Site icon Vistara News

ಗುರುಪೂರ್ಣಿಮೆ ವಿಶೇಷ | ಆಟದ ಸಾಮಗ್ರಿಗಳನ್ನು ಬಳಸಿ ದೇವರಿಗೆ ವಿಶೇಷ ಅಲಂಕಾರ

ಗುರುಪೂರ್ಣಿಮೆ ವಿಶೇಷ

ಬೆಂಗಳೂರು: ಗುರುಪೂರ್ಣಿಮೆ ಅಂಗವಾಗಿ 1 ಲಕ್ಷ ಆಟದ ಸಾಮಗ್ರಿಗಳನ್ನು ಬಳಸಿ ಜೆ ಪಿ ನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ ವಿಶೇಷ ಆಲಂಕಾರ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಖೇಲೋ ಇಂಡಿಯಾ ಯೋಜನೆಗೆ ಪೂರಕವಾಗಿ ಸರಕಾರಿ, ಖಾಸಗಿ ಶಾಲೆಗಳಿಗೆ ಮತ್ತು ಅಪಾರ್ಟ್‌ಮೆಂಟ್‌ಗಳಿಗೆ ಇದನ್ನು ವಿತರಿಸಲು ನಿರ್ಧರಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಖೇಲೋ ಇಂಡಿಯಾ ಘೋಷಣೆಯ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿದ್ದರು. ಈ ಥೀಮನ್ನು ಅಳವಡಿಸಿಕೊಂಡು ಈ ಬಾರಿ ವಿಶೇಷವಾದ ಆಲಂಕಾರ ಮಾಡಲಾಗಿದೆ ಎಂದು ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದ ಟ್ರಸ್ಟಿ ರಾಮ್‌ಮೋಹನರಾಜ್‌ ತಿಳಿಸಿದರು.

ಕಳೆದ ಬಾರಿ ಕೋವಿಡ್‌ ಇದ್ದಿದ್ದರಿಂದ ಮೂರು ಲಕ್ಷ ಮಾತ್ರೆಗಳನ್ನು ಬಳಸಿ ಆಲಂಕಾರ ಮಾಡಲಾಗಿತ್ತು. ಅದನ್ನ 1 ಲಕ್ಷ ಕುಟುಂಬಗಳಿಗೆ ಹಂಚಲಾಗಿತ್ತು. ಈ ಬಾರಿ ಮಕ್ಕಳು ಆಟ ಆಡುವಂತಹ 50 ವಿವಿಧ ಸಾಮಗ್ರಿಗಳನ್ನು ಬಳಸಿ ವಿಶೇಷ ಆಲಂಕಾರ ಮಾಡಲಾಗುತ್ತಿದೆ. ಗೋಲಿ, ಬುಗುರಿ, ಗಿಲ್ಲಿದಾಂಡು, ಕ್ಯಾಟರ್‌ ಪಿಲ್ಲರ್‌ನಂತಹ ಸಾಂಪ್ರದಾಯಿಕ ಆಟದ ಸಾಮಗ್ರಿಗಳು, ಕ್ರಿಕೆಟ್‌, ಟೆನ್ನಿಸ್, ಹಾಕಿ ಬ್ಯಾಟುಗಳು ಸೇರಿದಂತೆ ಹಲವಾರು ವಿಧಧ ಕ್ರೀಡಾ ಸಾಮಗ್ರಿಗಳನ್ನು ಇಲ್ಲಿ ಬಳಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಗುರುಪೂರ್ಣಿಮೆ ಮುಗಿದ ನಂತರ ಈ ಸಾಮಗ್ರಿಗಳನ್ನು ಅಗತ್ಯವಿರುವಂತವರಿಗೆ ಉಚಿತವಾಗಿ ನೀಡಲಾಗುವುದು. ಕ್ರೀಡಾ ಸಾಮಗ್ರಿಗಳ ಅಗತ್ಯವಿರುವಂತಹ ಖಾಸಗಿ ಹಾಗೂ ಸರಕಾರಿ ಶಾಲೆಗಳು, ವಸತಿ ಸಮುಚ್ಚಯದ ಸಂಘಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜುಲೈ 13ರಿಂದ ಒಂದು ವಾರಗಳ ಕಾಲ ಈ ವಿಶೇಷ ಅಲಂಕಾರವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ:ಆಷಾಢ ಮಾಸದ ಮೊದಲ ಶುಕ್ರವಾರ; ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಸಾಗರ

Exit mobile version