Site icon Vistara News

Ganesh Chaturthi : ನಾಳೆ-ನಾಡಿದ್ದು ಈ ರೂಟ್‌ನಲ್ಲಿ ವಾಹನ ಸಂಚಾರ ಬಂದ್‌!

Ganesh Chaturthi Vehicular traffic on this route to be restricted tomorrow

ಬೆಂಗಳೂರು: ಆರ್.ಟಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿರೆಡ್ಡಿಪಾಳ್ಯದಲ್ಲಿ ಸೆ. 23ರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ (Ganesh Chaturthi) ಮೆರವಣಿಗೆ ನಡೆಯಲಿದೆ. ಹೀಗಾಗಿ ಶನಿವಾರ ಸಂಜೆ 06 ಗಂಟೆಯಿಂದ ಮರುದಿನ ಬೆಳಗ್ಗೆ 08 ಗಂಟೆಯವರೆಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್‌ ಆಗಲಿದೆ.

ಈ ಮಾರ್ಗಗಳಲ್ಲಿ ತಾತ್ಕಾಲಿಕ ನಿರ್ಬಂಧ

ದೇವೇಗೌಡ ರಸ್ತೆ, ಜೆ.ಸಿ.ನಗರ ಮುಖ್ಯರಸ್ತೆ, ಮಠದಹಳ್ಳಿ ಮುಖ್ಯರಸ್ತೆ, ದೇಸ್‌ರಾಜ್ ಅರಸ್ ರಸ್ತೆಗಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ದಿಣ್ಣೂರಿಗೆ ಹೋಗಲು ಈ ದಾರಿ ಬಳಸಿ

1) ಸುಲ್ತಾನ್‌ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳು ಹೀಗಿವೆ.
ದಿಣ್ಣೂರು ಮುಖ್ಯರಸ್ತೆಯಿಂದ ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್‌ನಲ್ಲಿ ಎಡತಿರುವು ಪಡೆಯಬೇಕು. ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಗುಂಡುರಾವ್‌ ಮನೆ ಜಂಕ್ಷನ್‌, ಬೆಂಗಳೂರ ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್ ಸರ್ವೀಸ್ ರಸ್ತೆಯಲ್ಲಿ ಎಡತಿರುವು ಪಡೆದು ಜಯಮಹಲ್ ರಸ್ತೆಯಲ್ಲಿ ನೇರವಾಗಿ ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

  1. ಕಂಟೋನ್ಮೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ – ಸುಲ್ತಾನ್ ಪಾಳ್ಯ – ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಜಯಮಹಲ್‌ ರಸ್ತೆ ಮೂಲಕ ಮೇಖ್ರಿ ಸರ್ಕಲ್ ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ವಾಸ್ ಮೂಲಕ ಆರ್.ಟಿ.ನಗರ ಮುಖ್ಯರಸ್ತೆ- ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್ ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  2. ಯಶವಂತಪುರ ಕಡೆಯಿ೦ದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್‌ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಮೇಕ್ರಿ ಸರ್ಕಲ್‌ನಲ್ಲಿ ಎಡತಿರುವು ಪಡೆದು ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ಪಾಸ್ ಬಲತಿರುವು ಪಡೆದು ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್-ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  3. ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಮೇಖ್ರಿಸರ್ಕಲ್ ಅಂಡರ್ ಪಾಸ್, ಬೆಂಗಳೂರು ಬಳ್ಳಾರಿ ರಸ್ತೆ, ಸಿ.ಬಿ.ಐ. ಜಂಕ್ಷನ್ ನಂತರ ಕರ್ನಾಟಕ ಸ್ಪೀರಿಟ್‌ನಲ್ಲಿ ಬಲ ತಿರುವು ತೆಗೆದುಕೊಂಡು ಬಿಬಿ ಸರ್ವೀಸ್‌ ರಸ್ತೆ, ಸಿ.ಬಿ.ಐ ರಸ್ತೆ ಡೆಡ್ ಎಂಡ್ ಬಲತಿರುವು ಮೂಲಕ ದಿಣ್ಣೂರು ರಸ್ತೆಯ ಮೂಲಕ ಹೋಗಬಹುದು.

ಸೆ.24ರಂದು ಈ ಮಾರ್ಗದಲ್ಲಿ ಸಂಚಾರ ಬಂದ್

‌ಸೆ.24ರಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ.
-ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
-ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೂ ಸಂಚಾರ ಬಂದ್‌ ಆಗಲಿದೆ.
-ಕೆನ್ಸಿಂಗ್‌ಟನ್‌ ಕಡೆಯಿಂದ ಎಂ.ಇ.ಜಿ ಮೂಲಕ ಹಲಸೂರು ಲೇಕ್ ಕಡೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಆದರೆ ಎಂಇಜಿ ಕಡೆಯಿಂದ ಕೆನ್ಸಿಂಗ್‌ಟನ್ ಕಡೆಗೆ ಏಕಮುಖ ಸಂಚಾರ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version