ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ (Job Opportunity) 17835.9 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ (Green signal to investment) ದೊರೆತಿದ್ದು, ಇದರಲ್ಲಿ 8220.05 ರೂ. ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು 9,615.85 ಕೋಟಿ ರೂ. ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ (Investment) 8 ಯೋಜನೆಗಳು ಇವೆ.
ʼಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
‘ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ₹ 2095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ಫೋನ್ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21723 ಜನರಿಗೆ ಉದ್ಯೋಗಗಳು ದೊರೆಯಲಿವೆʼ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.
ಅಭಿವೃದ್ಧಿ ಆಯುಕ್ತೆ ಡಾ.ಶಾಲಿನಿ ರಜನೀಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು
ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲು ಒಟ್ಟು 6 ಕಂಪನಿಗಳು ಮುಂದೆ ಬಂದಿವೆ. ಒಟ್ಟು ₹ 8220.05 ಕೋಟಿ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.
- ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ‘ಲಿಮಿಟೆಡ್
- ಇಂಡಿಯನ್ ಕೇನ್ ಪವರ್ ಲಿಮಿಟೆಡ್
- ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್
- ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್
- ಏರ್ ಇಂಡಿಯಾ ಲಿಮಿಟೆಡ್
ಇದನ್ನೂ ಓದಿ : Karnataka Budget Session 2024: ಶೇ. 16 ಮಾತ್ರ ಹೂಡಿಕೆ ಎಂದ ಬಿಜೆಪಿ! ಉ.ಕ. ಭಾಗದಲ್ಲಿ ಸಾವಿರಾರು ಉದ್ಯೋಗ: ಎಂಬಿಪಿ
ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು
ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ ಸಾಮರ್ಥ್ಯ ವಿಸ್ತರಣೆ ಉದ್ದೇಶದ ಹೆಚ್ಚುವರಿ ಹೂಡಿಕೆಯ 8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು ₹ 9,615.85 ಕೋಟಿಗಳಷ್ಟಿದೆ.
- ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್
- ಆರ್‌ಬಿಎಸ್‌ಎಸ್‌ಎನ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್,
- ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಎಂವೆ ಫೋಟೊ ವೋಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್)
- ಇಂಡಿಯನ್ ಕೇನ್ ಪವರ್ ಲಿಮಿಟೆಡ್ (ಅಳಗವಾಡಿ ಬೀರೇಶ್ವರ ಷುಗರ್ಸ್ ಘಟಕ)
- ಗ್ರೀನ್ಕೊ ಕೆಎ01 ಐಆರ್‍ಇಪಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಗ್ರೀನ್ಕೊ ಸೋಲಾರ್ ಎನರ್ಜಿ ಪ್ರೈವೇಟ್ ಲಿಮಿಟೆಡ್)
- ಅಥಣಿ ಷುಗರ್ಸ್ ಲಿಮಿಟೆಡ್
- ಉಕೆಮ್ ಅಗ್ರಿ ಇನ್ಫ್ರಾ ಲಿಮಿಟೆಡ್
- ಸ್ನೈಡರ್ ಎಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್.
ಯಾವ ಕಂಪನಿ ಎಲ್ಲಿ ಏನು ಉದ್ಯಮ ತೆರೆಯಲಿದೆ, ಎಷ್ಟು ಉದ್ಯೋಗವಕಾಶ?
1.ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ- ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಡೇಟಾ ಸೆಂಟರ್ ತೆರೆಯಲಿದೆ 1352.3 ಕೋಟಿ ರೂ. ಹೂಡಿಕೆ ಮಾಡಲಿದೆ 250 ಉದ್ಯೋಗ ಸೃಷ್ಟಿಯಾಗಲಿದೆ.
2. ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆ- ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸ್ಮಾರ್ಟ್‌ಫೋನ್ ತಯಾರಿಕಾ ಘಟಕ ಸ್ಥಾಪಿಸಲಿದೆ. 2095 ಕೋಟಿ ರೂ. ಹೂಡಿಕೆಯಿಂದ 21723 ಉದ್ಯೋಗ ಸೃಷ್ಟಿಯಾಗಲಿದೆ.
