Gode Bengaluru : ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ; ʻಗೋಡೆ ಬೆಂಗಳೂರುʼ ಘೋಷಿಸಿದ ಅನ್‌ಬಾಕ್ಸಿಂಗ್‌ - Vistara News

ಬೆಂಗಳೂರು

Gode Bengaluru : ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ; ʻಗೋಡೆ ಬೆಂಗಳೂರುʼ ಘೋಷಿಸಿದ ಅನ್‌ಬಾಕ್ಸಿಂಗ್‌

BMRCL : ಬಿಎಂಆರ್‌ಸಿಎಲ್‌ ಸಹಯೋಗದೊಂದಿಗೆ ಬೆಂಗಳೂರಿನ ಗೋಡೆಗಳ ಮೇಲೆ ಚಿತ್ರಕಲೆ ಬಿಡಿಸುವ “ಗೋಡೆ ಬೆಂಗಳೂರು” (Gode Bengaluru) ಚಟುವಟಿಕೆಯನ್ನು ಅನ್‌ಬಾಕ್ಸಿಂಗ್‌ ಬೆಂಗಳೂರು ಘೋಷಿಸಿದೆ.

VISTARANEWS.COM


on

Gode Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಗೋಡೆಗಳನ್ನು ಚಿತ್ರಗಳಿಂದ ಕಂಗೊಳಿಸುವಂತೆ ಮಾಡುವ ಉದ್ದೇಶದಿಂದ ಅನ್‌ಬಾಕ್ಸಿಂಗ್‌ ಬೆಂಗಳೂರು ಫೌಂಡೇಷನ್‌, ಬಿಎಂಆರ್‌ಸಿಎಲ್‌ ಸಹಯೋಗದೊಂದಿಗೆ “ಗೋಡೆ ಬೆಂಗಳೂರು” ಶೀರ್ಷಿಕೆಯಡಿ (Gode Bengaluru) ಗೋಡೆಗಳ ಮೇಲೆ ಚಿತ್ರಬಿಡುಸುವ ಉಪಕ್ರಮವನ್ನು ಘೋಷಿಸಿದೆ.

ಬೆಂಗಳೂರಿನಾದ್ಯಂತ ಇರುವ ಗೋಡೆಗಳ ಮೇಲೆ ನಮ್ಮ ಕಲೆ, ಸಂಸ್ಕೃತಿ, ಆಚರಣೆ ಇತ್ಯಾದಿ ಸೊಬಗನ್ನು ಬಿಂಬಿಸುವ ಚಿತ್ರಗಳನ್ನು ಬಿಡಿಸುವ ಚಟುವಟಿಕೆ ನಡೆಸುತ್ತಿದೆ. ಸರ್ಕಾರದ ಸಹಭಾಗಿತ್ವದಲ್ಲಿ ಇದೇ ನವೆಂಬರ್ 30 ರಿಂದ ಡಿಸೆಂಬರ್ 15ರ ವರೆಗೆ “ಬೆಂಗಳೂರು ಹಬ್ಬ”ವನ್ನು ಅದ್ಧೂರಿಯಿಂದ ಅನ್‌ಬಾಕ್ಸಿಂಗ್‌ ಫೌಂಡೇಷನ್‌ ಆಚರಿಸಲು ಸಿದ್ಧತೆ ನಡೆಸುತ್ತಿದೆ.

