ಬೆಂಗಳೂರು: ಒಕ್ಕಲಿಗ ಯುವ ಬ್ರಿಗೇಡ್ ಹಾಗೂ NRI ಒಕ್ಕಲಿಗರ ಬ್ರಿಗೇಡ್ ವತಿಯಿಂದ ಬಿಲ್ವ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಯೋಗದಲ್ಲಿ ಏಪ್ರಿಲ್ 14ರಂದು ಬೆಳಗ್ಗೆ 10 ಗಂಟೆಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು (Health Camp) ನಗರದ ಪ್ಯಾಲೆಸ್ ಗುಟ್ಟಹಳ್ಳಿಯ ವಿನಾಯಕ ಸರ್ಕಲ್ ಹತ್ತಿರದ 2ನೇ ಮುಖ್ಯರಸ್ತೆಯ ಬಿಲ್ವ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್‌ನಲ್ಲಿ ಆಯೋಜಿಸಲಾಗಿದೆ.
ಈ ಬಗ್ಗೆ ಒಕ್ಕಲಿಗ ಯುವ ಬ್ರಿಗೇಡ್ ಹಾಗೂ NRI ಒಕ್ಕಲಿಗರ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಅವರು ಮಾಹಿತಿ ನೀಡಿದ್ದಾರೆ. ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠದ ಗೌರವ ಕಾರ್ಯದರ್ಶಿ ಶ್ರೀ ಸೌಮ್ಯನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ವಿಜಯ ಕರ್ನಾಟಕ ಸಂಪಾದಕ ಸುದರ್ಶನ್ ಚೆನ್ನಂಗಿಹಳ್ಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನೂ ಓದಿ | Fasting Tips: ನೀವು ಆಗಾಗ ಉಪವಾಸ ಮಾಡುತ್ತೀರಾ? ಹಾಗಾದರೆ ಇದನ್ನು ಓದಿ!
ಮುಖ್ಯ ಅತಿಥಿಗಳಾಗಿ ಸಹಾಯಕ ಪೊಲೀಸ್ ಆಯುಕ್ತ ರವಿ. ಪಿ, ವಿಸ್ತಾರ ನ್ಯೂಸ್ ಡಿಜಿಟಲ್ ವಿಭಾಗದ ಸಂಪಾದಕ ರಮೇಶ್ ಕುಮಾರ್ ನಾಯಕ್, ಮುಖ್ಯ ಎಂಜಿನಿಯರ್ ಬಿ. ಕೆ. ಪವಿತ್ರ, ವಿಶ್ವವಾಣಿ ಉಪ ಮುಖ್ಯ ಸಂಪಾದಕ ರಂಜಿತ್ ಎಚ್. ಅಶ್ವತ್ಥ್ , ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ. ಟಿ. ಆರ್. ಚಂದ್ರಶೇಖರ್, ಬಿಲ್ವ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಕೇಶವ ಮೂರ್ತಿ, ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ.ಗೋಪಿನಾಥ್ ರಾಮಯ್ಯ ಉಪಸ್ಥಿತರಿರಲಿದ್ದಾರೆ.