3.ಇಂಡಿಯನ್ ಕೇನ್ ಪವರ್ ಲಿಮಿಟೆಡ್ ವಿಜಯಪುರ ಜಿಲ್ಲೆ- ಕಂಬಾಗಿ ಹಾಗೂ ಶೇಗುಣಶಿ ಗ್ರಾಮಗಳ ವ್ಯಾಪ್ತಿಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲಿದೆ. 1078 ಕೋಟಿ ರೂ. ಹೂಡಿಕೆ ಮತ್ತು 309 ಉದ್ಯೋಗ ಸೃಷ್ಟಿ
4.ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಕ್ಷಣಾ ಹಾಗೂ ವೈಮಾಂತರಿಕ್ಷ ಪಾರ್ಕ್. ಲ್ಯಾಪ್‌ಟಾಪ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕಾ ಘಟಕ ಆರಂಭಿಸಲಿದೆ. ಇದರ ಬಂಡವಾಳ 1450 ಕೋಟಿ ರೂ. 2500 ಉದ್ಯೋಗ ಸೃಷ್ಟಿ
5. ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್. ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ವೃದ್ಧಿಗೆ ಮುಂದಾಗಿದೆ. 494.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಕಾರ್ಖಾನೆಯಿಂದ 1085 ಉದ್ಯೋಗ ಸೃಷ್ಟಿಯಾಗಲಿದೆ.
6. ಏರ್ ಇಂಡಿಯಾ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ- ವಿಮಾನಗಳ ನಿರ್ವಹಣೆ ಹಾಗೂ ದುರಸ್ತಿ ಘಟಕ ಸ್ಥಾಪಿಸಲಾಗುತ್ತದೆ. 1750 ಕೋಟಿ ವೆಚ್ಚದ ಘಟಕದಲ್ಲಿ 1200 ಉದ್ಯೋಗ ಸೃಷ್ಟಿಯಾಗಲಿದೆ.
ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು
- ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ಕ ಲಬುರಗಿ ಜಿಲ್ಲೆಯಲ್ಲಿ ಗಣಿಗಾರಿಕೆ- 490.38 ಕೋಟಿ ರೂ.
- ಆರ್‌ಬಿಎಸ್‌ಎಸ್‌ಎನ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್. ಬಳ್ಳಾರಿ ಜಿಲ್ಲೆಯಲ್ಲಿ 130 ಮೆಗಾವಾಟ್ ವಿದ್ಯುತ್ ಘಟಕ- 1620.80 ಕೋಟಿ
- ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೌರಫಲಕಗಳ ತಯಾರಿಕಾ ಘಟಕ- 676.28 ಕೋಟಿ ರೂ.
- ಇಂಡಿಯನ್ ಕೇನ್ ಪವರ್ ಲಿಮಿಟೆಡ್ ಬೆಳಗಾವಿ ಜಿಲ್ಲೆ. ಅಳಗವಾಡಿ ಬೀರೇಶ್ವರ ಷುಗರ್ಸ್ ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ವೃದ್ಧಿ- 492.29 ಕೋಟಿ ರೂ.
- ಗ್ರೀನ್ಕೊ ಕೆಎ01 ಐಆರ್‍ಇಪಿ ಪ್ರೈವೇಟ್ ಲಿಮಿಟೆಡ್ ಬೆಳಗಾವಿ ಜಿಲ್ಲೆ – ಜಲ ಸಂಗ್ರಹಾಗಾರದ (ಪಂಪ್ಡ್ ಸ್ಟೋರೇಜ್) ಸಾಮರ್ಥ್ಯ ವೃದ್ಧಿ – 5948.06 ಕೋಟಿ ರೂ.
- ಅಥಣಿ ಷುಗರ್ಸ್ ಲಿಮಿಟೆಡ್ ಬೆಳಗಾವಿ ಜಿಲ್ಲೆ- ಡಿಸ್ಟಿಲರಿ ಘಟಕದ ವಿಸ್ತರಣೆ- 205.89 ಕೋಟಿ ರೂ.
- ಉಕೆಮ್ ಅಗ್ರಿ ಇನ್ಫ್ರಾ ಲಿಮಿಟೆಡ್ ಕೊಪ್ಪಳ ಜಿಲ್ಲೆ- ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ಹೆಚ್ಚಳ- 103.55 ಕೋಟಿ ರೂ.
- ಸ್ನೈಡರ್ ಇಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ನಗರ ಜಿಲ್ಲೆ. ಎಲೆಕ್ಟ್ರಾನಿಕ್ ಪರಿಕರಗಳ ತಯಾರಿಕಾ ಘಟಕ- 78.60 ಕೋಟಿ ರೂ.