ಕರ್ನಾಟಕ
Halashri Swameeji : ಹಾಲಶ್ರೀ ಸ್ವಾಮೀಜಿ ಬೆಂಗಳೂರು ಪುರಪ್ರವೇಶ; ಚೈತ್ರಾ ಕುಂದಾಪುರ ಫುಲ್ ಖುಷ್, ಕಾಲ ಮೇಲೆ ಕಾಲು!
Halashri Swameeji : ಕಟಕ್‌ನಲ್ಲಿ ಬಂಧಿತರಾದ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರಿಗೆ ಕರೆ ತರಲಾಗಿದೆ. ಈ ನಡುವೆ ಕಳೆದ ಎಂಟು ದಿನದಿಂದ ಖಿನ್ನಳಾಗಿದ್ದ ಚೈತ್ರಾ ಕುಂದಾಪುರ ಫುಲ್ ಖುಷ್ ಆಗಿದ್ದಾಳೆ.
ಬೆಂಗಳೂರು: ತಲೆಮರೆಸಿಕೊಂಡ ಎಂಟು ದಿನಗಳ ಬಳಿಕ ಒಡಿಶಾದ ಕಟಕ್‌ನ ರೈಲು ನಿಲ್ದಾಣವೊಂದರಲ್ಲಿ (Cuttack railway Station) ಟಿ ಶರ್ಟ್ ಮತ್ತು ಬರ್ಮುಡಾದೊಂದಿಗೆ (T- Shirt and Barmuda) ಅನಾಥ ಸ್ಥಿತಿಯಲ್ಲಿ ಬಂಧನಕ್ಕೆ ಒಳಗಾದ ಹಿರೇಹಡಗಲಿಯ ಹಾಲ ಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ (Halashri Swameeji) ಅವರು ಬೆಂಗಳೂರು ಪುರಪ್ರವೇಶ (Entered Bangalore) ಮಾಡಿದ್ದಾರೆ. ಸೆ. 11ರಂದು ರಾತ್ರಿ ಹನ್ನೊಂದು ಗಂಟೆಗೆ ಹಿರೇಹಡಗಲಿಯಿಂದ ಪರಾರಿಯಾದ ಸ್ವಾಮೀಜಿ ಸೆ. 18ರ ರಾತ್ರಿ 9.25ಕ್ಕೆ ಕಾಶಿಗೆ ಹೋಗುವ ರೈಲಿನಲ್ಲಿ ಸಿಕ್ಕಿಬಿದ್ದಿದ್ದರು. ಅಲ್ಲಿಂದ ಅವರನ್ನು ವಿಮಾನ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ. ಹಾಲಶ್ರೀ ಸ್ವಾಮೀಜಿ ಬಂಧನದ ಸುದ್ದಿ ಕೇಳಿ ಚೈತ್ರಾ ಕುಂದಾಪುರ ಫುಲ್ ಖುಷ್ (Chaitra Kundapura Full kush) ಆಗಿದ್ದಾಳೆ!
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಮೀಜಿಯನ್ನು ಎಲ್ಲರೂ ಹೊರಬರುವ ಎಕ್ಸಿಟ್‌ನಿಂದ ಕರೆದುಕೊಂಡು ಬರದೆ ವಿಐಪಿಗಳಿಗಾಗಿ ಮೀಸಲಿಟ್ಟ ಅತಿ ಸುರಕ್ಷಿತ ಎಕ್ಸಿಟ್ ಮೂಲಕ ಮಾಧ್ಯಮಗಳ ಕಣ್ಣು ತಪ್ಪಿಸಿ ಹೊರಗೆ ತರಲಾಯಿತು. ಅಲ್ಲಿಂದ ಅವರನ್ನು ಮೈಸೂರಿಗೆ ಕರೆದೊಯ್ಯಲಾಗಿದೆ ಎಂಬ ಸುದ್ದಿ ಒಮ್ಮೆ ಹರಡಿತ್ತು. ಆದರೆ, ಅವರನ್ನು ಕರೆದುಕೊಂಡು ಹೋಗಿದ್ದು ಮಡಿವಾಳದಲ್ಲಿರುವ ಟೆಕ್ನಿಕಲ್ ಸೆಲ್‌ಗೆ! ಮಡಿವಾಳ ಟೆಕ್ನಿಕಲ್ ಸೆಲ್‌ಗೆ ಕರೆದೊಯ್ಯುವ ಮೊದಲು ಹಾಲಸ್ವಾಮಿಯನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಯಿತು.
ಗೋವಿಂದ ಪೂಜಾರಿ ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವ ಭರವಸೆ ನೀಡಿ 5 ಕೋಟಿ ರೂ.ವಂಚಿಸಿದ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಹಾಲಶ್ರೀ ಅವರನ್ನು ಮಡಿವಾಳದ ಟೆಕ್ನಿಕಲ್ ಸೆಂಟರ್‌ಗೆ ತಂದು ಪ್ರಾಥಮಿಕ ಹಂತದ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ವಿಚಾರಣೆ ನಡೆಸಿ ಒಂದಿಷ್ಟು ಮಾಹಿತಿ ಪಡೆದು ಬಳಿಕ ವಿಶ್ರಾಂತಿಗೆ ಕಳುಹಿಸುವ ಸಾಧ್ಯತೆಗಳಿವೆ. ಬುಧವಾರ ಬೆಳಗ್ಗೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿ ಬಳಿಕ ಸಿಸಿಬಿ ಕಸ್ಟಡಿಗೆ ಪಡೆದು ವಿಚಾರಣೆ ಮುಂದುವರಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಕಟಕ್‌ನಲ್ಲಿ ಪಡೆದ ಟ್ರಾನ್ಸಿಟ್ ವಾರಂಟ್‌ಗೆ 24 ಗಂಟೆ ಕಾಲಾವಕಾಶ ಇರುವುದರಿಂದ ಬುಧವಾರ ಕೋರ್ಟ್‌ಗೆ ಹಾಜರುಪಡಿಸಲು ಅವಕಾಶವಿದೆ.
