವಿಧ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿರುವ ಯುವ ಬ್ರಿಗೇಡ್ ಮಾರ್ಗದರ್ಶಕ, ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಅವರು ವೀರ ಸಾವರ್ಕರ್ ಪ್ರತಿಷ್ಠಾನದಿಂದ ನೀಡುವ ‘ವೀರ ಸಾವರ್ಕರ್ ಸಮ್ಮಾನ್’ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇಂದು (ಮೇ 28) ಸಂಜೆ 5.30ಕ್ಕೆ ನಗರದ ಕಲಾಮಂದಿರದಲ್ಲಿ ಆಯೋಜಿಸಿರುವ 141ನೇ ಸಾವರ್ಕರ್‌ ಜಯಂತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವೀರ ಸಾವರ್ಕರ್ ಪ್ರತಿಷ್ಠಾನದ ಸದಸ್ಯ ರಾಕೇಶ್ ಭಟ್ ಅವರು ಮಾಹಿತಿ ನೀಡಿದ್ದಾರೆ. ಪ್ರತಿಷ್ಠಿತ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿಯು ಒಂದು ಲಕ್ಷ ನಗದು, ವೀರ ಸಾವರ್ಕರ್ ಅವರ ಪುತ್ಥಳಿ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಯುವ ಜನರಲ್ಲಿ ದೇಶಭಕ್ತಿ ಜಾಗೃತಿ, ನದಿ ಸ್ವಚ್ಛತೆ, ದೇಗುಲ ಜೀರ್ಣೋದ್ದಾರ, ಗೋಪಾಲನೆ, ಬಡವರಿಗೆ ಮನೆ ನಿರ್ಮಾಣ, ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಸೇರಿ ಸೇವಾ ಕ್ಷೇತ್ರದೆಡೆಗೆ ಆಕರ್ಷಿಸಿ ಯುವ ಬ್ರಿಗೇಡ್ ಸಂಘಟನೆಯನ್ನು ಕಟ್ಟುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರಿಗೆ ಈ ವರ್ಷದ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ – 2024ಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಪಾಲ್ಗೊಳ್ಳಲಿದ್ದಾರೆ. ಸುವರ್ಣ ನ್ಯೂಸ್‌ನ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸಾವರ್ಕರ್ ವೇಷಭೂಷಣ, ಚಿತ್ರಕಲೆ ಹಾಗೂ ರಂಗೋಲಿ ಸ್ಪರ್ಧೆ ನಡೆಯಲಿದೆ. ಈಗಾಗಲೇ ಮೊಬೈಲ್ ಮೂಲಕ ಸಾವರ್ಕರ್ ಕುರಿತು ಮಾಡಿರುವ ರೀಲ್ಸ್‌ಗಳನ್ನು ಪಡೆಯಲಾಗುತ್ತಿದೆ. ಪ್ರತಿ ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನವಾಗಿ 5 ಸಾವಿರ ರೂ., ದ್ವಿತೀಯ ಬಹುಮಾನವಾಗಿ 3 ಸಾವಿರ ರೂ., ತೃತೀಯ ಬಹುಮಾನವಾಗಿ 1000 ರೂ. ನಗದು ಬಹುಮಾನದ ಜತೆಗೆ ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ.

