Rain news | ದಾಖಲೆಯ ಮಳೆಗೆ ತತ್ತರಿಸಿದ ಬೆಂಗಳೂರು, ಜನಜೀವನ ಅಸ್ತವ್ಯಸ್ತ - Vistara News

ಪ್ರಮುಖ ಸುದ್ದಿ

Rain news | ದಾಖಲೆಯ ಮಳೆಗೆ ತತ್ತರಿಸಿದ ಬೆಂಗಳೂರು, ಜನಜೀವನ ಅಸ್ತವ್ಯಸ್ತ

ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ರಾತ್ರಿಯಡೀ ಸುರಿದ ಮಳೆ ಬೆಳಗ್ಗೆ ನಿಂತಿದ್ದರೂ, ಅನಾಹುತ ಹಲವು ಬಡಾವಣೆಗಳನ್ನು ತೀವ್ರ ಕಾಡುತ್ತಿದೆ.

VISTARANEWS.COM


on

Rain In Bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಇಡೀ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಗ್ಗೆ ಮಳೆಯ ಆರ್ಭಟ ಕಡಿಮೆಯಾಗಿದ್ದರೂ, (Rain news) ಮಳೆ ಸೃಷ್ಟಿಸಿರುವ ಅನಾಹುತ ನಾನಾ ಬಡಾವಣೆಗಳಲ್ಲಿ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಕಳೆದ ಎಂಟು ವರ್ಷಗಳಲ್ಲಿಯೇ ಈ ರೀತಿಯ ಮಳೆ ಸುರಿದಿರಲಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ನಗರದ ಸರ್ಜಾಪುರ ರಸ್ತೆಯ ರೈನ್‌ ಬೋ ಲೇಔಟ್ ಸಂಪೂರ್ಣ ಜಲವೃತವಾಗಿದೆ. ಸರ್ಜಾಪುರ ರಸ್ತೆಯ ವಿಪ್ರೊ ಕಂಪನಿಯ ಕ್ಯಾಂಪಸ್ ಸೇರಿದಂತೆ ಇಡೀ ಪ್ರದೇಶ ಜಲಾವೃತವಾಗಿದೆ. ತಗ್ಗುಪ್ರದೇಶಗಳಲ್ಲಿ ಹಲವು ಅಡಿಗಳೆತ್ತರಕ್ಕೆ ನೀರು ತುಂಬಿದ್ದು, ಜನರು ಮತ್ತು ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ.

ಮೆಜೆಸ್ಟಿಕ್, ಕೆ. ಅರ್. ಮಾರ್ಕೆಟ್‌, ವಿಧಾನಸೌಧ, ಕೆ. ಆರ್. ಸರ್ಕಲ್, ಶಾಂತಿನಗರ, ಮಹಾಲಕ್ಷ್ಮಿ ಲೇಔಟ್ ಸೇರಿದಂತೆ ಹಲವು ಕಡೆ ಬಾರಿ ಮಳೆಯಾಗಿದೆ. ಶಾಂತಿನಗರ , ಡಬಲ್ ರೋಡ್, ಕೆ.ಅರ್ ಮಾರ್ಕೆಟ್‌, ಬ್ರಿಗೇಡ್ ರೋಡ್ , ಹಲಸೂರು ರಸ್ತೆ, ಬನಶಂಕರಿಯಲ್ಲಿ ಮಳೆಯಿಂದ ರಸ್ತೆಗಳು ಜಲಾವೃತವಾಗಿವೆ. ರಿಚ್ಮಂಡ್‌ ರಸ್ತೆಯಲ್ಲಿ ಒಂದು ಅಡಿಯಷ್ಟು ನೀರು ತುಂಬಿದೆ. ಮಹಾಲಕ್ಷ್ಮಿ ಲೇಔಟ್‌ನ ಸೋಮೇಶ್ವರ ನಗರದಲ್ಲಿ ರಸ್ತೆಗೆ ಮರ ಬಿದ್ದಿದೆ. ಬೆಳ್ಳಂದೂರು ಬಳಿ ವಾಹನ ಸವಾರರು ವಾಹನಗಳನ್ನು ರಸ್ತೆಯಲ್ಲೇ ಬಿಟ್ಟು ಹೋಗುವಂತಾಯಿತು.

ರೈನ್‌ಬೊ ಲೇಔಟ್ ಪಕ್ಕದಲ್ಲಿ‌ ಇರುವ ಲೇಔಟ್ ನಲ್ಲಿ ಸುಮಾರು 100 ಹೆಚ್ಚು ಮನೆಗಳಿಗೆ ನೀರು…ನುಗ್ಗಿದೆ. ಮನೆಗಳ‌ ಮುಂದೆ ನಿಂತಿರುವ ವಾಹನಗಳು ಜಲವೃತವಾಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಿ ಇನ್ನೂ ಕೆಲ ದಿನ ಮಳೆಯನ್ನು ನಿರೀಕ್ಷಿಸಲಾಗಿದೆ.