ಚೈತ್ರಾ ಕುಂದಾಪುರ ಫುಲ್ ಫುಷ್, ಕಾಲ ಮೇಲೆ ಕಾಲು ಹಾಕಿ…
ಇತ್ತ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನವಾಗುತ್ತಿದ್ದಂತೆಯೇ ಸಿಕ್ಕಾಪಟ್ಟೆ ಖುಷಿಪಟ್ಟಿದ್ದು ಚೈತ್ರಾ ಕುಂದಾಪುರ. ನಾನು ಎ1 ಆರೋಪಿಯಾಗಿದ್ದರೂ ಹಾಲಶ್ರೀ ಸ್ವಾಮೀಜಿ ಬಂಧನವಾದರೆ ಎಲ್ಲಾ ಫೋಕಸ್ ಅವರ ಮೇಲೆ ಶಿಫ್ಟ್ ಆಗುತ್ತದೆ ಎಂದು ಮೊದಲೇ ತಿಳಿದಿರುವ ಆಕೆ ಬಂಧನದ ಬಳಿದ ಮೊದಲ ಬಾರಿ ಮನಬಿಚ್ಚಿ ನಕ್ಕಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದ ನಾಟಕವಾಡಿ, ವಿಚಾರಣೆಗೆ ಸಹಕಾರ ನೀಡದೆ ಸತಾಯಿಸಿದ ಚೈತ್ರಾ ಕುಂದಾಪುರಳನ್ನು ಮಂಗಳವಾರವೂ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಯಿತು. ಆದರೆ, ಎಲ್ಲರ ಗಮನ ಸ್ವಾಮೀಜಿ ಮೇಲೆ ಇದ್ದಿದ್ದರಿಂದ ಸಾವಕಾಶವಾಗಿಯೇ ವಿಚಾರಣೆ ನಡೆದಿದೆ.
ಈ ನಡುವೆ ಸಂಜೆ ಸಿಸಿಬಿ ಕಚೇರಿಯಿಂದ ಸಾಂತ್ವನ ಕೇಂದ್ರಕ್ಕೆ ಹೊರಟ ಚೈತ್ರಾ ಕುಂದಾಪುರ ಮುಖದಲ್ಲಿ ನಗುವೋ ನಗು. ಸಿಸಿಬಿ ಪೊಲೀಸ್ರ ಜೀಪ್ ಏರುತ್ತಿದ್ದಂತೆಯೇ ಕಾಲಿನ ಮೇಲೆ ಕಾಲು ಹಾಕಿ ಕುಳಿತಿದ್ದಾಳೆ ಚೈತ್ರಾ ಕುಂದಾಪುರ. ಆಕೆ ಸಾಮಾನ್ಯವಾಗಿ ಮಾಸ್ಕ್ ಹಾಕಿಕೊಂಡು ಮುಖ ಮುಚ್ಚಿಕೊಂಡೇ ಇರುತ್ತಿದ್ದಳು. ಆದರೆ, ಇವತ್ತು ಪೂರ್ತಿ ಮುಖ ತೋರಿಸಿ, ಫುಲ್ ಸ್ಮೈಲ್ ಕೊಟ್ಟು ಬಳಿಕ ಮಾಸ್ಕ್ ಹಾಕಿಕೊಂಡಿದ್ದಾಳೆ.
ಸ್ವಾಮೀಜಿ ಸಿಕ್ಕಾಕಿಕೊಳ್ಳಿ ಎಲ್ಲಾ ಹೊರಗೆ ಬರ್ತದೆ ಅಂದಿದ್ದಳು
ಬಂಧನವಾಗಿ ಸಿಸಿಬಿ ಕಸ್ಟಡಿಗೆ ಸಿಕ್ಕಿದ ಮೊದಲ ದಿನ ಅಂದರೆ ಸೆಪ್ಟೆಂಬರ್ 14ರಂದು ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಬಂದ ದಿನ ಚೈತ್ರಾ ಕುಂದಾಪುರ ಒಂದು ಬಾಂಬ್ ಹಾಕಿದ್ದಳು. ಸ್ವಾಮೀಜಿ ಸಿಕ್ಕಾಕಿಕೊಳ್ಳಿ ಎಲ್ಲಾ ಸತ್ಯ ಹೊರಗೆ ಬರ್ತದೆ, ದೊಡ್ಡ ದೊಡ್ಡವರ ಹೆಸರೆಲ್ಲ ಹೊರಗೆ ಬರ್ತದೆ ಎಂದು ಹೇಳಿದ್ದಳು. ಈಗ ಸ್ವಾಮೀಜಿ ಸಿಕ್ಕಾಕಿಕೊಂಡಿದ್ದಾರೆ. ಏನೇನು ಹೊರಗೆ ಬರುತ್ತದೆ ಕಾದು ನೋಡಬೇಕು. ಚೈತ್ರಾ ಕುಂದಾಪುರ ನಗುವಂತೂ ಹೊರಗೆ ಬಂದಿದೆ.
ಇದನ್ನೂ ಓದಿ: Chaitra Kundapura : ಬಿಜೆಪಿ ಟಿಕೆಟ್ ವಂಚನೆ ಜಾಲದ ಹಿಂದೆ ದೊಡ್ಡ ದೊಡ್ಡವರಿದ್ದಾರಾ?; ಚೈತ್ರಾ ಕುಂದಾಪುರ ಸ್ಫೋಟಕ ಹೇಳಿಕೆ
ಕರ್ನಾಟಕ
Bangalore Bandh : ಬೆಂಗಳೂರು ಬಂದ್ ಸಕ್ಸಸ್; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ
Bangalore bandh : ಬೆಂಗಳೂರು ಬಂದ್ ಯಶಸ್ವಿಯಾಗಿ ಮುಕ್ತಾಯವಾಗಿದೆ. ಎಲ್ಲ ವ್ಯವಸ್ಥೆಗಳು ಇದ್ದರೂ ಜನರೇ ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ನೀಡಿದ್ದು ಕಂಡುಬಂತು.