Gode Bengaluru

ಇದರ ಭಾಗವಾಗಿ “ಗೋಡೆ ಬೆಂಗಳೂರು” ಚಟುವಟಿಕೆಯನ್ನು ಪ್ರಾರಂಭಿಸಲಾಗುತ್ತಿದೆ. ಬಿಎಂಆರ್‌ಸಿಎಲ್‌ನ ಸಹಯೋಗದಿಂದಿಗೆ “ಗೋಡೆ ಬೆಂಗಳೂರು” ಚಟುವಟಿಕೆ ನಡೆಯಲಿದ್ದು, ನಮ್ಮ ಸಂಸ್ಕೃತಿ ಹಾಗೂ ಕ್ರಿಯಾತ್ಮಕ ಮನೋಭಾವದ ಚಿತ್ರಗಳನ್ನು ಗೋಡೆಗಳ ಮೇಲೆ ಚಿತ್ರಿಸಿ ನಮ್ಮ ನಗರವನ್ನು ಸುಂದವಾಗಿಸಲು ಪ್ರಯತ್ನಿಸಲಾಗುತ್ತಿದೆ. ಈ ಉಪಕ್ರಮವು ಮೆಟ್ರೋ ನಿಲ್ದಾಣಗಳು, ನಗರದ ಪ್ರಮುಖ ಗೋಡೆಗಳ ಮೇಲೆ ಚಿತ್ರಿಸಲಾಗುತ್ತದೆ. ಬೆಂಗಳೂರಿನ ನಿವಾಸಿಗಳು ಹಾಗೂ ಬೆಂಗಳೂರಿಗೆ ಭೇಟಿ ನೀಡುವ ಪ್ರವಾಸಿಗರು ಈ ಸುಂದರ ಕಲೆಗಳ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು.

ಈಗಾಗಲೇ ಆಗಸ್ಟ್ ತಿಂಗಳಲ್ಲೇ “ ಗೋಡೆ ಬೆಂಗಳೂರು” ಚಟುವಟಿಕೆಗೆ ಕಲಾವಿದರಿಂದ ಅರ್ಜಿ ಆಹ್ವಾನಿಸಿ, ಹತ್ತು ಪ್ರತಿಭಾವಂತ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಈ ಅರ್ಜಿಗಳನ್ನು 1ಶಾಂತಿರೋಡ್ ಸ್ಟುಡಿಯೋ/ಗ್ಯಾಲರಿಯ ಸಂಸ್ಥಾಪಕ, ದೃಶ್ಯ ಕಲಾವಿದ, ಕಲಾ ಇತಿಹಾಸಕಾರ ಮತ್ತು ಮೇಲ್ವಿಚಾರಕರಾದ ಸುರೇಶ್ ಜಯರಾಮ್, ಕಲಾವಿದೆ ಅರ್ಚನಾ ಹಂಡೆ, ಬಹುಶಿಸ್ತೀಯ ಕಲಾವಿದ ಮತ್ತು ಚಿತ್ರಕಲೆ, ಶಿಲ್ಪಕಲೆ ಕಲಾವಿದಾರದ ರವಿಕುಮಾರ್ ಕಾಶಿ ಈ ತೀರ್ಪುಗಾರರನ್ನು ಒಳಗೊಂಡ ಸ್ವತಂತ್ರ ಸಮಿತಿಯು ಪರಿಶೀಲನೆ ನಡೆಸಿ ಕಲಾವಿದರನ್ನು ಆಯ್ಕೆ ಮಾಡಿದೆ.

ಆಯ್ಕೆಯಾಗಿರುವ ಹತ್ತು ಪ್ರತಿಭಾವಂತ ಕಲಾವಿದರು ಬೆಂಗಳೂರಿನ ಗೋಡೆಗಳ ಮೇಲೆ ಸುಂದರ ಕಲಾಕೃತಿಗಳನ್ನು ರಚಿಸಲಿದ್ದಾರೆ. ಈ ಕಲಾವಿದರು ‘ಬೆಂಗಳೂರು ವರ್ಣಗಳು’ ಎಂಬ ವಿಷಯದ ಸುತ್ತ ಚಿತ್ರಗಳನ್ನು ರಚಿಸಲಿದ್ದಾರೆ. ಇದು ನಗರದ ಸಾರವನ್ನು ಸೆರೆಹಿಡಿಯುವ ಪ್ರಯತ್ನವಾಗಿದೆ. ನಮ್ಮ ನಗರದ ಇತಿಹಾಸ, ಸಂಸ್ಕೃತಿ, ಹಬ್ಬಗಳು, ಸಸ್ಯ ಮತ್ತು ಪ್ರಾಣಿಗಳು ಮತ್ತು ಬೆಂಗಳೂರನ್ನು ಅನನ್ಯವಾಗಿಸುವ ದೈನಂದಿನ ಮೋಡಿ ಸೇರಿದಂತೆ ಹಲವು ಪ್ರಮುಖ ಆಕರ್ಷಣೆಗಳು ಒಳಗೊಂಡರಲಿದೆ.’