ಲಹರಿ ಮ್ಯೂಸಿಕ್ ಮಾಲೀಕ ಲಹರಿ ವೇಲು ಅವರ ಮನೆಗೂ ಮಳೆ ನೀರು ನುಗ್ಗಿದೆ. ಪಾರ್ಕಿಂಗ್ ಜಾಗದಲ್ಲಿ ನೀರು ತುಂಬಿದೆ. ಡಾಲರ್ಸ್ ಕಾಲೋನಿಯಲ್ಲಿ ಲಹರಿ ವೇಲು ನಿವಾಸವಿದೆ. ಮನೆಯ ಪಾರ್ಕಿಂಗ್ ನಿಂದ ನೀರನ್ನು ಸಿಬ್ಬಂದಿ ಹೊರಹಾಕಿದರು. ನಾಲ್ಕೈದು ಅಡಿ ನೀರು ನಿಂತು ಅವಾಂತರ ಸೃಷ್ಟಿಯಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ತದಿಗೆ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವೂ ಧನಸ್ಸು ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು. ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣಲಿದ್ದಿರಿ. ಉತ್ಸಾಹದ ಭರದಲ್ಲಿ ಆಶ್ವಾಸನೆ ನೀಡುವುದು ಅಪಾಯ ತರುವ ಸಾಧ್ಯತೆಗಳು ಹೆಚ್ಚು, ಎಚ್ಚರಿಕೆಯಿಂದ ಇರಿ. ಮಿಥುನ ರಾಶಿಯವರು ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜತೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 08:17 07:45 ವಾರ: ಶನಿವಾರ
ನಕ್ಷತ್ರ: ಜ್ಯೇಷ್ಟ 28:27 ಯೋಗ: ಪರಿಘ 27:22
ಕರಣ: ಗರಜ 07:45 ಅಮೃತಕಾಲ: ರಾತ್ರಿ 07:22 ರಿಂದ 09:01
ದಿನದ ವಿಶೇಷ: ಸಂಕಷ್ಟಹರ ಚತುರ್ಥಿ, ಸಂಗಮೇಶ್ವರ ರಥೋತ್ಸವ

ಸೂರ್ಯೋದಯ : 06:01   ಸೂರ್ಯಾಸ್ತ : 06:34

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ
6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು. ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣಲಿದ್ದಿರಿ. ಉತ್ಸಾಹದ ಭರದಲ್ಲಿ ಆಶ್ವಾಸನೆ ನೀಡುವುದು ಅಪಾಯ ತರುವ ಸಾಧ್ಯತೆಗಳು ಹೆಚ್ಚು, ಎಚ್ಚರಿಕೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಧ್ಯಮ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಹೂಡಿಕೆ ವ್ಯವಹಾರದ ಕುರಿತು ಆಲೋಚನೆ ಮಾಡುವಿರಿ. ವ್ಯಾಪಾರ ವ್ಯವಹಾರದ ಕುರಿತಾಗಿ ಬೆಳೆಸಿದ ಪ್ರಯಾಣ ಲಾಭ ತಂದುಕೊಡಲಿದೆ. ಉದ್ಯೋಗಿಗಳಿಗೆ ಮೆಚ್ಚುಗೆ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜತೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯೆಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಸೃಜನಾತ್ಮಕ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಯಶಸ್ವಿ ದಿನ. ಭೂಮಿ ಸಂಬಂಧ ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ದಿನಕ್ಕಿಂತ ಹೆಚ್ಚಿನ ಸಂತೋಷ ಸಿಗಲಿದೆ. ಆರ್ಥಿಕ ಚಟುವಟಿಕೆಗೆ ಗರಿಗೆದರಲಿದೆ. ದಿನದ ಕೊನೆಯಲ್ಲಿ ಕೌಟುಂಬಿಕ ಕಲಹಗಳು ನಡೆಯುವ ಸಾಧ್ಯತೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಒತ್ತಡ ತುಂಬಿದ ವಾತಾವರಣ ಇರಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಹೆಚ್ಚಿನ ಲಾಭ ಸಿಗಲಿದೆ. ಕುಟುಂಬ ಸಹಿತರಾಗಿ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು.
ಆರೋಗ್ಯದ ಕುರಿತು ಕಾಳಜಿ ಇರಲಿ.ಉದ್ಯೋಗಿಗಳಿಗೆ ಮಿಶ್ರ ಫಲ.ಆರ್ಥಿಕ ಪ್ರಗತಿ ಸಾಧಾರಣ.
ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ.ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಸಂಬಂಧ ಪಡದೆ ಇರುವ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಟೀಕೆಗಳನ್ನು ಎದಿರಿಸಬೇಕಾದಿತು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ. ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆಲೋಚಿಸಿ ಹೆಜ್ಜೆ ಇಡಿ.ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಕರ್ನಾಟಕ

Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

Lok Sabha Election 2024: ಬಳ್ಳಾರಿಯನ್ನು ಜೀನ್ಸ್ ಕ್ಯಾಪಿಟಲ್ ಮಾಡುವುದಾಗಿ ಭರವಸೆ ನೀಡಿದ್ದೆ. ಇದನ್ನು ನಿಜ ಮಾಡಿ ತೋರಿಸುತ್ತೇನೆ. ಈ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದ್ದಾರೆ.

VISTARANEWS.COM


on

Congress leader Rahul Gandhi speech in Ballari
Koo

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿಯವರ ʼಭಾರತೀಯ ಚೊಂಬು ಪಾರ್ಟಿʼ ದೇಶ, ರಾಜ್ಯಕ್ಕೆ ಖಾಲಿ ಖಾಲಿ ಚೊಂಬು ಕೊಟ್ಟಿದ್ದಾರೆ. ಬರ ಪರಿಹಾರ ನೀಡುವಲ್ಲಿಯೂ ಕರ್ನಾಟಕಕ್ಕೆ ಖಾಲಿ ಚೊಂಬು ನೀಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ (Lok Sabha Election 2024) ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಮಾತನಾಡಿದರು.

