Site icon Vistara News

ಗೀಸರ್‌ ಗ್ಯಾಸ್‌ ಸೋರಿಕೆ; ಪ್ರಜ್ಞೆ ತಪ್ಪಿ ಬಿದ್ದ ಯುವತಿ ಬಾತ್‌ರೂಮ್‌ನಲ್ಲೇ ಸಾವು

geyser gas leak Girl rajeshwari dies in bathroom after falling unconscious

ಬೆಂಗಳೂರು: ಸ್ನಾನ ಮಾಡಲು ಬಾತ್‌ರೂಮ್‌ಗೆ (gas geyser leaks) ಹೋಗಿದ್ದ ಯುವತಿಯೊಬ್ಬಳು ಅಲ್ಲಿಯೇ ಮೃತಪಟ್ಟಿದ್ದಾಳೆ. ಬಾತ್‌ರೂಮ್‌ನಲ್ಲಿದ್ದ ಗೀಸರ್‌ನ ಗ್ಯಾಸ್‌ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ರಾಜೇಶ್ವರಿ (23) ಮೃತ ದುರ್ದೈವಿ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ಈ ದುರ್ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ವರಿ, ಅಣ್ಣನ ಮದುವೆಗೆ ರಜೆ ಹಾಕಿದ್ದಳು. ಇಂದು ಬೆಳಗ್ಗೆ ಸ್ನಾನ ಮಾಡಲು ಹೋದಾಗ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ.

ತುಂಬ ಸಮಯ ಬಾತ್‌ ರೂಮ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಾಜೇಶ್ವರಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ಬಾತ್‌ರೂಮ್‌ನಿಂದ ಹೊರಬಾರದ ಕಾರಣಕ್ಕೆ ಬಾಗಿಲು ಬಡಿದಿದ್ದಾರೆ. ಆಗಲೂ ತೆರೆಯದೇ ಇದ್ದಾಗ ಬಾತ್‌ ರೂಮ್‌ ಬಾಗಿಲು ಒಡೆದು ನೋಡಿದಾಗ ರಾಜೇಶ್ವರಿ ಪ್ರಜ್ಞೆ ತಪ್ಪಿ ಬಿದ್ದಿರುವುದು ಕಂಡಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಆದಾಗಲೇ ರಾಜೇಶ್ವರಿ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ.

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Holi Tragedy: ಹೋಳಿ ಆಡಿದ ಬಳಿಕ ಸ್ನಾನ ಮಾಡಲು ಹೋದ ದಂಪತಿ ಸಾವು, ಗೀಸರ್‌ ಗ್ಯಾಸ್‌ ಲೀಕ್‌ ಶಂಕೆ

ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಗರ್ಭಿಣಿ ಸಾವು

ಬೆಂಗಳೂರು: ಡಿ.23ರಂದು ಮಗು ಜತೆಗೆ ಸ್ನಾನಕ್ಕೆ ಹೋದಾಗ ಗೀಸರ್‌ ಲೀಕ್‌ ಆಗಿ (gas geyser leaks) ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲೇ ಗರ್ಭಿಣಿಯೊಬ್ಬರು (Bangalore News) ಮೃತಪಟ್ಟಿದ್ದರು. ರಮ್ಯ (23) ಮೃತ ದುರ್ದೈವಿ.

ಬೆಂಗಳೂರಿನ ಅಶ್ವತ್ ನಗರದಲ್ಲಿ ಈ ದುರ್ಘಟನೆ ನಡೆದಿತ್ತು. ರಮ್ಯ ತಮ್ಮ ನಾಲ್ಕು ವರ್ಷದ ಮಗುವಿನೊಟ್ಟಿಗೆ ಸ್ನಾನ ಮಾಡಲು ಹೋದಾಗ, ಗ್ಯಾಸ್ ಗೀಸರ್‌ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿತ್ತು. ಆದರೆ ಇದು ತಿಳಿಯದೆ ಸ್ನಾನ ಮಾಡಲು ಬಾತ್‌ ರೂಮ್‌ಗೆ ಹೋಗಿದಾಗ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದರು.

