ಬೆಂಗಳೂರು: ಮನೆಗಳಲ್ಲಿ ಚಿನ್ನಾಭರಣ ಕಳವು ಮಾಡಿ, ಅವುಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಭಾರತೀನಗರ ಪೊಲೀಸರು ಬಂಧಿಸಿದ್ದು, 8 ಲಕ್ಷ ರೂಪಾಯಿ ಮೌಲ್ಯದ 165 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
ಅಜ್ಜತ್ ಪಾಷಾ(33) ಬಂಧಿತ. ಭಾರತೀನಗರ ವ್ಯಾಪ್ತಿಯಲ್ಲಿ ಆ.21ರಂದು ಮನೆಯೊಂದಕ್ಕೆ ನುಗ್ಗಿ 165 ಗ್ರಾಂ ಚಿನ್ನಾಭರಣಗಳನ್ನು ಆರೋಪಿ ಕಳ್ಳತನ ಮಾಡಿದ್ದ. ಬಳಿಕ ಅವುಗಳನ್ನು ಶಿವಾಜಿನಗರದ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿಯೊಂದಿಗೆ ದಾಳಿ ಮಾಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ, 165 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಭಾರತೀನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Crime News | ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿತ; ಮಾರಣಾಂತಿಕ ಹಲ್ಲೆ