ಸಾವರ್ಕರ್ ಕುರಿತು ಅನೇಕ ಅಧ್ಯಯನ ಮಾಡಿ ಕೃತಿ ರಚಿಸಿರುವ ವಿಕ್ರಂ ಸಂಪತ್ ಅವರಿಗೆ ಕಳೆದ ವರ್ಷ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ- 2023ಯನ್ನು ನೀಡಲಾಗಿತ್ತು. ಸಾವರ್ಕರ್ ಪ್ರತಿಷ್ಠಾನ ಕಾರ್ಯಕ್ರಮಗಳ ಮೂಲಕ ಸಾವರ್ಕರ್ ವಿಚಾರಧಾರೆಯನ್ನು ಜನರ ಮುಂದಿಡುತ್ತಾ ಬಂದಿದೆ. ಸಾವರ್ಕರ್ ರಥಯಾತ್ರೆ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸಂಚರಿಸಿ ಸಾವರ್ಕರ್ ಕುರಿತ ಮಾಹಿತಿ, ಸಾಹಿತ್ಯ ಹಾಗೂ ಪುಸ್ತಕಗಳ ಮೂಲಕ 10 ಲಕ್ಷಕ್ಕೂ ಅಧಿಕ ಜನರನ್ನು ತಲುಪಿತು, ಸಾವರ್ಕರ್ ಕುರಿತ ಕನ್ನಡದ ನಾಟಕ ಕರಿನೀರ ವೀರ ರಾಜ್ಯಾದ್ಯಂತ ಅನೇಕ ಪ್ರದರ್ಶನ ನಡೆಸಿ ಜನಮನ ಗೆದ್ದಿದೆ, ವಿದ್ಯಾರ್ಥಿಗಳಿಗಾಗಿ ಸಾವರ್ಕರ್ ಪ್ರಬಂಧ, ಭಾಷಣ, ಚಿತ್ರಕಲೆ ಹೀಗೆ ಅನೇಕ ಸ್ಪರ್ಧೆಗಳನ್ನು ಹಲವಾರು ಶಾಲಾ ಕಾಲೇಜು ಗಳಲ್ಲಿ ಆಯೋಜಿಸಿ ಅವರುಗಳಲ್ಲಿ ಸಾವರ್ಕರ್ ವ್ಯಕ್ತಿ ಹಾಗೂ ವಿಚಾರಗಳನ್ನು ಪರಿಚಯಿಸುವ ಕೆಲಸಗಳನ್ನು ಸಾವರ್ಕರ್ ಪ್ರತಿಷ್ಠಾನ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ | ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗೆ ರಾಕೇಶ್‌ ಭಟ್ ಮೊ. 99162 21184, ರಜತ್ 63634 43699, ಶಿವಕುಮಾರ್ 86602 19746 ಸಂಪರ್ಕಿಸಬುಹುದು ಎಂದು ಮಾಹಿತಿ ನೀಡಿದ್ದಾರೆ.

Continue Reading

ಪ್ರಮುಖ ಸುದ್ದಿ

PGCET 2024: ಪಿಜಿಸಿಇಟಿ 2024ಕ್ಕೆ ಮೇ 27ರಿಂದ ಅರ್ಜಿ ಸಲ್ಲಿಕೆ ಆರಂಭ; ಪರೀಕ್ಷೆ ಯಾವಾಗ, ಇಲ್ಲಿದೆ ವೇಳಾಪಟ್ಟಿ

PGCET 2024: ಪಿಜಿಸಿಇಟಿ 2024 ಪರೀಕ್ಷೆಗೆ ಮೇ 27ರಿಂದ ಜೂನ್ 17 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಜೂನ್ 18 ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ.

VISTARANEWS.COM


on

PGCET 2024
Koo

ಬೆಂಗಳೂರು: 2024-25ನೇ ಸಾಲಿನ ಎಂಬಿಎ, ಎಂಸಿಎ, ಎಂ.ಟೆಕ್, ಎಂಇ, ಎಂ.ಆರ್ಕಿಟೆಕ್ಟರ್ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (PGCET 2024) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ದಿನಾಂಕ ನಿಗದಿ ಮಾಡಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜುಲೈ 13 ಮತ್ತು 14ರಂದು ಪಿಜಿಸಿಇಟಿ-24 ನಡೆಯಲಿದೆ.

ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಟರ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 13 ರಂದು ಹಾಗೂ ಎಂಸಿಎ ಮತ್ತು ಎಂಬಿಎ ಕೋರ್ಸ್ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ನಡೆಸಲಾಗುತ್ತದೆ. ಪಿಜಿಸಿಇಟಿ ಪರೀಕ್ಷೆಗೆ ಮೇ 27ರಿಂದ ಜೂನ್ 17 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜೂನ್ 18 ಶುಲ್ಕ ಪಾವತಿಸಲು ಕೊನೆಯ ದಿನಾಂಕವಾಗಿದೆ.