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ತಮಿಳುನಾಡಿಗೆ ನೀರು ಬಿಡುಗಡೆ (Cauvery Water Dispute) ಮಾಡಲೇಬೇಕು ಎಂದು ಆದೇಶ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management authority) ಮತ್ತು ಅದು ಹೇಳಿದಂತೆ ನೀರು ಬಿಡುಗಡ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮಗಳನ್ನು ಖಂಡಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala samrakshana samiti) ಕರೆ ನೀಡಿದ್ದ ಮಂಗಳವಾರದ (ಸೆ. 26) ಬೆಂಗಳೂರು ಬಂದ್ (Bangalore bandh) ಯಶಸ್ವಿಯಾಗಿದೆ. ಯಾವುದೇ ಗೊಂದಲ, ಗಲಾಟೆ, ಹಿಂಸಾತ್ಮಕ ಘಟನೆಗಳಿಲ್ಲದೆ ಅದು ಸಫಲತೆಯನ್ನು ಕಂಡಿದೆ. ಆದರೆ, ಇದು ಸರ್ಕಾರದ ನಿರ್ಧಾರಗಳ ಮೇಲೆ ಪರಿಣಾಮ ಬೀರುತ್ತದೆಯೇ ಕಾದು ನೋಡಬೇಕು.
ಈ ಬಂದ್ ನೂರಾರು ಸಾಮಾಜಿಕ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ವ್ಯಾಪಾರಿಗಳು, ವಾಹನ ಮಾಲೀಕರೇ ಆದರೂ ಅಂತಿಮವಾಗಿ ಇದನ್ನು ಯಶಸ್ವಿಗೊಳಿಸಿದ್ದು ಜನ ಬೆಂಬಲ. ಯಾಕೆಂದರೆ, ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ ಇರುವುದರಿಂದ ಬೆಂಬಲ ನೀಡುವ ಸಂಘಟನೆಗಳಲ್ಲಿ ವಿಭಜನೆಯಾಗಿತ್ತು. ಕೆಲವರು ತಾವು ಈ ಬಂದ್‌ಗೆ ಬೆಂಬಲ ಕೊಡುವುದಿಲ್ಲ, ಸೆ. 29ರ ಬಂದ್‌ಗೆ ಬೆಂಬ ಕೊಡುವುದಾಗಿ ಪ್ರಕಟಿಸಿದ್ದರು. ಆದರೂ ಒಟ್ಟಾರೆ ಪರಿಣಾಮದಲ್ಲಿ ವ್ಯತ್ಯಾಸವಾಗಲಿಲ್ಲ. ಯಾಕೆಂದರೆ ಸಂಘಟನೆಗಳ ಹಂಗನ್ನು ಮೀರಿ ಜನರು ಈ ಬಂದ್‌ಗೆ ಮೌನ ಬೆಂಬಲವನ್ನು ಸೂಚಿಸಿದ್ದರು.
ಮುಂಜಾನೆಯಿಂದಲೇ ರಾಜಧಾನಿಯಲ್ಲಿ ಬಂದ್‌ನ ವಾತಾವರಣ ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಅಲ್ಲಲ್ಲಿ ಪ್ರತಿಭಟನೆಗಳು ನಡೆದವು. ಪ್ರತಿಭಟನೆಗೆ ಕರೆ ನೀಡಿದ ಸಂಘಟನೆಯ ಮುಖ್ಯಸ್ಥರಲ್ಲಿ ಒಬ್ಬರಾದ ಕುರುಬೂರು ಶಾಂತ ಕುಮಾರ್ ಅವರನ್ನೂ ಪೊಲೀಸರು ವಶಕ್ಕೆ ಪಡೆದರು. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಅಲ್ಲಿ ಸರ್ಕಾರದ ಮುಂದೆ ಬೇಡಿಕೆಗಳನ್ನು ಮಂಡಿಸಲಾಯಿತು. ಸರ್ಕಾರದ ಪರವಾಗಿ ಸಚಿವ ರಾಮಲಿಂಗಾ ರೆಡ್ಡಿ ಅವರು ಮನವಿ ಸ್ವೀಕರಿಸಿದರು. ಈ ಭರವಸೆಗಳ ಈಡೇರಿಕೆಗೆ ಮೂರು ದಿನಗಳ ಗಡುವನ್ನು ವಿಧಿಸಲಾಗಿದೆ.
ಎಲ್ಲ ವ್ಯವಸ್ಥೆಗಳಿದ್ದರೂ ಜನರೇ ರಸ್ತೆಗೆ ಬಂದಿಲ್ಲ
ನಿಜವೆಂದರೆ, ರಾಜಧಾನಿಯಲ್ಲಿ ಬಂದ್ ಘೋಷಣೆಯಾಗಿದ್ದರೂ ಬಸ್, ಮೆಟ್ರೋ ರೈಲು, ಆಟೊಗಳು, ಓಲಾ, ಊಬರ್ ಟ್ಯಾಕ್ಸಿಗಳು, ಹೋಟೆಲ್‌ಗಳು ತೆರೆದಿದ್ದವು. ಆದರೆ, ಅದನ್ನು ಬಳಸುವ ಜನರೇ ಇರಲಿಲ್ಲ.