ಗೋಡೆ ಬೆಂಗಳೂರಿನ ಮುಖ್ಯ ಕ್ಯುರೇಟರ್, ಕಾಮಿನಿ ಸಾಹ್ನಿ ಮಾತನಾಡಿ, ಈ ವಿನೂತನ ಉಪಕ್ರಮವು ನಮ್ಮ ಹೆಮ್ಮೆಯ ಕಲೆ ಮತ್ತು ಸಾಂಸ್ಕೃತಿಕ ಮಹತ್ವವನ್ನು ಎತ್ತಿ ತೋರಿಸಲಿದೆ. “ಗೋಡೆ ಬೆಂಗಳೂರು” ಶೀರ್ಷಿಕೆಯಲ್ಲಿ ಮೂಡಿ ಬರುವ ಗೋಡೆ ಚಿತ್ರಗಳು ಬೆಂಗಳೂರಿನ ಜನರ ಮನಸ್ಸಿನಲ್ಲಿ ಅವಿನಾಭಾವ ಸೆಳೆತ ಸೃಷ್ಟಿಸುವ ಪ್ರಯತ್ನ ಮಾಡಲಿದೆ..
ಈ ಗೋಡೆ ಚಿತ್ರಗಳು ನಮ್ಮ ಸಮುದಾಯ ಎತ್ತ ಸಾಗುತ್ತಿದೆ, ಸಂಸ್ಕೃತಿಯ ಮಹತ್ವ ಇತ್ಯಾದಿ ಅಂಶಗಳನ್ನು ಜನರ ನಡುವೆ ಸಂಭಾಷಣಾ ಕ್ಯಾನ್ವಾಸ್ ಆಗಿ ಕಾರ್ಯನಿರ್ವಹಿಸಬೇಕೆಂದು ನಾವು ಬಯಸುತ್ತೇವೆ. ಪ್ರತಿಯೊಂದು ಕಲೆಯು ಒಂದೊಂದು ವಿಶಿಷ್ಟವಾದ ಕಥೆಯನ್ನು ಹೇಳುತ್ತವೆ, ಈ ಉಪಕ್ರಮವು ಅನುಭವಿ ಮತ್ತು ಉದಯೋನ್ಮುಖ ಕಲಾವಿದರಿಗೆ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, ಇದು ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ತಮ್ಮ ಛಾಪು ಮೂಡಿಸಲು ಅನುವು ಮಾಡಿಕೊಡುತ್ತದೆ.

ಬೆಂಗಳೂರು ಹಬ್ಬಾ ಮುಖ್ಯ ಸಂಚಾಲಕ ರವಿಚಂದರ್ ವಿ ಅವರು, ಈ ಉಪಕ್ರಮದ ಬಗ್ಗೆ ಹರ್ಷ ವ್ಯಕ್ತಪಡಿಸಿದರು, “ಗೋಡೆ ಬೆಂಗಳೂರು” ಕೇವಲ ಕಲೆಯನ್ನು ಚಿತ್ರಿಸುವುದಷ್ಟೇ ಅಲ್ಲದೆ, ಇದು ಬೆಂಗಳೂರಿನ ಜನರ ನಡುವೆ ಅವಿನಾಭಾವ ಸಂಬಂಧ ಬೆಸೆಯಲಿದೆ.ಈ ಉಪಕ್ರಮದ ಮೂಲಕ, ನಾವು ನಗರದ ಚೈತನ್ಯ, ವೈವಿಧ್ಯತೆ ಮತ್ತು ಅದನ್ನು ವ್ಯಾಖ್ಯಾನಿಸುವ ನಾವೀನ್ಯತೆಯ ಮನೋಭಾವವನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದ್ದೇವೆ. ಕಲೆಯು ಜನರನ್ನು ಒಟ್ಟುಗೂಡಿಸುವ ಮತ್ತು ಸಂಭಾಷಣೆಗಳನ್ನು ಪ್ರೇರೇಪಿಸುವ ಶಕ್ತಿಯನ್ನು ಹೊಂದಿದ್ದು, ಇದನ್ನು ಗೋಡೆ ಬೆಂಗಳೂರಿನ ಮೂಲಕ ಸಾಕಾರಗೊಳಿಸಲಿದ್ದೇವೆ ಎಂದರು.