ಎಂಜಿನಿಯರಿಂಗ್ ಹಾಗೂ ಟೆಕ್ನಾಲಜಿ ವಿಭಾಗದಲ್ಲಿ ಗೇಟ್‌ (GATE) ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಮಾತ್ರ ವಿಟಿಯು, ಬೆಳಗಾವಿ ಅಡಿಯಲ್ಲಿನ ವಿವಿಧ ಎಂ.ಟೆಕ್ ಕೋರ್ಸುಗಳಿಗೆ ಪ್ರವೇಶ ಪಡೆಯಲು ಅರ್ಹರಾಗುತ್ತಾರೆ. ಗೇಟ್ ಪರೀಕ್ಷೆಯಲ್ಲಿ ಮಾನ್ಯತೆ ಅಂಕಗಳನ್ನು ಹೊಂದಿರುವವರು (Valid GATE Score) ಎಂಇ / ಎಂ.ಟೆಕ್ / ಎಂ. ಆರ್ಕ್ ಕೋರ್ಸ್‌ಗಳ ಪ್ರವೇಶಕ್ಕಾಗಿ, ಪಿಜಿಸಿಇಟಿ-2024ಕ್ಕೆ ಹಾಜರಾಗುವ ಅವಶ್ಯಕತೆ ಇರುವುದಿಲ್ಲ. ಆದರೆ ಅಂತಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ ಶುಲ್ಕವನ್ನು ಪಾವತಿಸಿ ಪ್ರವೇಶಕ್ಕೆ ಅರ್ಹರಾಗಬಹುದು. ಎಸ್‌-ಎಸ್‌ಟಿ, ಒಬಿಸಿ ಅರ್ಹತಾ ಮಾನದಂಡಗಳು ಕರ್ನಾಟಕದ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.

ಇನ್ನು ಕರ್ನಾಟಕೇತರ ಅಭ್ಯರ್ಥಿಗಳು ಎಂಬಿಎ ಮತ್ತು ಎಂಸಿಎ ಪ್ರವೇಶಕ್ಕೆ ಆಡಳಿತ ಮಂಡಳಿಯವರು ಸರ್ಕಾರಕ್ಕೆ ಬಿಟ್ಟುಕೊಡುವ ಸೀಟುಗಳನ್ನು ಮಾತ್ರ ಆಯ್ಕೆ ಮಾಡಲು ಅರ್ಹತೆ ಪಡೆಯುತ್ತಾರೆ. ಕರ್ನಾಟಕೇತರ ಅಭ್ಯರ್ಥಿಗಳಿಗೆ ಯಾವುದೇ ಮೀಸಲಾತಿಯ ಸವಲತ್ತುಗಳು ಅನ್ವಯಿಸುವುದಿಲ್ಲ. ಆದ್ದರಿಂದ ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿರುವ ಕನಿಷ್ಠ ಅಂಕಗಳನ್ನು ಪಡೆದಿದ್ದಲ್ಲಿ ಮಾತ್ರ (50%) ಅರ್ಹತೆಯನ್ನು ಪಡೆಯಬಹುದಾಗಿದೆ ಹಾಗೂ ಪ್ರವೇಶಕ್ಕಾಗಿ ನೊಂದಣಿಯನ್ನು ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ | COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಟರ್ ಕೋರ್ಸುಗಳ ಪ್ರವೇಶಕ್ಕೆ, ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಒಟ್ಟು ಕನಿಷ್ಟ ಶೇ.50 ಹಾಗೂ ಕರ್ನಾಟಕದ ಎಸ್.ಸಿ., ಎಸ್.ಟಿ., ಪ್ರವರ್ಗ-1 ರ ಅಭ್ಯರ್ಥಿಗಳು ಕನಿಷ್ಠ ಶೇ.45% ಅಂಕಗಳನ್ನು ಪಡೆದಿರಬೇಕು. CGPA / SGPA ಗ್ರೇಡ್‌ಗಳ ಮಾದರಿಯಲ್ಲಿ ನಿಗದಿಪಡಿಸಿರುವ ಅರ್ಹತಾ ಪರೀಕ್ಷೆಯ ಅಂಕಗಳು, ಅಗತ್ಯವಿರುವ ಕನಿಷ್ಠ ಅರ್ಹತಾ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಗ್ರೇಡ್‌ಗಳ ಅಂಕಗಳು ಸೂಚಿಸುತ್ತಿರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು ಎಂದು ಕೆಇಎ ಮಾಹಿತಿ ನೀಡಿದೆ.