ಬಿಎಂಟಿಸಿ ಬಸ್‌ಗಳು ಓಡಾಡಿದರೂ ಖಾಲಿಯಾಗಿದ್ದವು. ಮೆಟ್ರೋ ರೈಲು ಬಹುಭಾಗ ಖಾಲಿಯಾಗಿಯೇ ಓಡಾಡಿತು. ಆಟೊಗಳಲ್ಲಿ ಹೋಗುವವರು ಕಡಿಮೆ ಇದ್ದರು. ರೆಸ್ಟೋರೆಂಟ್‌ಗಳಲ್ಲಿ ಜನ ಸಂದಣಿ ಇರಲಿಲ್ಲ. ಅಂದರೆ ಇಷ್ಟೆಲ್ಲ ವ್ಯವಸ್ಥೆ ಇದ್ದರೂ ಜನರೇ ಮಂಗಳವಾರ ಕಾವೇರಿಗಾಗಿ ಒಂದು ದಿನ ಬಂದ್ ಎಂಬ ತೀರ್ಮಾನಕ್ಕೆ ಬಂದಿದ್ದರು. ಹೀಗಾಗಿ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಸರ್ಕಾರಿ ಕಚೇರಿಗಳಲ್ಲಿ ಜನ ಇರಲಿಲ್ಲ.
ಇದನ್ನೂ ಓದಿ: Bangalore Bandh : 13 ವಿಮಾನ ಸಂಚಾರ ಕ್ಯಾನ್ಸಲ್, ಮೆಟ್ರೋ ಫುಲ್ ಖಾಲಿ, ಬಿಎಂಟಿಸಿ ಬಸ್‌ಗಳಿವೆ, ಜನರೇ ಇಲ್ಲ
ವಿಶೇಷವೆಂದರೆ ಬೆಂಗಳೂರಿನಲ್ಲಿ ಮಂಗಳವಾರ ಬಂದ್ ನಡೆದೇ ನಡೆಯುತ್ತದೆ. ಅಲ್ಲಿ ಹೋಗಿ ಕಷ್ಟಕ್ಕೆ ಸಿಕ್ಕಿ ಹಾಕಿಕೊಳ್ಳುವುದು ಬೇಡ ಎಂದು ವಿಮಾನ ಪ್ರಯಾಣಿಕರು ನಿರ್ಧಾರ ಮಾಡಿದ ಪರಿಣಾಮವಾಗಿ ಬೆಂಗಳೂರಿಗೆ ಮಂಗಳವಾರ ಬರಬೇಕಾಗಿದ್ದ 13 ವಿಮಾನಗಳ ಸಂಚಾರವೇ ರದ್ದಾಗಿತ್ತು.
ಶಾಲೆ, ಕಾಲೇಜು ಬಂದ್; ಮಾಲ್, ಥಿಯೇಟರ್‌ಗಳ ಬೆಂಬಲ
ಈ ನಡುವೆ, ಬಂದ್ ನಿಮಿತ್ತ ಬೆಂಗಳೂರಿನ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಹೀಗಾಗಿ ಮಕ್ಕಳು ಮತ್ತು ಮನೆಯವರು ನಿರಾಳರಾಗಿದ್ದರು. ಇತ್ತ ದೊಡ್ಡ ದೊಡ್ಡ ಮಾಲ್‌ಗಳು ಬಂದ್‌ಗೆ ಬೆಂಬಲ ನೀಡಿದ್ದರು. ಚಿತ್ರೋದ್ಯಮದ ಬೆಂಬಲ ಇದ್ದಿದ್ದರಿಂದ ಸಿನಿಮಾ ಥಿಯೇಟರ್‌ಗಳು ಸಂಜೆವರೆಗೆ ಓಪನ್ ಆಗಲಿಲ್ಲ.
ಪೊಲೀಸ್ ಬಲ ಪ್ರಯೋಗದ ಆರೋಪ
ಇದರ ನಡುವೆ ಬಂದ್‌ನ್ನು ವಿಫಲಗೊಳಿಸಲು ಪೊಲೀಸ್ ಬಲ ಪ್ರಯೋಗ ಮಾಡಿದ ಆರೋಪ ಎದುರಾಗಿದೆ. ಬಲವಂತದ ಬಂದ್‌ಗೆ ಅವಕಾಶವಿಲ್ಲ, ಮೆರವಣಿಗೆ ನಡೆಸುವಂತಿಲ್ಲ, ಬಹಿರಂಗ ಪ್ರತಿಭಟನೆಗೆ ಅವಕಾಶವಿಲ್ಲ ಎಂಬ ನಿರ್ಬಂಧಗಳನ್ನು ಹಾಕಿದ ಪೊಲೀಸರು ಬಂದ್‌ನ ಮುನ್ನಾ ದಿನವೇ 1000ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದರು. ಇಷ್ಟೆಲ್ಲ ಮಾಡಿದರೂ ಬಂದ್ ಸಫಲವಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್‌ಗಳು ಸಂಘಟನೆಗಳನ್ನು ಅಭಿನಂದಿಸಿವೆ.
ಇನ್ನು ಸೆ. 29ರ ಬಂದ್. ಈಗ ಈ ಬಂದ್ ಮುಕ್ತಾಯವಾಗಿರುವಂತೆಯೇ ಸೆಪ್ಟೆಂಬರ್ 29ರ ಕರ್ನಾಟಕ ಬಂದ್‌ಗೆ ವೇದಿಕೆ ಸಿದ್ಧವಾಗಿದೆ. ಅಂದು ಪೂರ್ಣವಾಗಿ ಕರ್ನಾಟಕ ಬಂದ್ ಆಗಲಿದೆ ಎಂದಿದ್ದಾರೆ ವಾಟಾಳ್ ನಾಗರಾಜ್.
ಇದನ್ನೂ ಓದಿ: Bangalore Bandh: ಬೆಂಗಳೂರು ಬಂದ್ ಹತ್ತಿಕ್ಕಲು ಪೊಲೀಸ್ ಬಲ ಪ್ರಯೋಗ ನಡೆಯಿತೇ? ಕಮಿಷನರ್ ಹೇಳಿದ್ದೇನು?
