Site icon Vistara News

Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

Ganesh chaturthi Traffic restrictions imposed in several parts of Bengaluru

ಬೆಂಗಳೂರು: ಗಣಪತಿ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಕಾರ್ಯಕ್ರಮ (Ganesh Chaturthi) ಇರುವುದರಿಂದ ಬೆಂಗಳೂರಿನ ಕೆಲವು ಕಡೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸೆ. 22 ರಂದು ಕೆ.ಜಿ.ಹಳ್ಳಿ ಮತ್ತು ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣಪತಿ ಮೂರ್ತಿಗಳ ಮೆರವಣಿಗೆ ಜತೆಗೆ ಹಲಸೂರು ಕೆರೆಯಲ್ಲಿ ವಿಸರ್ಜನಾ ಕಾರ್ಯಕ್ರಮ ಇರಲಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಸಂಚಾರ ನಿರ್ಬಂಧ ಹೇರಲಾಗಿದೆ.

ಎಲ್ಲಿಲ್ಲಿ ಸಂಚಾರ ನಿರ್ಬಂಧ

ಸೆ. 22 ಹಾಗೂ ಸೆ.24ರಂದು ಮಾತ್ರ ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ.
-ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
-ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೂ ಸಂಚಾರ ಬಂದ್‌ ಆಗಲಿದೆ.
-ಕೆನ್ಸಿಂಗ್‌ಟನ್‌ ಕಡೆಯಿಂದ ಎಂ.ಇ.ಜಿ ಮೂಲಕ ಹಲಸೂರು ಲೇಕ್ ಕಡೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಆದರೆ ಎಂಇಜಿ ಕಡೆಯಿಂದ ಕೆನ್ಸಿಂಗ್‌ಟನ್ ಕಡೆಗೆ ಏಕಮುಖ ಸಂಚಾರ ಇರಲಿದೆ.

ಇದನ್ನೂ ಓದಿ: Ganesh Chaturthi : ಗಣೇಶೋತ್ಸವದಲ್ಲಿ ಕಾಂತಾರ ಮೋಡಿ; ಭೂತಕೋಲದ ವೈಭವ ನೋಡಿ

ಪರ್ಯಾಯ ಮಾರ್ಗಗಳು ಹೀಗಿವೆ

  1. ಥಣಿಸಂದ್ರ ಕಡೆಯಿಂದ ಶಿವಾಜಿನಗರ ಜಂಕ್ಷನ್ ಕಡೆಗೆ ಬರುವ ವಾಹನಗಳು ನಾಗವಾರ ಜಂಕ್ಷನ್‌ನಿಂದ ಎಡತಿರುವು ಪಡೆದು ಹೆಣ್ಣೂರು ಜಂಕ್ಷನ್‌ನಿಂದ ಬಲಿತಿರುವು ಪಡೆಯಬಹುದು. ಸಿದ್ದಪ್ಪ ರೆಡ್ಡಿ ಜಂಕ್ಷನ್, ಅಯೋಧ್ಯೆ ಜಂಕ್ಷನ್, ಲಿಂಗರಾಜಪುರಂ , ಐಟಿಸಿ ಫ್ಲೈ ಓವರ್ ಮೂಲಕ ರಾಬರ್ಟ್‌ಸನ್‌ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಹೆನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪಬಹುದು.
  2. ಶಿವಾಜಿನಗರ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳು ಸ್ಪೆನ್ಸರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲ ತಿರುವು ಪಡೆದು ಸ್ಪೆನ್ಸರ್‌ ರಸ್ತೆ ಮೂಲಕ ಕೋಲ್ಡ್ ರಸ್ತೆ ತಲುಪಿ ವೀಲರ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ಹಲಸೂರು ಕಡೆಗೆ ಸಂಚರಿಸಬಹುದಾಗಿದೆ.
  3. ಆರ್.ಟಿ.ನಗರ ದಿಂದ ಕಾವಲ್ ಬೈರಸಂದ್ರ ಮೂಲಕ ಬರುವ ವಾಹನಗಳು ಪುಷ್ಪಾಂಜಲಿ ಟಾಕೀಸ್‌ ಬಳಿ ಎಡ ತಿರುವು ಪಡೆದು ವೀರ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್‌ ಕಡೆಗೆ ಹೋಗಹುದು.
  4. ಹೇನ್ಸ್‌, ನೇತಾಜಿ ರಸ್ತೆ ಕಡೆಯಿಂದ ಬ್ಯಾನರಿ ರಸ್ತೆ ಮೂಲಕ ನಾಗವಾರ ಕಡೆಗೆ ಬರುವ ವಾಹನಗಳು ನೇತಾಜಿ ಜಂಕ್ಷನ್‌ನಿಂದ ಬಲತಿರುವು ಪಡೆದು ಮಾಸ್ಕ್ ಜಂಕ್ಷನ್ , ಲಾಜರ್‌ ರಸ್ತೆ, ಪಾಟರಿ ಸರ್ಕಲ್‌, ಹೆಣ್ಣೂರು ರಸ್ತೆ ಜಂಕ್ಷನ್‌, ಹೆಚ್.ಎಂ.ರಸ್ತೆ ಡೇವಿಸ್ ರಸ್ತೆ ಜಂಕ್ಷನ್ ಮೂಲಕ ಲಿಂಗರಾಜಪುರಂ ಫ್ಲೈಓವರ್‌ ಮುಖೇನ ಹೆಣ್ಣೂರು ಕಡೆ ಹೋಗಬಹುದು.
  5. ಕೆನ್ಸಿಂಗ್‌ಟನ್ ಕಡೆಯಿಂದ ಎಂ.ಇ.ಜಿ ಮೂಲಕ – ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಕೆನ್ಸಿಂಗ್ ಟನ್ ನಿಂದ ಗುರದ್ವಾರ ಜಂಕ್ಷನ್ ಬಲ ತಿರುವು ಪಡೆದು ತಿರುವಳ್ಳವರ್ ಪ್ರತಿಮೆ ಆರ್.ಬಿ.ಐ ಕ್ವಾಟ್ರಸ್ ಜಂಕ್ಷನ್ ಲಾವಣ್ಯ ಥಿಯೇಟರ್ ಜಂಕ್ಷನ್ – ನಾಗಾ ಜಂಕ್ಷನ್ ಬಲತಿರುವು ಪಡೆದು ಹಲಸೂರು ಕೆರೆ ಕಡೆಗೆ ಹೋಗಬಹುದು.