ಈ ಚುನಾವಣೆಯು ಸಂವಿಧಾನ ರಕ್ಷಣೆ ಮಾಡುವುದಕ್ಕೆ ನಡೆಯುತ್ತಿರುವ ಚುನಾವಣೆಯಾಗಿದೆ. ಈ ಬಾರಿ ಬಿಜೆಪಿಗೆ ಅಧಿಕಾರ ಕೊಟ್ಟರೆ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳುತ್ತಾರೆ. ಆದರೆ ಸಂವಿಧಾನ ಬದಲಾಯಿಸುವ ಶಕ್ತಿ ಯಾರಿಗೂ ಇಲ್ಲ ಎಂದ ಅವರು, ಕಾಂಗ್ರೆಸ್, ಇಂಡಿಯಾ ಒಕ್ಕೂಟ ಸಂವಿಧಾನ ಉಳಿಸುವ ಕೆಲಸ ಮಾಡುತ್ತಿದೆ ಎಂದರು.

ಇದನ್ನೂ ಓದಿ: Lok Sabha Election : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ; ದಾಖಲೆ ಪ್ರಮಾಣದಲ್ಲಿ ಮತ ಚಲಾವಣೆ

ಬಿಜೆಪಿಯು ಅದಾನಿಯಂತಹ ಜನರಿಗೆ ದೇಶದ ಹಣ ಕೊಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಸಿರಿವಂತರಿಗೆ ಹಣ ಕೊಟ್ಟರೆ, ನಾವು ಬಡವರಿಗೆ ಹಣ ಕೊಡುತ್ತೇವೆ ಎಂದು ತಿಳಿಸಿದರು.

ಮೋದಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ನರೇಂದ್ರ ಮೋದಿ ಅವರು ಕೋವಿಡ್‌ನಂತೆ ನಿರುದ್ಯೋಗವನ್ನು ತಂದಿದ್ದಾರೆ. ಕೊರೊನಾ ಓಡಿಸಲು ದೇಶದ ಜನತೆಗೆ ರಸ್ತೆಯಲ್ಲಿ ನಿಂತು ಗಂಟೆ ಜಾಗಟೆ ಭಾರಿಸಿ ಎಂದಿದ್ದರು, ಈಗ ನಿರುದ್ಯೋಗಿಗಳಿಗೆ ರಸ್ತೆ ಬದಿ ಪಕೋಡ ಮಾರಾಟ ಮಾಡಿ ಎನ್ನುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್‌ನಿಂದ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸುವ ಹೊಸ ಯೋಜನೆ ರೂಪಿಸಲಾಗುವುದು ಎಂದರು.

ಇದನ್ನೂ ಓದಿ: Lok Sabha Election 2024: ಮತದಾನ ಬಹಿಷ್ಕರಿಸಿದ್ದ 2 ಗ್ರಾಮದ ಜನ, ಸಂಜೆಗೆ ಮನವೊಲಿಕೆ; 7 ಗಂಟೆ ದಾಟಿದರೂ ಮುಗಿಯದ ಮತದಾನ

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಇಡೀ ದೇಶದ ಜನತೆಗೆ ದಾರಿ ತೋರಿಸಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ ಮೂಲಕ ರಾಜ್ಯದ ಜನತೆಗೆ ನೀಡುತ್ತಿದೆ. ಈವರೆಗೂ ಯಾವುದೇ ಸರ್ಕಾರ ಈ ಯೋಜನೆಗಳನ್ನು ನೀಡಿಲ್ಲ ಎಂದ ಅವರು, ಪ್ರತಿ ಬಡ ಕುಟುಂಬದ ಮಹಿಳೆಯನ್ನು ಆಯ್ಕೆ ಮಾಡಿ ಅವರ ಬ್ಯಾಂಕ್ ಖಾತೆಗೆ ಒಂದು ಲಕ್ಷ ರೂ. ಹಾಕಲಾಗುವುದು. ದೇಶದ ಕೋಟ್ಯಾಂತರ ಮಹಿಳೆಯರು, ಬಡವರು, ನಿರುದ್ಯೋಗಿಗಳನ್ನು ಲಕ್ಷಾಧೀಶ್ವರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ರೈತರ ಎಲ್ಲ ಸಾಲ ಮನ್ನಾ ಮಾಡಲಾಗುವುದು. ಅಗ್ನಿವೀರ ಯೋಜನೆಯನ್ನು ರದ್ದುಗೊಳಿಸಲಾಗುವುದು. ಜಿಎಸ್‌ಟಿಯನ್ನು ಸರಳಗೊಳಿಸಲಾಗುವುದು ಎಂದು ಇದೇ ವೇಳೆ ರಾಹುಲ್‌ ಗಾಂಧಿ ತಿಳಿಸಿದರು.