ಕರ್ನಾಟಕ
Belagavi News: ಹಣಕಾಸು ವಿಚಾರಕ್ಕೆ ಯೋಧನಿಂದಲೇ ಯೋಧನ ಮೇಲೆ ಗುಂಡಿನ ದಾಳಿ
Belagavi News: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ರಾಜನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದು ಯೋಧ, ಮತ್ತೊಬ್ಬ ಯೋಧನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಬೆಳಗಾವಿ: ಹಣಕಾಸಿನ ವಿಚಾರಕ್ಕೆ ಯೋಧನ ಮೇಲೆ ಮತ್ತೊಬ್ಬ ಯೋಧ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ರಾಜನಕಟ್ಟೆ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಯೋಧನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಸುತ್ತಿರುವ ಬಸಪ್ಪ ಮೈಲಪ್ಪ ಬಂಬರಗಾ (32) ಗಾಯಾಳು ಯೋಧ. ನಂಜುಂಡಿ ಲಕ್ಷ್ಮಣ ಬೂದಿಹಾಳ (32) ಗುಂಡಿನ ದಾಳಿಗೈದ ಆರೋಪಿ. ಇಬ್ಬರೂ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಹಣಕಾಸಿನ ವಿಚಾರಕ್ಕೆ ನಡುವೆ ಗಲಾಟೆಯಾಗಿದೆ. ಈ ವೇಳೆ ಬಸಪ್ಪ ಮೈಲಪ್ಪ ಬಂಬರಗಾ ಮೇಲೆ ನಂಜುಂಡಿ ಲಕ್ಷ್ಮಣ ಬೂದಿಹಾಳ ಗುಂಡಿನ ದಾಳಿ ನಡೆಸಿದ್ದಾರೆ. ಹೀಗಾಗಿ ಗಾಯಾಳು ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ | Great robbery: ಅಂಗಡಿಯ ಗೋಡೆಗೆ ರಂಧ್ರ ಕೊರೆದು 25 ಕೋಟಿ ರೂ. ಮೌಲ್ಯದ ಆಭರಣ ದೋಚಿದ ಖತರ್ನಾಕ್ ಕಳ್ಳರು!
ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳ ಸಾವು
ಕಲಬುರಗಿ: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವುದು ನಗರದ ರಿಂಗ್ ರಸ್ತೆಯ ನಾಗನಹಳ್ಳಿ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ಮಂಗಳವಾರ ನಡೆದಿದೆ. ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಅಪಘಾತವಾಗಿದೆ (Bike Accident).
ಅಂಬಿಕಾ ನಗರದ ಅಲಿ ಅಬ್ಬಾಸ್ ಹಾಗೂ ರೆಹಮತ್ ನಗರದ ಇರ್ಫಾನ್ ಮೃತ ವಿದ್ಯಾರ್ಥಿಗಳು. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಬ್ಬಾಸ್ ಅಲಿ, ಸ್ನೇಹಿತ ಇರ್ಫಾನ್ ಜತೆ ಬೈಕ್‌ನಲ್ಲಿ ಪಾರ್ಟಿಗೆ ಹೊರಟಿದ್ದ. ವೇಗವಾಗಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಈ ವೇಳೆ ತಲೆಗೆ ಗಂಭೀರ ಗಾಯಗಳಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು 10ನೇ ತರಗತಿ ಓದುತ್ತಿದ್ದರು. ಸ್ಥಳಕ್ಕೆ ಸಂಚಾರ-2 ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ | Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ ಯುವಕನಿಗೆ ಯುವಕರಿಂದ ಥಳಿತ
ಯಾದಗಿರಿ: ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ ಯುವಕನಿಗೆ ಥಳಿಸಿರುವ ಘಟನೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ. ಕಬಡ್ಡಿ ಪಂದ್ಯದ ವೇಳೆ ದೈಹಿಕ ಶಿಕ್ಷಕ ಔಟ್ ಎಂದು ತೀರ್ಪು ನೀಡಿದ್ದಕ್ಕೆ ಕೋಪಗೊಂಡು ಯುವಕನೊಬ್ಬ, ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ. ಹೀಗಾಗಿ ಆತನ ಮೇಲೆ ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿದೆ. ಗಲಾಟೆ ಬಿಡಿಸಲು ಅಧಿಕಾರಿಗಳು, ಸಿಬ್ಬಂದಿ ಹರಸಾಹಸಪಟ್ಟರು.
ಕರ್ನಾಟಕ
Cauvery Dispute : 3000 ಕ್ಯೂಸೆಕ್ ನೀರು ಬಿಡುಗಡೆ ಆದೇಶವನ್ನೂ ಪಾಲಿಸುತ್ತಾ ಸರ್ಕಾರ?; ಸಿಎಂ ಹೇಳಿದ್ದೇನು?
Cauvery Dispute: 18 ದಿನಗಳ ಕಾಲ 3000 ಕ್ಯೂಸೆಕ್ ನೀರು ಬಿಡಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ರಾಜ್ಯ ಸರ್ಕಾರ ಪ್ರಾಧಿಕಾರದಲ್ಲಿ ಪ್ರಶ್ನಿಸುವುದು ಖಚಿತವಾಗಿದೆ. ಅದರೆ, ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿ ಎಂಬ ಒತ್ತಡವಿದೆ.