ಅನ್‌ಬಾಕ್ಸಿಂಗ್ ಬೆಂಗಳೂರು ವತಿಯಿಂದ ಇದೇ ನವೆಂಬರ್‌ ತಿಂಗಳಲ್ಲಿ ಆಚರಿಸಲಾಗುತ್ತಿರುವ “ಬೆಂಗಳೂರು ಹಬ್ಬ”ದ ಮುನ್ನ ವಾರದಲ್ಲಿ “ಗೋಡೆ ಬೆಂಗಳೂರು” ಮೂಲಕ ಗೋಡೆಗಳ ಮೇಲೆ ಕಲಾಕೃತಿಗಳು ಲೈವ್‌ ಇನ್‌ಸ್ಟಾಲ್‌ ಆಗಲಿವೆ. ಈ ಅದ್ಭುತ ಕಲಾಕೃತಿಗಳನ್ನು ಬೆಂಗಳೂರಿಗರು ಕಣ್ತುಂಬಿಕೊಳ್ಳಬಹುದು.

ಬೆಂಗಳೂರು ಹಬ್ಬ 2024

ಬೆಂಗಳೂರು ಹಬ್ಬ ಸರ್ಕಾರಿ ಬೆಂಬಲಿತ, ನಾಗರಿಕ-ಆಧಾರಿತ ಉತ್ಸವವಾಗಿದ್ದು, ಬೆಂಗಳೂರಿಗರಿಗಾಗಿ ಆಚರಿಸುತ್ತದೆ. ಉತ್ಸವದ ಎರಡನೇ ಆವೃತ್ತಿಯು ನವೆಂಬರ್ 30 ರಿಂದ ಡಿಸೆಂಬರ್ 15, 2024 ರವರೆಗೆ ನಡೆಯಲಿದೆ. ಬೆಂಗಳೂರು ಹಬ್ಬವನ್ನು ಅನ್‌ಬಾಕ್ಸಿಂಗ್‌ ಬಿಎಲ್‌ಆರ್ ಫೌಂಡೇಶನ್ ಆಯೋಜಿಸುತ್ತಿದೆ. ಇದು ಲಾಭೋದ್ದೇಶವಿಲ್ಲದ ವೇದಿಕೆ ಆಗಿದ್ದು, ಜನಸಾಮ್ಯರನ್ನು ಸಕ್ರಿಯಗೊಳಿಸುವ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ಬೆಂಗಳೂರಿನ ಪ್ರಯಾಣವನ್ನು ಜಾಗತಿಕ ಟೆಕ್ ಹಬ್ ಮತ್ತು ಸಾಂಸ್ಕೃತಿಕ ನಗರಿಯನ್ನಾಗಿ ಆಚರಿಸುತ್ತದೆ. ಬೆಂಗಳೂರು ಹಬ್ಬ ಬೆರಗುಗೊಳಿಸುವ ಪ್ರದರ್ಶನಗಳು ಮತ್ತು ಕಲಾತ್ಮಕ ಪ್ರದರ್ಶನಗಳು ಮತ್ತು ತಲ್ಲೀನಗೊಳಿಸುವ ಅನುಭವಗಳಿಂದ ನಗರದ ರೋಮಾಂಚಕ ಸಂಸ್ಕೃತಿಯನ್ನು ಆಚರಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
ಪ್ರಮುಖ ಸುದ್ದಿ9 minutes ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ28 minutes ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

Latest21 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

Latest24 hours ago

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

Latest1 day ago

ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಪದಗ್ರಹಣ

Latest2 days ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest3 days ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ3 days ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest3 days ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest3 days ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