ಗೇಟ್ ಗಟ್ಟಿ ಇದ್ದರೆ ಕಿತ್ತು ಒಳಗಡೆ ಬನ್ನಿ ಎಂದ ಸಚಿವ

ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಲು ಸಚಿವ ಬಿ.ನಾಗೇಂದ್ರ , ಗೇಟ್ ಗಟ್ಟಿ ಇದ್ದರೆ ಕಿತ್ತು ಒಳಗಡೆ ಬನ್ನಿ. ಸೈನಿಕರಂತೆ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿ. ಬಿಜೆಪಿಯನ್ನು ಮನೆಗೆ ಕಳಿಸುವವರೆಗೆ ವಿಶ್ರಮಿಸಬಾರದು ಎಂದು ಹುರಿದುಂಬಿಸಿದರು. ಈ ವೇಳೆ ಸಚಿವರ ಕರೆಗೆ ಓಗೊಟ್ಟು ಬ್ಯಾರಿಕೇಡ್‌ಗಳನ್ನು ತಳ್ಳಿ ಜನತೆ ನುಗ್ಗಿದ ಪ್ರಸಂಗ ನಡೆಯಿತು.

ಇದನ್ನೂ ಓದಿ: IPL 2024 : ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ್​ಗೆ ಸವಾಲೊಡ್ಡುವುದೇ ಲಕ್ನೊ ಸೂಪರ್​ ಜೈಂಟ್ಸ್​​

ಸಮಾವೇಶದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಜಮೀರ್ ಅಹ್ಮದ್ ಖಾನ್‌ ಮಾತನಾಡಿದರು.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

ಎಷ್ಟೋ ಮಂದಿ ಶತಾಯುಷಿಗಳು, ದುರ್ಬಲರು, ಅಂಗವಿಕಲರು, ಇನ್ನೇನು ಸರ್ಜರಿಗೆ ಒಳಗಾಗಲಿದ್ದವರು ಬಂದು ಮತ ಹಾಕಿದ್ದಾರೆ. ಮುಂಜಾನೆಯೇ ಬಂದು ಮತಹಾಕಿ ಸೀದಾ ಮಂಟಪಕ್ಕೇ ತೆರಳಿದ ಮದುಮಗಳೂ ಕಂಡುಬಂದಿದ್ದಾಳೆ. ಎಲ್ಲ ಸರಿ ಇದ್ದೂ ಮತ ಹಾಕದ ಮಂದಿಗೆ ಏನೆನ್ನೋಣ? ನಗರ ವಾಸಿಗಳು ಈ ಬಾರಿಯೂ ಕಡಿಮೆ ಪ್ರಮಾಣದಲ್ಲಿ ಮತದಾನ ಮಾಡಿದ್ದು ವಿಷಾದನೀಯ.

VISTARANEWS.COM


on

lok sabha election
Koo

ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ (lok sabha Election) ಮೊದಲ ಹಂತದ ಚುನಾವಣೆ (Lok Sabha Election) ಶುಕ್ರವಾರ ಸಂಜೆ (ಏಪ್ರಿಲ್​ 26) 6 ಗಂಟೆಗೆ ಮುಕ್ತಾಯಗೊಂಡಿದೆ. ರಾಜ್ಯದ ಮೊದಲ ಹಂತದ ಒಟ್ಟಾರೆ ಮತದಾನ 69.23% ದಾಖಲಾಗಿದೆ. ರಾಜ್ಯದ 14 ಕ್ಷೇತ್ರಗಳ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನಕ್ಕೆ ಮುಂಜಾನೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಮಧ್ಯಾಹ್ನದ ನಂತರ ಮತದಾನ ಪ್ರಮಾಣ ಕಡಿಮೆಯಾಯಿತು. ಮಂಡ್ಯ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚಿನ ಪ್ರಮಾಣದ (81.48%) ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ (52.81%) ವೋಟಿಂಗ್ ದಾಖಲಾಗಿದೆ. ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದ್ದು, ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಿವೆ. ಸಂಸದ ಸ್ಥಾನದ ಆಕಾಂಕ್ಷಿಗಳು ಫಲಿತಾಂಶಕ್ಕೆ ಇನ್ನೂ ಒಂದು ತಿಂಗಳು ಕಾಯಬೇಕಿದೆ.

ಮತದಾನ ಪ್ರಮಾಣವನ್ನು ಗಮನಿಸಿದರೆ ಕೆಲವು ಅಂಶಗಳನ್ನು ಹೇಳಬಹುದಾಗಿದೆ. ನಗರಕ್ಕೆ ಹೋಲಿಸಿದರೆ ಗ್ರಾಮಾಂತರ ಪ್ರದೇಶಗಳೇ ಮತದಾನದ ಪ್ರಮಾಣದಲ್ಲಿ ವಾಸಿ. ಬೆಂಗಳೂರು ಗ್ರಾಮಾಂತರದಲ್ಲಿ 67.29% ಮತದಾನವಾಗಿದೆ. ಬೆಂಗಳೂರು ದಕ್ಷಿಣ ಹಾಗೂ ಉತ್ತರಗಳಲ್ಲಿ 53.15% ಹಾಗೂ 54.42% ಮತದಾನವಾಗಿದೆ. ಮಂಡ್ಯದಲ್ಲಿ ಅತ್ಯಧಿಕ ಮತದಾನವಾಗಿರುವುದು ಈ ಪ್ರದೇಶದ ಜನತೆಯ ರಾಜಕೀಯ ಪ್ರಜ್ಞೆಯಿಂದಾಗಿಯೇ ಇರಬಹುದು. ಕೋಲಾರ (78.07%) ಹಾಗೂ ತುಮಕೂರು (77.70%) ಕೂಡ ಹೆಚ್ಚಿನ ಮತದಾನ ದಾಖಲಿಸಿವೆ. ಬೆಂಗಳೂರು ಕೇಂದ್ರ ಕ್ಷೇತ್ರದ ನೀರಸ ಮತದಾನ (52.81%) ಚಿಂತೆಗೆ ಕಾರಣವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟಾರೆ ಮತದಾನ ಶೇಕಡಾವಾರು 68.81% ಆಗಿತ್ತು. ಈ ಬಾರಿ ಮೊದಲ ಹಂತದಲ್ಲಿ ಅದಕ್ಕಿಂತ ಸ್ವಲ್ಪ ಹೆಚ್ಚಿಗೆ (69.23%) ಮತದಾನವಾಗಿದೆ. ಆದರೆ ಎರಡನೇ ಹಂತದಲ್ಲಿ ಎಷ್ಟಾಗಲಿದೆ ಎಂಬುದರ ಮೇಲೆ ಒಟ್ಟಾರೆ ಸರಾಸರಿ ನಿರ್ಧಾರವಾಗಲಿದೆ.

