Site icon Vistara News

Ganesh Chaturthi | ಬೆಂಗಳೂರಿನ ಕೆಲವು ಕಡೆ ಇರಲ್ಲ ಮದ್ಯ ಮಾರಾಟ!

ವಿಸರ್ಜನೆ ಹಿನ್ನೆಲೆ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿ (Ganesh Chaturthi) ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ.

ಭಾನುವಾರ (ಸೆ.4) ಈಶಾನ್ಯ ಹಾಗೂ ಪೂರ್ವ ವಿಭಾಗದ ಹಲವೆಡೆ ಮದ್ಯ ಮಾರಾಟ ನಿಷೇಧಿಸಿದೆ. ಬಾರ್‌, ಪಬ್, ರೆಸ್ಟೋರೆಂಟ್‌ಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧಿಸಿದ್ದು, ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರ ಪೊಲೀಸ್‌ ಆಯುಕ್ತ ಸಿ.ಎಚ್. ಪ್ರತಾಪ್ ರೆಡ್ಡಿ ಆದೇಶ ನೀಡಿದ್ದಾರೆ.

ಈಶಾನ್ಯ ವಿಭಾಗ
ಸೆ.3ರ ಸಂಜೆ 6 ಗಂಟೆಯಿಂದ 5ರ ಬೆಳಗ್ಗೆ 6ರವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ವಿದ್ಯಾರಣ್ಯಪುರ, ಯಲಹಂಕ, ಯಲಹಂಕ ನ್ಯೂಟೌನ್, ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ಇದನ್ನೂ ಓದಿ | Ganesh Chaturthi | ಸಿಲಿಕಾನ್‌ ಸಿಟಿಯಲ್ಲಿ ಎರಡು ದಿನದಲ್ಲಿ 1.6 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ!

ಪೂರ್ವ ವಿಭಾಗ
ಸೆ.4ರ ಬೆಳಗ್ಗೆ 6 ಗಂಟೆಯಿಂದ 5ರ ಬೆಳಗ್ಗೆ 6ರವರೆಗೂ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಕೆಜಿ ಹಳ್ಳಿ, ಗೋವಿಂದಪುರ, ಡಿಜೆ ಹಳ್ಳಿ, ಬಾಣಸವಾಡಿ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಭಾರತಿನಗರ, ಪುಲಿಕೇಶಿನಗರ, ಹಲಸೂರು ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ. ಗಣೇಶ ವಿಸರ್ಜನೆ ಮಾಡುವ 24 ಗಂಟೆ ಸಮಯದಲ್ಲಿ ಮದ್ಯ ಮಾರಾಟವನ್ನು ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ.

Exit mobile version