ನವ ದೆಹಲಿ: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು (H D Deve Gowda) ಮಂಗಳವಾರ ಭೇಟಿಯಾಗಿ ಕರ್ನಾಟಕ ಮಹತ್ವದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು.
ಕುಂಚಿಟಿಗ ಸಮುದಾಯವನ್ನು ಕೇಂದ್ರ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡುವುದು, ಕಾವೇರಿ, ಕೃಷ್ಣಾ, ಮಹದಾಯಿ ನದಿಗಳ ಅಂತಾರಾಜ್ಯ ನದಿ ನೀರಿನ ಹಂಚಿಕೆ ಸಮಸ್ಯೆ ಬಗೆಹರಿಸಲು, ವಿವಿಧ ನೀರಾವರಿ ಯೋಜನೆಗಳು ಹಾಗೂ ಹಾಸನ ವಿಮಾನ ನಿಲ್ದಾಣ ಯೋಜನೆ ಪೂರ್ಣಗೊಳಿಸಲು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿಗೆ ದೇವೇಗೌಡರು ಮನವಿ ಸಲ್ಲಿಸಿದರು. ಇದಕ್ಕೆ ಪ್ರಧಾನಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದಕ್ಕೂ ಮುನ್ನ ಎಂದಿನಂತೆ ಪ್ರಧಾನಿ ಮೋದಿ, ದೇವೇಗೌಡರನ್ನು ಆತ್ಮೀಯವಾಗಿ ಸ್ವಾಗತಿಸಿ ಯೋಗಕ್ಷೇಮ ವಿಚಾರಿಸಿದರು.
ಇದನ್ನೂ ಓದಿ | ಹಾಸನ ಅಭಿವೃದ್ಧಿಗೆ ಬಿ.ಎಸ್. ಯಡಿಯೂರಪ್ಪ ಅಡ್ಡಗಾಲು: ಮೋದಿ ಭೇಟಿ ನಂತರ ಎಚ್.ಡಿ. ದೇವೇಗೌಡ ವಾಗ್ದಾಳಿ