ಮೂಲ ಸೌಕರ್ಯ ಸೇರಿದಂತೆ ನಾನಾ ಕಾರಣಗಳಿಗೋಸ್ಕರ ಹಲವೆಡೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು ಹಾಗೂ ಮತದಾನ ಬಹಿಷ್ಕಾರ ಮಾಡಿದ್ದು ಕೂಡ ನಡೆದಿವೆ. ಸಮಾಧಾನ ಮಾಡಲು ಬಂದ ಅಧಿಕಾರಿಗಳ ಮೇಲೆಯೆ ಗ್ರಾಮಸ್ಥರು ಮುಗಿಬಿದ್ದು ಪೊಲೀಸರ ಲಾಠಿ ಏಟು ತಿನ್ನಬೇಕಾದ ಪ್ರಸಂಗವೂ ಎದುರಾಯಿತು. ಸ್ವಾತಂತ್ರ್ಯ ದೊರೆತು ಎಂಟು ದಶಕ ಕಳೆದರೂ ಇನ್ನೂ ಮೂಲಸೌಕರ್ಯ ಕಲ್ಪಿಸದ ನಮ್ಮ ಆಡಳಿತಗಳಿಗೆ ಮತದಾನ ಬಹಿಷ್ಕಾರವೇ ಸೂಕ್ತ ಉತ್ತರ ಎಂದು ಗ್ರಾಮೀಣ ಜನತೆ ಕಂಡುಕೊಂಡರೋ ಗೊತ್ತಿಲ್ಲ. ಇದು ಮೊದಲೇ ಸಾರಿ, ಕಾರಣ ಹೇಳಿ ಮಾಡುವ ಬಹಿಷ್ಕಾರ. ಆದರೆ ವಿದ್ಯಾವಂತ ನಗರವಾಸಿಗಳ ʼಮತದಾನ ಬಹಿಷ್ಕಾರʼಕ್ಕೆ ಕಾರಣವಾದರೂ ಏನು? ನಗರದಲ್ಲಿ ಮತದಾನ ಹೆಚ್ಚಳ ಮಾಡಲು ಚುನಾವಣಾ ಆಯೋಗ ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದೆ. ಹೊಸ ಮತದಾರರಿಗಾಗಿಯೇ ಉತ್ತೇಜನದ ಉಪಕ್ರಮಗಳು, ಮಹಿಳೆಯರಿಗಾಗಿಯೇ ಸಖಿ ಮತಗಟ್ಟೆಗಳು, ಸಾರ್ವತ್ರಿಕ ರಜೆ ಎಲ್ಲವನ್ನೂ ಘೋಷಿಸಲಾಗಿದೆ. ಯಾವುದೇ ಕಷ್ಟವಿಲ್ಲದೆ ಮತದಾರರ ಗುರುತಿನ ಚೀಟಿ ಅಪ್‌ಡೇಟ್‌ ಮಾಡುವ, ತಮ್ಮ ಮತಗಟ್ಟೆ ಎಲ್ಲಿ ಎಂದು ತಿಳಿಯಲು ಕ್ಯುಆರ್‌ ಕೋಡ್‌ ಒದಗಿಸುವ ವ್ಯವಸ್ಥೆಯನ್ನೂ ಒದಗಿಸಲಾಗಿದೆ. ಎಷ್ಟೋ ಮಂದಿ ಶತಾಯುಷಿಗಳು, ದುರ್ಬಲರು, ಅಂಗವಿಕಲರು, ಇನ್ನೇನು ಸರ್ಜರಿಗೆ ಒಳಗಾಗಲಿದ್ದವರು ಬಂದು ಮತ ಹಾಕಿದ್ದಾರೆ. ಮುಂಜಾನೆಯೇ ಬಂದು ಮತಹಾಕಿ ಸೀದಾ ಮಂಟಪಕ್ಕೇ ತೆರಳಿದ ಮದುಮಗಳೂ ಕಂಡುಬಂದಿದ್ದಾಳೆ. ಎಲ್ಲ ಸರಿ ಇದ್ದೂ ಮತ ಹಾಕದ ಮಂದಿಗೆ ಏನೆನ್ನೋಣ?