ಪಾರ್ಕಿಂಗ್‌ ನಿಷೇಧ

ಗಣೇಶ ಮೆರವಣಿಗೆ ಹಾಗೂ ವಿಸರ್ಜನೆ ಸಮಯದಲ್ಲಿ ಕೆಲವು ಕಡೆ ಪಾರ್ಕಿಂಗ್‌ ಅನ್ನು ನಿರ್ಬಂಧಿಸಲಾಗಿದೆ. ಪಾಟರಿ ಸರ್ಕಲ್‌ನಿಂದ ನಾಗವಾರ ಸಿಗ್ನಲ್, ಗೋವಿಂದಪುರ ಜಂಕ್ಷನ್‌ನಿಂದ ಗೋವಿಂದಪುರ ಕಾ & ಸು ಪೊಲೀಸ್ ಠಾಣೆಯವರೆಗೆ ಮತ್ತು ಹೆಚ್.ಬಿ.ಆರ್ ಬಡಾವಣೆಯ ಸಿದ್ದಪ್ಪ ರೆಡ್ಡಿ ಜಂಕ್ಷನ್‌ನಿಂದ ನರೇಂದ್ರ ಟೆಂಟ್‌ ಜಂಕ್ಷನ್‌ ವರೆಗೆ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್ ನಿರ್ಬಂಧಿಸಲಾಗಿರುತ್ತದೆ.

ಜತೆಗೆ ಪಾಟರಿ ಸರ್ಕಲ್‌ ಎಂ.ಎಂ.ರಸ್ತೆಯಿಂದ ಲಾಜರ್ ರಸ್ತೆವರೆಗೆ ಹಾಗೂ ಸಿಂಧಿ ಕಾಲೋನಿ ಜಂಕ್ಷನ್‌ನಿಂದ ವಾರ ಮೆಮೊರಿಯಲ್‌ ಜಂಕ್ಷನ್ ವರೆಗೆ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್ ಅನ್ನು ನಿರ್ಬಂಧಿಸಲಾಗಿದೆ. ಹಲಸೂರು ಕೆರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ರಸ್ತೆಗಳಲ್ಲಿ ಪಾರ್ಕಿಂಗ್‌ ಅನ್ನು ಸೆ. 22 ಮತ್ತು 24 ರಂದು ನಿರ್ಬಂಧಿಸಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version