Continue Reading
Advertisement
HD Kumaraswamy
ಕರ್ನಾಟಕ19 seconds ago

HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

Star Street Fashion
ಫ್ಯಾಷನ್10 mins ago

Star Street Fashion: ಬೆಂಗಳೂರಿನ ರಸ್ತೆಯಲ್ಲಿ ಕಾಂತಾರ ಬೆಡಗಿಯ ಹೈ ಸ್ಟ್ರೀಟ್‌ ಫ್ಯಾಷನ್‌!

Narendra Modi
ದೇಶ27 mins ago

Narendra Modi: ಜೂನ್‌ 8 ಅಲ್ಲ, ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ!

Vitamin A
ಆರೋಗ್ಯ31 mins ago

Vitamin A: ವಿಟಮಿನ್‌ ಎ ಕೊರತೆಯಾದರೆ ಏನಾಗುತ್ತದೆ?

Pakistan Players
T20 ವಿಶ್ವಕಪ್33 mins ago

Pakistan Players: ನ್ಯೂಯಾರ್ಕ್​ನಲ್ಲಿ ದರೋಡೆಗಿಳಿದ ಪಾಕಿಸ್ತಾನ ಕ್ರಿಕೆಟಿಗರು; ತನಿಖೆಗೆ ಆಗ್ರಹ

Cabinet meeting
ದೇಶ45 mins ago

Cabinet Meeting: “ನಂಬರ್‌ ಬಗ್ಗೆ ಚಿಂತೆ ಬೇಡ…ಉತ್ತಮ ಕೆಲಸ ಮಾಡಿ”- ನಿರ್ಗಮಿತ ಸಚಿವರಿಗೆ ಮೋದಿ ಕಿವಿಮಾತು

Environment Month celebration by Toyota Kirloskar Motor
ಕರ್ನಾಟಕ54 mins ago

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನಿಂದ ಪರಿಸರ ಮಾಸಾಚರಣೆ

Mutual Funds
ವಾಣಿಜ್ಯ56 mins ago

Mutual Funds: ಪಿಎಸ್‌ಯು ಷೇರುಗಳಲ್ಲಿ 90,000 ಕೋಟಿ ರೂ. ನಷ್ಟ ಅನುಭವಿಸಿದ ಮ್ಯೂಚುವಲ್ ಫಂಡ್‌

Muslim Women
ದೇಶ58 mins ago

Muslim Women: ಟಕಾ ಟಕ್‌ ಅಂದ್ರಲ್ಲ, 1 ಲಕ್ಷ ರೂ. ಕೊಡಿ; ಕಾಂಗ್ರೆಸ್‌ ಕಚೇರಿಗೆ ಲಗ್ಗೆ ಇಟ್ಟ ಮುಸ್ಲಿಂ ಮಹಿಳೆಯರು!

Sri Lanka Tour
ಪ್ರವಾಸ1 hour ago

Sri Lanka Tour: ಕಡಿಮೆ ವೆಚ್ಚದಲ್ಲಿ ಶ್ರೀಲಂಕಾ ಪ್ರವಾಸ; ಐಆರ್‌ಸಿಟಿಸಿ ಸ್ಪೆಷಲ್‌ ಪ್ಯಾಕೇಜ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