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

ಮತದಾನ ಕಡಿಮೆಯಾದರೆ ತಾಂತ್ರಿಕವಾಗಿ ನಾವು ಸಮರ್ಪಕವಾದ ಸರ್ಕಾರವನ್ನು ಚುನಾಯಿಸುತ್ತಿರುವುದಿಲ್ಲ. ದೇಶದ 60% ಜನ ಮಾತ್ರ ಮತ ಹಾಕಿ, ಅದರಲ್ಲಿ 30% ಮತ ಪಡೆದ ಪಕ್ಷ ಅಧಿಕಾರಕ್ಕೆ ಬಂದರೆ, ಒಟ್ಟಾರೆ ದೇಶದ ಜನತೆಯಲ್ಲಿ ಆ ಪಕ್ಷವನ್ನು ಆಯ್ಕೆ ಮಾಡಿದವರು ಮೂರನೇ ಒಂದು ಭಾಗ ಮಾತ್ರವೇ ಆಗಿರುತ್ತಾರೆ. ಉಳಿದ ಮೂರನೇ ಎರಡು ಭಾಗ ಜನತೆ ಆ ಪಕ್ಷದ ವಿರುದ್ಧ ಇದ್ದಾರೆ ಎಂದು ತಿಳಿಯಬೇಕಾಗುತ್ತದೆ. ವಾಸ್ತವ ಹಾಗಿರುವುದಿಲ್ಲ. ಮತ ಹಾಕದ ಮಂದಿಯಲ್ಲಿ ಎಷ್ಟು ಮತಗಳು ಯಾವ ಪಕ್ಷದ್ದು ಎಂದು ನಿರ್ಣಯಿಸುವ ಯಾವ ವಿಧಾನವೂ ಇಲ್ಲ. ಹೀಗಾಗಿ ಮತದಾನ ಪ್ರಮಾಣ ಕಡಿಮೆ ಬಂದಾಗ, ಬರುವ ಫಲಿತಾಂಶವೂ ಅಷ್ಟರ ಮಟ್ಟಿಗೆ ಅಸಮರ್ಪಕವೇ ಆಗಿರುತ್ತದೆ. ಇನ್ನು ವಿದ್ಯಾವಂತರು, ಪ್ರಜ್ಞಾವಂತರು ಮತದಾನದಿಂದ ಹಿಂದುಳಿದರೆ, ಪ್ರಜ್ಞಾವಂತಿಕೆಯ ಆಯ್ಕೆಯೂ ಇಲ್ಲದಾಗುತ್ತದೆ. ಇದರಿಂದ ನಷ್ಟ ಪ್ರಜೆಗಳಿಗೇ. ಮೂರ್ಖರು ಅಧಿಕಾರಕ್ಕೆ ಆರಿಸಿ ಬರಬಾರದು ಎಂದಿದ್ದರೆ, ಬುದ್ಧಿವಂತರು ಮತ ಹಾಕಬೇಕು. ಮೇ 7ರಂದು ನಡೆಯುವ ಎರಡನೇ ಹಂತದ ಮತದಾನದಲ್ಲಾದರೂ ಹೆಚ್ಚಿನ ಪ್ರಮಾಣದ ಮತದಾನವಾಗಲಿ ಎಂದು ಆಶಿಸೋಣ.

Continue Reading

ಪ್ರಮುಖ ಸುದ್ದಿ

IPL 2024 : ಬೈರ್​ಸ್ಟೋವ್​ ಸ್ಫೋಟಕ ಶತಕ; ಕೆಕೆಆರ್​ ವಿರುದ್ಧ ಪಂಜಾಬ್​​ಗೆ ವಿಶ್ವ ದಾಖಲೆಯ ವಿಜಯ

IPL 2024 : ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಕೋಲ್ಕೊತಾ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 261 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 18.4 ಓವರ್​ಗಳಲ್ಲಿ ಕೇವಲ 2 ವಿಕೆಟ್ ನಷ್ಟ ಮಾಡಿಕೊಂಡು 262 ರನ್ ಬಾರಿಸಿ ಗೆಲುವು ಸಾಧಿಸಿತು.