ಮೃತ ರಮ್ಯ, ಗಂಭೀರವಾಗಿರುವ ರಮ್ಯರ ಮಗ

ಕೂಡಲೇ ಕುಟುಂಬಸ್ಥರು ರಮ್ಯಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಗರ್ಭಿಣಿಯಾಗಿದ್ದ ರಮ್ಯರ ಮಗುವೂ ಪ್ರಪಂಚ ನೋಡುವ ಮುನ್ನವೇ ಗರ್ಭದಲ್ಲೇ ಮೃತಪಟ್ಟಿತ್ತು. ಇತ್ತ ರಮ್ಯರ ನಾಲ್ಕು ವರ್ಷದ ಮಗನಿಗೂ ಚಿಕಿತ್ಸೆ ಮುಂದುವರಿದಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: Child Death : ಆಟವಾಡುತ್ತಾ ನೀರಿನ ತೊಟ್ಟಿಗೆ ಬಿದ್ದ 3 ವರ್ಷದ ಮಗು ಸಾವು

ಸ್ನಾನಕ್ಕೆ ಜೋಡಿಯಾಗಿ ಹೋಗಿದ್ದ ಯುವಕ- ಯುವತಿ ಬಾತ್‌ರೂಮ್‌ನಲ್ಲಿ ಸಾವು

ಕಳೆದ ಜೂನ್‌ನಲ್ಲೂ ಇದೇ ರೀತಿ ಗ್ಯಾಸ್‌ ಗೀಸರ್‌ ಲೀಕ್‌ ಇಬ್ಬರು ಮೃತಪಟ್ಟಿದ್ದರು. ಹಸೆಮಣೆ ಏರಬೇಕಿದ್ದ ಜೋಡಿಯೊಂದು ದಾರುಣ ಅಂತ್ಯ ಕಂಡಿತ್ತು. ಸ್ನಾನಕ್ಕೆ ಜೋಡಿಯಾಗಿ ಹೋದಾಗ ಗೀಸರ್‌ ಲೀಕ್‌ ಆಗಿ (gas geyser leaks) ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲಿ ಮೃತ್ಯು (Bangalore News) ಆಗಿದ್ದರು. ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್, ಗೋಕಾಕ್ ತಾಲೂಕಿನ ಸುಧಾರಾಣಿ ಮೃತ ದುರ್ದೈವಿಗಳು.

ಬೆಂಗಳೂರು: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿಯೊಂದು ದಾರುಣ ಅಂತ್ಯ ಕಂಡಿದೆ. ಸ್ನಾನಕ್ಕೆ ಜೋಡಿಯಾಗಿ ಹೋಗಿದ್ದಾಗ ಗೀಸರ್‌ ಲೀಕ್‌ ಆಗಿ (gas geyser leaks) ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲಿ ಮೃತ್ಯು (Bangalore News) ಆಗಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್, ಗೋಕಾಕ್ ತಾಲೂಕಿನ ಸುಧಾರಾಣಿ ಮೃತ ದುರ್ದೈವಿಗಳು.

ಗ್ಯಾಸ್‌ ಗೀಸರ್‌ ಸೋರಿಕೆ

ಕಳೆದ ಜೂನ್‌ 10ರಂದು ಚಿಕ್ಕಜಾಲದ ತರಬನಹಳ್ಳಿ ಬಳಿ ಈ ದುರ್ಘಟನೆ ನಡೆದಿತ್ತು. ಈ ಜೋಡಿ ರಾತ್ರಿ 9 ಗಂಟೆ ಸುಮಾರಿಗೆ ಸ್ನಾನಕ್ಕೆಂದು ಗ್ಯಾಸ್ ಗೀಸರ್‌ ಆನ್ ಮಾಡಿತ್ತು. ಈ ವೇಳೆ ಗ್ಯಾಸ್ ಗೀಸರ್‌ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿತ್ತು. ಆದರೆ ಇದ್ಯಾವುದರ ಅರಿವು ಇವರೇ ಒಟ್ಟಿಗೆ ಸ್ನಾನ ಮಾಡಲು ಬಾತ್‌ ರೂಮ್‌ಗೆ ಹೋಗಿದ್ದರು. ಗೀಸರ್‌ ಸೋರಿಕೆಯಾದ ಕಾರಣ ಸ್ನಾನ ಮಾಡುತ್ತಲೇ ಇಬ್ಬರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದರು.

ಮನೆಯಿಂದ ಹೊರಗೆ ಬಾರದೆ ಇದ್ದಾಗ ಬೆಳಗ್ಗೆ ಮನೆ ಮಾಲೀಕರು ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿತ್ತು. ಬಳಿಕ ಪೊಲೀಸರಿಗೆ ವಿಷಯ ತಿಳಿಸಿದ್ದು, ಬಾಗಿಲು ಮುರಿದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version