Site icon Vistara News

High Court: ಹೈಕೋರ್ಟ್‌ನಲ್ಲಿ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ

High Court

ಬೆಂಗಳೂರು: ಹೈಕೋರ್ಟ್‌ನ ಹಾಲ್ ನಂಬರ್ 1ರ ಬಳಿ (High court) ವ್ಯಕ್ತಿಯೊಬ್ಬ ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ ಎನ್ನಲಾಗಿದೆ. ಮೈಸೂರು ಮೂಲದ ಶ್ರೀನಿವಾಸ್ (51) ಎಂಬುವವರು ಆತ್ಮಹತ್ಯೆಗೆ ಯತ್ನಿಸಿದವರು ಎಂದು ತಿಳಿದು ಬಂದಿದೆ.

ಕೂಡಲೇ ಅಲ್ಲಿದ್ದವರು ಅವರಿಂದ ಬ್ಲೇಡ್‌ ಕಸಿದುಕೊಂಡಿದ್ದಾರೆ. ರಕ್ತಸ್ರಾವದಿಂದ ಅಸ್ವಸ್ಥಗೊಂಡ ಶ್ರೀನಿವಾಸ್‌ ಅವರನ್ನು ಪೊಲೀಸರು ಕೂಡಲೇ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮೈಸೂರಿನ ಶ್ರೀರಾಂಪುರ ಮೂಲದ ಶ್ರೀನಿವಾಸ್ ಚಿನ್ನಂ (50) ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಅನ್ಯಾಯ ಆಗಿದೆ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಶ್ರಿನಿವಾಸ್ ಚಿನ್ನಂ 22057/2021 ರಿಟ್ ಅರ್ಜಿ ವಜಾ ಆಗಿತ್ತು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ದೂರು ನೀಡಲು ಬಂದಿದ್ದರು. ಈ ವೇಳೆ ಕೋರ್ಟ್ ಹಾಲ್‌ನಲ್ಲಿ ಸಿಬ್ಬಂದಿಗೆ ದೂರಿನ ಪ್ರತಿ ನೀಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಚೂಪಾದ ವಸ್ತುವಿನಿಂದ ಕತ್ತು ಕೊಯ್ದುಕೊಂಡ

ವಿಚಾರಣೆಯ ಅಂತ್ಯದ ವೇಳೆಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮುಂದೆ ಬಂದು ತನ್ನ ಪ್ರಕರಣದ ಬಗ್ಗೆ ಹೇಳಿ ಕತ್ತು ಕೊಯ್ದುಕೊಂಡರು ಎನ್ನಲಾಗಿದೆ. ಅರ್ಜಿಯೊಂದನ್ನು ಕೋರ್ಟ್ ಸಿಬ್ಬಂದಿಗೆ ನೀಡಿ ಸಣ್ಣದಾದ ಚೂಪಾದ ವಸ್ತುವಿನಿಂದ ಕತ್ತುಕೊಯ್ದುಕೊಂಡಿದ್ದಾರೆ. ಸದ್ಯ ಶ್ರೀನಿವಾಸ್ ಚಿನ್ನಂ ನೀಡಿದ್ದ ದೂರಿನ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ.

ನರಗಳು ಕಟ್‌!

ಬೌರಿಂಗ್ ಆಸ್ಪತ್ರೆಗೆ ದಾಖಲಾಗಿರುವ ಶ್ರೀನಿವಾಸ್‌ಗೆ ಡಾ. ಶ್ರೀ ಕಾಂತ್ ಅವರಿಂದ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ. ಕುತ್ತಿಗೆಯ ಮೇಲೆ ಬ್ಲೇಡ್‌ನಿಂದ ಕೊಯ್ದುಕೊಳ್ಳಲಾಗಿದೆ. ಸದ್ಯ ಅನ್ನ ನಾಳಕ್ಕೆ ತೊಂದರೆ ಇಲ್ಲ, ಆದರೆ ಸಣ್ಣ ನರಗಳು ಕಟ್ ಆಗಿವೆ. ಈ ಮೊದಲೇ ಅವರು ಹಾರ್ಟ್ ಪೇಶೆಂಟ್ ಆಗಿದ್ದು, ಬೈಪಾಸ್ ಸರ್ಜರಿ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಆತ್ಮಹತ್ಯೆ ಗೆ ಯತ್ನಿಸಿದ ಹಿನ್ನೆಲೆಯಲ್ಲಿ ವಿಧಾನಸೌಧ ಪೊಲೀಸರಿಂದ ಶ್ರೀನಿವಾಸ್ ವಿರುದ್ಧ ಪ್ರಕರಣ ದಾಖಲಿಸಲು ಸಿದ್ಧತೆ ನಡೆದಿದೆ. ಆತ್ಮಹತ್ಯೆ ಯತ್ನದ ಜತೆಗೆ‌ ಕೋರ್ಟ್‌ನೊಳಗೆ ಅಕ್ರಮವಾಗಿ ಅರಿತವಾದ ಆಯುಧ ತೆಗೆದುಕೊಂಡು ಹೋದ ಕಾರಣಕ್ಕೆ ಕೇಸ್‌ ದಾಖಲಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Sushil Modi: 6 ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ: ಮಾಹಿತಿ ಬಹಿರಂಗಪಡಿಸಿದ ಬಿಜೆಪಿ ನಾಯಕ ಸುಶೀಲ್ ಮೋದಿ