VISTARANEWS.COM


on

IPL 2024
Koo

ಕೋಲ್ಕೊತಾ: ಇಲ್ಲಿನ ಐತಿಹಾಸಿಕ ಈಡನ್​ ಗಾರ್ಡನ್ಸ್​ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಮತ್ತೊಂದು ಐಪಿಎಲ್ (IPL 2024)​ ದಾಖಲೆ ಸೃಷ್ಟಿಯಾಗಿದೆ. ಐಪಿಎಲ್​ ಇತಿಹಾಸದಲ್ಲಿ ಗರಿಷ್ಠ ರನ್​ಗಳನ್ನು ಚೇಸ್ ಮಾಡಿದ ಖ್ಯಾತಿಯನ್ನು ಪಂಜಾಬ್ ಕಿಂಗ್ಸ್​​ ತಂಡ ತನ್ನದಾಗಿಸಿಕೊಂಡಿದೆ. ಆತಿಥೇಯ ಕೋಲ್ಕೊತಾ ನೈಟ್​ ರೈಡರ್ಸ್​ ತಂಡ ನೀಡಿದ್ದ 262 ರನ್​​ಗಳನ್ನು ಗುರಿಯನ್ನು ಇನ್ನೂ 8 ಎಸೆತಗಳು ಬಾಕಿ ಇರುವಂತೆಯೇ ಮೀರಿದ ಪಂಜಾಬ್ ತಂಡ 8 ವಿಕೆಟ್​ಗಳ ವಿಶ್ವ ದಾಖಲೆಯ ವಿಜಯವನ್ನು ತನ್ನದಾಗಿಸಿಕೊಂಡಿದೆ. ಆರಂಭಿಕ ಬ್ಯಾಟರ್​ ಜಾನ್​ ಬೈರ್​ಸ್ಟೋವ್ 49 ಎಸೆತಗಳಲ್ಲಿ ಅಜೇಯ 108 ರನ್​ (ಶತಕ) ಬಾರಿಸಿದರೆ ಶಶಾಂಕ್ ಸಿಂಗ್ ಮತ್ತೊಂದು ಬಾರಿ ಅಬ್ಬರದ ಪ್ರದರ್ಶನ ನೀಡಿ 28 ಎಸೆತಕ್ಕೆ 68 ರನ್ ಬಾರಿಸಿ ​ (ಅರ್ಧ ಶತಕ) ತಂಡಕ್ಕೆ ಗೆಲುವು ತಂದುಕೊಟ್ಟರು. ಪಂದ್ಯಾವಳಿಯ ಅತ್ಯಂತ ಬಲಿಷ್ಠ ತಂಡ ಎನಿಸಿಕೊಂಡಿದ್ದ ಕೋಲ್ಕೊತಾ ಇದೀಗ ದುರ್ಬಲ ಎಂದು ಕರೆಸಿಕೊಂಡಿದ್ದ ಪಂಜಾಬ್ ವಿರುದ್ಧ ಹೀನಾಯ ಸೋಲಿಗೆ ಒಳಗಾಗಿದೆ.

ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಕೋಲ್ಕೊತಾ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 261 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 18.4 ಓವರ್​ಗಳಲ್ಲಿ ಕೇವಲ 2 ವಿಕೆಟ್ ನಷ್ಟ ಮಾಡಿಕೊಂಡು 262 ರನ್ ಬಾರಿಸಿ ಗೆಲುವು ಸಾಧಿಸಿತು. ಇದು ಪಂಜಾಬ್ ತಂಡಕ್ಕೆ ಹಾಲಿ ಆವೃತ್ತಿಯ 9 ಪಂದ್ಯಗಳಲ್ಲಿ ದೊರಕಿದ ಮೂರನೇ ಗೆಲುವಾಗಿದೆ. ಇದೇ ವೇಳೆ ಕೆಕೆಆರ್​ ತಂಡಕ್ಕೆ 8 ರಲ್ಲಿ ಮೂರು ಸೋಲು ಎದುರಾಯಿತು.

2020ರ ಆವೃತ್ತಿಯ ಐಪಿಎಲ್​ನಲ್ಲಿ ಪಂಜಾಬ್ ತಂಡ ನೀಡಿದ್ದ 224 ರನ್​ಗಳ ಗುರಿಯನ್ನು ರಾಜಸ್ಥಾನ್ ರಾಯಲ್ಸ್​ ತಂಡ ಮೀರಿದ್ದು ಇದುವರೆಗಿನ ಗರಿಷ್ಠ ರನ್​ಗಳ ಚೇಸಿಂಗ್​ ದಾಖಲೆಯಾಗಿತ್ತು. ತನ್ನ ವಿರುದ್ಧ ಮಾಡಿದ್ದ ದಾಖಲೆಯನ್ನು ಪಂಜಾಬ್ ಬೇರೊಂದು ತಂಡವನ್ನು ಸೋಲಿಸುವ ಮೂಲಕ ತನ್ನ ಹೆಸರು ಬರೆದುಕೊಂಡಿತು. ಆ ಪಂದ್ಯವು ಯುಎಇನ ಶಾರ್ಜಾದಲ್ಲಿ ನಡೆದಿತ್ತು.

ಅನಿರೀಕ್ಷಿತ ಫಲಿತಾಂಶ

ಬ್ಯಾಟಿಂಗ್​ನಲ್ಲಿ ಅಷ್ಟೇನೂ ಬಲಿಷ್ಠ ಎನಿಸಕೊಳ್ಳದ ಪಂಜಾಬ್ ಈ ಪಂದ್ಯವನ್ನು ಗೆಲ್ಲುವುದು ಅಸಾಧ್ಯ ಎಂದು ಅಂದುಕೊಳ್ಳಲಾಗಿತ್ತು. ಆದರೆ, ಆರಂಭದಲ್ಲಿಯೇ ಪಂಜಾಬ್ ತಂಡದ ಆಟಗಾರರು ಅಬ್ಬರಿಸಿದರು. ಪ್ರಭ್ ಸಿಮ್ರಾನ್ ಸಿಂಗ್​ 20 ಎಸೆತಗಳಲ್ಲಿ 54 ರನ್ ಬಾರಿಸಿ ದೊಡ್ಡ ಮೊತ್ತಕ್ಕೆ ಅಡಿಪಾಯ ಹಾಕಿಕೊಟ್ಟರೆ ಬೈರ್​ಸ್ಟೋವ್ ಅದನ್ನು ಮುಂದುವರಿಸಿದರು. ಪ್ರಭ್​ ಸಿಮ್ರಾನ್ ಸಿಂಗ್​ ಅನಗತ್ಯ ರನ್​ಔಟ್​ಗೆ ಬಲಿಯಾದ ಬಳಿಕ ಬಂದ ರೀಲೀ ರೊಸ್ಸೊ 26 ರನ್ ಬಾರಿಸಿ ನಿರ್ಗಮಿಸಿದರು.