ಬೆಂಗಳೂರು: ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನವೂ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು (Cauvery Dispute) ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿ (Cauvery water regulation Committee) ಆದೇಶವನ್ನೂ ಈ ಹಿಂದಿನಂತೆ ರಾಜ್ಯ ಸರ್ಕಾರ (Karnataka Government) ಪಾಲನೆ ಮಾಡುತ್ತದಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಕಾವೇರಿ ನಿಗಮ ಇದನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ (Cauvery water Management Authority) ಪ್ರಶ್ನಿಸಲಾಗುವುದು ಎಂದು ಹೇಳಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕಾನೂನಾತ್ಮಕ ವಿಚಾರಗಳನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಸಮಿತಿ ಆದೇಶವನ್ನು ಪ್ರಾಧಿಕಾರದಲ್ಲಿ ಪ್ರಶ್ನೆ: ಕಾವೇರಿ ನೀರು ನಿಗಮ
ಕರ್ನಾಟಕ ತಾನು ಎದುರಿಸುತ್ತಿರುವ ಪರಿಸ್ಥಿತಿಯನ್ನು ವಿವರಿಸಿದರೂ ಸಮಿತಿ ನೀರು ಬಿಡಲೇಬೇಕು ಎಂದು ಪಟ್ಟು ಹಿಡಿದು ಆದೇಶ ನೀಡಿರುವುದನ್ನು ಪ್ರಾಧಿಕಾರದ ಮುಂದೆ ಪ್ರಶ್ನೆ ಮಾಡಲಿದ್ದೇವೆ ಎಂದು ಕಾವೇರಿ ನೀರು ನಿಗಮದ ವ್ಯವಸ್ಥಾಪನಾ ನಿರ್ದೇಶಕ ಮಹೇಶ ಅವರು ಹೇಳಿದ್ದಾರೆ.
ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ಹೇಳಿದ್ದೆವು. ಆದರೂ ನೀರು ಹರಿಸಲು ಸೂಚನೆ ನೀಡಿದ್ದಾರೆ. ಹೀಗಾಗಿ ನಾವು ಆದೇಶವನ್ನು ಪ್ರಶ್ನೆ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.
ಕಾವೇರಿ ನೀರು ನಿಯಂತ್ರಣ ಮಂಡಳಿಯು ಸೆ. 13ರಂದು ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿತ್ತು. ಮುಂದಿನ ಪ್ರಾಧಿಕಾರ ಸಭೆ ಮತ್ತು ಸುಪ್ರೀಂಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಇದನ್ನು ಎತ್ತಿಹಿಡಿಯಲಾಗಿತ್ತು. ಈ ಆದೇಶ ಸೆ. 28ರವರೆಗೆ ಅನ್ವಯವಾಗಿತ್ತು.
ಈ ನಡುವೆ, ರಾಜ್ಯದಿಂದ ಕಾವೇರಿ ನೀರು ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿ ಬೆಂಗಳೂರು ಬಂದ್ ಮತ್ತು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಅದರ ನಡುವೆಯೇ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯು ಮತ್ತೆ 18 ದಿನಗಳ ಕಾಲ ಪ್ರತಿ ದಿನ 3000 ಕ್ಯೂಸೆಕ್ ನೀರು ಬಿಡುಗಡೆಗೆ ಆದೇಶಿಸಿದೆ.
ಇದನ್ನೂ ಓದಿ: Bangalore Bandh: ಸು.ಕೋರ್ಟ್ ಗಮನ ಸೆಳೆಯಲು ಬೀದಿ ಹೋರಾಟವೇ ಬೇಕು; ಬಂದ್ ಸಮರ್ಥಿಸಿದ ಬೊಮ್ಮಾಯಿ
ಕರ್ನಾಟಕವು ರಾಜ್ಯದಲ್ಲಿ ಬರದ ಪರಿಸ್ಥಿತಿ ಇರುವುದು, 195 ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಕಾವೇರಿ ಕೊಳ್ಳದ ಬಹುತೇಕ ತಾಲೂಕುಗಳು ಬರ ಎದುರಿಸುತ್ತಿರುವುದು, ನೀರಿನ ಒಳಹರಿವು ಕಡಿಮೆಯಾಗುತ್ತಿರುವುದು ಮೊದಲಾದ ಎಲ್ಲ ಸಂಗತಿಗಳನ್ನು ವಿವರಿಸಿತ್ತು. ಆದರೂ ಸಮಿತಿ ನೀರು ಬಿಡುಗಡೆ ಮಾಡಲೇಬೇಕು ಎಂದು ತಿಳಿಸಿರುವುದರಿಂದ ಅದನ್ನು ಪ್ರಾಧಿಕಾರದಲ್ಲಿ ಪ್ರಶ್ನೆ ಮಾಡಲಾಗುತ್ತದೆ ಎಂದು ಮಹೇಶ್ ತಿಳಿಸಿದರು.
ಕಾನೂನಾತ್ಮಕ ಕ್ರಮಗಳ ಬಗ್ಗೆ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಈ ನಡುವೆ, ತಮಿಳುನಾಡಿಗೆ 300 ಕ್ಯೂಸೆಕ್ಸ್ ನೀರು ಹರಿಸುವ ಕುರಿತು ಸಮಿತಿ ಯ ತೀರ್ಪಿನ ಕುರಿತು ನಮ್ಮ ಕಾನೂನು ತಂಡದ ತಜ್ಞರೊಂದಿಗೆ ಕಾನೂನಾತ್ಮಕವಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮೈಸೂರಿನಲ್ಲಿ ಈ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಕಾವೇರಿ ನೀರು ನಿಯಂತ್ರಣ ಸಮಿತಿಯು 15 ದಿನಗಳವರೆಗೆ ಪುನಃ 3000 ಕ್ಯೂಸೆಕ್ಸ್ ನೀರು ಬಿಡಬೇಕೆಂದು ಆದೇಶ ಮಾಡಿದ್ದು, ಸೆಪ್ಟೆಂಬರ್ 27 ರವರೆಗೆ ಆದೇಶ ಜಾರಿಯಲಿದೆ. ಚರ್ಚಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಸುಪ್ರೀಂಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಕೆಗೆ ಸಲಹೆ
ಈ ನಡುವೆ, ಬಿಜೆಪಿ ಮತ್ತು ಜಾತ್ಯತೀತ ಜನತಾದಳಗಳು ಈ ಆದೇಶವನ್ನು ಒಪ್ಪಬಾರದು, ಸಮಿತಿ ಅಸಂಬದ್ಧ ಆದೇಶಗಳ ವಿರುದ್ಧ ನಾವೇ ಮೊದಲಾಗಿ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ದಾವೆಯನ್ನು ಸಲ್ಲಿಸಬೇಕು. ಆಗ ನಮ್ಮ ಅಂಶಗಳನ್ನು ಸ್ಪಷ್ಟವಾಗಿ ವಾದ ಮಾಡಲು ಅವಕಾಶವಾಗುತ್ತದೆ ಎಂದು ಹೇಳಿವೆ.