ವಿಜಯಪುರದಲ್ಲಿ ಬಸ್‌ ನಿಲ್ದಾಣದಲ್ಲೇ ನೇಣಿಗೆ ಶರಣಾದ ವೃದ್ಧ

ವಿಜಯಪುರದ ಬಸವನ ಬಾಗೇವಾಡಿಯ ಹೂವಿನ ಹಿಪ್ಪರಗಿ ಬಸ್ ನಿಲ್ದಾಣದಲ್ಲಿ ವೃದ್ಧನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಸ್ ಸ್ಟಾಂಡ್‌‌‌ನ ಜಾಹೀರಾತು ಫಲಕ ಅಳವಡಿಕೆಗೆ ಹಾಕಿದ್ದ ಕಬ್ಬಿಣದ ಕಂಬಕ್ಕೆ ನೇಣುಬಿಗಿದುಕೊಂಡಿದ್ದಾರೆ. ಹುಣಶ್ಯಾಳ ಗ್ರಾಮದ ಭೀಮಪ್ಪ ಡೋಣುರ (76) ಮೃತ ದುರ್ದೈವಿ.

ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.

ಇದನ್ನೂ ಓದಿ: Murder case : ತಡರಾತ್ರಿ ಕೆಲಸ ಮುಗಿಸಿ ವಾಪಸ್ ಆಗುತ್ತಿದ್ದವನ ಕೊಚ್ಚಿ ಕೊಲೆ

Self Harming: 1 ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಮಂಗಳೂರು: ಒಂದು ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ತಾಯಿ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾರೆ. ಮಂಗಳೂರು (Mangaluru News) ಹೊರವಲಯದ ಅಡ್ಯಾರ್ ಡ್ಯಾಂ ಬಳಿಯ ನೇತ್ರಾವತಿ ನದಿಯಲ್ಲಿ (Netravathi River) ಘಟನೆ ನಡೆದಿದೆ.

ಅಡ್ಯಾರ್ ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತ ದುರ್ದೈವಿಗಳು. ಇಬ್ಬರ ಮೃತದೇಹಗಳು ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಗುರುವಾರವಷ್ಟೇ ಚೈತ್ರ ಮಗುವಿನ ಹುಟ್ಟುಹಬ್ಬವನ್ನು ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದರು. ನಂತರ ನಿನ್ನೆ ಶುಕ್ರವಾರ ಮಧ್ಯಾಹ್ನದ ನಂತರ ತಾಯಿ-ಮಗು ನಾಪತ್ತೆಯಾಗಿದ್ದರು.

ಸಂಬಂಧಿಕರು ಮನೆ ಸುತ್ತಮುತ್ತ ಹುಡಕಾಡಿದ್ದರು. ಕಾಣದಿದ್ದಾಗ ಸಾಮಾಜಿಕ ಜಾಲತಾಣದ ಮೂಲಕ ಹುಡುಕಾಟಕ್ಕೆ ಮನವಿ ಮಾಡಿದ್ದರು. ಆದರೆ ಇಂದು ಹರೇಕಳ ಸೇತುವೆ ಸಮೀಪ ತಾಯಿ-ಮಗುವಿನ ಮೃತದೇಹ ಪತ್ತೆಯಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿಯಲ್ಲಿ ಪೊಲೀಸ್‌ ಕ್ವಾಟ್ರಸ್‌ನಲ್ಲಿ ಲೇಡಿ ಕಾನ್ಸ್‌ಟೇಬಲ್‌ ಸೂಸೈಡ್‌

ಉಡುಪಿ: ಉಡುಪಿಯಲ್ಲಿ ಮಹಿಳಾ ಕಾನ್ಸ್‌ಟೇಬಲ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಗಲಕೋಟೆ ಮೂಲದ ಜ್ಯೋತಿ ಮೃತ ದುರ್ದೈವಿ.

ಕಾಪು ಪೊಲೀಸ್‌ ಠಾಣೆಯಲ್ಲಿ ಜ್ಯೋತಿ ಕರ್ತವ್ಯ ನಿರ್ವಹಿಸುತಿದ್ದರು. ಕೆಲಸ ಮುಗಿಸಿ ಪೊಲೀಸ್‌ ಕ್ವಾಟ್ರಸ್‌ಗೆ ತೆರಳಿದ ಜ್ಯೋತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version