ಎರಡು ವಿಕೆಟ್​ಗಳು ಪತನಗೊಂಡ ಬಳಿಕ ರನ್​ ಗಳಿಕೆ ಕುಗ್ಗಬಹುದು ಎಂಬ ಅಂದಾಜು ಕೂಡ ಸರಿಯಾಗಲಿಲ್ಲ .ಪಂಜಾಬ್​ ಪರ ಆಪತ್ಬಾಂಧವ ಎನಿಸಿಕೊಂಡಿರುವ ಶಶಾಂಕ್ ಸಿಂಗ್ ಮತ್ತೊಂದು ಸೂಪರ್ ಇನಿಂಗ್ಸ್ ಆಡಿದರು. 23 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದಾಗ ಪಂಜಾಬ್​ ಗೆಲುವಿನ ಸನಿಹಕ್ಕೆ ಬಂತು. ಶಶಾಂಕ್ 8 ಸಿಕ್ಸರ್​ಗಳನ್ನು ಬಾರಿಸಿ ಪ್ರೇಕ್ಷಕರನ್ನು ರಂಜಿಸಿದರು. ಅದಕ್ಕಿಂತ ಮೊದಲು 45 ಎಸೆತಗಳಲ್ಲಿ ಶತಕ ಬಾರಿಸಿ ಬೈರ್​ಸ್ಟೋವ್ ಗೆಲುವಿನ ರೂವಾರಿ ಎನಿಸಿಕೊಂಡರು. ಅವರ ಇನಿಂಗ್ಸ್​ನಲ್ಲಿ 9 ಸಿಕ್ಸರ್ ಹಾಗೂ 8 ಫೋರ್​ಗಳಿದ್ದವು. ಇಬ್ಬರೂ ಅಜೇಯರಾಗಿ ಉಳಿದರು.

ಇದನ್ನೂ ಓದಿ: Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

ಕೋಲ್ಕೊತಾದ ಅಬ್ಬರ

ಮೊದಲು ಬ್ಯಾಟ್​ ಮಾಡಿದ ಕೋಲ್ಕತಾ ತಂಡವೂ ಎಕ್ಸ್​ಪ್ರೆಸ್​ ವೇಗದಲ್ಲಿ ರನ್ ಗಳಿಸಿತು. ಫಿಲ್ ಸಾಲ್ಟ್​ 37 ಎಸೆತಕ್ಕೆ 75 ರನ್ ಗಳಿಸಿದರೆ ಸುನಿಲ್ ನರೈನ್​ 32 ಎಸೆತಕ್ಕೆ 71 ರನ್ ಬಾರಿಸಿದರು. ಈ ಜೋಡಿ ಮೊದಲ ವಿಕೆಟ್​​ಗೆ 138 ರನ್ ಬಾರಿಸಿತು. ವೆಂಕಟೇಶ್ ಅಯ್ಯರ್​ 39, ಆ್ಯಂಡ್ರೆ ರಸೆಲ್​ 24 ಹಾಗೂ ಶ್ರೇಯಸ್​ ಅಯ್ಯರ್​ 28 ರನ್ ಹೊಡೆದರು. ದೊಡ್ಡ ಮೊತ್ತವು ಕೋಲ್ಕೊತಾ ತಂಡಕ್ಕೆ ಬಹುತೇಕ ಜಯನ್ನು ನೀಡಿತ್ತು. ಆದರೆ, ಅದು ಸುಳ್ಳಾಯಿತು.

Continue Reading
Advertisement
Dina Bhavishya
ಭವಿಷ್ಯ15 mins ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Implement the work without damaging the drinking water pipelines says ZP CEO Sadashiva Prabhu
ವಿಜಯನಗರ5 hours ago

Vijayanagara News: ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾಳಾಗದಂತೆ ಕಾಮಗಾರಿ ಅನುಷ್ಠಾನಗೊಳಿಸಿ: ಜಿಪಂ ಸಿಇಒ

Congress leader Rahul Gandhi speech in Ballari
ಕರ್ನಾಟಕ5 hours ago

Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

lok sabha election
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

Neha Murder Case
ಕರ್ನಾಟಕ5 hours ago

Neha Murder Case: ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ ಏರ್ಪಡಿಸಿದ ರಾಜ್ಯ ಸರ್ಕಾರ

IPL 2024
ಪ್ರಮುಖ ಸುದ್ದಿ6 hours ago

IPL 2024 : ಬೈರ್​ಸ್ಟೋವ್​ ಸ್ಫೋಟಕ ಶತಕ; ಕೆಕೆಆರ್​ ವಿರುದ್ಧ ಪಂಜಾಬ್​​ಗೆ ವಿಶ್ವ ದಾಖಲೆಯ ವಿಜಯ

Bike Accident
ಕರ್ನಾಟಕ6 hours ago

Bike Accident: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಬೈಕ್‌ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

lok sabha election
Lok Sabha Election 20246 hours ago

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Hassan News
ಕರ್ನಾಟಕ7 hours ago

Hassan News: ಎರಡು ಗುಂಪುಗಳ ನಡುವೆ ಮಾರಾಮಾರಿ; ಕೈ ಕಾರ್ಯಕರ್ತನಿಗೆ ಗಂಭೀರ ಗಾಯ

Pandya brothers
ಕ್ರೀಡೆ7 hours ago

Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 mins ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ17 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202418 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202418 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