ಕರ್ನಾಟಕ
BJP Protest: ಕೋಲಾರ ಸಂಸದ ಮುನಿಸ್ವಾಮಿ ಜತೆ ಅನುಚಿತ ವರ್ತನೆಗೆ ಆಕ್ರೋಶ; ಶಾಸಕ, ಎಸ್‌ಪಿ ವಿರುದ್ಧ ಬಿಜೆಪಿ ಪ್ರತಿಭಟನೆ
BJP Protest: ಕೋಲಾರ ಸಂಸದ ಎಸ್.ಮುನಿಸ್ವಾಮಿ ಅವರ ಜತೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹಾಗೂ ಎಸ್‌ಪಿ ನಾರಾಯಣ್ ಅನುಚಿತ ವರ್ತನೆಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಕೋಲಾರ: ಜನತಾ ದರ್ಶನ ಸಭೆಯಲ್ಲಿ ಸಂಸದ ಎಸ್.ಮುನಿಸ್ವಾಮಿ ಅವರ ಜತೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹಾಗೂ ಎಸ್‌ಪಿ ನಾರಾಯಣ್ ಅನುಚಿತ ವರ್ತನೆ ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ (BJP Protest) ನಡೆಸಿದರು.
ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸಂಸದರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅನುಚಿತವಾಗಿ ವರ್ತಿಸಿದ್ದಾರೆ. ಈ ವೇಳೆ ಸಂಸದರನ್ನು ಹಿಡಿದು ಎಳೆದಾಡಿದ ಜಿಲ್ಲಾ ಎಸ್ಪಿ ನಾರಾಯಣ್ ವರ್ತನೆ ಖಂಡನೀಯ. ಕಾಂಗ್ರೆಸ್ ಸರ್ಕಾರ ಹಾಗೂ ಜಿಲ್ಲಾ ಪೋಲಿಸ್ ಅಧಿಕಾರಿಗಳು ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಕಾಯಕರ್ತರು ಆರೋಪಿಸಿದರು.
ಇದನ್ನೂ ಓದಿ | Cauvery water dispute : ತಮಿಳುನಾಡು ಬೇಡಿಕೆ ತಿರಸ್ಕಾರ ಮಾಡಿದ್ದು ಸಂತಸ ತಂದಿದೆ: ಡಿ.ಕೆ. ಶಿವಕುಮಾರ್
ಚಿಂತಾಮಣಿ, ಶಿಡ್ಲಘಟ್ಟದಲ್ಲೂ ಅಕ್ರೋಶ
ಚಿಕ್ಕಬಳ್ಳಾಪುರ: ಸಂಸದ ಎಸ್. ಮುನಿಸ್ವಾಮಿ ಅವರೊಂದಿಗೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹಾಗೂ ಕೋಲಾರ ಎಸ್‌ಪಿ ನಾರಾಯಣ್ ಅನುಚಿತ ವರ್ತನೆಗೆ ವಿರೋಧಿಸಿ ಜಿಲ್ಲೆಯ ಚಿಂತಾಮಣಿ ಹಾಗೂ ಶಿಡ್ಲಘಟ್ಟದಲ್ಲೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಿಂತಾಮಣಿಯಲ್ಲಿ ಬಿಜೆಪಿ ಮುಖಂಡ ಜಿ.ಎನ್.ವೇಣುಗೋಪಾಲ್ ನೇತೃತ್ವದಲ್ಲಿ ಪ್ರತಿಭಟನೆ ಕಾರ್ಯಕರ್ತರು, ಎಸ್‌ಪಿ ನಾರಾಯಣ್ ಹಾಗು ಶಾಸಕ ಎಸ್.ಎನ್. ನಾರಾಯಣಸ್ವಾಮಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಹಾಗೆಯೇ ಶಿಡ್ಲಘಟ್ಟದಲ್ಲೂ ಬಿಜೆಪಿ ಮುಖಂಡ ರಾಮಚಂದ್ರೇಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹಾಗೂ ಕೋಲಾರ ಎಸ್‌ಪಿ ನಾರಾಯಣ್ ವಿರುದ್ಧ ತಹಸೀಲ್ದಾರ್ ಹಾಗೂ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.
ಸ್ಪೀಕರ್, ರಾಜ್ಯಪಾಲರಿಗೆ ದೂರು ನೀಡುತ್ತೇನೆ ಎಂದ ಸಂಸದ
ಕೋಲಾರ: ಅನುಚಿತ ವರ್ತನೆ ತೋರಿದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹಾಗೂ ಎಸ್‌ಪಿ ನಾರಾಯಣ್ ಅವರ ಮೇಲೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುತ್ತೇನೆ. ಎಸ್‌ಪಿ ಕಾಂಗ್ರೇಸ್ ಏಜೆಂಟರಂತೆ ವರ್ತಿಸುತ್ತಿದ್ದು, ಅವರ ವಿರುದ್ಧ ಹಕ್ಕು ಚ್ಯುತಿ ಮಂಡಿಸಲಾಗುವುದು ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.
ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಎಸ್.ಎನ್.ನಾರಾಯಣಸ್ವಾಮಿ ಅವರು ನನಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ, ಕೋಲಾರದಲ್ಲಿ 15 ಕೊಲೆ ನಡೆದಿದ್ದು, ವೇಶ್ಯಾವಾಟಿಕೆ, ಜೂಜು, ಬೆಟ್ಟಿಂಗ್ ದಂಧೆ ಜೋರಾಗಿದೆ. ಅವ್ಯಾಚ್ಯ ಶಬ್ದಗಳಿಂದ ಬೈದವರನ್ನು ಬಿಟ್ಟು, ಕಾಂಗ್ರೆಸ್‌ನವರಿಂದ ಶಹಬ್ಬಾಸ್ ಗಿರಿ ಗಿಟ್ಟಿಸಿಕೊಳ್ಳಲು ಎಸ್‌ಪಿ ನನ್ನನ್ನು ಹೊರಗೆ ಕಳುಹಿಸಿದ್ದಾರೆ. ಕಾಂಗ್ರೆಸ್ ಏಜೆಂಟ್‌ನಂತಿರುವ ಎಸ್‌ಪಿ ನಾರಾಯಣ್ ನಮ್ಮ ಜಿಲ್ಲೆಗೆ ಬೇಕಾಗಿಲ್ಲ ಎಂದು ಕಿಡಿಕಾರಿದರು.
ಚುನಾವಣೆಗೆ ಬರಬಾರದೆಂದು ಅಂಬೇಡ್ಕರ್ ಅವರನ್ನು ಆಗ ಕಾಂಗ್ರೆಸ್ ಪಿತೂರಿ ಮಾಡಿ ತುಳಿಯಿತು. ಹಾಗೆಯೇ ಕೋಲಾರದಲ್ಲಿ ನನ್ನ ವಿರುದ್ಧ ಪಿತೂರಿ ಮಾಡಲು ಮುಂದಾಗಿದ್ದಾರೆ. ದಲಿತ ಸಂಸದರಾದ ನನಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ | Cauvery water dispute : ಕಾವೇರಿ ಪ್ರಾಧಿಕಾರದ ಆದೇಶ ಕರ್ನಾಟಕಕ್ಕೆ ಮರಣ ಶಾಸನವೆಂದ ಬಿಎಸ್‌ವೈ
ಏನಿದು ಘಟನೆ?
ಕೋಲಾರದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಎಸ್.ಮುನಿಸ್ವಾಮಿ ಮತ್ತು ಬಂಗಾರಪೇಟೆ ಶಾಸಕ ಎಸ್.ನಾರಾಯಣಸ್ವಾಮಿ ನಡುವೆ ಜಟಾಪಟಿ ನಡೆಯಿತು. ವೇದಿಕೆ ಮೇಲೆಯೇ ಏಕವಚನದಲ್ಲಿ ಜನಪ್ರತಿನಿಧಿಗಳು ನಿಂದಿಸಿಕೊಂಡರು.
ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆದ ಜನತಾ ದರ್ಶನದಲ್ಲಿ ಮೊದಲಿಗೆ ಸಂಸದ ಎಸ್.ಮುನಿಸ್ವಾಮಿ ಅವರು ಭೂಗಳ್ಳರನ್ನು ಪಕ್ಕದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ಮಾಡುತ್ತಿದ್ದೀರಾ ಎಂದು ಕ್ಯಾತೆ ತೆಗೆದಿದ್ದಾರೆ. ಈ ವೇಳೆ ಕೆರಳಿದ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣ ಸ್ವಾಮಿ ಅವರು, ಯಾರು ಭೂಗಳ್ಳ, ನಿಮ್ಮಪ್ಪ ಭೂಗಳ್ಳ, ಯಾರಿಗೆ ಹೇಳ್ತಿಯಾ? ನಿಮ್ಮಪ್ಪನಿಗೆ ಹುಟ್ಟಿದ್ದರೆ ಸಾಬೀತು ಮಾಡು ಎಂದು ಸಂಸದ ಎಸ್. ಮುನಿಸ್ವಾಮಿ ಅವರಿಗೆ ಏಕವಚನದಲ್ಲಿಯೇ ಸವಾಲು ಹಾಕಿದರು. ಇದರಿಂದ ಸಂಸದ ಹಾಗೂ ಶಾಸಕನ ನಡುವಿನ ಗಲಾಟೆ ತಾರಕಕ್ಕೇರಿತು.
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಸಮ್ಮುಖದಲ್ಲಿ ಗಲಾಟೆ ಜೋರಾಗಿದ್ದರಿಂದ ಎಸ್‌ಪಿ ನಾರಾಯಣ್ ಅವರು ಸಂಸದ ಮುನಿಸ್ವಾಮಿ ಅವರನ್ನು ತಡೆದು ಹೊರಗೆ ಕಳುಹಿಸಿದರು. ಇಬ್ಬರು ಜನಪ್ರತಿನಿಧಿಗಳನ್ನು ಸಮಾಧಾನ ಪಡಿಸಲು ಪೊಲೀಸರು ಹರಸಾಹಸಪಟ್ಟರು.
-
Live News15 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ5 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ22 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ
-
South Cinema8 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಕ್ರಿಕೆಟ್21 hours ago
Babar Azam: ಆಡಿ ಕಾರ್ ಓವರ್ಸ್ಪೀಡ್ ಓಡಿಸಿ, ದಂಡ ಕಟ್ಟಿದ ಪಾಕ್ ಕ್ರಿಕೆಟ್ ಟೀಂ ನಾಯಕ ಬಾಬರ್ ಅಜಮ್!
-
ದೇಶ22 hours ago
MP Assembly Election: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್, ಮೂವರು ಕೇಂದ್ರ ಸಚಿವರು, ಹಲವು ಸಂಸದರು ಕಣಕ್ಕೆ!
-
ದೇಶ24 hours ago
Sanatan Dharma row: ತಮಿಳುನಾಡು ಸಿಎಂ ಪುತ್ರ ಉದಯನಿಧಿ ವಿರುದ್ಧ ದಿಲ್ಲಿಯಲ್ಲಿ ಸಂತರ ಪ್ರತಿಭಟನೆ, ಕ್ರಮಕ್ಕೆ ಆಗ್ರಹ
-
ಕರ್ನಾಟಕ8 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!