Site icon Vistara News

Gold Rate Today: ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ನೋಡಿ ದರ

Chaitra Reddy

Gold Rate Remains Unchanged In Bengaluru Today

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮಂಗಳವಾರ (ಜನವರಿ 30) ಚಿನ್ನದ ಬೆಲೆ (Gold Rate Today) ಯಥಾಸ್ಥಿತಿ ಇದೆ. ಸೋಮವಾರ (ಜನವರಿ 29) ಚಿನ್ನದ ಬೆಲೆಯಲ್ಲಿ ತುಸು ಏರಿಕೆಯಾಗಿತ್ತು. ಆದರೆ, ಮಂಗಳವಾರ ಏರಿಕೆಯೂ ಆಗದೆ, ಇಳಿಕೆಯೂ ಆಗದೆ ಯಥಾಸ್ಥಿತಿ ಇದೆ. ಬೆಂಗಳೂರಿನಲ್ಲಿ (Bengaluru) ಇಂದು 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನಕ್ಕೆ 5,780 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನಕ್ಕೆ 6,305 ರೂ. ಇದೆ.

10 ದಿನಗಳಲ್ಲಿ ಚಿನ್ನದ ಬೆಲೆ ಸ್ಥಿರ

ಮಕರ ಸಂಕ್ರಾಂತಿ ಹಬ್ಬ ಮುಗಿದ ಬಳಿಕ ಚಿನ್ನದ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆಯು ಒಮ್ಮೆ ಮಾತ್ರ 10 ರೂ. ಏರಿಕೆಯಾಗಿದೆ. ಏಳು ದಿನಗಳಲ್ಲಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿರಲಿಲ್ಲ. ಇನ್ನು ಎರಡು ದಿನ ತಲಾ 5 ರೂ. ಏರಿಕೆಯಾಗಿತ್ತು. ಕಳೆದ ತಿಂಗಳಿಗೆ ಹೋಲಿಸಿದರೆ, ಜನವರಿಯಲ್ಲಿ ಚಿನ್ನದ ಬೆಲೆಯು ಒಂದು ಗ್ರಾಂಗೆ ಸರಾಸರಿ ಶೇ.1.5ರಷ್ಟು ಏರಿಕೆ ಕಂಡಿದೆ.

ನಗರ
22 ಕ್ಯಾರಟ್ 24 ಕ್ಯಾರಟ್
ದಿಲ್ಲಿ
57,950 63,200
ಮುಂಬಯಿ57,80063,050
ಬೆಂಗಳೂರು
57,80063,050
ಚೆನ್ನೈ 58,450 63,760

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಕೆಲವು ಅಂಶಗಳು ಇಲ್ಲಿವೆ

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

Trisha Krishnan

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: Jayalalitha Case : ಜಯಲಲಿತಾ ಕೈಲಿದ್ದ 7 ಕೆಜಿ ಚಿನ್ನ, 11,344 ರೇಷ್ಮೆ ಸೀರೆ, 740 ಚಪ್ಪಲಿಗಳನ್ನು ಏನ್ಮಾಡ್ತಾರೆ?

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version