ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ (Government Employee) ಪ್ರಮುಖ ಬೇಡಿಕೆಯಾದ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪುನರ್ ರಚಿಸಿ (NPS) ಆದೇಶಿಸಿದೆ. ರಾಜ್ಯ ಸರ್ಕಾರವು ಈಗಾಗಲೇ 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಿದ್ದು, ಸರ್ಕಾರಿ ನೌಕರರ ಮತ್ತೊಂದು ಪ್ರಮುಖ ಬೇಡಿಕೆಯಾದ ಎನ್‌ಪಿಎಸ್ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವ ಕುರಿತು ಸಮಿತಿಯನ್ನು ಪುನರ್ ರಚಿಸಿ ಆದೇಶಿಸಿದೆ.
ಇದನ್ನೂ ಓದಿ: Bengaluru Power Cut: ಗಮನಿಸಿ… ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.18ರಂದು ಕರೆಂಟ್ ಇರಲ್ಲ
ರಾಜ್ಯದಲ್ಲಿ ಏಪ್ರಿಲ್ 01 2006ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರಿರುವ ಎಲ್ಲಾ ಸರ್ಕಾರಿ ನೌಕರರಿಗೆ ಕಡ್ಡಾಯವಾಗಿ ರಾಷ್ಟ್ರೀಯ ಪಿಂಚಣಿ ಯೋಜನೆ ಜಾರಿಗೆ ತರಲಾಗಿದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಮಗ್ರವಾಗಿ ಪರಿಶೀಲಿಸಿ, ರಾಜ್ಯ ಸರ್ಕಾರಕ್ಕೆ ಸೂಕ್ತ ವರದಿಯನ್ನು ಸಲ್ಲಿಸಲು ಸಮಿತಿಯನ್ನು ಪುನರ್ ರಚಿಸಿ ಆದೇಶಿಸಲಾಗಿದೆ.
ಈ ಸಮಿತಿಯು ಈಗಾಗಲೇ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ, ವರದಿ ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸದಸ್ಯರುಗಳಾಗಿ ಐಎಎಸ್ ಅಧಿಕಾರಿಗಳಾದ ರಿತೇಶ್ ಕುಮಾರ್ ಸಿಂಗ್, ಅಮಲಾನ್ ಆದಿತ್ಯ ಬಿಸ್ವಾಸ್, ಡಾ.ವಿಶಾಲ್ ಆರ್. ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಡಾ.ಎಂ.ಟಿ. ರೇಜು ಸಮಿತಿಯನ್ನು ಪುನರ್ ರಚಿಸಿ, ಆದೇಶಿಸಲಾಗಿದೆ.
ಇದನ್ನೂ ಓದಿ: Kannada New Movie: ಸಿದ್ದು ಪೂರ್ಣಚಂದ್ರ ನಿರ್ದೇಶನದ ‘ಈ ಪಾದ ಪುಣ್ಯ ಪಾದ’ ಚಿತ್ರಕ್ಕೆ ವಿ. ನಾಗೇಂದ್ರ ಪ್ರಸಾದ್ ಕ್ಲಾಪ್
ಸಮಿತಿಯು ತನ್ನದೇ ಆದ ಕಾರ್ಯವಿಧಾನಗಳನ್ನು ರೂಪಿಸಿಕೊಳ್ಳುವಲ್ಲಿ ಸಕ್ಷಮವಾಗಿರುತ್ತದೆ. ಸಮಿತಿಯ ಪರಿಶೀಲನೆಗೊಳಪಟ್ಟ ಅಂಶಗಳಿಗೆ ಅಗತ್ಯವೆನಿಸಿದ ಮಾಹಿತಿಗಳನ್ನು ಒದಗಿಸಲು ಸರ್ಕಾರದ ಎಲ್ಲಾ ಇಲಾಖೆಗಳು ನಿಗದಿತ ಕಾಲಮಿತಿಯೊಳಗೆ ಸೂಕ್ತ ನೆರವು ನೀಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.